Homeಮುಖಪುಟ"ಇನ್ನೂ ಕಿತ್ತಾಡಿ!": ದೆಹಲಿಯಲ್ಲಿ ಬಿಜೆಪಿ ಮುನ್ನಡೆಗೆ ಎಎಪಿ-‌ ಕಾಂಗ್ರೆಸ್‌ ವಿರುದ್ಧ ಉಮರ್ ಅಬ್ದುಲ್ಲಾ ಕಿಡಿ

“ಇನ್ನೂ ಕಿತ್ತಾಡಿ!”: ದೆಹಲಿಯಲ್ಲಿ ಬಿಜೆಪಿ ಮುನ್ನಡೆಗೆ ಎಎಪಿ-‌ ಕಾಂಗ್ರೆಸ್‌ ವಿರುದ್ಧ ಉಮರ್ ಅಬ್ದುಲ್ಲಾ ಕಿಡಿ

- Advertisement -
- Advertisement -

ದೆಹಲಿ ವಿಧಾನಸಭೆ ಚುನಾವಣೆಯ ಮತ ಎಣಿಕೆ ಕಾರ್ಯ ಪ್ರಗತಿಯಲ್ಲಿದೆ. ಆರಂಭಿಕ ಟ್ರೆಂಡ್‌ನಲ್ಲಿ ಬಿಜೆಪಿ ಭಾರೀ ಮುನ್ನಡೆ ಸಾಧಿಸಿದ್ದು, ಎಎಪಿ ಎರಡನೇ ಸ್ಥಾನಕ್ಕೆ ಕುಸಿದರೆ, ಕಾಂಗ್ರೆಸ್ ಮತ್ತೊಮ್ಮೆ ಶೂನ್ಯ ಸುತ್ತಿದೆ.

ಬೆಳಿಗ್ಗೆ 11 ಗಂಟೆಯ ಹೊತ್ತಿಗೆ ಬಿಜೆಪಿ ಮ್ಯಾಜಿಕ್ ನಂಬರ್ 37 ಅನ್ನು ದಾಟಿ 40ಕ್ಕೂ ಹೆಚ್ಚು ಸ್ಥಾನಗಳಲ್ಲಿ ಮುನ್ನಡೆ ಸಾಧಿಸಿತ್ತು. ಎಎಪಿ 25ಕ್ಕಿಂತ ಸ್ಥಾನಗಳಲ್ಲಿ ಮಾತ್ರ ಮುನ್ನಡೆ ಕಾಯ್ದುಕೊಂಡಿತ್ತು. ಇನ್ನು ಕಾಂಗ್ರೆಸ್ ಕಳೆದ ಬಾರಿಯಂತೆ ಶೂನ್ಯ ಸುತ್ತುತ್ತಿತ್ತು.

ರಾಷ್ಟ್ರ ಮಟ್ಟದಲ್ಲಿ ಇಂಡಿಯಾ ಒಕ್ಕೂಟದ ಪಕ್ಷಗಳಾಗಿರುವ ಕಾಂಗ್ರೆಸ್ ಮತ್ತು ಎಎಪಿ ದೆಹಲಿ ಚುನಾವಣೆಯಲ್ಲಿ ಪರಸ್ಪರ ವಿರೋಧಿಗಳಾಗಿ ಸ್ಪರ್ಧೆ ಮಾಡಿರುವುದು ಬಿಜೆಪಿಯ ಮುನ್ನಡೆಗೆ ಪ್ರಮುಖ ಕಾರಣ ಎಂದು ಹೇಳಲಾಗ್ತಿದೆ. ಇದೇ ವಿಷಯವನ್ನು ಪರೋಕ್ಷವಾಗಿ ಉಲ್ಲೇಖಿಸಿ ಎರಡೂ ಪಕ್ಷಗಳ ವಿರುದ್ದ ಜಮ್ಮು ಕಾಶ್ಮೀರದ ಮುಖ್ಯಮಂತ್ರಿ ಉಮರ್ ಅಬ್ದುಲ್ಲಾ ವಾಗ್ದಾಳಿ ನಡೆಸಿದ್ದಾರೆ.

