Homeಮುಖಪುಟನಾಗರಿಕ ಹಕ್ಕುಗಳ ಹೋರಾಟಗಾರ ನದೀಮ್ ಖಾನ್ ಅಕ್ರಮ ಬಂಧನ ಯತ್ನ; ದೆಹಲಿ ಪೊಲೀಸರ ವಿರುದ್ಧ ಬೆಂಗಳೂರಿನಲ್ಲಿ...

ನಾಗರಿಕ ಹಕ್ಕುಗಳ ಹೋರಾಟಗಾರ ನದೀಮ್ ಖಾನ್ ಅಕ್ರಮ ಬಂಧನ ಯತ್ನ; ದೆಹಲಿ ಪೊಲೀಸರ ವಿರುದ್ಧ ಬೆಂಗಳೂರಿನಲ್ಲಿ ದೂರು ದಾಖಲು

- Advertisement -
- Advertisement -

ಬೆಂಗಳೂರು ನಗರದಲ್ಲಿ ಅಕ್ರಮ ಚಟುವಟಿಕೆ ನಡೆಸಿರುವ ದೆಹಲಿ ಪೊಲೀಸರ ವಿರುದ್ಧ ಸಂಪಗೆಹಳ್ಳಿ ಪೊಲೀಸ್‌ ಠಾಣೆಯಲ್ಲಿ ದೂರು ದಾಖಲಾಗಿದೆ ಎಂದು ‘ಈದಿನ.ಕಾಮ್’ ವರದಿ ಮಾಡಿದೆ.

ಮಾನವ ಹಕ್ಕುಗಳ ಹೋರಾಟಗಾರ, ಅಸೋಸಿಯೇಷನ್ ಫಾರ್ ಪ್ರೊಟೆಕ್ಷನ್ ಆಫ್ ಸಿವಿಲ್ ರೈಟ್ಸ್‌ (ಎಪಿಸಿಆರ್) ಸಂಘಟನೆಯ ರಾಷ್ಟ್ರೀಯ ಕಾರ್ಯದರ್ಶಿಯಾಗಿರುವ ನದೀಮ್ ಖಾನ್ ಅವರನ್ನು ಬಂಧಿಸಲು ಬೆಂಗಳೂರಿಗೆ ಆಗಮಿಸಿರುವ ದೆಹಲಿ ಪೊಲೀಸರು, ಸ್ಥಳೀಯ ಪೊಲೀಸರ ಗಮನಕ್ಕೆ ತರದೆ ಅಕ್ರಮವಾಗಿ ಬಂಧಿಸಲು ಯತ್ನಿಸಿರುವ ಘಟನೆ ನ.30ರ ಸಂಜೆ ನಡೆದಿತ್ತು.

ಈ ಬಗ್ಗೆ ದೆಹಲಿ ಪೊಲೀಸರ ವಿರುದ್ಧ ನದೀಮ್ ಖಾನ್ ಕುಟುಂಬಸ್ಥರು ಕೂಡಲೇ ಬೆಂಗಳೂರು ಪೊಲೀಸರಿಗೆ ದೂರು ನೀಡಿದ್ದಾರೆ. ದೂರು ದಾಖಲಿಸಿಕೊಂಡಿರುವ ಸಂಪಿಗೆಹಳ್ಳಿ ಪೊಲೀಸ್ ಠಾಣೆಯ ಪೊಲೀಸ್ ಇನ್ಸ್‌ಪೆಕ್ಟರ್, ಮುಂದಿನ ಕ್ರಮ ಕೈಗೊಂಡಿದ್ದಾರೆ.

