Homeಕರ್ನಾಟಕಧಾರವಾಡ | ಪ್ರಕಾಶ್ ರಾಜ್ ಭಾಗವಹಿಸಿದ್ದ ಸಮುದಾಯ ಕಾರ್ಯಕ್ರಮಕ್ಕೆ ಅಡ್ಡಿಪಡಿಸಲು ಯತ್ನ : ದೂರು ದಾಖಲು

ಧಾರವಾಡ | ಪ್ರಕಾಶ್ ರಾಜ್ ಭಾಗವಹಿಸಿದ್ದ ಸಮುದಾಯ ಕಾರ್ಯಕ್ರಮಕ್ಕೆ ಅಡ್ಡಿಪಡಿಸಲು ಯತ್ನ : ದೂರು ದಾಖಲು

- Advertisement -
- Advertisement -

ಭಾನುವಾರ (ಆ.30) ಧಾರವಾಡದ ಕರ್ನಾಟಕ ವಿದ್ಯಾವರ್ಧಕ ಸಂಘದ ಸಭಾ ಭವನದಲ್ಲಿ ಆಯೋಜಿಸಿದ್ದ ಸಮುದಾಯ ಸಂಘಟನೆಯ ಕಾರ್ಯಕ್ರಮಕ್ಕೆ ಅಡ್ಡಿಪಡಿಸಲು ಯತ್ನಿಸಿ ಗಲಾಟೆ ಎಬ್ಬಿಸಿದ ಬಿಜೆಪಿ-ಸಂಘಪರಿವಾರದ ಬೆಂಬಲಿಗರ ವಿರುದ್ಧ ದೂರು ದಾಖಲಿಸಲಾಗಿದೆ.

ಸಮುದಾಯ ಸಂಘಟನೆಯ ಧಾರವಾಡದ ಅಧ್ಯಕ್ಷ ಬಿ.ಐ ಇಳಿಗೇರ ಅವರು ಟೌನ್‌ ಪೊಲೀಸ್‌ ಠಾಣೆಗೆ ಸೋಮವಾರ (ಆ.31) ದೂರು ನೀಡಿದ್ದು, ತಪ್ಪಿತಸ್ಥರ ವಿರುದ್ಧ ಸೂಕ್ತ ಕಾನೂನು ಕ್ರಮಕ್ಕೆ ಆಗ್ರಹಿಸಿದ್ದಾರೆ.

ಬಿಜೆಪಿ-ಸಂಘಪರಿವಾರದವರು ಎನ್ನಲಾದ ವ್ಯಕ್ತಿಗಳು ಕಾರ್ಯಕ್ರಮಕ್ಕೆ ಆಗಮಿಸಿದ್ಧ ಅತಿಥಿಗಳನ್ನು ಅಪಮಾನಿಸಲು ಮತ್ತು ಅವರ ಮೇಲೆ ಹಲ್ಲೆ ನಡೆಸಲು ಸಂಚು ರೂಪಿಸಿ, ಗುಂಪು ಕಟ್ಟಿಕೊಂಡು ಬಂದು ಗಲಾಟೆ ಮಾಡಿದ್ದಾರೆ ಎಂದು ದೂರಿನಲ್ಲಿ ಆರೋಪಿಸಲಾಗಿದೆ.

ಕಾರ್ಯಕ್ರಮದ ಪ್ರಾರಂಭದಲ್ಲಿ ಅತಿಥಿಗಳ ಆಗಮನದ ಸಮಯಕ್ಕೆ ವಿದ್ಯಾವರ್ಧಕ ಸಂಘದ ಗೇಟ್ ಎದುರುಗಡೆ ಘೋಷಣೆ ಕೂಗುತ್ತಾ ಗಲಾಟೆ ಮಾಡುತ್ತಾ ಕಾರ್ಯಕ್ರಮ ನಡೆಯದಂತೆ ಮಾಡಲು ಪ್ರಯತ್ನಿಸಿದ್ದರು. ಈ ವೇಳೆ ಕಾರ್ಯಕ್ರಮಕ್ಕೆ ಆಗಮಿಸಿದ್ಧ ಸಾಹಿತಿಗಳು, ಬರಹಗಾರರು, ಕವಿಗಳು ಹಾಗೂ ಉಪನ್ಯಾಸಕರು ಬಿಜೆಪಿ ಮತ್ತು ಸಂಘಪರಿವಾರದ ದುಷ್ಟ ಕೂಟದ ಕೃತ್ಯವನ್ನು ಬಲವಾಗಿ ವಿರೋಧಿಸಿ ಅತಿಥಿಗಳನ್ನು ಕಾರ್ಯಕ್ರಮದ ಸಭಾಂಗಣದೊಳಗೆ ಕರೆದುಕೊಂಡು ಹೋದರು ಎಂದು ದೂರಿನಲ್ಲಿ ಉಲ್ಲೇಖಿಸಲಾಗಿದೆ.

