Homeರಾಷ್ಟ್ರೀಯನೂಪುರ್‌‌‌ ಶರ್ಮಾ ಬೆಂಬಲಿಸಿ ಕೋರ್ಟ್ ವಿರುದ್ಧ ಹೇಳಿಕೆ: ನಿವೃತ್ತ ಹೈಕೋರ್ಟ್ ನ್ಯಾಯಮೂರ್ತಿ ವಿರುದ್ಧ ನ್ಯಾಯಾಂಗ ನಿಂದನೆ...

ನೂಪುರ್‌‌‌ ಶರ್ಮಾ ಬೆಂಬಲಿಸಿ ಕೋರ್ಟ್ ವಿರುದ್ಧ ಹೇಳಿಕೆ: ನಿವೃತ್ತ ಹೈಕೋರ್ಟ್ ನ್ಯಾಯಮೂರ್ತಿ ವಿರುದ್ಧ ನ್ಯಾಯಾಂಗ ನಿಂದನೆ ಪ್ರಕ್ರಿಯೆ ಆರಂಭಿಸಲು ನಿರಾಕರಿಸಿದ ಅಟಾರ್ನಿ ಜನರಲ್

- Advertisement -
- Advertisement -

ನೂಪುರ್ ಶರ್ಮಾ ಪ್ರಕರಣದಲ್ಲಿ ಸುಪ್ರೀಂ ಕೋರ್ಟ್‌ನ ದ್ವಿಸದಸ್ಯ ಪೀಠದ ಅವಲೋಕನಗಳ ಕುರಿತು ಪ್ರತಿಕ್ರಿಯಿಸಿರುವ ದೆಹಲಿ ಹೈಕೋರ್ಟ್‌ನ ನಿವೃತ್ತ ನ್ಯಾಯಮೂರ್ತಿ ಎಸ್‌ಎನ್‌ ಧಿಂಗ್ರಾ, ಹಿರಿಯ ವಕೀಲರಾದ ಅಮನ್‌ ಲೇಖಿ ಮತ್ತು ಕೆ. ರಾಮಕುಮಾರ್‌ ವಿರುದ್ಧ ನ್ಯಾಯಾಂಗ ನಿಂದನೆ ಮೊಕದ್ದಮೆ ಹೂಡಲು ಅಟಾರ್ನಿ ಜನರಲ್‌ ಕೆ ಕೆ ವೇಣುಗೋಪಾಲ್‌ ಅನುಮತಿ ನಿರಾಕರಿಸಿದ್ದಾರೆ. “ಅವರ ಹೇಳಿಕೆಗಳು…ಸುಪ್ರೀಂಕೋರ್ಟ್‌ ನಡೆಸಿದ ವಿಚಾರಣೆಯ ನ್ಯಾಯಯುತವಾದ ಪ್ರತಿಕ್ರಿಯೆಯ ಪರಿದಿಯಲ್ಲಿದೆ” ಎಂದು ವೇಣುಗೋಪಾಲ್ ಅವರು ಹೇಳಿದ್ದಾರೆ.

ಮೂವರ ವಿರುದ್ಧ ನ್ಯಾಯಾಂಗ ನಿಂದನೆ ಪ್ರಕರಣ ದಾಖಲಿಸುವಂತೆ ಸಮ್ಮತಿಯನ್ನು ಕೋರಿದ ವಕೀಲ ಸಿ ಆರ್ ಜಯ ಸುಕಿನ್ ಅವರಿಗೆ ಪ್ರತಿಕ್ರಿಯಿಸಿರುವ ವೇಣುಗೋಪಾಲ್, “ಅವರ ಹೇಳಿಕೆಗಳು ದುರುದ್ದೇಶಪೂರಿತ ಅಥವಾ ನಿಂದನೀಯವಲ್ಲ. ಅಲ್ಲದೆ ಅವರ ಹೇಳಿಕೆಗಳು ಭಾರತದ ಸರ್ವೋಚ್ಚ ನ್ಯಾಯಾಲಯದ ನ್ಯಾಯದ ಆಡಳಿತದಲ್ಲಿ ಮಧ್ಯಪ್ರವೇಶಿಸುವ ಸಾಧ್ಯತೆಯಿಲ್ಲ” ಎಂದು ಹೇಳಿದ್ದಾರೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

