Homeಮುಖಪುಟಯುಪಿ: ಚುನಾವಣಾ ಅಧಿಕಾರಿಯ ಕೆನ್ನೆಗೆ ಹೊಡೆದ ಬಿಜೆಪಿ ಶಾಸಕನ ವಿರುದ್ಧ ಎಫ್‌ಐಆರ್‌

ಯುಪಿ: ಚುನಾವಣಾ ಅಧಿಕಾರಿಯ ಕೆನ್ನೆಗೆ ಹೊಡೆದ ಬಿಜೆಪಿ ಶಾಸಕನ ವಿರುದ್ಧ ಎಫ್‌ಐಆರ್‌

- Advertisement -
- Advertisement -

ಉತ್ತರ ಪ್ರದೇಶ ವಿಧಾನಸಭೆ ಚುನಾವಣೆಯ ಮೊದಲ ಹಂತದ ಮತದಾನದ ವೇಳೆ ಚುನಾವಣಾ ಅಧಿಕಾರಿಗೆ ಥಳಿಸಿದ ಆರೋಪದ ಮೇಲೆ ಉತ್ತರ ಪ್ರದೇಶ ಪೊಲೀಸರು ಬಿಜೆಪಿ ಶಾಸಕ ಸಂಗೀತ್ ಸೋಮ್ ವಿರುದ್ಧ ಎಫ್‌ಐಆರ್‌ ದಾಖಲಿಸಿದ್ದಾರೆ.

ಫೆಬ್ರವರಿ 10ರಂದು ಮಧ್ಯಾಹ್ನ 3 ಗಂಟೆ ಸುಮಾರಿಗೆ ಮೀರತ್ ಜಿಲ್ಲೆಯ ಸಲಾವಾ ಗ್ರಾಮದ ಬೂತ್ 131ಕ್ಕೆ ಸೋಮ್ ಮತ್ತು ಅವರ ಬೆಂಬಲಿಗರು ನುಗ್ಗಿದ್ದರು ಎಂದು ಪೊಲೀಸರು ಹೇಳಿದ್ದಾರೆ.

ಬೂತ್‌ನ ಹೊರಗೆ ಮತದಾರರ ಉದ್ದನೆಯ ಸರತಿ ಸಾಲಿನಿಂದಾಗಿ ಶಾಸಕರು ಅಸಮಾಧಾನಗೊಂಡರು. ನಿಧಾನಗತಿಯ ಮತದಾನದ ವಿರುದ್ಧ ಶಾಸಕ ಸೋಮ್, ಇಲ್ಲಿನ ಅಧಿಕಾರಿಯೊಂದಿಗೆ ವಾಗ್ವಾದಕ್ಕೆ ಉಳಿದರು. ನಂತರ ಅಧಿಕಾರಿಗೆ ಕಪಾಳಕ್ಕೆ ಹೊಡೆದರು ಎಂದು ದಿ ಇಂಡಿಯನ್‌ ಎಕ್ಸ್‌ಪ್ರೆಸ್ ವರದಿ ಮಾಡಿದೆ. ಪೊಲೀಸರ ಪ್ರಕಾರ, “ಶಾಸಕರ ಬೆಂಬಲಿಗರು ಮತಗಟ್ಟೆಯೊಳಗೆ ಅಳವಡಿಸಲಾಗಿದ್ದ ಸಿಸಿಟಿವಿ ಕ್ಯಾಮೆರಾಗಳನ್ನೂ ಧ್ವಂಸ ಮಾಡಿದ್ದಾರೆ.”

ಮೀರತ್ ಪೊಲೀಸ್ ಅಧೀಕ್ಷಕ (ಎಸ್‌ಎಸ್‌ಪಿ) ಪ್ರಭಾಕರ್ ಚೌಧರಿ ಅವರು ಇಂಡಿಯನ್‌ ಎಕ್ಸ್‌ಪ್ರೆಸ್‌ನೊಂದಿಗೆ ಮಾತನಾಡಿದ್ದು, “ದೂರು ದಾಖಲಿಸಲು ಅಧಿಕಾರಿ ಅಶ್ವಿನಿ ಶರ್ಮಾ ಅವರಿಗೆ ಪೊಲೀಸರು ಕಾಯುತ್ತಿದ್ದರು. ಅವರು ಬಾರದಿದ್ದಾಗ ಸರ್ಧಾನ ಪೊಲೀಸ್ ಠಾಣೆ ಎಫ್‌ಐಆರ್ ದಾಖಲಿಸಿದೆ. ಪ್ರಕರಣದ ತನಿಖೆ ನಡೆಸುತ್ತಿದ್ದೇವೆ. ನಮ್ಮ ವಿಚಾರಣೆ ಪೂರ್ಣಗೊಂಡ ನಂತರ ಕ್ರಮ ತೆಗೆದುಕೊಳ್ಳಲಾಗುವುದು” ಎಂದು ತಿಳಿಸಿದ್ದಾರೆ.

