Homeಅಂತರಾಷ್ಟ್ರೀಯಭಾರತದಲ್ಲಿ ಧಾರ್ಮಿಕ ಅಲ್ಪಸಂಖ್ಯಾತರ ವಿರುದ್ಧ ದಾಳಿ ಹೆಚ್ಚುತ್ತಿವೆ: ಅಮೆರಿಕ ಸರ್ಕಾರದ ಆಯೋಗ

ಭಾರತದಲ್ಲಿ ಧಾರ್ಮಿಕ ಅಲ್ಪಸಂಖ್ಯಾತರ ವಿರುದ್ಧ ದಾಳಿ ಹೆಚ್ಚುತ್ತಿವೆ: ಅಮೆರಿಕ ಸರ್ಕಾರದ ಆಯೋಗ

- Advertisement -
- Advertisement -

ಭಾರತದಲ್ಲಿ ಧಾರ್ಮಿಕ ಸ್ವಾತಂತ್ರ್ಯ ಹದಗೆಡುತ್ತಿದೆ ಎಂದು ಅಮೆರಿಕ ಸರ್ಕಾರದ ಆಯೋಗವು  ಆರೋಪಿಸಿದ್ದು, ಭಾರತವನ್ನು “ನಿರ್ದಿಷ್ಟ ಆತಂಕದ ದೇಶ” ಎಂದು ಹೆಸರಿಸಲು ಕರೆ ನೀಡಿದೆ. ‘ಅಂತರರಾಷ್ಟ್ರೀಯ ಧಾರ್ಮಿಕ ಸ್ವಾತಂತ್ರ್ಯಕ್ಕಾಗಿ ಅಮೆರಿಕ ಆಯೋಗ’ (USCIRF)ದ ಭಾರತ ವಿಭಾಗ ವರದಿಯಲ್ಲಿ, ಸರ್ಕಾರಿ ಅಧಿಕಾರಿಗಳ ದ್ವೇಷ ಭಾಷಣ ಸೇರಿದಂತೆ, ಭಾರತದಲ್ಲಿ ಧಾರ್ಮಿಕ ಅಲ್ಪಸಂಖ್ಯಾತರು ಮತ್ತು ಅವರ ಪೂಜಾ ಸ್ಥಳಗಳ ವಿರುದ್ಧ ಹಿಂಸಾತ್ಮಕ ದಾಳಿಗಳಿಗೆ ನಡೆಸಲು ಸುಳ್ಳು ಮತ್ತು ತಪ್ಪು ಮಾಹಿತಿಯ ಬಳಕೆಯನ್ನು ವಿವರಿಸಿದೆ.ಭಾರತದಲ್ಲಿ ಅಲ್ಪಸಂಖ್ಯಾತರ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
ಇಲ್ಲಿಕ್ಲಿಕ್ ಮಾಡಿ

USCIRF ತನ್ನ ವಾರ್ಷಿಕ ವರದಿಯಲ್ಲಿ, ಭಾರತವು ಧಾರ್ಮಿಕ ಸ್ವಾತಂತ್ರ್ಯದ ವಿರುದ್ಧ ವ್ಯವಸ್ಥಿತವಾಗಿ ಮತ್ತು ಅತಿರೇಕದ ಉಲ್ಲಂಘನೆಯಲ್ಲಿ ತೊಡಗಿದೆ ಎಂದು ಹೇಳಿದ್ದು, ಅದಕ್ಕಾಗಿ ಭಾರತವನ್ನು “ನಿರ್ದಿಷ್ಟ ಆತಂಕದ ದೇಶ” ಎಂದು ಹೆಸರಿಸುವಂತೆ ಅಮೆರಿಕ ಡಿಪಾರ್ಪೆಂಟ್‌ ಆಫ್‌ ಸ್ಟೇಟ್‌ಗೆ ಶಿಫಾರಸು ಮಾಡಿದೆ. ಆದರೆ ರಾಜ್ಯ ಇಲಾಖೆ ಇದುವರೆಗೆ ಶಿಫಾರಸುಗಳನ್ನು ಸ್ವೀಕರಿಸಿಲ್ಲ.

