Homeಕರ್ನಾಟಕಸಂತ್ರಸ್ತ ಮಕ್ಕಳನ್ನು ಹೆದರಿಸುವ ಪ್ರಯತ್ನ ನಡೆಯುತ್ತಿವೆ: ದಲಿತ ಹೋರಾಟಗಾರ ಪ್ರೊ.ಸಿ.ಕೆ.ಮಹೇಶ್ ಆತಂಕ

ಸಂತ್ರಸ್ತ ಮಕ್ಕಳನ್ನು ಹೆದರಿಸುವ ಪ್ರಯತ್ನ ನಡೆಯುತ್ತಿವೆ: ದಲಿತ ಹೋರಾಟಗಾರ ಪ್ರೊ.ಸಿ.ಕೆ.ಮಹೇಶ್ ಆತಂಕ

- Advertisement -
- Advertisement -

“ಪೋಕ್ಸೋ ಪ್ರಕರಣದ ಪ್ರಮುಖ ಆರೋಪಿ ಮುರುಘಾ ಮಠಾಧೀಶ ಶಿವಮೂರ್ತಿ ಮುರುಘಾ ಶರಣರ ಪರವಾಗಿ  ಸ್ಥಳೀಯ ರಾಜಕೀಯ ವ್ಯಕ್ತಿಗಳು, ಹಿಂದುಳಿದ ಮಠಗಳ ಮಠಾಧೀಶರು ನಿಂತಿದ್ದಾರೆ. ಈ ಮೂಲಕ ಮಕ್ಕಳನ್ನು ಹೆದರಿಸುವ ಪ್ರಯತ್ನಗಳು ಹೆಚ್ಚಾಗಿ ನಡೆಯುತ್ತಿವೆ” ಎಂದು ದಲಿತ ಹೋರಾಟಗಾರ ಪ್ರೊ.ಸಿ.ಕೆ.ಮಹೇಶ್ ಆರೋಪಿಸಿದ್ದಾರೆ.

ಸೋಮವಾರ ಚಿತ್ರದುರ್ಗದಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, “ಸರ್ಕಾರ ಕೂಡಲೇ ಸಂತ್ರಸ್ತ ಮಕ್ಕಳಿಗೆ ರಕ್ಷಣೆ ನೀಡಬೇಕು. ಅಪ್ರಾಪ್ತೆಯರನ್ನು ದತ್ತು ತೆಗೆದುಕೊಂಡು, ಅವರ ಶಿಕ್ಷಣ, ಉದ್ಯೋಗದ ಸಂಪೂರ್ಣ ಹೊರೆಯನ್ನು ಸರ್ಕಾರವೇ ಹೊರಬೇಕು” ಎಂದು ಆಗ್ರಹಿಸಿದರು.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಪೋಕ್ಸೋ ಪ್ರಕರಣದಲ್ಲಿ ಆರೋಪಿಯಾಗಿರುವ ಚಿತ್ರದುರ್ಗದ ಮುರುಘಾ ಮಠದ ಶಿವಮೂರ್ತಿ ಮುರುಘಾ ಶರಣರ ವಿರುದ್ಧ ಎಸ್‌ಸಿ/ಎಸ್‌ಟಿ ದೌರ್ಜನ್ಯ ತಡೆ ಕಾಯ್ದೆಯಡಿಯಲ್ಲೂ ಪ್ರಕರಣ ದಾಖಲಿಸಬೇಕು ಎಂದು ಒತ್ತಾಯಿಸಿದರು.

“ಈ ಪ್ರಕರಣದ ಆರೋಪಿಗಳು ಪ್ರಭಾವಶಾಲಿ ಸ್ಥಾನಗಳಲ್ಲಿರುವ ಕಾರಣ ಪ್ರಕರಣದ ಮೇಲೆ ವ್ಯತಿರಿಕ್ತ ಪರಿಣಾಮ ಬೀರುವ ಸಾಧ್ಯತೆ ಇದೆ. ಆದರಿಂದ, ಆರೋಪ ಮುಕ್ತರಾಗುವ ತನಕ, ಮುರುಘಾ ಶರಣರು ಪೀಠವನ್ನು ತೊರೆಯಬೇಕು” ಎಂದು ಅಭಿಪ್ರಾಯಪಟ್ಟರು.

