Homeಮುಖಪುಟಔರಂಗಜೇಬ್‌ ವಿರುದ್ಧ ಜನರ ಕೋಪಕ್ಕೆ 'ಛಾವಾ' ಸಿನಿಮಾ ಕಾರಣ: ಸಿಎಂ ದೇವೇಂದ್ರ ಫಡ್ನವೀಸ್

ಔರಂಗಜೇಬ್‌ ವಿರುದ್ಧ ಜನರ ಕೋಪಕ್ಕೆ ‘ಛಾವಾ’ ಸಿನಿಮಾ ಕಾರಣ: ಸಿಎಂ ದೇವೇಂದ್ರ ಫಡ್ನವೀಸ್

- Advertisement -
- Advertisement -

ಮಹಾರಾಷ್ಟ್ರದ ಛತ್ರಪತಿ ಸಂಭಾಜಿನಗರದಲ್ಲಿರುವ ಮೊಘಲ್ ಚಕ್ರವರ್ತಿ ಔರಂಗಜೇಬ್ ಅವರ ಸಮಾಧಿಯನ್ನು ಧ್ವಂಸಗೊಳಿಸಬೇಕೆಂಬ ದುಷ್ಕರ್ಮಿಗಳ ಆಗ್ರಹದ ನಡುವೆ ನಾಗ್ಪುರದಲ್ಲಿ ಕೋಮು ಘರ್ಷಣೆಗಳ ಭುಗಿಲೆದ್ದಿದೆ. ಈ ಬಗ್ಗೆ ರಾಜ್ಯದಲ್ಲಿ ರಾಜಕೀಯ ವಾಗ್ವಾದ ನಡೆಯುತ್ತಿದ್ದು, ಪ್ರತಿಪಕ್ಷ ಮಹಾ ವಿಕಾಸ್ ಅಘಾಡಿ ಹಿಂಸಾತ್ಮಕ ಘಟನೆಗೆ ಸರ್ಕಾರವನ್ನು ದೂಷಿಸಿದೆ. ಅದಾಗ್ಯೂ, ಆಡಳಿತರೂಢ ಮಹಾಯುತಿ-ಎನ್‌ಡಿಎ ಮೈತ್ರಿಯು ಗಲಭೆಗಳನ್ನು ಶಾಂತಿಯನ್ನು ಕದಡುವ ಉದ್ದೇಶದಿಂದ “ಪೂರ್ವ ಯೋಜಿತ” ಎಂದು ಬಣ್ಣಿಸಿದೆ. ಔರಂಗಜೇಬ್‌ ವಿರುದ್ಧ

ಇಷ್ಟೆ ಅಲ್ಲದೆ, ಇತ್ತೀಚೆಗೆ ಬಿಡುಗಡೆಯಾದ ಛಾವಾ ಚಿತ್ರವು ಔರಂಗಜೇಬ್ ವಿರುದ್ಧ ಜನರ ಕೋಪವನ್ನು ಹುಟ್ಟುಹಾಕಿದೆ ಎಂದು ಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್ ಎತ್ತಿತೋರಿಸಿದ್ದಾರೆ. “ಎಲ್ಲರೂ ಶಾಂತಿಯನ್ನು ಕಾಪಾಡಿಕೊಳ್ಳಬೇಕು. ಯಾರಾದರೂ ಕಾನೂನನ್ನು ಕೈಗೆತ್ತಿಕೊಂಡರೆ, ಜಾತಿ ಅಥವಾ ಧರ್ಮವನ್ನು ಲೆಕ್ಕಿಸದೆ ಕ್ರಮ ಕೈಗೊಳ್ಳಲಾಗುವುದು” ಎಂದು ನಾಗ್ಪುರದ ಶಾಸಕರೂ ಆಗಿರುವ ಫಡ್ನವೀಸ್ ಹೇಳಿದ್ದಾರೆ. ಔರಂಗಜೇಬ್‌ ವಿರುದ್ಧ

