Homeಮುಖಪುಟಮಣಿಪುರ ಹಿಂಸಾಚಾರದಲ್ಲಿ ಬಿರೇನ್ ಸಿಂಗ್ ಪಾತ್ರವಿದೆ ಎಂಬ ಆಡಿಯೋ ಸೋರಿಕೆ; ಎಫ್‌ಎಸ್‌ಎಲ್‌ನಿಂದ ವರದಿ ಕೇಳಿದ ಸುಪ್ರೀಂ...

ಮಣಿಪುರ ಹಿಂಸಾಚಾರದಲ್ಲಿ ಬಿರೇನ್ ಸಿಂಗ್ ಪಾತ್ರವಿದೆ ಎಂಬ ಆಡಿಯೋ ಸೋರಿಕೆ; ಎಫ್‌ಎಸ್‌ಎಲ್‌ನಿಂದ ವರದಿ ಕೇಳಿದ ಸುಪ್ರೀಂ ಕೋರ್ಟ್

- Advertisement -
- Advertisement -

ಮಣಿಪುರ ಮುಖ್ಯಮಂತ್ರಿ ಎನ್ ಬಿರೇನ್ ಸಿಂಗ್ ಅವರು ರಾಜ್ಯದಲ್ಲಿ ನಡೆಯುತ್ತಿರುವ ಜನಾಂಗೀಯ ಹಿಂಸಾಚಾರದಲ್ಲಿ ಭಾಗಿಯಾಗಿದ್ದಾರೆ ಎಂದು ಆರೋಪಿಸುವ ಸೋರಿಕೆಯಾದ ಆಡಿಯೋ ಟೇಪ್‌ಗಳ ಕುರಿತು ಸುಪ್ರೀಂ ಕೋರ್ಟ್ ಸೋಮವಾರ ವಿಧಿವಿಜ್ಞಾನ ಪ್ರಯೋಗಾಲಯದಿಂದ (ಎಫ್‌ಎಸ್‌ಎಲ್) ವರದಿ ಕೋರಿದೆ.

ಈ ಹಿಂಸಾಚಾರವು ಮೇ 2023 ರಲ್ಲಿ ಮೊದಲ ಬಾರಿಗೆ ಭುಗಿಲೆದ್ದ ನಂತರ 200 ಕ್ಕೂ ಹೆಚ್ಚು ಜನರನ್ನು ಬಲಿ ತೆಗೆದುಕೊಂಡಿದೆ; ಸಾವಿರಾರು ಜನರನ್ನು ನಿರಾಶ್ರಿತರನ್ನಾಗಿ ಮಾಡಿದೆ.

ಸುಪ್ರೀಂ ಕೋರ್ಟ್ ಮುಖ್ಯ ನ್ಯಾಯಮೂರ್ತಿ ಸಂಜೀವ್ ಖನ್ನಾ ಮತ್ತು ನ್ಯಾಯಮೂರ್ತಿ ಸಂಜಯ್ ಕುಮಾರ್ ಅವರನ್ನು ಒಳಗೊಂಡ ದ್ವಿಸದಸ್ಯ ಪೀಠವು ಕುಕಿ ಆರ್ಗನೈಸೇಶನ್ ಫಾರ್ ಹ್ಯೂಮನ್ ರೈಟ್ಸ್ ಟ್ರಸ್ಟ್ ಸಲ್ಲಿಸಿದ ರಿಟ್ ಅರ್ಜಿಯನ್ನು ಆಧರಿಸಿ ವರದಿ ಕೋರಿದೆ. ಈ ಗುಂಪು ಆಪಾದಿತ ಟೇಪ್‌ಗಳ ಬಗ್ಗೆ ಸ್ವತಂತ್ರ ತನಿಖೆಗೆ ಒತ್ತಾಯಿಸಿದೆ. ನ್ಯಾಯಪೀಠವು ಮುಂದಿನ ವಿಚಾರಣೆಯನ್ನು ಮಾರ್ಚ್ 24 ಕ್ಕೆ ನಿಗದಿಪಡಿಸಿದೆ.

