Homeಮುಖಪುಟಔರಂಗಜೇಬ್‌ ಸಮಾಧಿ ತೆಗೆದುಹಾಕಲು ಬೆಂಬಲವಿದೆ, ಆದರೆ...: ಮಹಾರಾಷ್ಟ್ರ ಸಿಎಂ ದೇವೇಂದ್ರ ಫಡ್ನವೀಸ್

ಔರಂಗಜೇಬ್‌ ಸಮಾಧಿ ತೆಗೆದುಹಾಕಲು ಬೆಂಬಲವಿದೆ, ಆದರೆ…: ಮಹಾರಾಷ್ಟ್ರ ಸಿಎಂ ದೇವೇಂದ್ರ ಫಡ್ನವೀಸ್

- Advertisement -
- Advertisement -

ಛತ್ರಪತಿ ಸಂಭಾಜಿನಗರ ಜಿಲ್ಲೆಯಲ್ಲಿರುವ ಮೊಘಲ್ ಚಕ್ರವರ್ತಿ ಔರಂಗಜೇಬ್‌ ಅವರ ಸಮಾಧಿಯನ್ನು ತೆಗೆದುಹಾಕಬೇಕೆಂಬ ಕರೆಯನ್ನು ಮಹಾರಾಷ್ಟ್ರ ಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್ ಬೆಂಬಲಿಸಿದ್ದಾರೆ. ಅದಾಗ್ಯೂ, ಈ ಸ್ಥಳವನ್ನು ಭಾರತೀಯ ಪುರಾತತ್ವ ಸಮೀಕ್ಷೆ ರಕ್ಷಿಸುತ್ತಿರುವುದರಿಂದ ಕಾನೂನಿನ ವ್ಯಾಪ್ತಿಯಲ್ಲಿಯೇ ಅದನ್ನು ಮಾಡಬೇಕಾಗುತ್ತದೆ ಎಂದು ಅವರು ಹೇಳಿದ್ದಾಗಿ ಸೋಮವಾರ ಪಿಟಿಐ ವರದಿ ಮಾಡಿದೆ.

ಶನಿವಾರ ನಡೆದ ಕಾರ್ಯಕ್ರಮವೊಂದರಲ್ಲಿ ತಮ್ಮ ಪಕ್ಷದ ಸಹೋದ್ಯೋಗಿ ಮತ್ತು ಸತಾರಾ ಸಂಸದ ಉದಯನ್‌ರಾಜೆ ಭೋಸಲೆ ಅವರು ಔರಂಗಜೇಬನ ಸಮಾಧಿಯನ್ನು ತೆಗೆದುಹಾಕುವಂತೆ ಕರೆ ನೀಡಿದ್ದ ಹೇಳಿಕೆಗೆ ಪ್ರತಿಕ್ರಿಯಿಸುತ್ತಾ ಈ ಹೇಳಿಕೆ ನೀಡಿದ್ದಾರೆ.

ಸಂಸದ ಭೋಸಲೆ ಅವರು 17 ನೇ ಶತಮಾನದ ಮರಾಠಾ ದೊರೆ ಶಿವಾಜಿಯ ವಂಶಸ್ಥರಾಗಿದ್ದು, ಅವರನ್ನು ಮೊಘಲ್ ಆಳ್ವಿಕೆಯ ವಿರುದ್ಧದ ಪ್ರತಿರೋಧದ ಸಂಕೇತವಾಗಿ ಮಹಾರಾಷ್ಟ್ರದಲ್ಲಿ ಮೆರೆಸಲಾಗುತ್ತದೆ.