ಇದನ್ನೂಓದಿ: ‘ನಸ್ರಲ್ಲಾ, ನೆತನ್ಯಾಹು ಇಬ್ಬರೂ ಕದನ ವಿರಾಮಕ್ಕೆ ಒಪ್ಪಿಕೊಂಡಿದ್ದರು..’; ಲೆಬನಾನ್ ಮಂತ್ರಿ ಹೇಳಿಕೆ

“2024 ರ ಉದ್ದಕ್ಕೂ, ದುಷ್ಕರ್ಮಿಗಳ ಗುಂಪುಗಳಿಂದ ಜನರು ಸಾವಿಗೀಡಾದ, ಥಳಿಸಲ್ಪಟ್ಟ ಮತ್ತು ಹತ್ಯೆಯಾಗಿರುವ ಬಗ್ಗೆ ವರದಿ ಹೇಳಿದೆ. ಧಾರ್ಮಿಕ ಮುಖಂಡರನ್ನು ನಿರಂಕುಶವಾಗಿ ಬಂಧಿಸಲಾಗಿದ್ದು, ಅವರ ಮನೆ ಮತ್ತು ಪೂಜಾ ಸ್ಥಳಗಳನ್ನು ಕೆಡವಲಾಗಿದೆ” ಎಂಬುದನ್ನು ಈ ವರದಿಯು ಎತ್ತಿ ತೋರಿಸುತ್ತದೆ. ಈ ಘಟನೆಗಳು ವಿಶೇಷವಾಗಿ ಧಾರ್ಮಿಕ ಸ್ವಾತಂತ್ರ್ಯದ ತೀವ್ರ ಉಲ್ಲಂಘನೆಯಾಗಿದೆ ಎಂದು USCIRF ಹೇಳಿದೆ.

ಹಿಂದಿನ ಮನಮೋಹನ್ ಸಿಂಗ್ ನೇತೃತ್ವದ ಸರ್ಕಾರದಿಂದ ಆರಂಭಗೊಂಡು, ಭಾರತವು ತನ್ನ ಆಂತರಿಕ ವ್ಯವಹಾರಗಳಲ್ಲಿ “ಹಸ್ತಕ್ಷೇಪ” ವನ್ನು ಉಲ್ಲೇಖಿಸಿ, USCIRF ಸದಸ್ಯರಿಗೆ ದೇಶಕ್ಕೆ ಭೇಟಿ ನೀಡಲು ಸತತವಾಗಿ ವೀಸಾಗಳನ್ನು ನಿರಾಕರಿಸಿದೆ ಎಂದು ಅದು ಹೇಳಿದೆ.ಭಾರತದಲ್ಲಿ ಅಲ್ಪಸಂಖ್ಯಾತರ

“ಈ ವರದಿಯು ಪೌರತ್ವ ತಿದ್ದುಪಡಿ ಕಾಯಿದೆ, ಏಕರೂಪದ ನಾಗರಿಕ ಸಂಹಿತೆ ಮತ್ತು ಹಲವಾರು ರಾಜ್ಯ ಮಟ್ಟದ ಮತಾಂತರ ವಿರೋಧಿ ಮತ್ತು ಗೋಹತ್ಯೆ ಕಾನೂನುಗಳು ಸೇರಿದಂತೆ ಧಾರ್ಮಿಕ ಅಲ್ಪಸಂಖ್ಯಾತರನ್ನು ಗುರಿಯಾಗಿಸಲು ಮತ್ತು ಅವರ ಹಕ್ಕು ನಿರಾಕರಣೆ ಮಾಡಲು ಭಾರತದ ಕಾನೂನು ಚೌಕಟ್ಟಿನ ಬದಲಾವಣೆಗಳನ್ನು ಮತ್ತು ಜಾರಿಗೊಳಿಸುವಿಕೆಯನ್ನು ವಿವರಿಸುತ್ತದೆ” ಎಂದು USCIRF ಹೇಳಿದೆ.

ವಿಡಿಯೊ ನೋಡಿ: ‘ಗಾಂಧೀಜಿ ಹಂತಕ ಗೋಡ್ಸೆ ಎಂಬ ವ್ಯಕ್ತಿ ಮತ್ತು ಆತನ ದೃಷ್ಟಿಯ ಭಾರತ’ ಪುಸ್ತಕ ಬಿಡುಗಡೆ: ದಿನೇಶ್ ಗುಂಡೂರಾವ್ ಅವರ ಮಾತು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಿಡದಿ ಟೌನ್‌ಶಿಪ್: 80% ರೈತರ ಒಪ್ಪಿಗೆ ಇದೆ ಎಂಬ ವಾದ ಸಾಬೀತುಪಡಿಸಿ – ಸರ್ಕಾರಕ್ಕೆ ಸಂಯುಕ್ತ ಹೋರಾಟ ಸವಾಲು