ಮಣಿಪುರದಲ್ಲಿ ಮೇ 3, 2023 ರಂದು ಬಹುಸಂಖ್ಯಾತ ಮೈತೇಯಿಗಳು ಮತ್ತು ಕುಕಿಗಳ ನಡುವೆ ಮೀಸಲಾತಿ ಮತ್ತು ಆರ್ಥಿಕ ಪ್ರಯೋಜನಗಳ ವಿಚಾರವಾಗಿ ಕುರಿತು ಜನಾಂಗೀಯ ಹಿಂಸಾಚಾರ ಭುಗಿಲೆದ್ದಿತು. ಬೆಟ್ಟ ಮತ್ತು ಕಣಿವೆ ಜಿಲ್ಲೆಗಳ ಗಡಿಯಲ್ಲಿರುವ ದುರ್ಬಲ ವಲಯಗಳಲ್ಲಿ ಕೇಂದ್ರವು ಪಡೆಗಳನ್ನು ನಿಯೋಜಿಸಿದೆ, ಇದು ಬಾಹ್ಯ ಪ್ರದೇಶಗಳಲ್ಲಿ ಗುಂಡಿನ ದಾಳಿಯ ಘಟನೆಗಳಲ್ಲಿ ಇಳಿಕೆಗೆ ಕಾರಣವಾಗಿದೆ.

ಕುಕಿ ಸಂಘಟನೆಯ ಪರವಾಗಿ ಹಾಜರಾದ ವಕೀಲ ಪ್ರಶಾಂತ್ ಭೂಷಣ್, ದೆಹಲಿಯಲ್ಲಿರುವ ದೇಶದ ಏಕೈಕ ಪೂರ್ಣ ಪ್ರಮಾಣದ ಸ್ವತಂತ್ರ ವಿಧಿವಿಜ್ಞಾನ ಪ್ರಯೋಗಾಲಯವಾದ ಟ್ರುತ್ ಲ್ಯಾಬ್ಸ್ ಆಡಿಯೋ ಕ್ಲಿಪ್‌ಗಳನ್ನು ಪರಿಶೀಲಿಸಿದೆ ಎಂದು ಹೇಳಿದರು.

ಈ ಕ್ಲಿಪ್‌ಗಳಲ್ಲಿನ ಧ್ವನಿಯು ಬಿರೇನ್ ಸಿಂಗ್ ಅವರ ಧ್ವನಿಗೆ ಶೇ. 93 ರಷ್ಟು ಹೊಂದಿಕೆಯಾಗುತ್ತದೆ ಎಂದು ಪ್ರಯೋಗಾಲಯವು ಪ್ರಮಾಣೀಕರಿಸಿದೆ ಎಂದು ಆರೋಪಿಸಿದ್ದಾರೆ.

ಮುಚ್ಚಿದ ಬಾಗಿಲಿನ ಸಭೆಯಲ್ಲಿ ರೆಕಾರ್ಡಿಂಗ್ ನಡೆದಿದೆ ಎಂದು ಭೂಷಣ್ ನ್ಯಾಯಾಲಯಕ್ಕೆ ತಿಳಿಸಿದರು. ಇದರಲ್ಲಿ ಮುಖ್ಯಮಂತ್ರಿಗಳು ಮೈತೇಯಿ ಸಮುದಾಯಕ್ಕೆ ಬಂಧನದಿಂದ ರಕ್ಷಣೆ ನೀಡುವುದಾಗಿ ಮತ್ತು ರಾಜ್ಯದ ಶಸ್ತ್ರಾಸ್ತ್ರ ಸಂಗ್ರಹದಿಂದ ಕದಿಯಲು ಅವಕಾಶ ಮಾಡಿಕೊಟ್ಟಿದ್ದಾಗಿ ಹೇಳುವುದನ್ನು ಕೇಳಬಹುದು ಎಂದು ವರದಿಯಾಗಿದೆ.

ಟ್ರುತ್ ಲ್ಯಾಬ್ಸ್ ವರದಿಯು ಆಡಿಯೋ ಕ್ಲಿಪ್‌ಗಳನ್ನು ಪರಿಶೀಲಿಸುವ ಯಾವುದೇ ಸರ್ಕಾರಿ ಸಂಸ್ಥೆಗಿಂತ ಹೆಚ್ಚು ವಿಶ್ವಾಸಾರ್ಹವಾಗಿದೆ ಎಂದು ವಕೀಲರು ಗಮನಿಸಿದರು.