“ನ್ಯಾಯಾಂಗ ಪ್ರಕ್ರಿಯೆಯ ನ್ಯಾಯಯುತ ಮತ್ತು ಸಮಂಜಸವಾದ ಟೀಕೆಯು ನ್ಯಾಯಾಲಯದ ನಿಂದನೆಯಾಗುವುದಿಲ್ಲ ಎಂದು ಸುಪ್ರೀಂ ಕೋರ್ಟ್ ತನ್ನ ಹೆಚ್ಚಿನ ತೀರ್ಪುಗಳಲ್ಲಿ ಪರಿಗಣಿಸಿದೆ” ಎಂದು ವೇಣುಗೋಪಾಲ್‌ ಹೇಳಿದ್ದಾರೆ.

“ನಿಮ್ಮ ಪತ್ರದಲ್ಲಿ ಹೆಸರಿಸಲಾದ ಮೂವರು ವ್ಯಕ್ತಿಗಳು ಮಾಡಿರುವ ಟೀಕೆಯು ದುರುದ್ದೇಶದಿಂದ ಕೂಡಿಲ್ಲ. ನ್ಯಾಯಾಂಗದ ಆಡಳಿತವನ್ನು ಕುಂಠಿತಗೊಳಿಸುವ ಪ್ರಯತ್ನವಲ್ಲ. ಜೊತೆಗೆ ನ್ಯಾಯಾಂಗದ ಘನತೆಯನ್ನು ಕುಗ್ಗಿಸಲು ಮಾಡಿದ ಉದ್ದೇಶಪೂರ್ವಕ ಪ್ರಯತ್ನವಲ್ಲ” ಎಂದು ಅವರು ಹೇಳಿದ್ದಾರೆ.

ಟಿವಿ ಕಾರ್ಯಕ್ರಮವೊಂದರಲ್ಲಿ ಪ್ರವಾದಿ ಮೊಹಮ್ಮದ್ ಅವರ ವಿರುದ್ಧ ಅವಹೇಳನಕಾರಿ ಟೀಕೆ ಮಾಡಿದ್ದಕ್ಕಾಗಿ ಬಿಜೆಪಿಯ ಮಾಜಿ ನಾಯಕಿ ನೂಪುರ್‌ ಶರ್ಮಾ ವಿರುದ್ಧ ವಿವಿಧ ರಾಜ್ಯಗಳಲ್ಲಿ ದಾಖಲಾಗಿದ್ದ ಅನೇಕ ಎಫ್‌ಐಆರ್‌ಗಳನ್ನು ಒಟ್ಟು ಸೇರಿಸಿ ವಿಚಾರಣೆ ನಡೆಸುವಂತೆ ಕೋರಲಾಗಿತ್ತು.

ಇದನ್ನೂ ಓದಿ: ಪ್ರವಾದಿ ನಿಂದನೆ: ಅಮಾನತುಗೊಂಡ ಬಿಜೆಪಿ ವಕ್ತಾರೆ ನೂಪುರ್‌ ಶರ್ಮಾಗೆ ಕೋಲ್ಕತ್ತಾ ಪೊಲೀಸರ ಸಮನ್ಸ್

