Homeಮುಖಪುಟದೇಶದಲ್ಲಿ ಒಡಕು ಮೂಡಿಸುವ ಪ್ರಯತ್ನಗಳು ಯಶಸ್ವಿಯಾಗುವುದಿಲ್ಲ; ಪ್ರಧಾನಿ ಮೋದಿ

ದೇಶದಲ್ಲಿ ಒಡಕು ಮೂಡಿಸುವ ಪ್ರಯತ್ನಗಳು ಯಶಸ್ವಿಯಾಗುವುದಿಲ್ಲ; ಪ್ರಧಾನಿ ಮೋದಿ

- Advertisement -
- Advertisement -

ದೇಶದಲ್ಲಿ ಭಿನ್ನಾಭಿಪ್ರಾಯಗಳನ್ನು ಬಿತ್ತುವ ಮತ್ತು ಒಡಕು ಮೂಡಿಸುವ ಪ್ರಯತ್ನಗಳು ಯಶಸ್ವಿಯಾಗುವುದಿಲ್ಲ ಎಂದು ಪರೋಕ್ಷವಾಗಿ ಅಂತರಾಷ್ಟ್ರೀಯ ಮಾಧ್ಯಮ ಬಿಬಿಸಿಗೆ ಪ್ರಧಾನಿ ನರೇಂದ್ರ ಮೋದಿ ಎಚ್ಚರಿಕೆ ನೀಡಿದ್ದಾರೆ.

ದೆಹಲಿ ಕಂಟೋನ್ಮೆಂಟ್‌ನ ಕರಿಯಪ್ಪ ಮೈದಾನದಲ್ಲಿ ರಾಷ್ಟ್ರೀಯ ಕೆಡೆಟ್ ಕಾರ್ಪ್ಸ್ (ಎನ್‌ಸಿಸಿ) ರ ರ್ಯಾಲಿಯನ್ನು ಉದ್ದೇಶಿಸಿ ಮಾತನಾಡಿದ ಪ್ರಧಾನಿ ಮೋದಿ, ಭಾರತವು ಭವ್ಯತೆಯನ್ನು ಸಾಧಿಸಲು ಏಕತೆಯ ಮಂತ್ರವೊಂದೇ ಮಾರ್ಗವಾಗಿದೆ ಎಂದು ಹೇಳಿದರು.

“ದೇಶದ ಯುವಶಕ್ತಿಯಿಂದಾಗಿ ಇಡೀ ವಿಶ್ವವೇ ಭಾರತದತ್ತ ನೋಡುತ್ತಿದೆ. ನಮ್ಮ ಸರ್ಕಾರ ಡಿಜಿಟಲ್, ಸ್ಟಾರ್ಟ್‌ಅಪ್ ಮತ್ತು ನಾವೀನ್ಯತೆ ಕ್ರಾಂತಿಗಳನ್ನು ಬಿಡುಗಡೆ ಮಾಡಿದೆ, ಅದು ಯುವಕರಿಗೆ ಪ್ರಯೋಜನಕಾರಿಯಾಗಿದೆ” ಎಂದು ಪ್ರಧಾನಿ ಮೋದಿ ಹೇಳಿದರು.

ಗಣರಾಜ್ಯೋತ್ಸವದಲ್ಲಿ ಭಾಗವಹಿಸಿದ್ದ ಎನ್‌ಸಿಸಿ ಕೆಡೆಟ್‌ಗಳನ್ನುದ್ದೇಶಿಸಿ ಮಾತನಾಡಿದ ಅವರು, “ಇದು ಭಾರತದ ಯುವಜನರಿಗೆ ಹೊಸ ಅವಕಾಶಗಳ ಸಮಯ. ಎಲ್ಲೆಡೆ ಭಾರತದ ಸಮಯ ಬಂದಿದೆ ಎಂಬುದು ಸ್ಪಷ್ಟವಾಗಿದೆ” ಎಂದರು.

ಅದೇ ಸಮಯದಲ್ಲಿ, ದೇಶವನ್ನು ವಿಭಜಿಸುವ ಪ್ರಯತ್ನಗಳ ವಿರುದ್ಧ ಎಚ್ಚರಿಕೆ ವಹಿಸಬೇಕೆಂದು ಪ್ರಧಾನಿ ಒತ್ತಾಯಿಸಿದರು.