“ಶನಿವಾರ ಸಂಜೆ 5ರ ಸುಮಾರಿಗೆ ದೆಹಲಿಯ ಶಾಹೀನ್ ಬಾಗ್ ಪೊಲೀಸ್ ಠಾಣೆಯ ಸ್ಟೇಷನ್ ಹೌಸ್ ಆಫೀಸರ್ (ಎಸ್ಎಚ್ಒ) ಎಂದು ಹೇಳಿಕೊಂಡು ಬಂದ ನಾಲ್ವರು ಅಧಿಕಾರಿಗಳು ಅಕ್ರಮವಾಗಿ ಮನೆಗೆ ನುಗ್ಗಿದರು. ವಾರಂಟ್ ಅಥವಾ ಪೂರ್ವ ಸೂಚನೆಯಿಲ್ಲದೆ ಬಂದಿದ್ದಲ್ಲದೇ, ನಮ್ಮನ್ನು ಬೆದರಿಸಿದ್ದಾರೆ. ಯಾಕೆ ಬಂದಿದ್ದೀರಿ ಎಂದು ಪ್ರಶ್ನಿಸಿದ್ದಕ್ಕೆ, ನದೀಮ್ ಖಾನ್ ಅವರ ವಿರುದ್ಧ ನಮ್ಮ ಠಾಣೆಯಲ್ಲಿ ಶನಿವಾರ ಮಧ್ಯಾಹ್ನ 12:48 ಕ್ಕೆ ಎಫ್‌ಐಆರ್ ದಾಖಲಿಸಿಕೊಂಡಿದ್ದೇವೆ. ಅವರನ್ನು ಹುಡುಕಿಕೊಂಡು ಬಂದಿದ್ದೇವೆ ಎಂದು ಹೇಳಿದರು. ದಾಖಲೆ ಕೇಳಿದಾಗ ಆನ್‌ಲೈನ್ ಪ್ರತಿಯನ್ನು ತೋರಿಸಿದ್ದಾರೆ” ಎಂದು ಸಾಮಾಜಿಕ ಕಾರ್ಯಕರ್ತ ನದೀಮ್ ಖಾನ್ ಸಹೋದರ ತಮ್ಮ ದೂರಿನಲ್ಲಿ ಆರೋಪಿಸಿದ್ದಾರೆ.

“ದೆಹಲಿ ಪೊಲೀಶರು ಮನೆಗೆ ನುಗ್ಗಿದ ವೇಳೆ ಯಾವುದೇ ಸಮವಸ್ತ್ರದಲ್ಲಿ ಇರಲಿಲ್ಲ. 8 ಗಂಟೆ ಸುಮಾರಿಗೆ, ಬೆಂಗಳೂರಿನ ಸಂಪಿಗೆಹಳ್ಳಿ ಪೊಲೀಸ್ ಠಾಣೆಯ 3 ಪೊಲೀಸ್ ಅಧಿಕಾರಿಗಳು ಕೂಡ ನನ್ನ ನಿವಾಸಕ್ಕೆ ಬಂದರು. ದೆಹಲಿ ಪೊಲೀಸರು ಸ್ಥಳೀಯ ಪೊಲೀಸರಿಗೆ ಸೂಚನೆ ನೀಡಿಲ್ಲ ಎಂಬುದು ನಂತರ ಸ್ಪಷ್ಟವಾಯಿತು. ರಾತ್ರಿ 9 ಗಂಟೆಯವರೆಗೆ ಮನೆಯ ಮೊದಲ ಮಹಡಿಯ ಹಾಲ್‌ನಲ್ಲಿ ಕುಳಿತು ತನಿಖೆಗೆ ನದೀಮ್‌ನನ್ನು ತಮ್ಮೊಂದಿಗೆ ದೆಹಲಿಗೆ ಬರುವಂತೆ ಒತ್ತಾಯಿಸಿದ್ದರು. ಯಾವುದೇ ಸಮನ್ಸ್, ನೋಟಿಸ್, ವಾರಂಟ್ ಇಲ್ಲದಿದ್ದರೂ, ಎಸ್‌ಎಚ್‌ಒ ಮತ್ತು ಇತರ ಪೊಲೀಸ್ ಅಧಿಕಾರಿಗಳು ಮನೆಯಲ್ಲೇ ಐದು ಗಂಟೆಗಳ ಕಾಲ ನಮ್ಮನ್ನು ಬೆದರಿಸಿದ್ದಾರೆ” ಎಂದು ಅವರು ವಿವರಿಸಿದ್ದಾರೆ.