ಬಿಡದಿ ಟೌನ್‌ಶಿಪ್ ಯೋಜನೆಗೆ ಭೂಮಿ ನೀಡಲು ಉದ್ದೇಶಿತ ಪ್ರದೇಶದ ಶೇಕಡಾ 80 ರಷ್ಟು ರೈತರು ಒಪ್ಪಿದ್ದಾರೆ ಎಂಬ ಸರ್ಕಾರದ ವಾದಕ್ಕೆ ಯಾವುದೇ ವಾಸ್ತವಿಕ ಆಧಾರವಿಲ್ಲ. ಸರ್ಕಾರಕ್ಕೆ ಧೈರ್ಯವಿದ್ದರೆ ತನ್ನ ಈ ಹೇಳಿಕೆಯನ್ನು ಜನರ...

ವಿದ್ಯಾರ್ಥಿಗಳ ಮೇಲಿನ ಪೊಲೀಸ್ ದೌರ್ಜನ್ಯ: ವಿಚಾರಣೆ ತಿರಸ್ಕರಿಸಿದ ಸುಪ್ರೀಂ; “ವಿಡಿಯೋ ನೋಡಲು ನಮಗೆ ಆಸಕ್ತಿಯೂ ಇಲ್ಲ, ಸಮಯವೂ ಇಲ್ಲ” ಎಂದ ನ್ಯಾಯಮೂರ್ತಿ ಸೂರ್ಯಕಾಂತ್

ನವದೆಹಲಿ: ಪ್ರಶ್ನೆಪತ್ರಿಕೆ ಸೋರಿಕೆ ಮತ್ತು ಪರೀಕ್ಷಾ ಅಕ್ರಮಗಳನ್ನು ಖಂಡಿಸಿ ಶಾಂತಿಯುತವಾಗಿ ಹೋರಾಡುತ್ತಿದ್ದ ಯುವ ಸಮೂಹದ ಮೇಲೆ ದೆಹಲಿ ಪೊಲೀಸರು ನಡೆಸಿದ ಭೀಕರ ದೌರ್ಜನ್ಯದ ವಿರುದ್ಧ ನ್ಯಾಯದ ನಿರೀಕ್ಷೆಯಲ್ಲಿದ್ದ ವಿದ್ಯಾರ್ಥಿಗಳಿಗೆ ದೇಶದ ಅತ್ಯುನ್ನತ ನ್ಯಾಯಾಲಯದಿಂದ...

ರಾಹುಲ್ ಗಾಂಧಿ ವಿದ್ಯಾರ್ಥಿಗಳನ್ನು ‘ರಾಜಕೀಯ ದಾಳ’ವಾಗಿ ಬಳಸುತ್ತಿದ್ದಾರೆ ಎಂದ ಧರ್ಮೇಂದ್ರ ಪ್ರಧಾನ್ ವಿರುದ್ಧ ವ್ಯಾಪಕ ಆಕ್ರೋಶ

ನವದೆಹಲಿ: ದೇಶಾದ್ಯಂತ ನೀಟ್ (NEET) ಪರೀಕ್ಷೆಯ ಅಕ್ರಮಗಳು, ಪ್ರಶ್ನೆಪತ್ರಿಕೆ ಸೋರಿಕೆ ಹಾಗೂ ಶಿಕ್ಷಣ ಇಲಾಖೆಯ ಸರಣಿ ವೈಫಲ್ಯಗಳನ್ನು ಖಂಡಿಸಿ ವಿದ್ಯಾರ್ಥಿಗಳು ಮತ್ತು ವಿರೋಧ ಪಕ್ಷಗಳು ತೀವ್ರ ಪ್ರತಿಭಟನೆ ನಡೆಸುತ್ತಿದ್ದು, ಶಿಕ್ಷಣ ಸಚಿವ ಧರ್ಮೇಂದ್ರ...