ಈ ಪ್ರಕರಣವನ್ನು ಆಲಿಸಿದ್ದ ನ್ಯಾಯಮೂರ್ತಿಗಳಾದ ಸೂರ್ಯ ಕಾಂತ್ ಮತ್ತು ಜೆ ಬಿ ಪರ್ದಿವಾಲಾ ಅವರ ಪೀಠವು ಜುಲೈ 1 ರಂದು ನೂಪುರ್‌ ಶರ್ಮಾ ಅವರನ್ನು ತೀವ್ರವಾಗಿ ತರಾಟೆಗೆ ತೆಗೆದುಕೊಂಡಿತ್ತು. ಈ ಹೇಳಿಕೆಯನ್ನು ದೆಹಲಿ ಹೈಕೋರ್ಟ್‌ನ ನಿವೃತ್ತ ನ್ಯಾಯಮೂರ್ತಿ ಎಸ್‌ಎನ್‌ ಧಿಂಗ್ರಾ, ಹಿರಿಯ ವಕೀಲರಾದ ಅಮನ್‌ ಲೇಖಿ ಮತ್ತು ಕೆ. ರಾಮಕುಮಾರ್‌ ವಿರೋಧಿಸಿದ್ದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಭಾರತದಲ್ಲಿ 12 ಸಾವಿರ ಉದ್ಯೋಗಿಗಳನ್ನು ವಜಾಗೊಳಿಸಿದ ಒರಾಕಲ್ : ಜಾಗತಿಕವಾಗಿ 30 ಸಾವಿರ ಜನರ ಕೆಲಸಕ್ಕೆ ಕುತ್ತು

ಐಟಿ ದೈತ್ಯ ಒರಾಕಲ್ ಜಾಗತಿಕ ಮಟ್ಟದಲ್ಲಿ ಸುಮಾರು 30,000 ಉದ್ಯೋಗಿಗಳನ್ನು ವಜಾಗೊಳಿಸಲು ನಿರ್ಧರಿಸಿದ್ದು, ಇದು ಭಾರತದ ಮೇಲೂ ತೀವ್ರ ಪರಿಣಾಮ ಬೀರಿದೆ. ವರದಿಗಳ ಪ್ರಕಾರ, ಭಾರತವೊಂದರಲ್ಲೇ ಸುಮಾರು 12,000 ಉದ್ಯೋಗಿಗಳನ್ನು ಕೆಲಸದಿಂದ ತೆಗೆದುಹಾಕಲಾಗಿದೆ. ಕಂಪನಿಯು ತನ್ನ ಒಟ್ಟು ಉದ್ಯೋಗಿಳ...

ಗೋವಾ ನೈಟ್‌ಕ್ಲಬ್ ಬೆಂಕಿ ಪ್ರಕರಣ: ಮಾಲೀಕರಾದ ಸೌರಭ್ ಲೂತ್ರಾ, ಗೌರವ್ ಲೂತ್ರಾ ಸಹೋದರರಿಗೆ ಜಾಮೀನು

ಪಣಜಿ: ಕಳೆದ ಡಿಸೆಂಬರ್‌ನಲ್ಲಿ 25 ಜನರ ಸಾವಿಗೆ ಕಾರಣವಾದ ವಿನಾಶಕಾರಿ ಬೆಂಕಿ ಪ್ರಕರಣಕ್ಕೆ ಸಂಬಂಧಿಸಿದ ಪ್ರಕರಣದಲ್ಲಿ ಬಿರ್ಚ್ ಬೈ ರೋಮಿಯೋ ಲೇನ್ ನೈಟ್‌ಕ್ಲಬ್‌ನ ಮಾಲೀಕರಾದ ಸೌರಭ್ ಲೂತ್ರಾ ಮತ್ತು ಗೌರವ್ ಲೂತ್ರಾ ಅವರಿಗೆ...

ಲೈಂಗಿಕ ದೌರ್ಜನ್ಯ ಆರೋಪ: ಮಲಯಾಳಂ ಚಲನಚಿತ್ರ ನಿರ್ದೇಶಕ ರಂಜಿತ್ ಬಾಲಕೃಷ್ಣನ್ 14 ದಿನಗಳ ನ್ಯಾಯಾಂಗ ಬಂಧನಕ್ಕೆ 

ಕೇರಳ: ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಮಲಯಾಳಂ ನಿರ್ದೇಶಕ ಮತ್ತು ನಿರ್ಮಾಪಕ ರಂಜಿತ್ ಬಾಲಕೃಷ್ಣನ್ ಅವರನ್ನು ಬುಧವಾರ 14 ದಿನಗಳ ನ್ಯಾಯಾಂಗ ಬಂಧನಕ್ಕೆ ಒಳಪಡಿಸಲಾಗಿದೆ. ಪ್ರಸ್ತುತ ಅವರನ್ನು ಎರ್ನಾಕುಲಂ ಸಬ್ ಜೈಲಿನಲ್ಲಿ ಇರಿಸಲಾಗಿದೆ.  ಜನವರಿ...