“ಎಫ್ಐಆರ್‌ನಲ್ಲಿ ದಾಖಲಿಸಿಕೊಂಡಿರುವ ಎಲ್ಲ ಸೆಕ್ಷನ್‌ನ ಅಪರಾಧಗಳಿಗೆ ಮೂರು ವರ್ಷಗಳಿಗಿಂತ ಕಡಿಮೆಯಿರುವ ಶಿಕ್ಷೆಗಳಾಗಿದೆ. ಆದ್ದರಿಂದ ಇದಕ್ಕೆಲ್ಲ ನೋಟಿಸ್ ನೀಡಬೇಕಿದೆ. ಅದ್ಯಾವುದನ್ನೂ ದೆಹಲಿ ಪೊಲೀಸರು ಪಾಲಿಸಿಲ್ಲ. ಈ ಎಫ್‌ಐಆರ್ ದಾಖಲಾಗುವುದಕ್ಕೂ ಮೊದಲು, ನವೆಂಬರ್ 29ರ ತಡರಾತ್ರಿ ದೆಹಲಿಯಲ್ಲಿರುವ ಎಪಿಸಿಆರ್ ಕಚೇರಿಗೆ 20 ಪೊಲೀಸ್ ಅಧಿಕಾರಿಗಳು ನುಗ್ಗಲು ಪ್ರಯತ್ನಿಸಿದ್ದಾರೆ. ನದೀಮ್ ಮತ್ತು ನನಗೆ ಪೊಲೀಸರು ಮಾನಸಿಕ ಹಿಂಸೆ ನೀಡಿ, ಬೆದರಿಕೆ ಹಾಕಿದ್ದಾರೆ. ಕ್ರಿಮಿನಲ್ ಬೆದರಿಕೆ, ಅತಿಕ್ರಮಣ, ಅಧಿಕಾರದ ದುರುಪಯೋಗ ನಡೆಸಿದ ದೆಹಲಿ ಪೊಲೀಸರ ವಿರುದ್ಧ ಎಫ್‌ಐಆರ್ ದಾಖಲಿಸಬೇಕು. ಜೀವಕ್ಕೆ ಅಪಾಯವಾಗದಂತೆ ಮತ್ತು ಕಾನೂನು ಪ್ರಕ್ರಿಯೆಯ ದುರುಪಯೋಗವಾಗದಂತೆ ನಮ್ಮ ಕುಟುಂಬಕ್ಕೆ ರಕ್ಷಣೆ ನೀಡಬೇಕು” ಎಂದು ದೂರಿನಲ್ಲಿ ನದೀಮ್ ಖಾನ್ ಕುಟುಂಬಸ್ಥರು ಮನವಿ ಮಾಡಿದ್ದಾರೆ.

ಈ ಬೆಳವಣಿಗೆಯ ಬಗ್ಗೆ ಮಾತನಾಡಿರುವ ಎಪಿಸಿಆರ್ ಸಂಘಟನೆಯ ಕರ್ನಾಟಕ ರಾಜ್ಯ ಕಾರ್ಯದರ್ಶಿ ಅಡ್ವೊಕೇಟ್ ನಿಯಾಝ್ ಅಹ್ಮದ್, “ದೆಹಲಿ ಪೊಲೀಸರು ಈಗ ದಾಖಲಿಸಿಕೊಂಡಿರುವ ಎಫ್‌ಐಆರ್‌ನಲ್ಲಿ ಆರೋಪಿಗಳ ಬಂಧನಕ್ಕೂ ಮೊದಲು ನೋಟಿಸ್ ನೀಡಬೇಕಿದೆ. ಅಲ್ಲದೇ, ಈ ಬಗ್ಗೆ ಸುಪ್ರೀಂ ಕೋರ್ಟ್‌ನ ಮಾರ್ಗಸೂಚಿ ಕೂಡ ಇದೆ. ಇದು ಯಾವುದನ್ನೂ ಅನುಸರಿಸದೆ, ಅಕ್ರಮ ಬಂಧನಕ್ಕೆ ಯತ್ನಿಸಿದ್ದಾರೆ. ಮನೆಗೆ ಬಂದವರ ಬಳಿಯಲ್ಲಿ ಐಡಿ ಕಾರ್ಡ್‌ ಕೂಡ ಇರಲಿಲ್ಲ. ಅಲ್ಲದೇ, ಯಾವುದೇ ಮಾಹಿತಿ ನೀಡದೆ ಮನೆಗೆ ನುಗ್ಗಿದ್ದಾರೆ. ಸ್ಥಳೀಯ ಪೊಲೀಸರಿಗೂ ಮಾಹಿತಿ ನೀಡಿರಲಿಲ್ಲ. ಅತಿಕ್ರಮಣ ಪ್ರವೇಶ ಮಾಡಿ, ಅಕ್ರಮ ಚಟುವಟಿಕೆ ನಡೆಸಿರುವ ದೆಹಲಿ ಪೊಲೀಸರ ಮೇಲೆ ಎಫ್‌ಐಆರ್ ದಾಖಲಿಸುವಂತೆ ಸಂಪಿಗೆಹಳ್ಳಿ ಪೊಲೀಸ್ ಠಾಣೆಯಲ್ಲಿ ನದೀಮ್ ಖಾನ್ ಕುಟುಂಬಸ್ಥರು ದೂರು ನೀಡಿದ್ದಾರೆ. ಸಂಪಿಗೆಹಳ್ಳಿ ಪೊಲೀಸರು ದೂರು ದಾಖಲಿಸಿಕೊಂಡಿದ್ದಾರೆ” ಎಂದು ತಿಳಿಸಿದರು.