“ನಾವೆಲ್ಲರೂ ಸಹ ಅದೇ ವಿಷಯವನ್ನು ಬಯಸುತ್ತೇವೆ. ಆದರೆ ನೀವು ಅದನ್ನು ಕಾನೂನಿನ ಚೌಕಟ್ಟಿನೊಳಗೆ ಮಾಡಬೇಕಾಗಿದೆ. ಏಕೆಂದರೆ ಇದು ಸಂರಕ್ಷಿತ ತಾಣವಾಗಿದೆ” ಎಂದು ಫಡ್ನವೀಸ್ ಹೇಳಿರುವುದಾಗಿ ಸುದ್ದಿ ಸಂಸ್ಥೆ ಉಲ್ಲೇಖಿಸಿದೆ. “ಕೆಲವು ವರ್ಷಗಳ ಹಿಂದೆ ಕಾಂಗ್ರೆಸ್ ಆಡಳಿತದ ಅವಧಿಯಲ್ಲಿ ಈ ಸ್ಥಳವನ್ನು ಎಎಸ್‌ಐ [ಭಾರತೀಯ ಪುರಾತತ್ವ ಸಮೀಕ್ಷೆ] ರಕ್ಷಣೆಗೆ ಒಳಪಡಿಸಲಾಗಿತ್ತು.” ಎಂದು ಅವರು ಹೇಳಿದ್ದಾರೆ.

ಔರಂಗಜೇಬ್ ಬಗ್ಗೆ ಹೇಳಿಕೆ ನೀಡಿದ್ದಕ್ಕಾಗಿ ಸಮಾಜವಾದಿ ಪಕ್ಷದ ಶಾಸಕ ಅಬು ಅಸಿಮ್ ಅಜ್ಮಿ ಅವರನ್ನು ಮಹಾರಾಷ್ಟ್ರ ವಿಧಾನಸಭಾ ಅಧಿವೇಶನದಿಂದ ಅಮಾನತುಗೊಳಿಸಿದ ಕೆಲವು ದಿನಗಳ ನಂತರ ಮುಖ್ಯಮಂತ್ರಿಯವರ ಈ ಹೇಳಿಕೆ ಹೊರಬಿದ್ದಿದೆ.

ಮಾರ್ಚ್ 3 ರಂದು ಹೇಳಿಕೆ ನೀಡಿದ್ದ ಅವರು ಔರಂಗಜೇಬ್ ಅವರನ್ನು ಕ್ರೂರ ಆಡಳಿತಗಾರ ಎಂದು ತಾನು ಪರಿಗಣಿಸುವುದಿಲ್ಲ ಎಂದು ಅಜ್ಮಿ ಹೇಳಿದ್ದರು. “ಇತಿಹಾಸವನ್ನು ತಪ್ಪಾಗಿ ತೋರಿಸಲಾಗುತ್ತಿದೆ. ಔರಂಗಜೇಬ್ ಅನೇಕ ದೇವಾಲಯಗಳನ್ನು ನಿರ್ಮಿಸಿದರು. ನಾನು ಅವರನ್ನು ಕ್ರೂರ ಆಡಳಿತಗಾರ ಎಂದು ತಾನು ಪರಿಗಣಿಸುವುದಿಲ್ಲ.” ಎಂದು ಹೇಳಿದ್ದರು.

ಅವರ ಈ ಹೇಳಿಕೆ ವಿವಾದಕ್ಕೆ ಕಾರಣವಾಗಿದ್ದು, ಅವರ ಹೇಳಿಕೆಯ ಒಂದು ದಿನದ ನಂತರ ಅಜ್ಮಿ ತಮ್ಮ ಹೇಳಿಕೆಯನ್ನು ಹಿಂತೆಗೆದುಕೊಳ್ಳುವಂತೆ ಅಗ್ರಹಿಸಲಾಗಿತ್ತು. ಜೊತೆಗೆ ಅವರ ವಿರುದ್ಧ ಶಿವಸೇನೆ ಸಂಸದ ನರೇಶ್ ಮಾಸ್ಕೆ ಅವರ ದೂರಿನ ಆಧಾರದ ಮೇಲೆ ಮುಂಬೈ ಪೊಲೀಸರು ಎಫ್‌ಐಆರ್ ದಾಖಲಿಸಲಾಗಿದೆ.