ನವೆಂಬರ್ 2024 ರಲ್ಲಿ, ಆಗಿನ ಮುಖ್ಯ ನ್ಯಾಯಮೂರ್ತಿ ಡಿ.ವೈ. ಚಂದ್ರಚೂಡ್ ಮತ್ತು ನ್ಯಾಯಮೂರ್ತಿಗಳಾದ ಜೆ.ಬಿ. ಪಾರ್ದಿವಾಲಾ ಮತ್ತು ಮನೋಜ್ ಮಿಶ್ರಾ ಅವರಿದ್ದ ಪೀಠವು ಆಡಿಯೋ ಕ್ಲಿಪ್‌ಗಳ ದೃಢೀಕರಣವನ್ನು ಸಾಬೀತುಪಡಿಸಲು ಸಾಮಗ್ರಿಗಳನ್ನು ಒದಗಿಸುವಂತೆ ಕೇಳಿಕೊಂಡ ನಂತರ ಕುಕಿ ಸಂಘಟನೆಯು ಟ್ರುತ್ ಲ್ಯಾಬ್ ವರದಿಯನ್ನು ಸಲ್ಲಿಸಿತು.

ಸೋಮವಾರ ನಡೆದ ವಿಚಾರಣೆಯ ಸಂದರ್ಭದಲ್ಲಿ, ಮಣಿಪುರ ರಾಜ್ಯವನ್ನು ಪ್ರತಿನಿಧಿಸುವ ಭಾರತದ ಸಾಲಿಸಿಟರ್ ಜನರಲ್ ತುಷಾರ್ ಮೆಹ್ತಾ, ಈ ಕ್ಲಿಪ್‌ಗಳನ್ನು ತನಿಖೆಗೆ ಕಳುಹಿಸಲಾಗಿದೆ, ಈ ವಿಷಯಕ್ಕೆ ಸಂಬಂಧಿಸಿದಂತೆ ದಾಖಲಾಗಿರುವ ಎಫ್‌ಐಆರ್ ಆಧರಿಸಿ ತನಿಖೆ ನಡೆಯುತ್ತಿದೆ ಎಂದು ಹೇಳಿದರು.

ಆದರೆ, ಅರ್ಜಿದಾರರು ‘ಪ್ರತ್ಯೇಕತಾವಾದಿ ಮನಸ್ಥಿತಿ] ಹೊಂದಿದ್ದಾರೆಂದು ಆರೋಪಿಸಿದ್ದು, ಮೊದಲು ಸುಪ್ರೀಂ ಕೋರ್ಟ್ ಅಲ್ಲ, ಹೈಕೋರ್ಟ್ ಅನ್ನು ಸಂಪರ್ಕಿಸಬೇಕು ಎಂಬ ಆಕ್ಷೇಪಣೆಯನ್ನು ಅವರು ಪುನರುಚ್ಚರಿಸಿದರು.

ಸೋಮವಾರದ ಬೆಳವಣಿಗೆ ಮಣಿಪುರದ ಜನರ ಹಿಂಸಾಚಾರಕ್ಕೆ ಮುಖ್ಯಮಂತ್ರಿ ಕ್ಷಮೆಯಾಚಿಸಿದ ಒಂದು ತಿಂಗಳ ನಂತರ ಬಂದಿದೆ. ಈಶಾನ್ಯ ರಾಜ್ಯದಲ್ಲಿ ಶಾಂತಿ ಪುನಃಸ್ಥಾಪಿಸಲಾಗುತ್ತಿದೆ ಎಂದು ಒತ್ತಿ ಹೇಳುವಾಗ ‘ಹಿಂದಿನದನ್ನು ಕ್ಷಮಿಸಿ ಮತ್ತು ಮರೆತುಬಿಡಿ’ ಎಂದು ಜನರಿಗೆ ಮನವಿ ಮಾಡಿದರು.