“ನದೀಮ್ ಖಾನ್ ‘ದ್ವೇಷದ ವಿರುದ್ಧ ಒಂದಾದ ನಾವೆಲ್ಲರೂ’ ಎಂಬ ಸಂಘಟನೆಯ ಪದಾಧಿಕಾರಿಯಾಗಿದ್ದು, ಭಾರತ್ ಜೋಡೋ‌ ಅಭಿಯಾನದ ರಾಷ್ಟ್ರೀಯ ಪದಾಧಿಕಾರಿಯೂ ಆಗಿದ್ದಾರೆ. ಅವರನ್ನು ದುರುದ್ದೇಶಪೂರ್ವಕವಾಗಿ ಪ್ರಕರಣಗಳಲ್ಲಿ ಸಿಲುಕಿಸಲು ಯತ್ನಿಸುತ್ತಿರುವುದು ಸ್ಪಷ್ಟ” ಎಂದು ಜಾಗೃತ ಕರ್ನಾಟಕದ ಡಾ.ವಾಸು ಎಚ್ ವಿ ಅವರು ಹೇಳಿದ್ದಾರೆ ಎಂದು ‘ಈದಿನ.ಕಾಮ್‌’ ವರದಿ ಮಾಡಿದೆ.

ದೆಹಲಿ ಪೊಲೀಸರು ಇನ್ನಷ್ಟು ಕುಖ್ಯಾತಿ ಪಡೆಯುವ ಮೊದಲು ನ್ಯಾಯಾಲಯಗಳು ಮಧ್ಯೆ ಪ್ರವೇಶಿಸಬೇಕು ಎಂದು ಅವರು ಆಗ್ರಹಿಸಿದ್ದಾರೆ.

“ಪೊಲೀಸರು ಕಾನೂನು ಪಾಲಿಸದೇ ಈ ರೀತಿ ಅಕ್ರಮ ಚಟುವಟಿಕೆಗಳನ್ನು ನಡೆಸಿದರೆ, ಕಾನೂನಿನ ಕುರಿತು ಜನರಿಗೆ ವಿಶ್ವಾಸ ಕುಂದುತ್ತದೆ. ನದೀಮ್ ಖಾನ್ ವಿಚಾರದಲ್ಲಿ ದೆಹಲಿ ಪೊಲೀಸರು ನಡೆದುಕೊಂಡಿರುವ ರೀತಿಯೇ ಸರಿ ಇಲ್ಲ. ಅನುಮಾನ ಉಂಟು ಮಾಡುವಂಥದ್ದು. ಈ ಹಿಂದೆ ದಿಶಾ ರವಿಯವರ ಪ್ರಕರಣದಲ್ಲೂ ಇದೇ ರೀತಿ ನಡೆದುಕೊಂಡಿದ್ದರು. ಕರ್ನಾಟಕ ಸರ್ಕಾರ ಹಾಗೂ ಬೆಂಗಳೂರಿನ ಪೊಲೀಸರು ಏನೂ ಮಾಡಿರಲಿಲ್ಲ” ಎಂದು ವಕೀಲ, ಸಾಮಾಜಿಕ ಕಾರ್ಯಕರ್ತ ವಿನಯ್ ಶ್ರೀನಿವಾಸ್ ಹೇಳಿದ್ದಾರೆ.