ಮರಾಠಿಯಲ್ಲಿ ಛಾವಾ ಎಂದರೆ ಸಿಂಹದ ಮರಿ ಎಂದರ್ಥ. ಈ ಚಿತ್ರದಲ್ಲಿ ಮರಾಠಾ ರಾಜ ಛತ್ರಪತಿ ಶಿವಾಜಿಯ ಮಗ ಛತ್ರಪತಿ ಸಂಭಾಜಿಯ ಕಾಲ್ಪನಿಕ ಕತೆಯನ್ನು ಹೇಳಿದ್ದು, ದಿವಂಗತ ಕಾದಂಬರಿಕಾರ ಶಿವಾಜಿ ಸಾವಂತ್ ಬರೆದ ‘ಛಾವಾ’ ಪುಸ್ತಕವನ್ನು ಆಧರಿಸಿದೆ. ಚಿತ್ರದಲ್ಲಿ ಸಂಭಾಜಿಯ ಪಾತ್ರದಲ್ಲಿ ವಿಕ್ಕಿ ಕೌಶಲ್, ಮಹಾರಾಣಿ ಯೇಸುಬಾಯಿ ಪಾತ್ರದಲ್ಲಿ ರಶ್ಮಿಕಾ ಮಂದಣ್ಣ ಮತ್ತು ಮೊಘಲ್ ಚಕ್ರವರ್ತಿ ಔರಂಗಜೇಬ್ ಪಾತ್ರದಲ್ಲಿ ಅಕ್ಷಯ್ ಖನ್ನಾ ನಟಿಸಿದ್ದಾರೆ.

ಮುಂಬೈನಲ್ಲಿ ನಡೆಯುತ್ತಿರುವ ಮಹಾರಾಷ್ಟ್ರ ವಿಧಾನಸಭೆಯ ಬಜೆಟ್ ಅಧಿವೇಶನದಲ್ಲಿ, ಫಡ್ನವೀಸ್ ವಿಧಾನಸಭೆಯಲ್ಲಿ ಹೇಳಿಕೆ ನೀಡಿದರೆ, ಉಪಮುಖ್ಯಮಂತ್ರಿ ಏಕನಾಥ್ ಶಿಂಧೆ ಪರಿಷತ್ತಿನಲ್ಲಿ ಮಾತನಾಡಿದರು.

ಗಲಭೆಯ ಬಗ್ಗೆ ಪಿತೂರಿ ನಡೆದಿದೆ ಎಂದು ಪ್ರತಿಪಾದಿಸಿದ ಸಿಎಂ, ಇದು ಪೂರ್ವ ಯೋಜಿತ ಕೃತ್ಯ ಎಂದು ಹೇಳಿದ್ದಾರೆ. “ಗಲಭೆಕೋರರು ನಿರ್ದಿಷ್ಟ ಮನೆಗಳು ಮತ್ತು ಸಂಸ್ಥೆಗಳನ್ನು ಗುರಿಯಾಗಿಸಿಕೊಂಡಿದೆ. ಇದು (ದಾಳಿ) ಪೂರ್ವ ಯೋಜಿತ ಪಿತೂರಿಯಂತೆ ಕಾಣುತ್ತದೆ. ಪೊಲೀಸರ ಮೇಲೆ ದಾಳಿ ಮಾಡಿದವರನ್ನು ಬಿಡಲಾಗುವುದಿಲ್ಲ” ಎಂದು ಅವರು ಹೇಳಿದ್ದಾರೆ.

“ಮೂವರು ಡಿಸಿಪಿಗಳು ಸೇರಿದಂತೆ 33 ಪೊಲೀಸ್ ಸಿಬ್ಬಂದಿ ತೀವ್ರವಾಗಿ ಗಾಯಗೊಂಡಿದ್ದಾರೆ. ಐದು ನಾಗರಿಕರು ಗಾಯಗೊಂಡಿದ್ದಾರೆ ಮತ್ತು ಅವರಲ್ಲಿ ಒಬ್ಬರನ್ನು ಐಸಿಯುಗೆ ದಾಖಲಿಸಲಾಗಿದೆ. ಧಾರ್ಮಿಕ ಗುರುತನ್ನು ಲೆಕ್ಕಿಸದೆ, ಪೊಲೀಸ್ ಅಧಿಕಾರಿಗಳ ಮೇಲಿನ ದಾಳಿಯಲ್ಲಿ ಭಾಗಿಯಾಗಿರುವ ಯಾರನ್ನೂ ಬಿಡಲಾಗುವುದಿಲ್ಲ” ಎಂದು ರಾಜ್ಯ ಗೃಹ ಸಚಿವರೂ ಆಗಿರುವ ಫಡ್ನವೀಸ್ ಹೇಳಿದ್ದಾರೆ.