ಇದನ್ನೂ ಓದಿ; ರಾಷ್ಟ್ರಪತಿಗಳ ಭಾಷಣವನ್ನು ಓದಲು ಕಷ್ಟವಾಯಿತು: ಲೋಕಸಭೆ ವಿಪಕ್ಷ ನಾಯಕ ರಾಹುಲ್ ಗಾಂಧಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಜಂತರ್ ಮಂತರ್ ಹಲ್ಲೆ ಪ್ರಕರಣ: ಎಸ್‌ಸಿ/ಎಸ್‌ಟಿ, ಪೋಕ್ಸೊ ಕಾಯ್ದೆಯಡಿ ಬಂಧಿಸಲಾಗಿದ್ದ ಆರೋಪಿ ಸ್ವತಂತ್ರ ಭಾರದ್ವಾಜ್‌ಗೆ ಮಧ್ಯಂತರ ಜಾಮೀನು

ನವದೆಹಲಿ: ಜಂತರ್ ಮಂತರ್‌ನಲ್ಲಿ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ನಡೆಸಿದ ಆರೋಪ ಎದುರಿಸುತ್ತಿರುವ ಸ್ವತಂತ್ರ ಭಾರದ್ವಾಜ್‌ಗೆ ದೆಹಲಿಯ ಪಟಿಯಾಲ ಹೌಸ್ ನ್ಯಾಯಾಲಯ ಮೂರು ವಾರಗಳ ಮಧ್ಯಂತರ ಜಾಮೀನು ಮಂಜೂರು ಮಾಡಿದೆ....

ವಿಡಿಯೋದಲ್ಲಿ ‘ಅಸ್ಸಲಾಮು ಅಲೈಕುಮ್’ – ‘ಇನ್ಶಾ ಅಲ್ಲಾ’ ಎಂದಿದ್ದಕ್ಕೆ ಐಪಿಎಸ್ ಅಧಿಕಾರಿ ವರ್ಗಾವಣೆ

'ಅಸ್ಸಲಾಮು ಅಲೈಕುಮ್' ಮತ್ತು 'ಇನ್ಶಾ ಅಲ್ಲಾ' ಎಂದಿದ್ದಕ್ಕೆ ಬಲಪಂಥೀಯ ಸಂಘಟನೆಯೊಂದು ಪಶ್ಚಿಮ ಬಂಗಾಳದ ಗೃಹ ಕಾರ್ಯದರ್ಶಿಗೆ ದೂರು ನೀಡಿದ ಬೆನ್ನಲ್ಲೇ, ಭಾರತೀಯ ಪೊಲೀಸ್ ಸೇವೆ (ಐಪಿಎಸ್) ಅಧಿಕಾರಿ ಬುಷ್ರಾ ಬಾನೋ ಅವರನ್ನು ವರ್ಗಾವಣೆ...

ಪಾನ್ ಮಸಾಲಾ ಜಾಹೀರಾತು ವಿವಾದ: ಶಾರುಖ್, ಅಜಯ್ , ಶ್ರಾಫ್‌ ಅರ್ಜಿ ವಜಾಗೊಳಿಸಿದ ದೆಹಲಿ ಹೈಕೋರ್ಟ್‌

ವಿಮಲ್ ಇಲಾಯಚಿ ಹೆಸರಿನಲ್ಲಿ ನಿಷೇಧಿತ ಪಾನ್ ಮಸಾಲಾ ಉತ್ಪನ್ನದ ಪರೋಕ್ಷ ಪ್ರಚಾರ ನಡೆಸಿದ ಆರೋಪಕ್ಕೆ ಸಂಬಂಧಿಸಿದಂತೆ ಬಾಲಿವುಡ್ ನಟರಾದ ಶಾರುಖ್ ಖಾನ್, ಅಜಯ್ ದೇವಗನ್ ಹಾಗೂ ಟೈಗರ್ ಶ್ರಾಫ್ ಅವರಿಗೆ ಮಹಾರಾಷ್ಟ್ರ ಆಹಾರ...