ಅದೇ ದಿನ ಎಫ್‌ಐಆರ್ ಪ್ರತಿಯನ್ನು ಚುನಾವಣಾ ಆಯೋಗಕ್ಕೆ ಕಳುಹಿಸಲಾಗಿದೆ. ಪ್ರಕರಣವನ್ನು ಪುಷ್ಟೀಕರಿಸುವುದಕ್ಕಾಗಿ ಹೇಳಿಕೆಯನ್ನು ದಾಖಲಿಸುವಂತೆ ಅಧಿಕಾರಿಯನ್ನು ಕೇಳಲಾಗಿದೆ ಎಂದು ಅವರು ತಿಳಿಸಿದ್ದಾರೆ.

ಸೋಮ್ ಅವರು ಸರ್ಧಾನದಿಂದ ಬಿಜೆಪಿ ಅಭ್ಯರ್ಥಿಯಾಗಿದ್ದು, ಸತತ ಮೂರನೇ ಬಾರಿಗೆ ಶಾಸಕರಾಗಿ ಆಯ್ಕೆಯಾಗಿದ್ದಾರೆ. “ಇತ್ತೀಚಿನ ಎಫ್‌ಐಆರ್‌ ಸೇರಿ ಸೋಮ್ ವಿರುದ್ಧ ಈಗ ಎಂಟು ಪ್ರಕರಣಗಳಿವೆ. ಆದರೆ ಅವುಗಳಲ್ಲಿ ಯಾವುದರಲ್ಲೂ ಸೋಮ್‌ ಶಿಕ್ಷೆಗೊಳಗಾಗಿಲ್ಲ” ಎಂದು ಇಂಡಿಯನ್‌ ಎಕ್ಸ್‌ಪ್ರೆಸ್‌ ವರದಿ ಮಾಡಿದೆ.

2013ರ ಮುಜಾಫರ್‌ನಗರ ಗಲಭೆ ಪ್ರಕರಣದಲ್ಲಿ ಸೋಮ್ ಆರೋಪಿಯಾಗಿದ್ದರು. ಗಲಭೆಗೆ ಮುನ್ನ ಸಾಮಾಜಿಕ ಮಾಧ್ಯಮದಲ್ಲಿ ವೀಡಿಯೊವನ್ನು ಅಪ್‌ಲೋಡ್ ಮಾಡಿದ ಆರೋಪ ಹೊತ್ತಿದ್ದ ಸೋಮ್ ವಿರುದ್ಧ ಯುಪಿ ವಿಶೇಷ ತನಿಖಾ ತಂಡವು (ಎಸ್‌ಐಟಿ) ವರದಿಯನ್ನು ಕಳೆದ ವರ್ಷ ಸಲ್ಲಿಸಿತ್ತು. ಅದರ ವಿರುದ್ಧ ಯಾವುದೇ ಆಕ್ಷೇಪಣೆ ಸಲ್ಲಿಸದ ಕಾರಣ ಸ್ಥಳೀಯ ನ್ಯಾಯಾಲಯವು ವರದಿಯನ್ನು ಅಂಗೀಕರಿಸಿತು.


ಇದನ್ನೂ ಓದಿರಿ: ಮೋದೀಜಿ, ಇದೇನಾ ಭಾರತೀಯ ಸಂಸ್ಕೃತಿ?: ಅಸ್ಸಾಂ ಸಿಎಂ ವಜಾಕ್ಕೆ ತೆಲಂಗಾಣ ಸಿಎಂ ಆಗ್ರಹ

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ಮಧ್ಯಪ್ರದೇಶ: ಆಸ್ಪತ್ರೆಗೆ ದಾಖಲಿಸಿಕೊಳ್ಳಲು ನಿರಾಕರಿಸಿದ ವೈದ್ಯರು; ಆಟೋ ರಿಕ್ಷಾದಲ್ಲೆ ಹೆರಿಗೆ

0
ಮಧ್ಯಪ್ರದೇಶದ ನೀಮುಚ್ ಜಿಲ್ಲಾ ಆಸ್ಪತ್ರೆಯಲ್ಲಿ ಅರಿವಳಿಕೆ ವೈದ್ಯರ ಕೊರತೆಯಿಂದಾಗಿ ಆಸ್ಪತ್ರೆಗೆ ದಾಖಲಿಸಿಕೊಳ್ಳಲು ವೈದ್ಯರು ನಿರಾಕರಿಸಿದ್ದು, 30 ವರ್ಷದ ಮಹಿಳೆಯೊಬ್ಬರು ಆಟೋ ರಿಕ್ಷಾದಲ್ಲಿ ಮಗುವಿಗೆ ಜನ್ಮ ನೀಡಿದ್ದಾರೆ. ತಾಯಿ ಮತ್ತು ಮಗುವನ್ನು ತರುವಾಯ ಆಸ್ಪತ್ರೆಗೆ...