ಮುಂದುವರಿದು, ಕಾರ್ಯಕ್ರಮ ಅತ್ಯಂತ ಸರಳವಾಗಿ ನಡೆದು ಕೊನೆಯಲ್ಲಿ ಮುಖ್ಯ ಅಥಿತಿಗಳಾಗಿ ಆಗಮಿಸಿದ್ದ ಬಹುಭಾಷಾ ನಟ ಪ್ರಕಾಶ್ ರಾಜ್‌ರವರ ಕುರಿತು ಒಬ್ಬ ವ್ಯಕ್ತಿ ಸಭಾಂಗಣದಲ್ಲಿ ವೇದಿಕೆ ಮುಂಭಾಗಕ್ಕೆ ಆಗಮಿಸಿ ಗಲಾಟೆ ಮಾಡುತ್ತಾ ಕಾರ್ಯಕ್ರಮಕ್ಕೆ ತೊಂದರೆ ಮಾಡಲು ಬಂದಾಗ, ಅವರನ್ನು ಕೂಡ ಅತ್ಯಂತ ತಾಳ್ಮೆ ಮತ್ತು ಸಂಯಮದಿಂದ ಪೊಲೀಸರ ಸಹಕಾರದಿಂದ ಸಭಾಂಗಣದಿಂದ ಹೊರಗೆ ಕಳಿಸುವ ಪ್ರಯತ್ನ ಮಾಡಲಾಯಿತು ಎಂದು ಹೇಳಲಾಗಿದೆ.

ಕಾರ್ಯಕ್ರಮದ ಕೊನೆಯಲ್ಲಿ ಬಂದ ಅತಿಥಿಗಳು ಮರಳಿ ಸಭಾಂಗಣದಿಂದ ಹೊರಡಬೇಕು ಅನ್ನುವ ಸಂದರ್ಭದಲ್ಲಿ ಸಭಾಂಗಣದ ಹೊರಗಡೆ ಕರ್ನಾಟಕ ವಿದ್ಯಾವರ್ಧಕ ಸಂಘದ ಗೇಟ್ ಬಳಿ ಹಾಕಲಾದ ಪ್ರಕಾಶ್ ರಾಜ್‌ ಅವರ ಪೋಸ್ಟರ್‌ಗಳಿಗೆ ಎಬಿವಿಪಿ ಸದಸ್ಯರು ಎನ್ನಲಾದ ಕೆಲವರು ಮಸಿ ಬಳಿದು ಪೋಸ್ಟರ್, ಫ್ಲೆಕ್ಸ್ ಬ್ಯಾನರ್‌ಗಳನ್ನು ಹರಿದು ಹಾಕಿದರು. ಅಲ್ಲದೆ, ಪ್ರಕಾಶ್ ರಾಜ್‌ ವಿರುದ್ಧ ಘೋಷಣೆಗಳನ್ನು ಕೂಗುತ್ತಾ, ಅವರ ಮೇಲೆ ಹಲ್ಲೆ ನಡೆಸುವ ಸಂಚು ರೂಪಿಸಿದ್ದರು. ಈ ವೇಳೆ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದವರು ಆರೋಪಿಗಳ ನಡೆಯನ್ನು ಖಂಡಿಸಿದರು ಮತ್ತು ಅವರನ್ನು ಬಂಧಿಸುವಂತೆ ಪೊಲೀಸರಿಗೆ ಒತ್ತಾಯಿಸಿದರು. ನಂತರ ಪೊಲೀಸರು ಅವರನ್ನು ತಮ್ಮ ವಾಹನದಲ್ಲಿ ಕರೆದೊಯ್ದರು ಎಂದು ವಿವರಿಸಲಾಗಿದೆ.

ದೂರು ನೀಡುವ ವೇಳೆ ಎದ್ದೇಳು ಕರ್ನಾಟಕ ಸಂಘಟನೆಯ ಡಾ ಇಸಬೆಲ್ ಝೇವಿಯರ್ ಸೇರಿದಂತೆ ಮುಖಂಡರು ಹಾಜರಿದ್ದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

14 ವರ್ಷದೊಳಗಿನ ಮಕ್ಕಳ ಧಾರ್ಮಿಕ ಶಿಕ್ಷಣ ನಿಯಂತ್ರಣಕ್ಕೆ ಅರ್ಜಿ: ಕೇಂದ್ರ ಶಿಕ್ಷಣ ಕಾರ್ಯದರ್ಶಿಗೆ ಸುಪ್ರೀಂ ಕೋರ್ಟ್ ನೋಟಿಸ್

14 ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳಿಗೆ ಧಾರ್ಮಿಕ ಶಿಕ್ಷಣ ನೀಡುತ್ತಿರುವ ಸಂಸ್ಥೆಗಳ ನೋಂದಣಿ, ಮೇಲ್ವಿಚಾರಣೆ ಮತ್ತು ನಿಯಂತ್ರಣಕ್ಕೆ ಸಂಬಂಧಿಸಿದಂತೆ ಸಲ್ಲಿಸಲಾದ ಅರ್ಜಿಯನ್ನು ಪರಿಗಣಿಸುವಲ್ಲಿ ವಿಳಂಬವಾಗಿದೆ ಎಂಬ ಆರೋಪದ ಹಿನ್ನೆಲೆಯಲ್ಲಿ ಕೇಂದ್ರ ಶಿಕ್ಷಣ ಕಾರ್ಯದರ್ಶಿ...

ಸರ್ಕಾರದ 100 ದಿನ: ಪ್ರಚಾರದ ಸ್ವರೂಪವನ್ನೇ ಬದಲಿಸಿದ ಸರ್ಕಾರಿ ಜಾಹೀರಾತು

ಸಾಂಪ್ರದಾಯಿಕ ಪತ್ರಿಕಾ ಜಾಹೀರಾತುಗಳು, ಬ್ಯಾನರ್‌ಗಳು ಹಾಗೂ ಸರ್ಕಾರಿ ಕಾರ್ಯಕ್ರಮಗಳ ನಡುವೆ ಪ್ರಸಾರವಾಗುತ್ತಿದ್ದ ಜಾಹೀರಾತುಗಳ ಕಾಲವೀಗ ಬದಲಾಗಿದೆ. ಪ್ರಜೆಗಳ ಮನಸ್ಸನ್ನು ತಲುಪಲು ಅಧಿಕಾರದಲ್ಲಿರುವವರು ಆಯ್ದುಕೊಳ್ಳುವ ಮಾರ್ಗಗಳು ದಿನದಿಂದ ದಿನಕ್ಕೆ ರೂಪಾಂತರಗೊಳ್ಳುತ್ತಿವೆ. ಇದಕ್ಕೆ ಜ್ವಲಂತ ನಿದರ್ಶನ...

‘ಉಮರ್ ಖಾಲಿದ್ ಒಬ್ಬ ದೇಶಭಕ್ತ..’; ಸಾಕ್ಷ್ಯಚಿತ್ರ ಪ್ರದರ್ಶನ ವಿರೋಧಿಸಿದ ಎಬಿವಿಪಿ ವಿರುದ್ಧ ಹರಿಪ್ರಸಾದ್ ವಾಗ್ದಾಳಿ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯುನಿವರ್ಸಿಟಿಯಲ್ಲಿ (ಎನ್‌ಎಲ್‌ಎಸ್‌ಐಯು) ಹೋರಾಟಗಾರ ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನವನ್ನು ವಿರೋಧಿಸಿದ್ದಕ್ಕಾಗಿ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಬಿಕೆ ಹರಿಪ್ರಸಾದ್ ಅವರು ಮಂಗಳವಾರ...

ಜಂತರ್ ಮಂತರ್ ಹಲ್ಲೆ ಪ್ರಕರಣ: ಎಸ್‌ಸಿ/ಎಸ್‌ಟಿ, ಪೋಕ್ಸೊ ಕಾಯ್ದೆಯಡಿ ಬಂಧಿಸಲಾಗಿದ್ದ ಆರೋಪಿ ಸ್ವತಂತ್ರ ಭಾರದ್ವಾಜ್‌ಗೆ ಮಧ್ಯಂತರ ಜಾಮೀನು

ನವದೆಹಲಿ: ಜಂತರ್ ಮಂತರ್‌ನಲ್ಲಿ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ನಡೆಸಿದ ಆರೋಪ ಎದುರಿಸುತ್ತಿರುವ ಸ್ವತಂತ್ರ ಭಾರದ್ವಾಜ್‌ಗೆ ದೆಹಲಿಯ ಪಟಿಯಾಲ ಹೌಸ್ ನ್ಯಾಯಾಲಯ ಮೂರು ವಾರಗಳ ಮಧ್ಯಂತರ ಜಾಮೀನು ಮಂಜೂರು ಮಾಡಿದೆ....

ವಿಡಿಯೋದಲ್ಲಿ ‘ಅಸ್ಸಲಾಮು ಅಲೈಕುಮ್’ – ‘ಇನ್ಶಾ ಅಲ್ಲಾ’ ಎಂದಿದ್ದಕ್ಕೆ ಐಪಿಎಸ್ ಅಧಿಕಾರಿ ವರ್ಗಾವಣೆ

'ಅಸ್ಸಲಾಮು ಅಲೈಕುಮ್' ಮತ್ತು 'ಇನ್ಶಾ ಅಲ್ಲಾ' ಎಂದಿದ್ದಕ್ಕೆ ಬಲಪಂಥೀಯ ಸಂಘಟನೆಯೊಂದು ಪಶ್ಚಿಮ ಬಂಗಾಳದ ಗೃಹ ಕಾರ್ಯದರ್ಶಿಗೆ ದೂರು ನೀಡಿದ ಬೆನ್ನಲ್ಲೇ, ಭಾರತೀಯ ಪೊಲೀಸ್ ಸೇವೆ (ಐಪಿಎಸ್) ಅಧಿಕಾರಿ ಬುಷ್ರಾ ಬಾನೋ ಅವರನ್ನು ವರ್ಗಾವಣೆ...

ಪಾನ್ ಮಸಾಲಾ ಜಾಹೀರಾತು ವಿವಾದ: ಶಾರುಖ್, ಅಜಯ್ , ಶ್ರಾಫ್‌ ಅರ್ಜಿ ವಜಾಗೊಳಿಸಿದ ದೆಹಲಿ ಹೈಕೋರ್ಟ್‌

ವಿಮಲ್ ಇಲಾಯಚಿ ಹೆಸರಿನಲ್ಲಿ ನಿಷೇಧಿತ ಪಾನ್ ಮಸಾಲಾ ಉತ್ಪನ್ನದ ಪರೋಕ್ಷ ಪ್ರಚಾರ ನಡೆಸಿದ ಆರೋಪಕ್ಕೆ ಸಂಬಂಧಿಸಿದಂತೆ ಬಾಲಿವುಡ್ ನಟರಾದ ಶಾರುಖ್ ಖಾನ್, ಅಜಯ್ ದೇವಗನ್ ಹಾಗೂ ಟೈಗರ್ ಶ್ರಾಫ್ ಅವರಿಗೆ ಮಹಾರಾಷ್ಟ್ರ ಆಹಾರ...