“ದೇಶ ಒಡೆಯಲು ಹಲವಾರು ನೆಪಗಳನ್ನು ಎತ್ತಲಾಗುತ್ತಿದೆ. ಭಾರತಮಾತೆಯ ಮಕ್ಕಳಲ್ಲಿ ಒಡಕು ಮೂಡಿಸಲು ಹಲವು ಸಮಸ್ಯೆಗಳನ್ನು ಹುಟ್ಟುಹಾಕುತ್ತಿದ್ದಾರೆ. ಆದರೆ ಇಂತಹ ಪ್ರಯತ್ನಗಳ ಎಷ್ಟೇ ಮಾಡಿದರೂ ಕೂಡ, ನಮ್ಮ ಜನರಲ್ಲಿ ಎಂದಿಗೂ ಭಿನ್ನಾಭಿಪ್ರಾಯಗಳು ಉಂಟಾಗುವುದಿಲ್ಲ” ಎಂದು ಅವರು ಹೇಳಿದರು.

ಇದನ್ನೂ ಓದಿ: ಜನರು ದೂರದರ್ಶನ ನಂಬದಿದ್ದರೂ BBC ನಂಬುತ್ತಾರೆ: ಮೋದಿಯ ಹಳೆಯ ವಿಡಿಯೊ ವೈರಲ್‌

2002ರ ಗುಜರಾತ್ ಗಲಭೆಯ ಕುರಿತು ಬಿಬಿಸಿ ಬಿಡುಗಡೆ ಮಾಡಿರುವ ಸಾಕ್ಷ್ಯಚಿತ್ರದ ಹಿನ್ನೆಲೆಯಲ್ಲಿ ಪ್ರಧಾನಮಂತ್ರಿ ಈ ರೀತಿಯ ಮಾತುಗಳನ್ನು ಆಡಿದ್ದಾರೆ.

ಈ ಸಂದರ್ಭದಲ್ಲಿ ರಕ್ಷಣಾ ಸಚಿವ ರಾಜನಾಥ್ ಸಿಂಗ್, ಎನ್‌ಸಿಸಿ ಮಹಾನಿರ್ದೇಶಕ ಲೆಫ್ಟಿನೆಂಟ್ ಜನರಲ್ ಗುರ್ಬೀರ್‌ಪಾಲ್ ಸಿಂಗ್, ರಕ್ಷಣಾ ಸಿಬ್ಬಂದಿ ಮುಖ್ಯಸ್ಥ ಅನಿಲ್ ಚೌಹಾಣ್, ಸೇನಾ ಮುಖ್ಯಸ್ಥ ಜನರಲ್ ಮನೋಜ್ ಪಾಂಡೆ, ನೌಕಾಪಡೆ ಮುಖ್ಯಸ್ಥ ಅಡ್ಮಿರಲ್ ಆರ್ ಹರಿಕುಮಾರ್, ವಾಯುಪಡೆ ಮುಖ್ಯಸ್ಥ ವಿ ಆರ್ ಚೌಧರಿ ಮತ್ತು ರಕ್ಷಣಾ ಕಾರ್ಯದರ್ಶಿ ಗಿರ್ಧರ್ ಅರ್ಮಾನೆ ಉಪಸ್ಥಿತರಿದ್ದರು.

ಭಾರತವನ್ನು ಇಬ್ಬಾಗ ಮಾಡಲು ಪ್ರಯತ್ನಿಸಲಾಗುತ್ತಿದೆ ಎಂದು ಹೇಳುವ ಮೂಲಕ ಪರೋಕ್ಷವಾಗಿ ಬಿಬಿಸಿ ವಿರುದ್ಧ ಪ್ರಧಾನಿ ಮೋದಿ ಅಸಮಾಧಾನಗೊಂಡಿದ್ದಾರೆ. ಆದರೆ 2013ರಲ್ಲಿ ಮೋದಿಯವರು ಬಿಬಿಸಿಯನ್ನು ಹೊಗಳಿ ಮಾತನಾಡಿದ್ದ ವಿಡಿಯೋ ಇತ್ತೀಚೆಗೆ ವೈರಲ್ ಆಗಿತ್ತು.