ಇಲ್ಲಿ ಕ್ಲಿಕ್ ಮಾಡಿ

ಇದನ್ನೂಓದಿ:  ತೂತುಕುಡಿ | ದಲಿತ ಶಾಲಾ ಬಾಲಕನನ್ನು ಬಸ್ಸಿನಿಂದ ಇಳಿಸಿ ಥಳಿತ; ಕುಡುಗೋಲಿನಿಂದ ಹಲ್ಲೆ

ತೂತುಕುಡಿ | ದಲಿತ ಶಾಲಾ ಬಾಲಕನನ್ನು ಬಸ್ಸಿನಿಂದ ಇಳಿಸಿ ಥಳಿತ; ಕುಡುಗೋಲಿನಿಂದ ಹಲ್ಲೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸಿಜೆಪಿ ಪ್ರತಿಭಟನೆ: ವಿದ್ಯಾರ್ಥಿಗಳ ಮೇಲೆ ‘ಪೆಲೆಟ್‌ ಗನ್’ ದಾಳಿ ದೃಢ; ನಿಯಮಾವಳಿಗಳನ್ನು ಉಲ್ಲಂಘಿಸಿ ಬಲಪ್ರಯೋಗ ನಡೆಸಿರುವ RAF

ನವದೆಹಲಿ: ತಮ್ಮ ಹಕ್ಕುಗಳಿಗಾಗಿ ಪ್ರಜಾಸತ್ತಾತ್ಮಕವಾಗಿ ಧ್ವನಿ ಎತ್ತುತ್ತಿದ್ದ ವಿದ್ಯಾರ್ಥಿ ಸಮುದಾಯದ ಮೇಲೆ ಕೇಂದ್ರದ ಸಶಸ್ತ್ರ ಪಡೆಗಳು ಎಸಗಿದ ದೌರ್ಜನ್ಯದ ಕರಾಳ ಮುಖ ಕೊನೆಗೂ ಅನಾವರಣಗೊಂಡಿದೆ. ಜುಲೈ 20ರಂದು ದೆಹಲಿಯ ಕನ್ಹಾಟ್ ಪ್ಲೇಸ್ ಪ್ರದೇಶದಲ್ಲಿ...

ಕೇವಲ ಪ್ರತಿಭಟಿಸಿದ್ದಕ್ಕೆ ವಿದ್ಯಾರ್ಥಿಗಳು ಜೈಲುಪಾಲು; ಗಂಗೆಯ ದೋಣಿಯಲ್ಲಿ ಬಿರಿಯಾನಿ ತಿಂದವರಿಗೂ ಸಿಗುತ್ತಿಲ್ಲ ಜಾಮೀನು : ನ್ಯಾಯಮೂರ್ತಿ ಉಜ್ಜಲ್ ಭುಯಾನ್ ಕಳವಳ

ಭಾರತದಲ್ಲಿ ಭಿನ್ನಾಭಿಪ್ರಾಯಗಳನ್ನು ಗೌರವಿಸುವ ಮತ್ತು ಅವುಗಳಿಗೆ ಅವಕಾಶ ನೀಡುವ ಸಾರ್ವಜನಿಕ ಸ್ಥಳಗಳು ಎಷ್ಟು ಕಡಿಮೆಯಾಗುತ್ತಿವೆ ಎಂದರೆ, ತಮ್ಮ ಹಕ್ಕುಗಳಿಗಾಗಿ ಪ್ರತಿಭಟಿಸುವ ವಿದ್ಯಾರ್ಥಿಗಳನ್ನು ಬಂಧಿಸಿ ಅವರಿಗೆ ಜಾಮೀನು ನಿರಾಕರಿಸಲಾಗುತ್ತಿದೆ ಎಂದು ಸುಪ್ರೀಂ ಕೋರ್ಟ್‌ನ ನ್ಯಾಯಮೂರ್ತಿ...