“ಶಿವಮೂರ್ತಿ ಮುರುಘ ಶರಣರನ್ನು ಪೀಠದಿಂದ ತೆರವುಗೊಳಿಸಿ, ಪಾರದರ್ಶಕವಾದ, ಮುಕ್ತ ತನಿಖೆಗೆ ಸರ್ಕಾರ ಅವಕಾಶ ಒದಗಿಸಬೇಕು” ಎಂದು ಕೋರಿದರು.

ಸಾಮಾಜಿಕ ಸಂಘರ್ಷ ಸಮಿತಿಯ ಚಿತ್ರದುರ್ಗ ಜಿಲ್ಲಾ ಘಟಕದ ಅಧ್ಯಕ್ಷರಾದ ಕೆ. ಕುಮಾರ್ ಮಾತನಾಡಿ, “ಅನ್ಯಾಯ, ದೌರ್ಜನ್ಯದ ವಿರುದ್ಧ ದ್ವನಿ ಎತ್ತಿರುವ ಮಕ್ಕಳ ಧೈರ್ಯ ಮೆಚ್ಚುವಂಥದ್ದು. ನಮ್ಮ ಸಮಾಜದಲ್ಲಿ ಅನ್ಯಾಯಕ್ಕೊಳಗಾಗುತ್ತಿರುವ ಮಹಿಳೆಯರು, ಮಕ್ಕಳು, ಇವರಿಂದ ಸ್ಫೂರ್ತಿ ಪಡೆಯಬೇಕು. ಅನ್ಯಾಯದ ವಿರುದ್ಧ ದನಿ ಎತ್ತುವಂತಾಗಲಿ” ಎಂದು ಆಶಿಸಿದರು.

“ಮಹಿಳೆಯರು, ಅದರಲ್ಲೂ ದಲಿತ ಮಹಿಳೆಯರು, ಇಡೀ ಸಮಾಜದಲ್ಲಿ ಅತಿಹೆಚ್ಚು ಶೋಷಣೆಗೆ ಒಳಗಾಗುತ್ತಿರುವ ಸಮುದಾಯ. ಮಹಿಳೆಯರ ಮತ್ತು ಮಕ್ಕಳ ಹಕ್ಕುಗಳ ರಕ್ಷಣೆ ನಾಗರಿಕರಾದ ನಮ್ಮೆಲ್ಲರ ಕರ್ತವ್ಯ. ಅನ್ಯಾಯಕ್ಕೆ ಒಳಗಾದವರಿಗೆ ನ್ಯಾಯ ಸಿಗುವವರೆಗೂ ನಮ್ಮ ಹೋರಾಟ ಮುಂದುವರೆಯುತ್ತದೆ” ಎಂದು ಎಚ್ಚರಿಸಿದರು.

ಲೇಖಕ ಆನಂದ್‌ ಕುಮಾರ್‌ ಮಾತನಾಡಿ, “ಪೋಕ್ಸೋ ಕಾನೂನಿನ ಅಡಿಯಲ್ಲಿ ದೂರು ದಾಖಲಾದರೆ, ಆ ದೂರಿನನ್ವಯ 24 ಗಂಟೆಗಳಲ್ಲಿ ಆರೋಪಿಯನ್ನು ಬಂಧಿಸಬೇಕು. ಆದರೆ, ಈ ಪ್ರಕರಣದಲ್ಲಿ, ಮುರುಘಾ ಮಠಾಧೀಶರನ್ನು ಬಂಧಿಸದೇ, ಸಂಧಾನವೋ ಅಥವಾ ಸಮರವೋ ಅನ್ನುವ ಜಿಜ್ಞಾಸೆಯಲ್ಲಿ ನಿರತವಾಗಿದ್ದಾರೆ. ಇದನ್ನು ನೋಡಿದರೆ ಕಾನೂನು ಎಲ್ಲರಿಗೂ ಒಂದೇ ರೀತಿಯಲ್ಲಿದ್ದರೂ ಅದರ ಅನುಷ್ಠಾನವು ಭಿನ್ನವಾಗಿರುವುದನ್ನು ಎತ್ತಿ ತೋರುತ್ತದೆ” ಎಂದು ಬೇಸರ ವ್ಯಕ್ತಪಡಿಸಿದರು.