ಜನರು ದೂರದರ್ಶನವನ್ನು ನಂಬದಿದ್ದರೂ ಬಿಬಿಸಿಯನ್ನು ನಂಬುತ್ತಾರೆಂದು ಮೋದಿಯವರು ಮೆಚ್ಚುಗೆ ವ್ಯಕ್ತಪಡಿಸಿರುವ ವಿಡಿಯೊ ತುಣುಕು ಸಾಮಾಜಿಕ ಮಾಧ್ಯಮಗಳಲ್ಲಿ ಹರಿದಾಡುತ್ತಿದೆ. ‘ಆಲ್ಟ್‌ನ್ಯೂಸ್‌’ ಸಹಸಂಸ್ಥಾಪಕ ಮೊಹಮ್ಮದ್ ಜುಬೇರ್‌ ಅವರು ಟ್ವಿಟರ್‌ ಖಾತೆಯಲ್ಲಿ ಹಂಚಿಕೊಂಡಿದ್ದರು.

ಗುಜರಾತ್‌ ಗಲಭೆ ಕುರಿತು ಬಿಬಿಸಿ ಮಾಡಿರುವ ಸಾಕ್ಷ್ಯಾಚಿತ್ರವನ್ನು ಭಾರತದಲ್ಲಿ ಸರ್ಕಾರ ನಿರ್ಬಂಧಿಸಿರುವ ಬೆನ್ನಲ್ಲೇ, ‘ಬಿಬಿಸಿಯನ್ನು ಮೋದಿಯವರು ಹೊಗಳಿದ್ದ ವಿಡಿಯೊ’ ಮುನ್ನೆಲೆಗೆ ಬಂದಿದೆ. 2013ರಲ್ಲಿ ಮೋದಿಯವರು ಬಿಬಿಸಿಯನ್ನು ಹೊಗಳಿ ಮಾತನಾಡಿದ್ದರು. ಮಾಧ್ಯಮವೊಂದರ ವಿಶ್ವಾಸಾರ್ಹತೆಗೆ ದೇಶದ ನಾಯಕನೊಬ್ಬ ಸಲ್ಲಿಸಿದ ಮಹೋನ್ನತ ಗೌರವ ಇದಾಗಿದೆ ಎಂದೇ ಬಣ್ಣಿಸಲಾಗುತ್ತಿದೆ.

ವಿಡಿಯೊದಲ್ಲಿ ಏನಿದೆ?

“ಸಾಮಾನ್ಯ ಜನರು ಏನು ಮಾತನಾಡುತ್ತಾರೆ ಗೊತ್ತಾ? ನಾನು ಇದನ್ನು ಬಿಬಿಸಿಯಲ್ಲಿ ಕೇಳಿದ್ದೇನೆ ಎನ್ನುತ್ತಾರೆ. ನಮ್ಮ ದೇಶದ ಆಲ್ ಇಂಡಿಯಾ ರೇಡಿಯೋವನ್ನು ಅವರು ನಂಬುವುದಿಲ್ಲ, ದೂರದರ್ಶನವನ್ನು ಅವರು ನಂಬುವುದಿಲ್ಲ, ಅವರು ಪತ್ರಿಕೆಯನ್ನು ನಂಬುವುದಿಲ್ಲ. ನಾನು ಬಿಬಿಸಿಯಲ್ಲಿ ಕೇಳಿದ್ದೇನೆ ಎನ್ನುತ್ತಾರೆ.”  ಮೋದಿಯವರು “ಈ ರೀತಿಯ ವಿಶ್ವಾಸಾರ್ಹತೆ ಇರಬೇಕು” ಎಂದು ಬಿಬಿಸಿ ಸುದ್ದಿ ಸಂಸ್ಥೆಯನ್ನು ಹೊಗಳಿದ್ದರು.