ಪ.ಬಂಗಾಳ: ನೂತನ ‘ಗೂಂಡಾ ಕಾಯ್ದೆ’ ಅಡಿ NEET ಪ್ರತಿಭಟನೆಯಲ್ಲಿ ಭಾಗಿಯಾದ 10 ಮುಸ್ಲಿಂ ಯುವಕರು ಸೇರಿದಂತೆ 11 ಜನರ ಬಂಧನ 

ಕೋಲ್ಕತ್ತಾ: ಕೇಂದ್ರದ ನರೇಂದ್ರ ಮೋದಿ ಸರ್ಕಾರದ ಶಿಕ್ಷಣ ಕ್ಷೇತ್ರದ ವೈಫಲ್ಯಗಳು ಹಾಗೂ ನೀಟ್-ಯುಜಿ (NEET-UG) ಪ್ರಶ್ನೆ ಪತ್ರಿಕೆ ಸೋರಿಕೆ ಹಗರಣವನ್ನು ಖಂಡಿಸಿ ಶುಕ್ರವಾರ ಕೋಲ್ಕತ್ತಾದಲ್ಲಿ ನಡೆದ ಬೃಹತ್ ವಿದ್ಯಾರ್ಥಿ ಪ್ರತಿಭಟನೆಯು ತೀವ್ರ ರಾಜಕೀಯ...

ಪೊಲೀಸರ ಅನುಮತಿ ಪಡೆದಿದ್ದರೂ ನೀಟ್ ಪ್ರತಿಭಟನೆಗೆ ವಾಟ್ಸಾಪ್ ಗ್ರೂಪ್ ರಚಿಸಿದ್ದಕ್ಕಾಗಿ ಅಸ್ಸಾಂನಲ್ಲಿ ಮೂವರು ಮುಸ್ಲಿಂ ವಿದ್ಯಾರ್ಥಿಗಳ ಬಂಧನ

ಅಸ್ಸಾಂನಲ್ಲಿ ಬಿಜೆಪಿ ಸರ್ಕಾರದ ಕೋಮುವಾದಿ ಧೋರಣೆ ಮತ್ತು ಪ್ರಜಾಸತ್ತಾತ್ಮಕ ಹಕ್ಕುಗಳ ದಮನದ ದಾರುಣ ಚಿತ್ರಣವೊಂದು ಮತ್ತೆ ಮುನ್ನೆಲೆಗೆ ಬಂದಿದೆ. ದೇಶಾದ್ಯಂತ ಸದ್ದು ಮಾಡಿದ್ದ 'ನೀಟ್' (NEET) ಅಕ್ರಮಗಳ ವಿರುದ್ಧ ಧ್ವನಿ ಎತ್ತಲು ಮತ್ತು...

‘ವಿದ್ಯಾರ್ಥಿಗಳ ಮೇಲಿನ ವಿಕೃತ ದಾಳಿಗೆ ನಿಮ್ಮ ಸಮ್ಮತಿ ಇತ್ತೇ?’: ಪತ್ರದ ಮೂಲಕ ಅಮಿತ್ ಶಾಗೆ ರಾಹುಲ್ ಗಾಂಧಿ ಪ್ರಶ್ನೆ

ನವದೆಹಲಿ: ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಕಾರಣವಾದ ದೇಶವ್ಯಾಪಿ ವಿದ್ಯಾರ್ಥಿ ಆಂದೋಲನದ ವೇಳೆ ದೆಹಲಿ ಪೊಲೀಸರು ನಡೆಸಿದ ಭೀಕರ ದೌರ್ಜನ್ಯ ಮತ್ತು ಮಿತಿಮೀರಿದ ಬಲಪ್ರಯೋಗದ ವಿರುದ್ಧ ಲೋಕಸಭೆಯ ವಿರೋಧ...

‘ಮಗ ಬೇಗನೆ ಮನೆಗೆ ಬರಲಿ..’; ಭಾವುಕರಾದ ಅಭಿಜೀತ್ ದಿಪ್ಕೆ ಅವರ ಪೋಷಕರು

ಸಿಜೆಪಿ ಸಂಸ್ಥಾಪಕ ಅಭಿಜೀತ್ ದಿಪ್ಕೆ ನೇತೃತ್ವದಲ್ಲಿ ನಡೆದ ಅಸಾಧಾರಣ ಹೋರಾಟವು ಕೇಂದ್ರ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜಿನಾಮೆಯಲ್ಲಿ ಅಂತಿಮವಾಗಿದೆ. ಈ ಕುರಿತು ಮಾಧ್ಯಮಗಳಿಗೆ ಪ್ರತಿಕ್ರಿಯಿಸಿರುವ ಅವರ ಪೋಷಕರು ಭಾವುಕರಾಗಿದ್ದಾರೆ. "ಮಗ ಬೇಗನೆ ಮನೆಗೆ...