ಸಿಜೆಪಿ ಪ್ರತಿಭಟನಾಕಾರರ ಮೇಲೆ ಪೆಲೆಟ್ ಗನ್ ಬಳಕೆ, ವಿದ್ಯುತ್ ಲಾಠಿ ಪ್ರಹಾರ: ಆರೋಪ ನಿರಾಕರಿಸಿದ ಪೊಲೀಸರು

ಸೋಮವಾರ (ಜುಲೈ 20) ಕಾಕ್ರೋಚ್ ಜನತಾ ಪಕ್ಷ (ಸಿಜೆಪಿ) ಕರೆ ನೀಡಿದ್ದ ಸಂಸತ್ ಚಲೋ ಮೆರವಣಿ ಸಂದರ್ಭದಲ್ಲಿ ನಡೆದ ಪೊಲೀಸರ ದೌರ್ಜನ್ಯದಲ್ಲಿ ಗಾಯಗೊಂಡ 80 ಪ್ರತಿಭಟನಾಕಾರರಲ್ಲಿ ಕನಿಷ್ಠ ಒಬ್ಬರಿಗೆ ಪೆಲೆಟ್ ಗನ್ ಗಾಯಗಳಾಗಿವೆ...

ಪ್ರತಿಭಟನಾನಿರತ ಮಹಿಳೆಯ ಕೆನ್ನೆಗೆ ಹೊಡೆದ ದೆಹಲಿ ಪೊಲೀಸ್ ಅಧಿಕಾರಿ ಸಂದೀಪ್ ಲಂಬಾ: ವಿಡಿಯೋ ವೈರಲ್ ನಂತರ ವ್ಯಾಪಕ ಟೀಕೆ

ದೆಹಲಿ: ಶಾಂತಿಯುತವಾಗಿ ತಮ್ಮ ಹಕ್ಕುಗಳಿಗಾಗಿ ಹೋರಾಡುತ್ತಿದ್ದ ಪ್ರತಿಭಟನಾಕಾರರ ಮೇಲೆ ದೆಹಲಿ ಪೊಲೀಸರು ನಡೆಸಿದ ಕ್ರೂರ ದಮನ ಕಾರ್ಯಾಚರಣೆಯ ಭೀಕರ ಮುಖವಾಡವೊಂದು ಮತ್ತೆ ಜಗಜ್ಜಾಹೀರಾಗಿದೆ. ಸೋಮವಾರ ಸಂಸತ್ತಿನ ಮೆರವಣಿಗೆಯಲ್ಲಿ ಭಾಗವಹಿಸಿದ್ದ ಪ್ರತಿಭಟನಾಕಾರರನ್ನು ಹತ್ತಿಕ್ಕುವ ನೆಪದಲ್ಲಿ,...

‘ಪೊಲೀಸರನ್ನು ನಿಯಂತ್ರಿಸದಿದ್ದರೆ ಜರ್ಮನಿಯ ನಾಜಿಗಳಂತೆ ಆಗಬಹುದು’: ದಲಿತ ವ್ಯಕ್ತಿಯ ಮೇಲಿನ ದೌರ್ಜನ್ಯ ಪ್ರಕರಣದಲ್ಲಿ ಪಾಟ್ನಾ ಹೈಕೋರ್ಟ್ ಕಳವಳ

ದಲಿತ ವ್ಯಕ್ತಿಯೊಬ್ಬರ ಜಾತಿ ತಿಳಿದ ನಂತರ ಅವರ ಮೇಲೆ ಕ್ರೂರವಾಗಿ ಹಲ್ಲೆ ನಡೆಸಿದ ಆರೋಪ ಎದುರಿಸುತ್ತಿರುವ ಬಿಹಾರದ ಮಾಜಿ ಪೊಲೀಸ್ ಅಧಿಕಾರಿಯ ವಿರುದ್ಧ ತಕ್ಷಣವೇ ಎಫ್‌ಐಆರ್ (FIR) ದಾಖಲಿಸುವಂತೆ ಪಾಟ್ನಾ ಹೈಕೋರ್ಟ್ ನಿರ್ದೇಶಿಸಿದೆ....