“ನಮ್ಮದು ಒಕ್ಕೂಟ ದೇಶ; ದೆಹಲಿ ಪೊಲೀಸರು ಕೇಂದ್ರ ಗೃಹ ಇಲಾಖೆಯ ಅಡಿಯಲ್ಲಿದ್ದಾರೆ ಎಂದು ತಿಳಿದುಕೊಂಡು ತಮಗಿಷ್ಟ ಬಂದಂತೆ ನಡೆದುಕೊಳ್ಳಬಾರದು ಎಂಬುದನ್ನು ಮೊದಲು ಅರ್ಥ ಮಾಡಿಕೊಳ್ಳಬೇಕು. ನದೀಮ್ ಹಾಗೂ ಎಪಿಸಿಆರ್‌ನವರು ದನಿ ಇಲ್ಲದವರ ಪರವಾಗಿ ಕೆಲಸ ಮಾಡುತ್ತಿರುವುದರಿಂದ ಗುರಿ ಮಾಡಿಕೊಳ್ಳಲಾಗಿದೆ. ಅವರನ್ನು ಬೆನ್ನತ್ತುತ್ತಿರುವುದು ಖಂಡನೀಯ. ಕರ್ನಾಟಕದ ಕಾಂಗ್ರೆಸ್ ಸರ್ಕಾರ ಈ ಬಗ್ಗೆ ಕೂಡ ಕ್ರಮ ತೆಗೆದುಕೊಳ್ಳಲು ಮುಂದಾಗಬೇಕು” ಎಂದು ವಿನಯ್ ರಾಜ್ಯ ಸರ್ಕಾರವನ್ನು ಒತ್ತಾಯಿಸಿದ್ದಾರೆ.

ಇದನ್ನೂ ಓದಿ; ಹೋರಾಟಗಳು ಫ್ರೀಡಂ ಪಾರ್ಕಿಗೆ ಮಾತ್ರ ಸೀಮಿತ; ಆದೇಶ ಹಿಂಪಡೆಯುವಂತೆ ‘ಹೋರಾಟದ ಹಕ್ಕಿಗಾಗಿ ಜನಾಂದೋಲನ’ ಆಗ್ರಹ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮತ್ತೆ ಒಂದಾದ ಎನ್‌ಸಿಪಿ ಬಣಗಳು : ಸುಪ್ರಿಯಾ ಸುಳೆ ಜೊತೆ ವೇದಿಕೆ ಹಂಚಿಕೊಂಡ ಅಜಿತ್ ಪವಾರ್, ಜಂಟಿ ಪ್ರಣಾಳಿಕೆ ಬಿಡುಗಡೆ

ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಅಜಿತ್ ಪವಾರ್ ನೇತೃತ್ವದ ಎನ್‌ಸಿಪಿ ಮತ್ತು ಅವರ ಚಿಕ್ಕಪ್ಪ ಶರದ್ ಪವಾರ್ ನೇತೃತ್ವದ ಎನ್‌ಸಿಪಿ (ಎಸ್‌ಪಿ) ಶನಿವಾರ (ಜ.10) ಪುಣೆ ಮಹಾನಗರ ಪಾಲಿಕೆಗೆ ನಡೆಯಲಿರುವ ಚುನಾವಣೆಗೆ ಜಂಟಿ ಪ್ರಣಾಳಿಕೆಯನ್ನು ಬಿಡುಗಡೆ...

ಮಹಾರಾಷ್ಟ್ರ : ಲೈಂಗಿಕ ದೌರ್ಜನ್ಯ ಪ್ರಕರಣದ ಆರೋಪಿಯನ್ನು ಕೌನ್ಸಿಲರ್ ಮಾಡಿದ ಬಿಜೆಪಿ

ಬದ್ಲಾಪುರ ಲೈಂಗಿಕ ದೌರ್ಜನ್ಯ ಪ್ರಕರಣದ ಸಹ ಆರೋಪಿ ಮತ್ತು ಶಾಲೆಯೊಂದರ ಮಾಜಿ ಕಾರ್ಯದರ್ಶಿ ತುಷಾರ್ ಆಪ್ಟೆ ಎಂಬಾತನನ್ನು ಥಾಣೆ ಜಿಲ್ಲೆಯ ಕುಲ್ಗಾಂವ್-ಬದ್ಲಾಪುರ ಮುನ್ಸಿಪಲ್ ಕೌನ್ಸಿಲ್‌ಗೆ ಬಿಜೆಪಿ ನಾಮನಿರ್ದೇಶನ ಮಾಡಿದೆ. ಮುನ್ಸಿಪಲ್ ಕೌನ್ಸಿಲ್ ಅಧ್ಯಕ್ಷೆ ರುಚಿತಾ...

ಕಳ್ಳನೆಂದು ಸುಳ್ಳಾರೋಪ ಹೊರಿಸಿ ಜೈಲಿಗಟ್ಟಿದ ಪೊಲೀಸರು : ಸಂತ್ರಸ್ತಗೆ 14 ಲಕ್ಷ ರೂ. ಪರಿಹಾರ ನೀಡಲು ಕೋರ್ಟ್ ಆದೇಶ

ಕಳ್ಳನೆಂದು ಸುಳ್ಳಾರೋಪ ಹೊರಿಸಿ ಪೊಲೀಸರು ಜೈಲಿಗಟ್ಟಿದ ವ್ಯಕ್ತಿಗೆ 14 ಲಕ್ಷ ರೂಪಾಯಿ ಪರಿಹಾರ ಒದಗಿಸುವಂತೆ ಕೇರಳ ಸರ್ಕಾರಕ್ಕೆ ಹೈಕೋರ್ಟ್ ಆದೇಶಿಸಿದೆ. ಕಣ್ಣೂರು ಮೂಲದ ವಿ.ಕೆ ತಾಜುದ್ದೀನ್ ಕಾನೂನು ಹೋರಾಟದಲ್ಲಿ ಗೆದ್ದು ಪರಿಹಾರ ಪಡೆದ ವ್ಯಕ್ತಿ....

ಇರಾನ್‌ನಲ್ಲಿ ತೀವ್ರಗೊಂಡ ಆಡಳಿತ ವಿರೋಧಿ ಪ್ರತಿಭಟನೆ : ಟ್ರಂಪ್ ಮಧ್ಯಪ್ರವೇಶ ಕೋರಿದ ಮಾಜಿ ದೊರೆಯ ಮಗ

ಇರಾನ್‌ನಲ್ಲಿ ಭುಗಿಲೆದ್ದಿರುವ ಆಡಳಿತ ವಿರೋಧಿ ಪ್ರತಿಭಟನೆ ತೀವ್ರ ಸ್ವರೂಪ ಪಡೆದುಕೊಂಡಿದೆ. 2025ರ ಡಿಸೆಂಬರ್ 28ರಂದು ಪ್ರಾರಂಭಗೊಂಡ ಪ್ರತಿಭಟನೆಗಳು ಹಿಂಸಾಚಾರ ರೂಪ ಪಡೆದುಕೊಂಡು 13ನೇ ದಿನವೂ ಮುಂದುವರಿದಿದೆ. ಆರ್ಥಿಕ ಬಿಕ್ಕಟ್ಟಿನ ವಿರುದ್ದ (ರಿಯಾಲ್ ಕರೆನ್ಸಿ ಮೌಲ್ಯ...

ಮತದಾರರ ಹೆಸರು ಅಳಿಸಲು ಯತ್ನ : ಬಿಜೆಪಿ ವಿರುದ್ಧ 5 ವಿಪಕ್ಷಗಳಿಂದ ದೂರು ದಾಖಲು

ಅಸ್ಸಾಂನ ಐದು ವಿರೋಧ ಪಕ್ಷಗಳು ಶುಕ್ರವಾರ (ಜ.9) ಪೊಲೀಸ್ ದೂರು ದಾಖಲಿಸಿದ್ದು, ಆಡಳಿತಾರೂಢ ಭಾರತೀಯ ಜನತಾ ಪಾರ್ಟಿ (ಬಿಜೆಪಿ) ರಾಜ್ಯದ ಮತದಾರರ ಪಟ್ಟಿಯಿಂದ ಹೆಚ್ಚಿನ ಸಂಖ್ಯೆಯ ನಿಜವಾದ ಮತದಾರರ ಹೆಸರನ್ನು ಅಳಿಸಲು ಸಂಚು...

ಐ-ಪ್ಯಾಕ್ ಮೇಲೆ ದಾಳಿ ಪ್ರಕರಣ: ಮಮತಾ ಬ್ಯಾನರ್ಜಿ ದೂರಿನ ಬೆನ್ನಲ್ಲೇ ಜಾರಿ ನಿರ್ದೇಶನಾಲಯದ ವಿರುದ್ಧ ಎಫ್‌ಐಆರ್

ಕೋಲ್ಕತ್ತಾ: ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ನಿವಾಸದ ಮೇಲೆ ಜಾರಿ ನಿರ್ದೇಶನಾಲಯ ನಡೆಸಿದ ದಾಳಿಗೆ ಸಂಬಂಧಿಸಿದಂತೆ ಟಿಎಂಸಿ ಅಧ್ಯಕ್ಷೆ ಮಮತಾ ಬ್ಯಾನರ್ಜಿ...

‘ಭ್ರಷ್ಟ ಜನತಾ ಪಾರ್ಟಿ’: ಬಿಜೆಪಿ ಡಬಲ್ ಎಂಜಿನ್ ಆಡಳಿತದ ವಿರುದ್ಧ ರಾಹುಲ್ ಗಾಂಧಿ ವಾಗ್ದಾಳಿ

ನವದೆಹಲಿ: ವಿವಿಧ ರಾಜ್ಯಗಳಲ್ಲಿ ಬಿಜೆಪಿಯ ಡಬಲ್ ಎಂಜಿನ್ ಸರ್ಕಾರಗಳ ವಿರುದ್ಧ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಾಗ್ದಾಳಿ ನಡೆಸಿದ್ದಾರೆ.  ತಮ್ಮ ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ರಾಹುಲ್, ಉತ್ತರಾಖಂಡದಲ್ಲಿ ಅಂಕಿತ...

ಇಂದೋರ್‌ನಲ್ಲಿ ಕಲುಷಿತ ನೀರಿಗೆ 8 ಮಂದಿ ಬಲಿ: ಆರ್‌ಎಸ್‌ಎಸ್ ಕಚೇರಿಯಲ್ಲಿ ಜಿಲ್ಲಾಧಿಕಾರಿ ಮತ್ತು ಮೇಯರ್: ಭುಗಿಲೆದ್ದ ವಿವಾದ

ಇಂದೋರ್: ಆರ್‌ಎಸ್‌ಎಸ್ ಕಚೇರಿಯಲ್ಲಿ ಬುಧವಾರ ತಡರಾತ್ರಿ ನಡೆದ ಸಭೆಯಲ್ಲಿ ಜಿಲ್ಲಾಧಿಕಾರಿ ಮತ್ತು ಮೇಯರ್ ಭಾಗವಹಿಸಿದ್ದು ಕಂಡುಬಂದ ನಂತರ ಗುರುವಾರ ಇಂದೋರ್‌ನಲ್ಲಿ ರಾಜಕೀಯ ವಿವಾದ ಭುಗಿಲೆದ್ದಿದೆ.  ಕನಿಷ್ಠ ಎಂಟು ಮಂದಿ ಜೀವಗಳನ್ನು ಬಲಿ ಪಡೆದಿರುವ ಕಲುಷಿತ...

ಐ-ಪ್ಯಾಕ್ ಮೇಲೆ ಇಡಿ ದಾಳಿ: ಕೋಲ್ಕತ್ತಾದಲ್ಲಿ ಮಮತಾ ಪ್ರತಿಭಟನೆ: ಅಮಿತ್ ಶಾ ಕಚೇರಿಯ ಹೊರಗೆ ಪ್ರತಿಭಟಿಸುತ್ತಿದ್ದ ಟಿಎಂಸಿ ಶಾಸಕರ ಬಂಧನ

ಗುರುವಾರ (ಜ.8) ಬೆಳಿಗ್ಗೆ ಕೋಲ್ಕತ್ತಾದ ಸಾಲ್ಟ್ ಲೇಕ್‌ನಲ್ಲಿರುವ ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ನಡೆಸಿದ...

ಮಹಾರಾಷ್ಟ್ರ ಜಲ್ನಾ ಮಹಾನಗರ ಪಾಲಿಕೆ ಚುನಾವಣೆಯಲ್ಲಿ ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆ ಪ್ರಕರಣದ ಪ್ರಮುಖ ಆರೋಪಿ ಸ್ಪರ್ಧೆ!

ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆಯ ಆರೋಪಿ ಶ್ರೀಕಾಂತ್ ಪಂಗಾರ್ಕರ್ ಮುಂಬರುವ ಜಲ್ನಾ ಮುನ್ಸಿಪಲ್ ಕಾರ್ಪೊರೇಷನ್ ಚುನಾವಣೆಯಲ್ಲಿ ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧಿಸುತ್ತಿದ್ದಾರೆ ಎಂಬ ಸುದ್ದಿ  ಹಲವು ರಾಷ್ಟ್ರೀಯ ಮಾಧ್ಯಮಗಳಲ್ಲಿ ವರದಿಯಾಗಿದೆ.  ಗೌರಿ ಲಂಕೇಶ್ ಹತ್ಯೆ ಸೇರಿದಂತೆ...