ಎಕ್ಸ್ ನಲ್ಲಿ ಪೋಸ್ಟ್ ಹಾಕಿರುವ ಉಮರ್ ಅಬ್ದುಲ್ಲಾ, “ನೀವು ಪರಸ್ಪರ ಜಗಳವಾಡುತ್ತಿರಿ” ಎಂದಿದ್ದಾರೆ. “ಔರ್ ಲಡೋ, ಜೀ ಭರ್ ಕೆ ಲಡೋ, ಸಮಾಪ್ತ್ ಕರ್‌ ದೋ ಏಕ್ ದೂಸ್ರೆ ಕೋ” (ಇನ್ನೂ ಸ್ವಲ್ಪ ಜಗಳವಾಡಿ, ಮನಸ್ಸಿಗೆ ಬಂದಂತೆ ಕಿತ್ತಾಡಿ, ಒಬ್ಬರನ್ನೊಬ್ಬರು ಮುಗಿಸಿ) ಎಂದು ಮುನಿಯೊಬ್ಬರು ಹೇಳಲಾಗುವ ಜಿಫ್ (GIF)ಒಂದನ್ನು ಒಮರ್ ಅಬ್ದುಲ್ಲಾ ಬರೆದುಕೊಂಡಿದ್ದಾರೆ. ಈ ಮೂಲಕ ಎಎಪಿ, ಕಾಂಗ್ರೆಸ್‌ನ ಕಿತ್ತಾಟದ ವಿರುದ್ಧ ಬೇಸರ ವ್ಯಕ್ತಪಡಿಸಿದ್ದಾರೆ.

2020ರ ದೆಹಲಿ ವಿಧಾನಸಭೆ ಚುನಾವಣೆಯಲ್ಲಿ ಎಎಪಿ 67 ಸ್ಥಾನಗಳನ್ನು ಗೆದ್ದಿತ್ತು, ಉಳಿದ ಮೂರು ಬಿಜೆಪಿ ಪಾಲಾಗಿತ್ತು. ಕಾಂಗ್ರೆಸ್ ಶೂನ್ಯ ಸಾಧನೆ ಮಾಡಿತ್ತು. ಈ ಬಾರಿ ಆರಂಭದಲ್ಲೇ ಬಿಜೆಪಿ ಮ್ಯಾಜಿಕ್ ನಂಬರ್ ದಾಟಿದೆ.

ದೆಹಲಿಯಲ್ಲಿ ಈ ಹಿಂದೆ ಬಿಜೆಪಿ ಮತ್ತು ಕಾಂಗ್ರೆಸ್ ಪ್ರಮುಖ ಪಕ್ಷಗಳಾಗಿತ್ತು. ಎಎಪಿ ಉದಯಿಸಿದ ಬಳಿಕ, ಕಾಂಗ್ರೆಸ್‌ನ ಮತಗಳು ಬಹುತೇಕ ಎಎಪಿ ಪರ ವಾಲಿದೆ. ಮತ್ತೊಂದು ರೀತಿಯಲ್ಲಿ ಹೇಳುವುದಾದರೆ ಕಾಂಗ್ರೆಸ್‌ ಮತ್ತು ಎಎಪಿ ಎರಡೂ ಬಿಜೆಪಿ ವಿರೋಧಿ ಬಣದ ಪಕ್ಷಳಾಗಿರುವುದರಿಂದ ಮತಗಳು ಎರಡೂ ಕಡೆ ಹಂಚಿಕೆಯಾಗಿವೆ. ಆದರೆ, ಬಿಜೆಪಿ ಮತಗಳು ಎಲ್ಲೂ ಪೋಲಾಗದೆ ಒಂದೇ ಕಡೆಗೆ ಬಂದಿದೆ.

ದೆಹಲಿ ಫಲಿತಾಂಶ | ಮ್ಯಾಜಿಕ್ ನಂಬರ್ ದಾಟಿ ಮುನ್ನಡೆ ಕಾಯ್ದುಕೊಂಡ ಬಿಜೆಪಿ : ಎಎಪಿಯ ಘಟಾನುಘಟಿಗಳಿಗೆ ಹಿನ್ನಡೆ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ವೆನೆಜುವೆಲಾದ ತೈಲ ಖರೀದಿಗೆ ಅಮೆರಿಕದ ಅನುಮತಿ ಪಡೆಯಲು ರಿಲಯನ್ಸ್ ಮಾತುಕತೆ : ವರದಿ

ಭಾರತದ ರಿಲಯನ್ಸ್ ಇಂಡಸ್ಟ್ರೀಸ್ ವೆನೆಜುವೆಲಾದ ಕಚ್ಚಾ ತೈಲ ಖರೀದಿಯನ್ನು ಪುನರಾರಂಭಿಸಲು ಅಮೆರಿಕದ ಅನುಮೋದನೆಯನ್ನು ಕೋರುತ್ತಿದೆ ಎಂದು ಈ ವಿಷಯದ ಬಗ್ಗೆ ಗೊತ್ತಿರುವ ಎರಡು ಮೂಲಗಳು ಶುಕ್ರವಾರ ತಿಳಿಸಿವೆ ಎಂದು ಸುದ್ದಿ ಸಂಸ್ಥೆ ರಾಯಿಟರ್ಸ್...

ಐ-ಪ್ಯಾಕ್‌ ಮೇಲೆ ದಾಳಿ | ಇಡಿ ಅಧಿಕಾರಿಗಳ ವಿರುದ್ಧ ತನಿಖೆ ಪ್ರಾರಂಭಿಸಿದ ಕೋಲ್ಕತ್ತಾ ಪೊಲೀಸರು : ಸುಪ್ರೀಂ ಕೋರ್ಟ್‌ನಲ್ಲಿ ಕೇವಿಯಟ್ ಸಲ್ಲಿಸಿದ ಪ. ಬಂಗಾಳ ಸರ್ಕಾರ

ಐ-ಪ್ಯಾಕ್ ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ದಾಳಿ ನಡೆಸಿದ ಸಂದರ್ಭದಲ್ಲಿ ದಾಖಲೆಗಳ ಕಳ್ಳತನದ ಆರೋಪದ ಮೇಲೆ ಕೋಲ್ಕತ್ತಾ ಪೊಲೀಸರು ಶನಿವಾರ (ಜ.10)...

ಟ್ರಂಪ್ ಸಂಚಿಗೆ ತಿರುಗೇಟು : ನಾವು ಯಾರ ಅಡಿಯಾಳಾಗಲು ಸಿದ್ದರಿಲ್ಲ ಎಂದ ಗ್ರೀನ್‌ಲ್ಯಾಂಡ್‌ನ ರಾಜಕೀಯ ಪಕ್ಷಗಳು

ವೆನೆಜುವೆಲಾ ಬಳಿಕ ಖನಿಜ-ಸಮೃದ್ಧ ಡ್ಯಾನಿಶ್ (ಡೆನ್ಮಾರ್ಕ್‌) ಸ್ವಾಯತ್ತ ಪ್ರದೇಶವಾದ ಗ್ರೀನ್‌ ಲ್ಯಾಂಡ್‌ ಮೇಲೆ ಬಲಪ್ರಯೋಗ ಮಾಡಲು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಯೋಜಿಸುತ್ತಿದ್ದಾರೆ. ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಗ್ರೀನ್‌ಲ್ಯಾಂಡ್‌ನ ರಾಜಕೀಯ ಪಕ್ಷಗಳು...

ಮತ್ತೆ ಒಂದಾದ ಎನ್‌ಸಿಪಿ ಬಣಗಳು : ಸುಪ್ರಿಯಾ ಸುಳೆ ಜೊತೆ ವೇದಿಕೆ ಹಂಚಿಕೊಂಡ ಅಜಿತ್ ಪವಾರ್, ಜಂಟಿ ಪ್ರಣಾಳಿಕೆ ಬಿಡುಗಡೆ

ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಅಜಿತ್ ಪವಾರ್ ನೇತೃತ್ವದ ಎನ್‌ಸಿಪಿ ಮತ್ತು ಅವರ ಚಿಕ್ಕಪ್ಪ ಶರದ್ ಪವಾರ್ ನೇತೃತ್ವದ ಎನ್‌ಸಿಪಿ (ಎಸ್‌ಪಿ) ಶನಿವಾರ (ಜ.10) ಪುಣೆ ಮಹಾನಗರ ಪಾಲಿಕೆಗೆ ನಡೆಯಲಿರುವ ಚುನಾವಣೆಗೆ ಜಂಟಿ ಪ್ರಣಾಳಿಕೆಯನ್ನು ಬಿಡುಗಡೆ...

ಮಹಾರಾಷ್ಟ್ರ : ಲೈಂಗಿಕ ದೌರ್ಜನ್ಯ ಪ್ರಕರಣದ ಆರೋಪಿಯನ್ನು ಕೌನ್ಸಿಲರ್ ಮಾಡಿದ ಬಿಜೆಪಿ

ಬದ್ಲಾಪುರ ಲೈಂಗಿಕ ದೌರ್ಜನ್ಯ ಪ್ರಕರಣದ ಸಹ ಆರೋಪಿ ಮತ್ತು ಶಾಲೆಯೊಂದರ ಮಾಜಿ ಕಾರ್ಯದರ್ಶಿ ತುಷಾರ್ ಆಪ್ಟೆ ಎಂಬಾತನನ್ನು ಥಾಣೆ ಜಿಲ್ಲೆಯ ಕುಲ್ಗಾಂವ್-ಬದ್ಲಾಪುರ ಮುನ್ಸಿಪಲ್ ಕೌನ್ಸಿಲ್‌ಗೆ ಬಿಜೆಪಿ ನಾಮನಿರ್ದೇಶನ ಮಾಡಿದೆ. ಮುನ್ಸಿಪಲ್ ಕೌನ್ಸಿಲ್ ಅಧ್ಯಕ್ಷೆ ರುಚಿತಾ...

ಕಳ್ಳನೆಂದು ಸುಳ್ಳಾರೋಪ ಹೊರಿಸಿ ಜೈಲಿಗಟ್ಟಿದ ಪೊಲೀಸರು : ಸಂತ್ರಸ್ತಗೆ 14 ಲಕ್ಷ ರೂ. ಪರಿಹಾರ ನೀಡಲು ಕೋರ್ಟ್ ಆದೇಶ

ಕಳ್ಳನೆಂದು ಸುಳ್ಳಾರೋಪ ಹೊರಿಸಿ ಪೊಲೀಸರು ಜೈಲಿಗಟ್ಟಿದ ವ್ಯಕ್ತಿಗೆ 14 ಲಕ್ಷ ರೂಪಾಯಿ ಪರಿಹಾರ ಒದಗಿಸುವಂತೆ ಕೇರಳ ಸರ್ಕಾರಕ್ಕೆ ಹೈಕೋರ್ಟ್ ಆದೇಶಿಸಿದೆ. ಕಣ್ಣೂರು ಮೂಲದ ವಿ.ಕೆ ತಾಜುದ್ದೀನ್ ಕಾನೂನು ಹೋರಾಟದಲ್ಲಿ ಗೆದ್ದು ಪರಿಹಾರ ಪಡೆದ ವ್ಯಕ್ತಿ....

ಇರಾನ್‌ನಲ್ಲಿ ತೀವ್ರಗೊಂಡ ಆಡಳಿತ ವಿರೋಧಿ ಪ್ರತಿಭಟನೆ : ಟ್ರಂಪ್ ಮಧ್ಯಪ್ರವೇಶ ಕೋರಿದ ಮಾಜಿ ದೊರೆಯ ಮಗ

ಇರಾನ್‌ನಲ್ಲಿ ಭುಗಿಲೆದ್ದಿರುವ ಆಡಳಿತ ವಿರೋಧಿ ಪ್ರತಿಭಟನೆ ತೀವ್ರ ಸ್ವರೂಪ ಪಡೆದುಕೊಂಡಿದೆ. 2025ರ ಡಿಸೆಂಬರ್ 28ರಂದು ಪ್ರಾರಂಭಗೊಂಡ ಪ್ರತಿಭಟನೆಗಳು ಹಿಂಸಾಚಾರ ರೂಪ ಪಡೆದುಕೊಂಡು 13ನೇ ದಿನವೂ ಮುಂದುವರಿದಿದೆ. ಆರ್ಥಿಕ ಬಿಕ್ಕಟ್ಟಿನ ವಿರುದ್ದ (ರಿಯಾಲ್ ಕರೆನ್ಸಿ ಮೌಲ್ಯ...

ಮತದಾರರ ಹೆಸರು ಅಳಿಸಲು ಯತ್ನ : ಬಿಜೆಪಿ ವಿರುದ್ಧ 5 ವಿಪಕ್ಷಗಳಿಂದ ದೂರು ದಾಖಲು

ಅಸ್ಸಾಂನ ಐದು ವಿರೋಧ ಪಕ್ಷಗಳು ಶುಕ್ರವಾರ (ಜ.9) ಪೊಲೀಸ್ ದೂರು ದಾಖಲಿಸಿದ್ದು, ಆಡಳಿತಾರೂಢ ಭಾರತೀಯ ಜನತಾ ಪಾರ್ಟಿ (ಬಿಜೆಪಿ) ರಾಜ್ಯದ ಮತದಾರರ ಪಟ್ಟಿಯಿಂದ ಹೆಚ್ಚಿನ ಸಂಖ್ಯೆಯ ನಿಜವಾದ ಮತದಾರರ ಹೆಸರನ್ನು ಅಳಿಸಲು ಸಂಚು...

ಐ-ಪ್ಯಾಕ್ ಮೇಲೆ ದಾಳಿ ಪ್ರಕರಣ: ಮಮತಾ ಬ್ಯಾನರ್ಜಿ ದೂರಿನ ಬೆನ್ನಲ್ಲೇ ಜಾರಿ ನಿರ್ದೇಶನಾಲಯದ ವಿರುದ್ಧ ಎಫ್‌ಐಆರ್

ಕೋಲ್ಕತ್ತಾ: ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ನಿವಾಸದ ಮೇಲೆ ಜಾರಿ ನಿರ್ದೇಶನಾಲಯ ನಡೆಸಿದ ದಾಳಿಗೆ ಸಂಬಂಧಿಸಿದಂತೆ ಟಿಎಂಸಿ ಅಧ್ಯಕ್ಷೆ ಮಮತಾ ಬ್ಯಾನರ್ಜಿ...

‘ಭ್ರಷ್ಟ ಜನತಾ ಪಾರ್ಟಿ’: ಬಿಜೆಪಿ ಡಬಲ್ ಎಂಜಿನ್ ಆಡಳಿತದ ವಿರುದ್ಧ ರಾಹುಲ್ ಗಾಂಧಿ ವಾಗ್ದಾಳಿ

ನವದೆಹಲಿ: ವಿವಿಧ ರಾಜ್ಯಗಳಲ್ಲಿ ಬಿಜೆಪಿಯ ಡಬಲ್ ಎಂಜಿನ್ ಸರ್ಕಾರಗಳ ವಿರುದ್ಧ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಾಗ್ದಾಳಿ ನಡೆಸಿದ್ದಾರೆ.  ತಮ್ಮ ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ರಾಹುಲ್, ಉತ್ತರಾಖಂಡದಲ್ಲಿ ಅಂಕಿತ...