“ಎಷ್ಟೊಂದು ದುರಹಂಕಾರ!”: ಜೆ.ಪಿ.ನಡ್ಡಾ ಹೇಳಿಕೆಗೆ ಕಪಿಲ್ ಸಿಬಲ್ ತೀವ್ರ ಆಕ್ಷೇಪ; ಪ್ರತಿಭಟನಾನಿರತ ಸಿಜೆಪಿ ಬೆಂಬಲಿಸಿ ವೀಡಿಯೋ ಸಂದೇಶ

ಪರೀಕ್ಷಾ ಅಕ್ರಮಗಳನ್ನು ಖಂಡಿಸಿ ಕ್ರಾಂತಿಕಾರಿ ಜಿರಳೆ ಜನತಾ ಪಕ್ಷ (ಸಿಜೆಪಿ) ನಡೆಸುತ್ತಿರುವ ವಿದ್ಯಾರ್ಥಿ ಪ್ರತಿಭಟನೆಯ ವಿಚಾರದಲ್ಲಿ ಕೇಂದ್ರ ಸರ್ಕಾರದ ನಡೆಗೆ ದೇಶಾದ್ಯಂತ ತೀವ್ರ ಆಕ್ರೋಶ ವ್ಯಕ್ತವಾಗುತ್ತಿದೆ. ಈ ನಡುವೆ ಕೇಂದ್ರ ಸಚಿವ ಜೆ.ಪಿ....

ವಿದ್ಯಾರ್ಥಿಗಳ ಮೇಲೆ ಪೊಲೀಸ್ ದೌರ್ಜನ್ಯ: ಮೋದಿ-ಅಮಿತ್ ಶಾ ರಾಜೀನಾಮೆಗೆ ರಾಹುಲ್ ಗಾಂಧಿ ಆಗ್ರಹ

ನೀಟ್‌ ಪ್ರಶ್ನೆ ಪತ್ರಿಕೆ ಸೋರಿಕೆ ಹೊಣೆ ಹೊತ್ತು ಕೇಂದ್ರ ಶಿಕ್ಷಣ ಸಚಿವ ರಾಜೀನಾಮೆ ನೀಡಬೇಕು ಎಂದು ಆಗ್ರಹಿಸಿ 'ಸಂಸತ್ ಚಲೋ' ಹಮ್ಮಿಕೊಂಡಿದ್ದ ವಿದ್ಯಾರ್ಥಿಗಳ ಮೇಲೆ ನಡೆದ ಪೊಲೀಸ್ ದೌರ್ಜನ್ಯವನ್ನು ಕಾಂಗ್ರೆಸ್ ನಾಯಕ ರಾಹುಲ್...

ಕೇಂದ್ರ ಸಚಿವ ಜೆ.ಪಿ.ನಡ್ಡಾ ಅವರನ್ನು ಭೇಟಿಯಾದ ಸಿಜೆಪಿ ನಿಯೋಗ; ಮನವಿ ಪತ್ರ ಸಲ್ಲಿಕೆ

ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್‌ ರಾಜೀನಾಮೆಗೆ ಆಗ್ರಹಿಸಿ ನವದೆಹಲಿಯಲ್ಲಿ ಪ್ರತಿಭಟನೆ ತೀವ್ರಗೊಂಡಿರುವ ಬೆನ್ನಲ್ಲೇ ಇಂದು ಕೇಂದ್ರ ಸಚಿವ ಜೆಪಿ ನಡ್ಡಾ ಅವರನ್ನು ಸಿಜೆಪಿ ಸದಸ್ಯರಾದ ಸೌರವ್ ದಾಸ್ ಮತ್ತು ಅಶುತೋಷ್ ರಂಕಾ...

‘ಸಂಸತ್ ಚಲೋ’: ‘ಸೋನಮ್ ವಾಂಗ್ಚುಕ್ ಪತ್ನಿ ಮೇಲೆ ದೆಹಲಿ ಪೊಲೀಸರಿಂದ ಹಲ್ಲೆ’: ವಿದ್ಯಾರ್ಥಿಗಳ ಮೇಲೂ ಲಾಠಿ ಚಾರ್ಜ್  

ನವದೆಹಲಿ: ರಾಷ್ಟ್ರ ರಾಜಧಾನಿಯಲ್ಲಿ ಆಯೋಜಿಸಲಾಗಿದ್ದ ‘ಸಂಸದ್ ಚಲೋ’ ಮೆರವಣಿಗೆಯ ವೇಳೆ ಶಿಕ್ಷಣ ತಜ್ಞ ಹಾಗೂ ಲಡಾಖ್ ಹೋರಾಟಗಾರ ಸೋನಮ್ ವಾಂಗ್ಚುಕ್ ಅವರ ಪತ್ನಿ ಗೀತಾಂಜಲಿ ಜೆ. ಆಂಗ್ಮೋ ಸೇರಿದಂತೆ ಹಲವಾರು ಪ್ರತಿಭಟನಾಕಾರರ ಮೇಲೆ...