“ಏಕರೂಪತೆಯು ಸಮಾನತೆಯಲ್ಲ”: 21 ಎನ್‌ಡಿಎ ಆಡಳಿತದ ರಾಜ್ಯಗಳಲ್ಲಿ ಯುಸಿಸಿ ಜಾರಿ ಕುರಿತ ಅಮಿತ್ ಶಾ ಘೋಷಣೆಗೆ ವಿಪಕ್ಷಗಳ ಕಿಡಿ

2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆಯನ್ನು (ಯುಸಿಸಿ) ಜಾರಿಗೊಳಿಸಲಾಗುವುದು ಎಂದು ಅಮಿತ್ ಶಾ ಘೋಷಿಸಿದ ಬೆನ್ನಲ್ಲೇ, ವಿಪಕ್ಷಗಳು ಬಿಜೆಪಿ ತನ್ನ...

ಉತ್ತರ ಪ್ರದೇಶ| ಫಿರೋಜಾಬಾದ್ ಖಾಕಿ ದೌರ್ಜನ್ಯ; ಪೊಲೀಸರ ಭೂಟು ಕಾಲಿನ ಒದೆತಕ್ಕೆ ಗರ್ಭಿಣಿ ಸಾವು

ಉತ್ತರ ಪ್ರದೇಶದ ಫಿರೋಜಾಬಾದ್‌ನ ಶಿಕೋಹಾಬಾದ್ ಪ್ರದೇಶದಲ್ಲಿ ಕಳ್ಳತನ ಪ್ರಕರಣದ ಶಂಕಿತ ಆರೋಪಿಯೊಬ್ಬನನ್ನು ಬಂಧಿಸಲು ಬಂದಿದ್ದ ಪೊಲೀಸರು ಆತನ ಗರ್ಭಿಣಿ ಹೆಂಡತಿಗೆ ಒದ್ದಿದ್ದರಿಂದ ಆಕೆ ಮೃತಪಟ್ಟಿದ್ದು, ಈ ಘಟನೆಗೆ ಸಂಬಂಧಿಸಿದಂತೆ ಇಬ್ಬರು ಸಬ್‌ಇನ್ಸ್‌ಪೆಕ್ಟರ್‌ಗಳು ಸೇರಿದಂತೆ...

ಕೋಲ್ಕತ್ತಾ | 48 ದಿನಗಳಿಂದ ಮುಸ್ಲಿಂ ಕಾಲೋನಿಗೆ ನೀರು ಬಂದ್ : ಬಿಜೆಪಿ ಸರ್ಕಾರದಿಂದ ದ್ವೇಷ ಸಾಧನೆ ಆರೋಪ

ಉತ್ತರ ಕೋಲ್ಕತ್ತಾದ ಕಾಶಿಪುರದ ಜ್ಯೋತಿನಗರ ಕಾಲೋನಿ ನಿವಾಸಿಗಳು ಕಳೆದ 48 ದಿನಗಳಿಂದ ಕುಡಿಯುವ ನೀರಿಗಾಗಿ ಹಾಹಾಕಾರಪಡುತ್ತಿದ್ದಾರೆ. ಇಲ್ಲಿನ ನೂರಾರು ಕುಟುಂಬಗಳಿಗೆ ನೀರಿನ ಮೂಲವಾಗಿರುವ ಐದು ಸಾರ್ವಜನಿಕ ನಲ್ಲಿಗಳು ಸಂಪೂರ್ಣವಾಗಿ ಒಣಗಿ ಹೋಗಿವೆ. ಇದರಿಂದಾಗಿ...

ಗುರುಗ್ರಾಮ| ಮಹಿಳಾ ಬೈಕರ್‌ಗೆ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಕಾರು ಚಾಲಕನ ಬಂಧನ

ಗುರುಗ್ರಾಮದಲ್ಲಿ ಮಹಿಳಾ ಸ್ಪೋರ್ಟ್ಸ್ ಬೈಕ್ ಸವಾರೆಗೆ ಕಾರಿನಿಂದ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ, ಚಾಲಕ ಕಲ್ಯಾಣ್ ಬೈನ್ಸ್ಲಾನನ್ನು ರಾಜಸ್ಥಾನದ ರಾಜ್‌ಗಢದಲ್ಲಿ ಮಂಗಳವಾರ ಬಂಧಿಸಲಾಗಿದೆ ಎಂದು ಗುರುಗ್ರಾಮ ಕಮಿಷನರ್ ಸಿಬಾಶ್ ಕಬೀರಾಜ್ ತಿಳಿಸಿದ್ದಾರೆ. ಈ...