ಧರ್ಮೇಂದ್ರ ಪ್ರಧಾನ್ ರಾಜೀನಾಮೆ: ಕಾಕ್ರೋಚ್‌ಗಳಿಗೆ ಅಭಿನಂದಿಸಿದ ಸೋನಮ್ ವಾಂಗ್‌ಚುಕ್ – ಪ್ರಕಾಶ್‌ ರಾಜ್

ದೇಶದ ಯುವಜನರ ಹಲವು ದಿನಗಳ ಹೋರಾಟದ ಬಳಿಕ ಮೋದಿ ನೇತೃತ್ವದ ಕೇಂದ್ರ ಸರ್ಕಾರ ವಿದ್ಯಾರ್ಥಿಗಳ ಮುಂದೆ ಮಂಡಿಯೂರಿದೆ; ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡಿದ್ದಾರೆ. ಈ ಗೆಲುವಿಗೆ ಕಾಕ್ರೋಚ್ ಜನತಾ ಪಕ್ಷದ...

ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಜಿರಳೆಗಳ ಹರ್ಷೋದ್ಗಾರ: ದೆಹಲಿ ಪೊಲೀಸರಿಂದ ಸಾರ್ವಜನಿಕ ಕ್ಷಮೆಯಾಚನೆಗೆ ಆಗ್ರಹ

ದೇಶಾದ್ಯಂತ ನಡೆಯುತ್ತಿರುವ ಸಿಜೆಪಿ ಪ್ರತಿಭಟನೆಗಳ ನಡುವೆ ನೀಟ್ ಪತ್ರಿಕೆ ಸೋರಿಕೆಗೆ ಸಂಬಂಧಿಸಿದಂತೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ರಾಜೀನಾಮೆ ನೀಡಿದ್ದು, ದೆಹಲಿಯ ಜಂತರ್‌ ಮಂತರ್‌ನಲ್ಲಿ ಪ್ರತಿಭಟನೆ ನಡೆಸುತ್ತಿರುವ ಕಾಕ್ರೋಚ್‌ ಜನತಾ...

ಕಾಕ್ರೋಚ್‌ಗಳಿಗೆ ಮಣಿದ ಮೋದಿ ಸರ್ಕಾರ; ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್‌ ರಾಜೀನಾಮೆ

ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ನೇತೃತ್ವದಲ್ಲಿ ದೇಶಾದ್ಯಂತ ನಡೆಯುತ್ತಿರುವ ಪ್ರತಿಭಟನೆಗಳ ಮಧ್ಯೆ, ನೀಟ್ ಅಕ್ರಮಗಳಿಗೆ ಸಂಬಂಧಿಸಿದಂತೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ಇಂದು (ಜುಲೈ 25) ಪ್ರಧಾನ ಮಂತ್ರಿಗಳಿಗೆ ತಮ್ಮ...

ಅಭಿಜೀತ್ ದಿಪ್ಕೆಗೆ ಟೈಫಾಯ್ಡ್; ಪ್ರತಿಭಟನೆ ಮುಂದುವರಿಯಲಿದೆ ಎಂದ ಸಿಜೆಪಿ ಸಂಸ್ಥಾಪಕ

ತನಗೆ ಟೈಫಾಯ್ಡ್ ಇರುವುದು ಪತ್ತೆಯಾಗಿದೆ ಎಂದು ಕಾಕ್ರೋಚ್‌ ಜನತಾ ಪಕ್ಷದ (ಸಿಜೆಪಿ) ಸಂಸ್ಥಾಪಕ ಅಭಿಜೀತ್ ದಿಪ್ಕೆ ಅವರು ಇಂದು ಹೇಳಿದ್ದಾರೆ. "ನನ್ನ ಅನಾರೋಗ್ಯವು ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ...