Homeಕರ್ನಾಟಕಸಿಜೆಐ ಮೇಲೆ ಶೂ ಎಸೆಯುವ ಪ್ರಯತ್ನ ಮನುವಾದಿಗಳ ಜಾತಿ ಅಸಮಾನತೆಗೆ ಸಾಕ್ಷಿ: ಸಿಎಂ ಸಿದ್ದರಾಮಯ್ಯ

ಸಿಜೆಐ ಮೇಲೆ ಶೂ ಎಸೆಯುವ ಪ್ರಯತ್ನ ಮನುವಾದಿಗಳ ಜಾತಿ ಅಸಮಾನತೆಗೆ ಸಾಕ್ಷಿ: ಸಿಎಂ ಸಿದ್ದರಾಮಯ್ಯ

- Advertisement -
- Advertisement -

ಸುಪ್ರೀಂ ಕೋರ್ಟ್‌ನ ಮುಖ್ಯನ್ಯಾಯಮೂರ್ತಿಗಳಾಗಿರುವ ಬಿ.ಆರ್.ಗವಾಯಿ ಅವರಿಗೆ ವಕೀಲನೊಬ್ಬ ಶೂ ಎಸೆದು ಅವಮಾನ ಮಾಡಿರುವ ಘಟನೆಯನ್ನು ನಾನು ತೀವ್ರವಾಗಿ ಖಂಡಿಸುತ್ತೇನೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.

ಸಾಮಾಜಿಕ ಜಾಲತಾಣ ಎಕ್ಸ್‌ನಲ್ಲಿ ಈ ಕುರಿತು ಪೋಸ್ಟ್‌ ಹಾಕಿರುವ ಅವರು, ಮುಖ್ಯನ್ಯಾಯಮೂರ್ತಿಗಳು ಮತ್ತು ನ್ಯಾಯಾಲಯಕ್ಕೆ ಅವಮಾನ ಮಾಡಿರುವ ಕಿಡಿಗೇಡಿ ವಕೀಲನನ್ನು ತಕ್ಷಣ ಬಂಧಿಸಿ ಕಾನೂನು ಕ್ರಮಕೈಗೊಳ್ಳಬೇಕೆಂದು ಆಗ್ರಹಪಡಿಸುತ್ತೇನೆ ಎಂದಿದ್ದಾರೆ.

ದಲಿತ ಸಮುದಾಯಕ್ಕೆ ಸೇರಿರುವ ನ್ಯಾಯಮೂರ್ತಿ ಬಿ.ಆರ್.ಗವಾಯಿ ಅವರು ಸಾಮಾಜಿಕ ಪ್ರತಿರೋಧಗಳನ್ನು ಎದುರಿಸಿ ಅರ್ಹತೆ ಮತ್ತು ಸಾಧನೆ ಮೂಲಕ ಉನ್ನತ ಸ್ಥಾನಕ್ಕೇರಿದವರು. ಜಾತಿ ಮೂಲದ ಅಸಮಾನತೆ ಮತ್ತು ಅಸಹನೆ ಸಂವಿಧಾನ ಜಾರಿಗೆ ಬಂದ 75 ವರ್ಷಗಳ ನಂತರವೂ ಮನುವಾದಿಗಳ ಮನಸ್ಸಲ್ಲಿ ಭಧ್ರವಾಗಿ ಉಳಿದುಕೊಂಡಿದೆ ಎನ್ನುವುದಕ್ಕೆ ಇಂದಿನ ಘಟನೆ ಸಾಕ್ಷಿಯಾಗಿದೆ ಎಂದು ಸಿಎಂ ಹೇಳಿದ್ದಾರೆ.

ಗೌರವಾನ್ವಿತ ಮುಖ್ಯನ್ಯಾಯಮೂರ್ತಿಗಳಾದ ಬಿ.ಆರ್.ಗವಾಯಿ ಅವರು ಒಬ್ಬಂಟಿಯಲ್ಲ. ಪ್ರಜಾಪ್ರಭುತ್ವ ಮತ್ತು ಸಂವಿಧಾನದ ಮೇಲೆ ನಂಬಿಕೆ ಇಟ್ಟಿರುವ ಕೋಟ್ಯಂತರ ಜಾತ್ಯತೀತ ಮನಸ್ಸುಗಳು ಅವರ ಬೆಂಬಲಕ್ಕೆ ಇವೆ ಎನ್ನುವುದನ್ನು ಅವರ ಗಮನಕ್ಕೆ ತರಬಯಸುತ್ತೇನೆ. ಮುಖ್ಯನ್ಯಾಯಮೂರ್ತಿಗಳು ಯಾವುದೇ ಪಕ್ಷ ಇಲ್ಲವೇ ಧರ್ಮಕ್ಕೆ ಸೇರಿದವರಲ್ಲ. ಈ ದೃಷ್ಟಿಯಿಂದ ದೇಶದ ಎಲ್ಲ ಜಾತಿ, ಧರ್ಮ ಮತ್ತು ಪಕ್ಷಗಳ ಜನರು ಸುಪ್ರೀಂ ಕೋರ್ಟ್‌ನಲ್ಲಿ ಇಂದು ನಡೆದಿರುವ ಘಟನೆಯನ್ನು ಒಕ್ಕೊರಲಿನಿಂದ ಖಂಡಿಸಬೇಕೆಂದು ಮನವಿ ಮಾಡುತ್ತೇನೆ ಎಂದಿದ್ದಾರೆ.

ಜಾತಿ ಮತ್ತು ಧರ್ಮದ ಹೆಸರಲ್ಲಿ ಸಮಾಜವನ್ನು ಒಡೆದುಹಾಕಿ, ಪರಸ್ಪರ ದ್ವೇಷ ಮತ್ತು ಅಸಹನೆಯನ್ನು ಹುಟ್ಟುಹಾಕಿರುವ ಕಾರಣಕ್ಕಾಗಿಯೇ ರಾಕೇಶ್ ಕಿಶೋರ್‌ನಂತಹ ಮನುವಾದಿ ಮನಸ್ಸುಗಳು ಸಮಾಜದಲ್ಲಿ ಹುಟ್ಟಿಕೊಂಡಿವೆ ಎನ್ನುವುದನ್ನು ನಾವು ಮರೆಯಬಾರದು. ನಾಥೂರಾಮ್ ಗೋಡ್ಸೆಯಂತಹ ಒಬ್ಬ ಕೊಲೆಗಡುಕನನ್ನು ದೇಶಪ್ರೇಮಿ ಎಂದು ಮೆರೆಸಲು ಹೊರಟಿರುವ ರೀತಿಯಲ್ಲಿಯೇ ಕೆಲವು ಪುಂಡರು ವಕೀಲನ ಕುಕೃತ್ಯವನ್ನು ಸಂಭ್ರಮಿಸುತ್ತಿರುವುದನ್ನು ಕಾಣುತ್ತಿದ್ದೇವೆ. ಇಂತಹವರ ವಿರುದ್ಧವೂ ಕಾನೂನು ಕ್ರಮ ಕೈಗೊಳ್ಳಬೇಕಾದ ಅಗತ್ಯ ಇದೆ ಎಂದು ನಾನು ತಿಳಿದುಕೊಂಡಿದ್ದೇನೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.

‘ಸಂವಿಧಾನದ ಮೇಲೆ ಧಾರ್ಮಿಕ ಅಂಧತ್ವದ ಸವಾರಿ’: ಸಿಜೆಐ ಮೇಲೆ ಶೂ ಎಸೆಯಲು ಯತ್ನಿಸಿರುವುದಕ್ಕೆ ತೀವ್ರ ಖಂಡನೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ವಂದೇ ಮಾತರಂ ಗೀತೆಯ 6 ಚರಣಕ್ಕೆ ಕರ್ನಾಟಕ ಸರ್ಕಾರದ ಬ್ರೇಕ್

ವಂದೇ ಮಾತರಂ ಗೀತೆಯ ಗಾಯನಕ್ಕೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರದ ನಿರ್ಧಾರ ಮತ್ತು ಕಡ್ಡಾಯ ನೀತಿಗೆ ಕರ್ನಾಟಕ ಸರ್ಕಾರ ನೇರವಾಗಿ ಸೆಡ್ಡು ಹೊಡೆದಿದೆ. ರಾಜ್ಯ ಸರ್ಕಾರದ ಅಧಿಕೃತ ಕಾರ್ಯಕ್ರಮಗಳಲ್ಲಿ ವಂದೇ ಮಾತರಂ ಗೀತೆಯ ಸಂಪೂರ್ಣ...

ಸಿಜೆಪಿ ಪ್ರತಿಭಟನೆಯಲ್ಲಿ ಬಾಲಕಿ ನಿಶು ಆಜಾದ್‌ಗೆ ಬೆದರಿಕೆ; ಕ್ರಮಕ್ಕೆ ಸುಪ್ರೀಂ ಕೋರ್ಟ್ ಸೂಚನೆ

ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ನೇತೃತ್ವದಲ್ಲಿ ನಡೆದ ಪ್ರತಿಭಟನೆಯಲ್ಲಿ ಭಾಗವಹಿಸಿದ್ದ 14 ವರ್ಷದ ನಿಶು ಆಜಾದ್‌ಗೆ ಕಿಡಿಗೇಡಿಗಳು ಅತ್ಯಾಚಾರದ ಬೆದರಿಕೆ ಹಾಕಿದ್ದಾರೆ ಹಾಗೂ ಅವರ ಮನೆ ಮೇಲೆ ಕಲ್ಲು ತೂರಾಟ ನಡೆಸಿದ್ದಾರೆ ಎಂಬ...

ಜಾದವ್‌ಪುರ ವಿವಿ ವಿರುದ್ಧ ಸುವೇಂದು ಅಧಿಕಾರಿಯ ‘ಕೇಸರಿ ಯಾತ್ರೆ’: ‘ಆಜಾದಿ’, ‘ಲಾಲ್ ಸಲಾಂ’ ಕೂಗುವವರನ್ನು ಬೇರುಸಹಿತ ಕಿತ್ತುಹಾಕುತ್ತೇನೆ ಎಂದು ಬೆದರಿಕೆ

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಬಿಜೆಪಿ ನಾಯಕ ಹಾಗೂ ಮುಖ್ಯಮಂತ್ರಿ ಸುವೇಂದು ಅಧಿಕಾರಿ ನೇತೃತ್ವದಲ್ಲಿ ಕೋಲ್ಕತ್ತಾದ ಜಾದವ್‌ಪುರ ವಿಶ್ವವಿದ್ಯಾಲಯದತ್ತ ನಡೆದ ‘ಗೆರುವಾ ಸಮ್ಮಾನ್ ಯಾತ್ರೆ’ (ಕೇಸರಿ ಗೌರವ ಮೆರವಣಿಗೆ) ಇದೀಗ ರಾಜ್ಯದ ರಾಜಕೀಯ ವಲಯದಲ್ಲಿ...

SIR : ಒಂದೇ ಮತಗಟ್ಟೆಯ 729 ಮತದಾರರಲ್ಲಿ 728 ಮಂದಿಯ ಹೆಸರು ಡಿಲೀಟ್!

ದೆಹಲಿಯ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆಗೆ (ಎಸ್‌ಐಆರ್‌) ಮುನ್ನ, ಯಮುನಾ ನದಿ ಪಾತ್ರದ ಕೊಳಗೇರಿ ಪ್ರದೇಶವಾದ ಬೇಲಾ ಎಸ್ಟೇಟ್‌ನ ಭಾಗವೊಂದನ್ನು ಒಳಗೊಂಡಿರುವ ಮತಗಟ್ಟೆಯಲ್ಲಿ 729 ನೋಂದಾಯಿತ ಮತದಾರರಿದ್ದರು. ಆದರೆ, ಆಗಸ್ಟ್‌ನಲ್ಲಿ ಕರಡು...

ಬಂಗಾಳದ ನಾನ್‌ವೆಜ್ ವಿವಾದ: ಬಾಗೇಶ್ವರ್ ಬಾಬಾ ಹೇಳಿಕೆಗೆ ಹಿಂದೂ ವಲಯದಲ್ಲೇ ವಿರೋಧ; ‘ಹಿಂದೂ ಧರ್ಮ ಆಹಾರದ ಕೋಡ್ ಅಲ್ಲ!

ದುರ್ಗಾ ಪೂಜೆಯ ಸಂದರ್ಭದಲ್ಲಿ ಮೀನು, ಮಾಂಸ ಸೇವನೆ ಹಾಗೂ ಮಾರಾಟದ ವಿರುದ್ಧ ಬಾಗೇಶ್ವರ್ ಧಾಮದ ಮುಖ್ಯಸ್ಥ ಧೀರೇಂದ್ರ ಕೃಷ್ಣ ಶಾಸ್ತ್ರಿ ನೀಡಿದ್ದ ಹೇಳಿಕೆ ಪಶ್ಚಿಮ ಬಂಗಾಳದಲ್ಲಿ ರಾಜಕೀಯ ವಿವಾದ ಹುಟ್ಟುಹಾಕಿದ ಬೆನ್ನಲ್ಲೇ, ಇದೀಗ...

SIR: ಪಂಜಾಬ್‌ ಮತದಾರರ ಪಟ್ಟಿಯಿಂದ ಡಿಲೀಟ್ ಆಗಿದ್ದ ರಾಘವ್ ಚಡ್ಡಾ ಹೆಸರು ದೆಹಲಿಯಲ್ಲಿ ಎಂಟ್ರಿ!

ರಾಜ್ಯಸಭಾ ಸಂಸದ ರಾಘವ್ ಚಡ್ಡಾ ಅವರ ಹೆಸರು ಪಂಜಾಬ್‌ನ ಕರಡು ಮತದಾರರ ಪಟ್ಟಿಯಿಂದ ತೆಗೆದುಹಾಕಲ್ಪಟ್ಟ ಕೆಲವೇ ದಿನಗಳಲ್ಲಿ, ದೆಹಲಿಯ ಮತದಾರರ ಪಟ್ಟಿಯಲ್ಲಿ ದಿಢೀರನೆ ಪ್ರತ್ಯಕ್ಷವಾಗಿರುವುದು ದೇಶಾದ್ಯಂತ ಭಾರಿ ರಾಜಕೀಯ ಚರ್ಚೆಗೆ ಕಾರಣವಾಗಿದೆ. ಈ...