ವಿಧಾನ ಪರಿಷತ್‌ನಲ್ಲಿ ಉಪ ಮುಖ್ಯಮಂತ್ರಿ ಶಿಂಧೆ ಕೂಡ ವಿರೋಧ ಪಕ್ಷದ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. “ಹಲವು ಜನರು ಹೊರಗಿನಿಂದ ಬಂದಿದ್ದಾರೆ ಎಂದು ಪೊಲೀಸರು ಹೇಳಿದ್ದಾರೆ. ಪೆಟ್ರೋಲ್ ಬಾಂಬ್‌ಗಳನ್ನು ಸಹ ಎಸೆಯಲಾಗಿದೆ. ಪೊಲೀಸರ ಮೇಲೂ ದಾಳಿ ನಡೆಸಿರುವುದು ದುರದೃಷ್ಟಕರ. ಈ ಘಟನೆಯಲ್ಲಿ ಕಠಿಣ ಕ್ರಮ ಕೈಗೊಳ್ಳಲಾಗುವುದು. ಶಾಂತಿ ಕಾಪಾಡುವಂತೆ ನಾನು ಎಲ್ಲರಿಗೂ ಮನವಿ ಮಾಡುತ್ತೇನೆ” ಎಂದು ಉಪ ಮುಖ್ಯಮಂತ್ರಿ ಹೇಳಿದ್ದಾರೆ.

“ಔರಂಗಜೇಬ್ ಯಾರು? ಅವರು ಸಂತರೇ?… ಛತ್ರಪತಿ ಸಂಭಾಜಿ ಮಹಾರಾಜರ ಇತಿಹಾಸವನ್ನು ಓದಬೇಕು ಮತ್ತು ಛಾವನನ್ನು ನೋಡಬೇಕು… ಅವರು ಚಿತ್ರಹಿಂಸೆ ನೀಡಿದರು. ಸಂಭಾಜಿ ಮಹಾರಾಜರನ್ನು 40 ದಿನಗಳ ಕಾಲ ಹಿಂಸಿಸಿದರು. ಔರಂಗಜೇಬ್ ಒಬ್ಬ ದೇಶದ್ರೋಹಿ,” ಎಂದು ಅವರು ಹೇಳಿದ್ದಾರೆ.

ಸರ್ಕಾರದ ವಿರುದ್ಧ ಮಹಾ ವಿಕಾಸ್ ಅಘಾಡಿ ತೀವ್ರ ಆಕ್ರೋಶ

ಮಹಾ ವಿಕಾಸ್ ಅಘಾಡಿ ಸರ್ಕಾರದ ವಿರುದ್ಧ ತನ್ನ ದಾಳಿಯನ್ನು ಹೆಚ್ಚಿಸಿದೆ. ಶಿವಸೇನೆ (UBT) ನಾಯಕ ಸಂಜಯ್ ರಾವತ್ ಪ್ರತಿಕ್ರಿಯಿಸಿ, “ನಾಗ್ಪುರದಲ್ಲಿ ಹಿಂಸಾಚಾರ ಸಂಭವಿಸಲು ಯಾವುದೇ ಕಾರಣವಿಲ್ಲ. ಅದು ಆರೆಸ್ಸೆಸ್‌ನ ಪ್ರಧಾನ ಕಚೇರಿ ಇರುವ ಸ್ಥಳ. ಅದು ಸಿಎಂ ದೇವೇಂದ್ರ ಅವರ ಅವರ ಕ್ಷೇತ್ರವೂ ಆಗಿದೆ. ಅಲ್ಲಿ ಹಿಂಸಾಚಾರವನ್ನು ಹರಡಲು ಯಾರಿಗೆ ಧೈರ್ಯವಿದೆ?” ಎಂದು ಹೇಳಿದ್ದಾರೆ.

“ಹಿಂದೂಗಳನ್ನು ಹೆದರಿಸುವುದು, ಅವರ ಸ್ವಂತ ಜನರೇ ಅವರ ಮೇಲೆ ದಾಳಿ ಮಾಡುವಂತೆ ಮಾಡುವುದು ಮತ್ತು ನಂತರ ಅವರನ್ನು ಪ್ರಚೋದಿಸುವುದು, ನಂತರ ಗಲಭೆಗಳಲ್ಲಿ ತೊಡಗಿಸುವುದು ಇದು ಒಂದು ಹೊಸ ಮಾದರಿಯಾಗಿದೆ. ಔರಂಗಜೇಬ್ ಬಗ್ಗೆಗಿನ ವಿವಾದದ ಹಿನ್ನಲೆಯಲ್ಲಿ ಜನರ ಮನಸ್ಸಿನಲ್ಲಿ ಭಯವನ್ನು ಬಿತ್ತಿ, ಅವರು ಮಹಾರಾಷ್ಟ್ರ ಮತ್ತು ದೇಶವನ್ನು ಮುಗಿಸಲು ಪ್ರಯತ್ನಿಸುತ್ತಿದ್ದಾರೆ” ಎಂದು ಅವರು ಹೇಳಿದ್ದಾರೆ.

“ನಾಗ್ಪುರ ಬಹಳ ಶಾಂತಿಯುತ ನಗರ, ಆದರೆ ಅದರ ಮೇಲೆ ಆಡಳಿತ ಪರ ಸಂಘಟನೆಗಳು ದಾಳಿ ಮಾಡಿವೆ. ಇದೆಲ್ಲವೂ ಅಸಂಬದ್ಧ ಹೇಳಿಕೆಗಳನ್ನು ನೀಡಿದ ಸಂಪುಟದಲ್ಲಿರುವ ಮಂತ್ರಿಗಳಿಂದಾಗಿ ನಡೆದಿದೆ. ಮುಖ್ಯಮಂತ್ರಿ ತಕ್ಷಣ ಈ ಸಚಿವರನ್ನು ಸಂಪುಟದಿಂದ ತೆಗೆದುಹಾಕಬೇಕು” ಎಂದು ಕಾಂಗ್ರೆಸ್ ಶಾಸಕಾಂಗ ಪಕ್ಷದ ನಾಯಕ ವಿಜಯ್ ವಡೆಟ್ಟಿವಾರ್ ಹೇಳಿದ್ದಾರೆ.

“ನಾಗ್ಪುರ ನಗರದಲ್ಲಿ ಎರಡು ಗುಂಪುಗಳ ನಡುವಿನ ಹಿಂಸಾಚಾರವು ದೊಡ್ಡ ಹಾನಿಯನ್ನುಂಟುಮಾಡಿದೆ. ಈ ಘಟನೆ ತುಂಬಾ ದುಃಖಕರ ಮತ್ತು ದುರದೃಷ್ಟಕರ. ನಾಗರಿಕರು ದಯವಿಟ್ಟು ಯಾವುದೇ ವದಂತಿಗಳನ್ನು ನಂಬಬೇಡಿ ಎಂದು ನಾವು ಮನವಿ ಮಾಡುತ್ತೇವೆ. ಪರಸ್ಪರ ಸಾಮರಸ್ಯದ ವಾತಾವರಣವನ್ನು ಕಾಪಾಡಿಕೊಳ್ಳಲು ನಾವೆಲ್ಲರೂ ಒಟ್ಟಾಗಿ ಕೆಲಸ ಮಾಡೋಣ. ಇದು ಪ್ರಗತಿಪರ ವಿಚಾರಗಳ ಮಹಾರಾಷ್ಟ್ರ. ನಮ್ಮ ರಾಜ್ಯದ ಈ ಗುರುತನ್ನು ಕಾಪಾಡಿಕೊಳ್ಳಲು ನಾವೆಲ್ಲರೂ ಒಟ್ಟಾಗಿ ಕೆಲಸ ಮಾಡೋಣ” ಎಂದು ಎನ್‌ಸಿಪಿ (ಎಸ್‌ಪಿ) ಕಾರ್ಯಾಧ್ಯಕ್ಷೆ ಸುಪ್ರಿಯಾ ಸುಳೆ ಹೇಳಿದ್ದಾರೆ.

ಇಲ್ಲಿ ಕ್ಲಿಕ್ ಮಾಡಿ

ಇದನ್ನೂಓದಿ:  ಸಂಭಾಲ್‌ನ ಚಂದೌಸಿ ಪ್ರದೇಶದಲ್ಲಿ ಮಸೀದಿ ಮತ್ತು 34 ಮನೆಗಳ ಮೇಲೆ ಬುಲ್ಡೋಜರ್ ಭೀತಿ

ಸಂಭಾಲ್‌ನ ಚಂದೌಸಿ ಪ್ರದೇಶದಲ್ಲಿ ಮಸೀದಿ ಮತ್ತು 34 ಮನೆಗಳ ಮೇಲೆ ಬುಲ್ಡೋಜರ್ ಭೀತಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸತೀಶ್‌ ಜಾರಕಿಹೊಳಿ ಮೇಲಿನ ಇಡಿ ದಾಳಿಯನ್ನು ‘ಚಾರಿತ್ರ್ಯ ಹರಣ’ ಎಂದ ವಿಜಯ್ ಮಲ್ಯ

ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಅವರ ಮನೆ ಹಾಗೂ ಕಚೇರಿಗಳ ಮೇಲೆ ಜಾರಿ ನಿರ್ದೇಶನಾಲಯವು (ಇಡಿ) ನಡೆಸಿದ ದಾಳಿಯನ್ನು ಮಾಜಿ ಸಂಸದ ಮತ್ತು ದೇಶದಿಂದ ಪರಾರಿಯಾಗಿರುವ ಉದ್ಯಮಿ ವಿಜಯ್ ಮಲ್ಯ, "ಸಾರ್ವಜನಿಕವಾಗಿ ಚಾರಿತ್ರ್ಯ...

ಒಗ್ಗಟ್ಟಿನ ಮಾತುಗಳಷ್ಟೇ ಸಾಲದು, ಕೃತಿಯಲ್ಲಿರಲಿ ದಿಟ್ಟತನ : ಬ್ರಿಕ್ಸ್ ವಿಚಾರದಲ್ಲಿ ಕೇಂದ್ರಕ್ಕೆ ಕಾಂಗ್ರೆಸ್ ಚಾಟಿ

ಜಾಗತಿಕ ಮಟ್ಟದಲ್ಲಿ ಬ್ರಿಕ್ಸ್ (BRICS) ಒಕ್ಕೂಟದ ಪ್ರಭಾವ ಹೆಚ್ಚುತ್ತಿರುವುದನ್ನು ಸ್ವಾಗತಿಸಿರುವ ಕಾಂಗ್ರೆಸ್, ಈ ಒಕ್ಕೂಟದ ಅಧ್ಯಕ್ಷತೆಯನ್ನು ವಹಿಸಿರುವ ಭಾರತವು ‘ಗ್ಲೋಬಲ್ ಸೌತ್’ (Global South) ರಾಷ್ಟ್ರಗಳ ನಡುವೆ ತನ್ನ ರಾಜತಾಂತ್ರಿಕ ಸ್ಥಾನಮಾನವನ್ನು ಮರುಸ್ಥಾಪಿಸಲು...

9/11 ರ ಹಿಂದಿನ ದಾಳಿಯನ್ನು ಇರಾನ್ ಜೊತೆಗಿನ ಇಂದಿನ ಯುದ್ಧಕ್ಕೆ ಜೋಡಿಸಿದ ಡೊನಾಲ್ಡ್‌ ಟ್ರಂಪ್

"ಸೆಪ್ಟೆಂಬರ್ 11, 2001 ರ ದಾಳಿಯನ್ನು ಯುನೈಟೆಡ್ ಸ್ಟೇಟ್ಸ್ ಎಂದಿಗೂ ಮರೆಯುವುದಿಲ್ಲ. 25 ವರ್ಷಗಳ ನಂತರವೂ ಇರಾನ್ ಮೇಲೆ ದಾಳಿ ಮಾಡುವ ಮೂಲಕ ದೇಶವು ಭಯೋತ್ಪಾದನೆ ವಿರುದ್ಧದ ಯುದ್ಧವನ್ನು ಮುಂದುವರೆಸಿದೆ" ಎಂದು ಅಧ್ಯಕ್ಷ...

SIR ನೋಟಿಸ್ ಮತ್ತು ವಿಚಾರಣೆಯಲ್ಲಿ ಅಕ್ರಮ : ಚು. ಆಯೋಗದ ವಿರುದ್ಧ ನಾಗರಿಕ ಸಂಘಟನೆಗಳಿಂದ 2ನೇ ಎಫ್‌ಐಆರ್

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಭಾಗವಾಗಿ, ಆಗಸ್ಟ್ 24ರಂದು ರಾಜ್ಯ ಚುನಾವಣಾ ಆಯೋಗ ಬಿಡುಗಡೆ ಮಾಡಿದ್ದ ಕರಡು ಮತದಾರರ ಪಟ್ಟಿಯನ್ನು ತಿರಸ್ಕರಿಸಿ ಕೇಂದ್ರ ಚುನಾವಣಾ ಆಯೋಗದ ವಿರುದ್ಧ ಎಫ್‌ಐಆರ್ ಬಿಡುಗಡೆ...

‘ಕೊಂಕಣಿ – ಮಾಲ್ವಣಿ ಸಮುದಾಯಗಳು ಹಿಂದುತ್ವದ ಬೆಂಬಲಿಗರು..’; ಮಹಾರಾಷ್ಟ್ರ ಬಿಜೆಪಿ ನಾಯಕ ಅಮೀತ್ ಸತಮ್

ಮುಂಬೈನಲ್ಲಿ ವಾಸಿಸುತ್ತಿರುವ ಕೊಂಕಣಿ ಮತ್ತು ಮಾಲ್ವಣಿ ಸಮುದಾಯಗಳು ಸೇರಿದಂತೆ ಕೊಂಕಣ ಪ್ರದೇಶದ ಜನರು ಹಿಂದುತ್ವವನ್ನು ಬೆಂಬಲಿಸುತ್ತಾರೆ ಎಂದು ಬಿಜೆಪಿ ನಾಯಕ ಅಮೀತ್ ಸತಮ್ ಹೇಳಿದ್ದಾರೆ. ಮಹಾರಾಷ್ಟ್ರದ ಕೊಂಕಣ ಪ್ರದೇಶದ ಸಾವಂತವಾಡಿಗೆ ಗಣಪತಿ ಭಕ್ತರಿಗಾಗಿ ಛತ್ರಪತಿ...

SIR! ಸಾಮಾನ್ಯರಿಗೆ ಸಂಕಷ್ಟ; ಗಣ್ಯರಿಗೆ ಮನೆ ಬಾಗಿಲಲ್ಲೇ ಸೇವೆ?

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆ ಕರ್ನಾಟಕದಲ್ಲಿ ಮುಂದುವರೆದಿರುವ ನಡುವೆಯೇ, ಅದರ ಜಾರಿಯಲ್ಲಿ ಸಾಮಾನ್ಯ ಮತದಾರರು ಮತ್ತು ಪ್ರಭಾವಿ ವ್ಯಕ್ತಿಗಳ ಅನುಭವದ ನಡುವಿನ ವ್ಯತ್ಯಾಸದ ಕುರಿತು ಪ್ರಶ್ನೆಗಳು ಎದ್ದಿವೆ. ಮತದಾರರ ಪಟ್ಟಿಯಲ್ಲಿನ...

ದಲಿತ ಬಾಲಕಿ ನಿಶು ಆಜಾದ್ ಕುಟುಂಬಕ್ಕೆ ನಿಲ್ಲದ ಕಿರುಕುಳ; ಅಸಭ್ಯ ಭಾಷೆ – ಬೆದರಿಕೆ ಸಂದೇಶ ರವಾನೆ

ಸಿಜೆಪಿ ಪ್ರತಿಭಟನೆಯಲ್ಲಿ ಗಮನ ಸೆಳೆದಿದ್ದ ಹದಿನಾಲ್ಕು ವರ್ಷ ವಯಸ್ಸಿನ ದಲಿತ ಸಮುದಾಯದ ಕಂಟೆಂಟ್ ಕ್ರಿಯೇಟರ್ ನಿಶು ಆಜಾದ್ ಮತ್ತು ಅವರ ಕುಟುಂಬಕ್ಕೆ ಮೊಬೈಲ್‌ ಫೋನ್‌ ಮೂಲಕ ನಿರಂತರ ಕಿರುಕುಳ ಸಂದೇಶ ಬರುತ್ತಿವೆ ಎಂದು...

ಉತ್ತರ ಪ್ರದೇಶ| 8ನೇ ತರಗತಿಯ ದಲಿತ ವಿದ್ಯಾರ್ಥಿಗೆ ಶಿಕ್ಷಕಿಯಿಂದ ಜಾತಿ ತಾರತಮ್ಯ

ಉತ್ತರ ಪ್ರದೇಶದ ಲಖಿಂಪುರ ಖೇರಿ ಜಿಲ್ಲೆಯ ಸರ್ಕಾರಿ ಉನ್ನತ ಪ್ರಾಥಮಿಕ ಶಾಲೆಯ 8ನೇ ತರಗತಿಯ ವಿದ್ಯಾರ್ಥಿಯೊಬ್ಬರು ಶಿಕ್ಷಕಿಯಿಂದ ಜಾತಿ ಆಧಾರಿತ ತಾರತಮ್ಯ ಎಸಗಲಾಗಿದೆ ಎಂದು ಆರೋಪಿಸಿದ್ದಾನೆ. ಕೃಷ್ಣ ಎಂದು ಗುರುತಿಸಲ್ಪಟ್ಟ ಈ ವಿದ್ಯಾರ್ಥಿ ಪರಿಶಿಷ್ಟ...

ಯೆಮನ್ | ಸಂಪೂರ್ಣ ರೆಡ್ ಸೀ ಕರಾವಳಿಯನ್ನು ನಿಯಂತ್ರಣಕ್ಕೆ ತೆಗೆದುಕೊಂಡ ಹೌತಿ ಪಡೆ : ಮಂದೇಬ್ ಜಲಸಂಧಿ ಮೇಲೆಯೂ ಹಿಡಿತ ಸಾಧಿಸಿರುವುದಾಗಿ ವರದಿ

ಮಹತ್ವದ ಬೆಳವಣಿಗೆಯಲ್ಲಿ, ಹೌತಿ ಬಂಡುಕೋರರು ಯೆಮನ್‌ನ ಇಡೀ ಕೆಂಪು ಸಮುದ್ರದ (ರೆಡ್ ಸೀ) ಕರಾವಳಿಯನ್ನು ತಮ್ಮ ನಿಯಂತ್ರಣಕ್ಕೆ ತೆಗೆದುಕೊಂಡಿದ್ದಾರೆ ಎಂದು ವರದಿಯಾಗಿದೆ. ಇರಾನ್ ಬೆಂಬಲಿತ ಹೌತಿ ಸಶಸ್ತ್ರ ಪಡೆಗಳು ಯೆಮನ್ ಸರ್ಕಾರದ ನಿಯಂತ್ರಣದಲ್ಲಿದ್ದ...

ಭಾರತದ ಚುನಾವಣಾ ಪ್ರಕ್ರಿಯೆಯು ಅತ್ಯಂತ ಪಾರದರ್ಶಕವಾಗಿದೆ: ಸಿಇಸಿ ಜ್ಞಾನೇಶ್ ಕುಮಾರ್

ಭಾರತದ ಚುನಾವಣಾ ಪ್ರಕ್ರಿಯೆಯು ವಿಶ್ವದಲ್ಲೇ ಅತ್ಯಂತ ಪಾರದರ್ಶಕವಾದದ್ದು ಎಂದು ಮುಖ್ಯ ಚುನಾವಣಾ ಆಯುಕ್ತ (ಸಿಇಸಿ) ಜ್ಞಾನೇಶ್ ಕುಮಾರ್ (ಸೆ.11) ಹೇಳಿದ್ದಾರೆ. ಗುಜರಾತ್ ವಿಶ್ವವಿದ್ಯಾಲಯದ ಅಟಲ್ ಕಲಾಂ ಸಭಾಂಗಣದಲ್ಲಿ ನಡೆದ 'ಮತಗಟ್ಟೆ ಮಟ್ಟದ ಅಧಿಕಾರಿಗಳೊಂದಿಗೆ...