ಈ ಬಗ್ಗೆ ನಾನುಗೌರಿ.ಕಾಂ ಜೊತೆ ಮಾತನಾಡಿರುವ ಸಾಮಾಜಿಕ ಕಾರ್ಯಕರ್ತ ರಮೇಶ್ ಅವರು, “ಅಂದು ಮೋದಿಯವರೇ ಹೇಳಿದ ಹಾಗೆ, ವಿಶ್ವಾಸಾರ್ಹ ಸುದ್ದಿ ಸಂಸ್ಥೆಯಾಗಿದ್ದ ಬಿಬಿಸಿ, ಇದೀಗ ಮೋದಿ ಅವರ ಕಣ್ಣಿಗೆ ದೇಶ ಒಡೆಯುವ ಕೆಲಸ ಮಾಡುತ್ತಿದ್ದಾರೆ ಎಂದಿನಿಸುತ್ತದೆಯೇ? ಎಂದು ಪ್ರಶ್ನಿಸಿದ್ದಾರೆ. ಅಂದಿಗೂ ಸತ್ಯವನ್ನೇ ತೋರಿಸುತ್ತಿದ್ದ ಬಿಬಿಸಿ ಇವತ್ತಿಗೂ ಸತ್ಯವನ್ನೇ ತೋರಿಸುತ್ತಿದೆ ಆದರೆ ಪ್ರಧಾನಿಯವರಿಗೆ ಅದನ್ನು ಸ್ವೀಕರಿಸಲಾಗುತ್ತಿಲ್ಲ ಹಾಗಾಗಿ ಅಂತರಾಷ್ಟ್ರೀಯ ಸುದ್ದಿಸಂಸ್ಥೆಯ ಬಗ್ಗೆ ಹಗುರಾಗಿ ಮಾತನಾಡಿದ್ದಾರೆ” ಎಂದು ಅಭಿಪ್ರಾಯ ವ್ಯಕ್ತಪಡಿಸ್ಸಿದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮೂರನೇ ಅತ್ಯಾಚಾರ ಪ್ರಕರಣ ದಾಖಲು : ಉಚ್ಛಾಟಿತ ಕಾಂಗ್ರೆಸ್ ಶಾಸಕ ರಾಹುಲ್ ಮಾಂಕೂಟತ್ತಿಲ್ ಬಂಧನ

ಅತ್ಯಾಚಾರ ಆರೋಪ ಕೇಳಿ ಬಂದ ಬಳಿಕ ಕಾಂಗ್ರೆಸ್‌ನಿಂದ ಉಚ್ಛಾಟನೆಗೊಂಡಿರುವ ಕೇರಳದ ಪಾಲಕ್ಕಾಡ್‌ನ ಶಾಸಕ ರಾಹುಲ್ ಮಾಂಕೂಟತ್ತಿಲ್ ಅವರನ್ನು ಭಾನುವಾರ (ಜ.11) ಬಂಧಿಸಲಾಗಿದೆ. ಪಾಲಕ್ಕಾಡ್‌ನ ಕೆಪಿಎಂ ರೀಜೆನ್ಸಿ ಹೋಟೆಲ್‌ನಿಂದ ಬೆಳಗಿನ ಜಾವ 12.30ರ ಸುಮಾರಿಗೆ ಮಾಂಕೂಟತ್ತಿಲ್...

ಇರಾನ್‌ ಹಿಂಸಾಚಾರ : ಸಾವಿನ ಸಂಖ್ಯೆ 116ಕ್ಕೆ ಏರಿಕೆ

ಕಳೆದ ಎರಡು ವಾರಗಳಿಂದ ಇರಾನ್‌ನಲ್ಲಿ ನಡೆಯುತ್ತಿರುವ ಸರ್ಕಾರಿ ವಿರೋಧಿ ಪ್ರತಿಭಟನೆಗಳಲ್ಲಿ ಕನಿಷ್ಠ 116 ಜನರು ಸಾವನ್ನಪ್ಪಿದ್ದಾರೆ. ಅಧಿಕಾರಿಗಳು ಪ್ರತಿಭಟನಾ ನಿರತರ ಮೇಲೆ ಕಠಿಣ ಕ್ರಮದ ಎಚ್ಚರಿಕೆ ನೀಡಿದ್ದಾರೆ ಎಂದು ವರದಿಯಾಗಿದೆ. ಡಿಸೆಂಬರ್ 28ರಂದು ಪ್ರಾರಂಭವಾದ...

ಪಾಕಿಸ್ತಾನದ ಸಿಂಧ್‌ನಲ್ಲಿ 23 ವರ್ಷದ ಹಿಂದೂ ರೈತನನ್ನು ಗುಂಡಿಕ್ಕಿ ಕೊಂದ ಭೂಮಾಲೀಕರು 

ಕರಾಚಿ: ಪಾಕಿಸ್ತಾನದ ಸಿಂಧ್ ಪ್ರಾಂತ್ಯದಲ್ಲಿ 23 ವರ್ಷದ ಹಿಂದೂ ರೈತನೊಬ್ಬ ತನ್ನ ಜಮೀನಿನಲ್ಲಿ ಆಶ್ರಯ ಮನೆ ನಿರ್ಮಿಸಿದ್ದಕ್ಕಾಗಿ ಆತನ ಮನೆ ಮಾಲೀಕರು ಗುಂಡಿಕ್ಕಿ ಕೊಂದಿದ್ದಾರೆ, ಇದು ಹಿಂದೂ ಸಮುದಾಯದಿಂದ ವ್ಯಾಪಕ ಪ್ರತಿಭಟನೆಗೆ ಎಂದು...

ದ್ವೇಷ ಭಾಷಣ ಮಸೂದೆ ರಾಜ್ಯಪಾಲರಿಂದ ತಿರಸ್ಕೃತವಾಗಿಲ್ಲ: ಸಿಎಂ ಸಿದ್ದರಾಮಯ್ಯ

ದ್ವೇಷ ಭಾಷಣ ಮಸೂದೆ ಸರ್ವಾನುಮತದಿಂದ ಅಂಗೀಕಾರವಾಗಿದ್ದು, ರಾಜ್ಯಪಾಲರು ಅದನ್ನು ವಾಪಸ್ ಕಳಿಸಿಲ್ಲ, ತಿರಸ್ಕರಿಸಿಲ್ಲ, ಅಂಕಿತವನ್ನೂ ಹಾಕಿಲ್ಲ. ಅವರು ಕರೆದಾಗ ಈ ಬಗ್ಗೆ ವಿವರಣೆ ನೀಡಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಭಾನುವಾರ (ಜ.11) ಮಂಗಳೂರಿನಲ್ಲಿ...

ಐಸಿಸ್ ಗುರಿ ಮಾಡಿ ಸಿರಿಯಾ ಮೇಲೆ ವೈಮಾನಿಕ ದಾಳಿ ನಡೆಸಿದ ಅಮೆರಿಕ

ಸಿರಿಯಾದ ಇಸ್ಲಾಮಿಕ್ ಸ್ಟೇಟ್ (ಐಎಸ್) ಗುಂಪಿನ ತಾಣಗಳ ಮೇಲೆ ಅಮೆರಿಕ ಮತ್ತು ಅದರ ಪಾಲುದಾರ ಪಡೆಗಳು ದೊಡ್ಡ ಪ್ರಮಾಣದ ದಾಳಿಗಳನ್ನು ನಡೆಸಿವೆ ಎಂದು ಅಮೆರಿಕದ ಸೆಂಟ್ರಲ್ ಕಮಾಂಡ್ (ಸೆಂಟ್‌ಕಾಮ್) ಘೋಷಿಸಿದೆ. ಡಿಸೆಂಬರ್ 13ರಂದು ಸಿರಿಯಾದಲ್ಲಿ...

ವೆನೆಜುವೆಲಾದ ತೈಲ ಖರೀದಿಗೆ ಅಮೆರಿಕದ ಅನುಮತಿ ಪಡೆಯಲು ರಿಲಯನ್ಸ್ ಮಾತುಕತೆ : ವರದಿ

ಭಾರತದ ರಿಲಯನ್ಸ್ ಇಂಡಸ್ಟ್ರೀಸ್ ವೆನೆಜುವೆಲಾದ ಕಚ್ಚಾ ತೈಲ ಖರೀದಿಯನ್ನು ಪುನರಾರಂಭಿಸಲು ಅಮೆರಿಕದ ಅನುಮೋದನೆಯನ್ನು ಕೋರುತ್ತಿದೆ ಎಂದು ಈ ವಿಷಯದ ಬಗ್ಗೆ ಗೊತ್ತಿರುವ ಎರಡು ಮೂಲಗಳು ಶುಕ್ರವಾರ ತಿಳಿಸಿವೆ ಎಂದು ಸುದ್ದಿ ಸಂಸ್ಥೆ ರಾಯಿಟರ್ಸ್...

ಐ-ಪ್ಯಾಕ್‌ ಮೇಲೆ ದಾಳಿ | ಇಡಿ ಅಧಿಕಾರಿಗಳ ವಿರುದ್ಧ ತನಿಖೆ ಪ್ರಾರಂಭಿಸಿದ ಕೋಲ್ಕತ್ತಾ ಪೊಲೀಸರು : ಸುಪ್ರೀಂ ಕೋರ್ಟ್‌ನಲ್ಲಿ ಕೇವಿಯಟ್ ಸಲ್ಲಿಸಿದ ಪ. ಬಂಗಾಳ ಸರ್ಕಾರ

ಐ-ಪ್ಯಾಕ್ ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ದಾಳಿ ನಡೆಸಿದ ಸಂದರ್ಭದಲ್ಲಿ ದಾಖಲೆಗಳ ಕಳ್ಳತನದ ಆರೋಪದ ಮೇಲೆ ಕೋಲ್ಕತ್ತಾ ಪೊಲೀಸರು ಶನಿವಾರ (ಜ.10)...

ಟ್ರಂಪ್ ಸಂಚಿಗೆ ತಿರುಗೇಟು : ನಾವು ಯಾರ ಅಡಿಯಾಳಾಗಲು ಸಿದ್ದರಿಲ್ಲ ಎಂದ ಗ್ರೀನ್‌ಲ್ಯಾಂಡ್‌ನ ರಾಜಕೀಯ ಪಕ್ಷಗಳು

ವೆನೆಜುವೆಲಾ ಬಳಿಕ ಖನಿಜ-ಸಮೃದ್ಧ ಡ್ಯಾನಿಶ್ (ಡೆನ್ಮಾರ್ಕ್‌) ಸ್ವಾಯತ್ತ ಪ್ರದೇಶವಾದ ಗ್ರೀನ್‌ ಲ್ಯಾಂಡ್‌ ಮೇಲೆ ಬಲಪ್ರಯೋಗ ಮಾಡಲು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಯೋಜಿಸುತ್ತಿದ್ದಾರೆ. ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಗ್ರೀನ್‌ಲ್ಯಾಂಡ್‌ನ ರಾಜಕೀಯ ಪಕ್ಷಗಳು...

ಮತ್ತೆ ಒಂದಾದ ಎನ್‌ಸಿಪಿ ಬಣಗಳು : ಸುಪ್ರಿಯಾ ಸುಳೆ ಜೊತೆ ವೇದಿಕೆ ಹಂಚಿಕೊಂಡ ಅಜಿತ್ ಪವಾರ್, ಜಂಟಿ ಪ್ರಣಾಳಿಕೆ ಬಿಡುಗಡೆ

ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಅಜಿತ್ ಪವಾರ್ ನೇತೃತ್ವದ ಎನ್‌ಸಿಪಿ ಮತ್ತು ಅವರ ಚಿಕ್ಕಪ್ಪ ಶರದ್ ಪವಾರ್ ನೇತೃತ್ವದ ಎನ್‌ಸಿಪಿ (ಎಸ್‌ಪಿ) ಶನಿವಾರ (ಜ.10) ಪುಣೆ ಮಹಾನಗರ ಪಾಲಿಕೆಗೆ ನಡೆಯಲಿರುವ ಚುನಾವಣೆಗೆ ಜಂಟಿ ಪ್ರಣಾಳಿಕೆಯನ್ನು ಬಿಡುಗಡೆ...

ಮಹಾರಾಷ್ಟ್ರ : ಲೈಂಗಿಕ ದೌರ್ಜನ್ಯ ಪ್ರಕರಣದ ಆರೋಪಿಯನ್ನು ಕೌನ್ಸಿಲರ್ ಮಾಡಿದ ಬಿಜೆಪಿ

ಬದ್ಲಾಪುರ ಲೈಂಗಿಕ ದೌರ್ಜನ್ಯ ಪ್ರಕರಣದ ಸಹ ಆರೋಪಿ ಮತ್ತು ಶಾಲೆಯೊಂದರ ಮಾಜಿ ಕಾರ್ಯದರ್ಶಿ ತುಷಾರ್ ಆಪ್ಟೆ ಎಂಬಾತನನ್ನು ಥಾಣೆ ಜಿಲ್ಲೆಯ ಕುಲ್ಗಾಂವ್-ಬದ್ಲಾಪುರ ಮುನ್ಸಿಪಲ್ ಕೌನ್ಸಿಲ್‌ಗೆ ಬಿಜೆಪಿ ನಾಮನಿರ್ದೇಶನ ಮಾಡಿದೆ. ಮುನ್ಸಿಪಲ್ ಕೌನ್ಸಿಲ್ ಅಧ್ಯಕ್ಷೆ ರುಚಿತಾ...