ರಾಜ್ಯ ಕಾಂಗ್ರೆಸ್‌ಗೆ 35 ನೂತನ ಜಿಲ್ಲಾಧ್ಯಕ್ಷರ ನೇಮಕ; ಹೈಕಮಾಂಡ್ ಪಟ್ಟಿಯಲ್ಲಿ ಮಹಿಳೆಯರಿಗಿಲ್ಲ ಪ್ರಾತಿನಿಧ್ಯ!

ಕರ್ನಾಟಕ ಕಾಂಗ್ರೆಸ್‌ನ ಬಹುನಿರೀಕ್ಷಿತ ಜಿಲ್ಲಾ ಪುನರ್‌ರಚನೆಗೆ ಕೊನೆಗೂ ಚಾಲನೆ ದೊರೆತಿದ್ದು, ರಾಜ್ಯದ 35 ಸಾಂಸ್ಥಿಕ ಜಿಲ್ಲಾ ಕಾಂಗ್ರೆಸ್ ಸಮಿತಿಗಳಿಗೆ (DCC) ನೂತನ ಅಧ್ಯಕ್ಷರನ್ನು ನೇಮಕ ಮಾಡಲಾಗಿದೆ. ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ.ಸಿ....

ತ್ರಿಪುರ| ಬಿಜೆಪಿ ಬೇಡಿಕೆಗೆ ಸ್ಪಂದಿಸಿದ ಇಸಿಐ; ಗ್ರಾಮ ಸಮಿತಿ ಚುನಾವಣೆ ಹಿನ್ನೆಲೆಯಲ್ಲಿ ಎಸ್‌ಐಆರ್ ಪ್ರಕ್ರಿಯೆ ಮುಂದೂಡಿಕೆ

ಆಡಳಿತರೂಢ ಭಾರತೀಯ ಜನತಾ ಪಕ್ಷ (ಬಿಜೆಪಿ) ಸೇರಿದಂತೆ ವಿವಿಧ ರಾಜಕೀಯ ಪಕ್ಷಗಳ ಬೇಡಿಕೆಗೆ ಸ್ಪಂದಿಸಿರುವ ಭಾರತೀಯ ಚುನಾವಣಾ ಆಯೋಗ (ಇಸಿಐ), ರಾಜ್ಯದ ಬುಡಕಟ್ಟು ಪ್ರದೇಶಗಳಲ್ಲಿ ಸೆಪ್ಟೆಂಬರ್ 28 ರಂದು ನಡೆಯಲಿರುವ ಗ್ರಾಮ ಸಮಿತಿ...

SIR: ಸ್ವತಃ BLO ಗೆ ನೋಟಿಸ್ ನೀಡಿದ ಚುನಾವಣಾ ಆಯೋಗ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯ ತಾಂತ್ರಿಕ ಎಡವಟ್ಟುಗಳು ಮತ್ತು ಗೊಂದಲಗಳು ಪ್ರತಿದಿನವೂ ಒಂದಲ್ಲ ಒಂದು ವಿಲಕ್ಷಣ ಘಟನೆಗಳಿಗೆ ಕಾರಣವಾಗುತ್ತಿದ್ದು, ಇದೀಗ ಸ್ವತಃ ಮತದಾರರ ಪಟ್ಟಿ ಪರಿಷ್ಕರಣೆ...

‘ಎಸ್‌ಐಆರ್ ಪ್ರಜಾಪ್ರಭುತ್ವಕ್ಕೆ ವಂಚನೆ’: 2025ಕ್ಕೆ ಹೋಲಿಸಿದರೆ ದೆಹಲಿಯ 58.60 ಲಕ್ಷ ಮತದಾರರ ಹೆಸರುಗಳು ಮಾಯ: ನಾಗರೀಕ ಸಂಘಟನೆಗಳ ಆಕ್ರೋಶ

ನವದೆಹಲಿ: ದೆಹಲಿಯಲ್ಲಿ ಚುನಾವಣಾ ಆಯೋಗ ನಡೆಸುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆ ಮತದಾರರ ಪಟ್ಟಿಯ ಶುದ್ಧೀಕರಣದ ಸಾಮಾನ್ಯ ಆಡಳಿತಾತ್ಮಕ ಕ್ರಮವಲ್ಲ, ಬದಲಾಗಿ ನಾಗರಿಕರ ಮತದಾನದ ಹಕ್ಕಿನ ಮೇಲೆ ಗಂಭೀರ ಪರಿಣಾಮ ಬೀರುವ...