ಸರ್ಕಾರ ಆಧಾರ್ ವ್ಯವಸ್ಥೆಯನ್ನು ನಂಬುವುದಾದರೆ, SIR‌ ತಪಾಸಣೆಗೂ ಇದನ್ನೇ ಬಳಸಲಿ: ಆರ್‌ ಎಸ್‌ ಶರ್ಮಾ ಸಲಹೆ

ಪ್ರಸ್ತುತ ಚರ್ಚೆಯಲ್ಲಿರುವ ಮತದಾರರ ಪಟ್ಟಿ ಪರಿಷ್ಕರಣೆ (SIR) ಮತ್ತು ದಾಖಲೆಗಳ ತಪಾಸಣೆ ಪ್ರಕ್ರಿಯೆಗೆ ಸಂಬಂಧಿಸಿದಂತೆ ಆಧಾರ್‌ ವ್ಯವಸ್ಥೆಯ ಮಾಜಿ ಮುಖ್ಯಸ್ಥ (UIDAI) ಶರ್ಮಾ ಅವರು ಮಹತ್ವದ ಸಲಹೆಯೊಂದನ್ನು ನೀಡಿದ್ದಾರೆ. ಪ್ರತಿ ಬಾರಿ ಸಾವಿರಾರು...

ಸೋಶಿಯಲ್ ಮೀಡಿಯಾಗಳಲ್ಲಿ ಅಪ್ರಾಪ್ತರಿಗೆ ಹೆಚ್ಚುತ್ತಿರುವ ಅಪಾಯ; ಲೈಂಗಿಕ ಶೋಷಣೆ ತಡೆಗೆ ಮೆಟಾದಿಂದ ಮಹತ್ವದ ನಿರ್ಧಾರ!

ಸಾಮಾಜಿಕ ಜಾಲತಾಣಗಳ ಬಳಕೆ ಯುವಜನರು ಮತ್ತು ಮಕ್ಕಳ ದೈನಂದಿನ ಬದುಕಿನ ಅವಿಭಾಜ್ಯ ಭಾಗವಾಗಿರುವ ಬೆನ್ನಲ್ಲೇ, ಆನ್‌ಲೈನ್‌ನಲ್ಲಿ ಮಕ್ಕಳ ಲೈಂಗಿಕ ಶೋಷಣೆ ಮತ್ತು ದೌರ್ಜನ್ಯಕ್ಕೆ ಸಂಬಂಧಿಸಿದ ಪ್ರಕರಣಗಳನ್ನು ಎದುರಿಸಲು ಮೆಟಾ ಮಹತ್ವದ ನಿರ್ಧಾರ ಕೈಗೊಂಡಿದೆ....

ಬೆಂಗಳೂರಿನ ಎನ್‌ಎಲ್‌ಎಸ್‌ಐಯು‌ನಲ್ಲಿ ಉಮರ್ ಖಾಲಿದ್ ಸಾಕ್ಷ್ಯಚಿತ್ರ ಪ್ರದರ್ಶನ; ಕೇಂದ್ರದ ಹಸ್ತಕ್ಷೇಪಕ್ಕೆ ಎಬಿವಿಪಿ ಮನವಿ

ಬೆಂಗಳೂರಿನಲ್ಲಿರುವ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯಲ್ಲಿ (ಎನ್‌ಎಲ್‌ಎಸ್‌ಐಯು‌) ಜೈಲಿನಲ್ಲಿರುವ ಹೋರಾಟಗಾರ ಉಮರ್ ಖಾಲಿದ್ ಕುರಿತಾದ ಸಾಕ್ಷ್ಯಚಿತ್ರದ ಪ್ರದರ್ಶನವನ್ನು ಕಾಯಂ ಆಗಿ ರದ್ದುಗೊಳಿಸಲು ಆರ್‌ಎಸ್ಎಸ್ ಸಂಯೋಜಿತ ವಿದ್ಯಾರ್ಥಿ ಸಂಘಟನೆ ಎಬಿವಿಪಿ ಕೇಂದ್ರ...