ಫಾರ್ಮ್–6 ವಿವಾದ : ಕೋಲ್ಕತ್ತಾದ ಚುನಾವಣಾಧಿಕಾರಿ ಕಚೇರಿ ಮುಂದೆ ಟಿಎಂಸಿ -ಬಿಜೆಪಿ ಕಾರ್ಯಕರ್ತರ ನಡುವೆ ಘರ್ಷಣೆ

ಮತದಾರರ ಪಟ್ಟಿಗೆ ಹೊಸದಾಗಿ ಹೆಸರುಗಳನ್ನು ಸೇರಿಸುವ ನಮೂನೆ -6 (ಫಾರ್ಮ್ -6) ವಿಚಾರದಲ್ಲಿ ಕೋಲ್ಕತ್ತಾದ ಮುಖ್ಯ ಚುನಾವಣಾಧಿಕಾರಿ ಕಚೇರಿ ಮುಂದೆ ಮಂಗಳವಾರ (ಮಾ. 31) ತೃಣಮೂಲ ಕಾಂಗ್ರೆಸ್ (ಟಿಎಂಸಿ) ಮತ್ತು ಬಿಜೆಪಿ ಕಾರ್ಯಕರ್ತರ...

‘ಶೀಘ್ರದಲ್ಲೇ ಹೊರಡುತ್ತೇನೆ’: ‘2-3 ವಾರಗಳಲ್ಲಿ’ ಇರಾನ್ ಮೇಲಿನ ಯುದ್ಧ ಕೊನೆಗೊಳಿಸುವ ಬಗ್ಗೆ ಸುಳಿವು ನೀಡಿದ ಅಮೆರಿಕ ಅಧ್ಯಕ್ಷ ಟ್ರಂಪ್ 

ವಾಷಿಂಗ್ಟನ್ ಡಿಸಿ: ಜಾಗತಿಕ ಇಂಧನ ಮಾರುಕಟ್ಟೆಗಳನ್ನು ಅಸ್ತವ್ಯಸ್ತಗೊಳಿಸಿರುವ ಒಂದು ತಿಂಗಳ ಕಾಲ ನಡೆದ ಯುದ್ಧದ ಸಂಭಾವ್ಯ ಅಂತ್ಯದ ಬಗ್ಗೆ ಸುಳಿವು ನೀಡುವ ಮೂಲಕ, ಮುಂದಿನ ಎರಡು ಮೂರು ವಾರಗಳ ಮೊದಲೇ ಇರಾನ್ ವಿರುದ್ಧದ...

ದೊಡ್ಡಬಳ್ಳಾಪುರದಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ : ಕೆಐಎಡಿಬಿ ವಿರುದ್ಧ ಬೀದಿಗಿಳಿದ ಜನ

ದೇವನಹಳ್ಳಿ ಬಳಿಕ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲೂಕಿನಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ ಪ್ರಾರಂಭಗೊಂಡಿದೆ. ಕರ್ನಾಟಕ ಕೈಗಾರಿಕಾ ಪ್ರದೇಶ ಅಭಿವೃದ್ದಿ ಮಂಡಳಿ (ಕೆಐಎಡಿಬಿ) ವಿರುದ್ಧ ಜನರು ಬೀದಿಗಿಳಿದಿದ್ದಾರೆ. ದೊಡ್ಡಬಳ್ಳಾಪುರ ತಾಲೂಕಿನ ದೊಡ್ಡಬೆಳವಂಗಲ...