“ಏಕರೂಪತೆಯು ಸಮಾನತೆಯಲ್ಲ”: 21 ಎನ್‌ಡಿಎ ಆಡಳಿತದ ರಾಜ್ಯಗಳಲ್ಲಿ ಯುಸಿಸಿ ಜಾರಿ ಕುರಿತ ಅಮಿತ್ ಶಾ ಘೋಷಣೆಗೆ ವಿಪಕ್ಷಗಳ ಕಿಡಿ

2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆಯನ್ನು (ಯುಸಿಸಿ) ಜಾರಿಗೊಳಿಸಲಾಗುವುದು ಎಂದು ಅಮಿತ್ ಶಾ ಘೋಷಿಸಿದ ಬೆನ್ನಲ್ಲೇ, ವಿಪಕ್ಷಗಳು ಬಿಜೆಪಿ ತನ್ನ...

ಉತ್ತರ ಪ್ರದೇಶ| ಫಿರೋಜಾಬಾದ್ ಖಾಕಿ ದೌರ್ಜನ್ಯ; ಪೊಲೀಸರ ಭೂಟು ಕಾಲಿನ ಒದೆತಕ್ಕೆ ಗರ್ಭಿಣಿ ಸಾವು

ಉತ್ತರ ಪ್ರದೇಶದ ಫಿರೋಜಾಬಾದ್‌ನ ಶಿಕೋಹಾಬಾದ್ ಪ್ರದೇಶದಲ್ಲಿ ಕಳ್ಳತನ ಪ್ರಕರಣದ ಶಂಕಿತ ಆರೋಪಿಯೊಬ್ಬನನ್ನು ಬಂಧಿಸಲು ಬಂದಿದ್ದ ಪೊಲೀಸರು ಆತನ ಗರ್ಭಿಣಿ ಹೆಂಡತಿಗೆ ಒದ್ದಿದ್ದರಿಂದ ಆಕೆ ಮೃತಪಟ್ಟಿದ್ದು, ಈ ಘಟನೆಗೆ ಸಂಬಂಧಿಸಿದಂತೆ ಇಬ್ಬರು ಸಬ್‌ಇನ್ಸ್‌ಪೆಕ್ಟರ್‌ಗಳು ಸೇರಿದಂತೆ...

ಕೋಲ್ಕತ್ತಾ | 48 ದಿನಗಳಿಂದ ಮುಸ್ಲಿಂ ಕಾಲೋನಿಗೆ ನೀರು ಬಂದ್ : ಬಿಜೆಪಿ ಸರ್ಕಾರದಿಂದ ದ್ವೇಷ ಸಾಧನೆ ಆರೋಪ

ಉತ್ತರ ಕೋಲ್ಕತ್ತಾದ ಕಾಶಿಪುರದ ಜ್ಯೋತಿನಗರ ಕಾಲೋನಿ ನಿವಾಸಿಗಳು ಕಳೆದ 48 ದಿನಗಳಿಂದ ಕುಡಿಯುವ ನೀರಿಗಾಗಿ ಹಾಹಾಕಾರಪಡುತ್ತಿದ್ದಾರೆ. ಇಲ್ಲಿನ ನೂರಾರು ಕುಟುಂಬಗಳಿಗೆ ನೀರಿನ ಮೂಲವಾಗಿರುವ ಐದು ಸಾರ್ವಜನಿಕ ನಲ್ಲಿಗಳು ಸಂಪೂರ್ಣವಾಗಿ ಒಣಗಿ ಹೋಗಿವೆ. ಇದರಿಂದಾಗಿ...

ಗುರುಗ್ರಾಮ| ಮಹಿಳಾ ಬೈಕರ್‌ಗೆ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಕಾರು ಚಾಲಕನ ಬಂಧನ

ಗುರುಗ್ರಾಮದಲ್ಲಿ ಮಹಿಳಾ ಸ್ಪೋರ್ಟ್ಸ್ ಬೈಕ್ ಸವಾರೆಗೆ ಕಾರಿನಿಂದ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ, ಚಾಲಕ ಕಲ್ಯಾಣ್ ಬೈನ್ಸ್ಲಾನನ್ನು ರಾಜಸ್ಥಾನದ ರಾಜ್‌ಗಢದಲ್ಲಿ ಮಂಗಳವಾರ ಬಂಧಿಸಲಾಗಿದೆ ಎಂದು ಗುರುಗ್ರಾಮ ಕಮಿಷನರ್ ಸಿಬಾಶ್ ಕಬೀರಾಜ್ ತಿಳಿಸಿದ್ದಾರೆ. ಈ...