“ಆರೋಪಿ ಮುರುಘಾ ಮಠಾಧೀಶರು ಎಷ್ಟೇ ಪ್ರಭಾವಿಗಳಾಗಿದ್ದರೂ ದೇಶದ ಕಾನೂನಿನ ದೃಷ್ಟಿಯಲ್ಲಿ ಅವರು ಎಲ್ಲರಲ್ಲಿ ಒಬ್ಬರು. ಈ ಕೂಡಲೇ ಅವರನ್ನು ಬಂಧಿಸಬೇಕು” ಎಂದು ಆಗ್ರಹಿಸಿದರು.

ಪ್ರಗತಿಪರ ಚಿಂತಕ, ಸಾಮಾಜಿಕ ಸಂಘರ್ಷ ಸಮಿತಿಯ ಟಿ.ಎ.ಚಿಕ್ಕಣ್ಣ ಮಾತನಾಡಿ, “ಈ ಪ್ರಕರಣವನ್ನು ರಾಜಿ ಸಂಧಾನದ ಮೂಲಕ ಮುಚ್ಚಿಹಾಕುವ ಪ್ರಯತ್ನಗಳನ್ನು ಪ್ರಭಾವಿಶಾಲಿ ಶಕ್ತಿಗಳು ನಡೆಸುತ್ತಿವೆ. ಆದರೆ, ಯಾವುದೇ ಕಾರಣಕ್ಕೂ ಈ ಪ್ರಕರಣವನ್ನು ದಿಕ್ಕು ತಪ್ಪಿಸಲು ಸರ್ಕಾರ ಬಿಡಬಾರದು” ಎಂದು ಎಚ್ಚರಿಸಿದರು.

“ಆರೋಪಿಗೆ ಕಠಿಣ ಶಿಕ್ಷೆ ಆಗಬೇಕು. ಈ ಮೂಲಕ ಸಂತ್ರಸ್ತರಿಗೆ ನ್ಯಾಯ ಒದಗಿಸುವ ನಿಟ್ಟಿನಲ್ಲಿ ಸರ್ಕಾರ ಕಾರ್ಯೋನ್ಮುಖವಾಗಬೇಕು” ಎಂದು ಮನವಿ ಮಾಡಿದರು.

ಇದನ್ನೂ ಓದಿರಿ: ನೆಲದ ಕಾನೂನು ಗೌರವಿಸುತ್ತೇನೆ: ಮಠಕ್ಕೆ ಮರಳಿದ ಬಳಿಕ ಮುರುಘಾ ಶರಣರ ಪ್ರತಿಕ್ರಿಯೆ

ನಿರೀಕ್ಷಣಾ ಜಾಮೀನಿಗೆ ಅರ್ಜಿ

ಬಂಧನಕ್ಕೆ ಒತ್ತಡ ಹೆಚ್ಚುತ್ತಿರುವ ಬೆನ್ನಲ್ಲೇ ಬಾಲಕಿಯರ ಮೇಲಿನ ಅತ್ಯಾಚಾರ ಪ್ರಕರಣದ ಪ್ರಮುಖ ಆರೋಪಿ ಚಿತ್ರದುರ್ಗದ ಮುರುಘರಾಜೇಂದ್ರ ಬೃಹನ್ಮಠದ ಡಾ. ಶಿವರಾತ್ರಿ ಮುರುಘಾ ಶರಣರು ಬಂಧನದಿಂದ ತಪ್ಪಿಸಿಕೊಳ್ಳಲು ನಿರೀಕ್ಷಣಾ ಜಾಮೀನಿಗೆ ಅರ್ಜಿ ಸಲ್ಲಿಸಿದ್ದಾರೆ.

ತಮ್ಮ ವಕೀಲರ ಮೂಲಕ ಚಿತ್ರದುರ್ಗದ 2ನೇ ಸೆಷನ್ ನ್ಯಾಯಾಲಯದಲ್ಲಿ ನಿರೀಕ್ಷಣಾ ಜಾಮೀನಿಗೆ ಅರ್ಜಿ ಸಲ್ಲಿಸಲಾಗಿದೆ. ಅರ್ಜಿಯನ್ನು ದಾಖಲಿಸಿಕೊಂಡಿರುವ ನ್ಯಾಯಾಲಯ ಸೆಪ್ಟಂಬರ್ 01ರಂದು ವಿಚಾರಣೆಗೆ ನಿಗದಿಪಡಿಸಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...