ಬಿಹಾರ: ಪತಿಯನ್ನು ಹತ್ಯೆ ಮಾಡಿದ ಗುಂಪಿನಿಂದ ಬೆದರಿಕೆ; ಇಬ್ಬರು ಮಕ್ಕಳೊಂದಿಗೆ ವಿಷ ಸೇವಿಸಿದ ಮುಸ್ಲಿಂ ಮಹಿಳೆ ಸಾವು, ಮಕ್ಕಳ ಸ್ಥಿತಿ ಗಂಭೀರ

ಬಿಹಾರದ ರೋಹ್ತಾಸ್ ಜಿಲ್ಲೆಯ ಮುಸ್ಲಿಂ ಮಹಿಳೆಯೊಬ್ಬರು ಮಂಗಳವಾರ ತನ್ನ ಇಬ್ಬರು ಅಪ್ರಾಪ್ತ ಮಕ್ಕಳೊಂದಿಗೆ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ವರದಿಯಾಗಿದೆ.  ಪತಿಯನ್ನು ಅಮಾನುಷವಾಗಿ ಹಲ್ಲೆ ನಡೆಸಿ ಹತ್ಯೆ ಮಾಡಿದ್ದ ಆರೋಪಿಗಳಿಂದ ಬೆದರಿಕೆಗಳನ್ನು ತಾಳಲಾರದೆ...

ಅತ್ಯಾಚಾರ ಆರೋಪ: ಅಶೋಕ್ ಖರತ್ ಅವರ ಪುತ್ರನನ್ನು ವಿಚಾರಣೆಗಾಗಿ ವಶಕ್ಕೆ ಪಡೆದ ಎಸ್ಐಟಿ; ಪತ್ನಿಗಾಗಿ ಹುಡುಕಾಟ 

ನಾಸಿಕ್: ಅತ್ಯಾಚಾರ ಆರೋಪಿ ಸ್ವಯಂ ಘೋಷಿತ ದೇವಮಾನವ ಅಶೋಕ್ ಖರತ್ ವಿರುದ್ಧ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (ಎಸ್‌ಐಟಿ), ನಾಸಿಕ್ ನಗರದಲ್ಲಿ ಆತನ ಮಗನನ್ನು ವಿಚಾರಣೆಗಾಗಿ ವಶಕ್ಕೆ ಪಡೆದಿದ್ದು, ಆತನ ಪತ್ನಿಗಾಗಿಯೂ...

ಇರಾಕ್‌ : ಬಗ್ದಾದ್‌ನಲ್ಲಿ ಯುಎಸ್‌ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅಪಹರಣ

ಇರಾಕ್‌ ರಾಜಧಾನಿ ಬಗ್ದಾದ್‌ ನಗರದ ಅಲ್-ಸಾದೂನ್ ಬೀದಿಯಲ್ಲಿರುವ ಬಗ್ದಾದ್ ಹೋಟೆಲ್ ಬಳಿ ಅಮೆರಿಕದ ಪ್ರಶಸ್ತಿ ವಿಜೇತ ಸ್ವತಂತ್ರ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅವರನ್ನು ಮಂಗಳವಾರ (ಮಾ.31, 2026) ಅಪಹರಿಸಲಾಗಿದೆ ಎಂದು ವರದಿಯಾಗಿದೆ. ಸಿಸಿಟಿವಿ ದೃಶ್ಯಾವಳಿಗಳ ಪ್ರಕಾರ,...

ವಾಣಿಜ್ಯ ಎಲ್‌ಪಿಜಿ ದರ 195.50 ರೂ. ಏರಿಕೆ : ಜನ ಸಾಮಾನ್ಯರಿಗೆ ಗಾಯದ ಮೇಲೆ ಬರೆ

ಪಶ್ಚಿಮ ಏಷ್ಯಾ ಸಂಘರ್ಷದಿಂದಾಗಿ ಜಾಗತಿಕ ತೈಲ ಬೆಲೆಗಳು ಏರುತ್ತಿರುವ ನಡುವೆ, ವಾಣಿಜ್ಯ ಎಲ್‌ಪಿಜಿ ದರವನ್ನು ಬುಧವಾರ (ಏ.1) 195.50 ರೂ. ಹೆಚ್ಚಿಸಲಾಗಿದೆ. ಸರ್ಕಾರಿ ಸ್ವಾಮ್ಯದ ತೈಲ ಕಂಪನಿಗಳ ಪ್ರಕಾರ, ಬೆಲೆ ಏರಿಕೆ ಬಳಿಕ...