Homeಅಂತರಾಷ್ಟ್ರೀಯಆಸ್ಟ್ರೇಲಿಯಾ ಚುನಾವಣೆ: ಪ್ರಧಾನಿ ಅಲ್ಬನೀಸ್ ನೇತೃತ್ವದ ಎಡಪಕ್ಷಕ್ಕೆ ಮತ್ತೆ ಗೆಲುವು

ಆಸ್ಟ್ರೇಲಿಯಾ ಚುನಾವಣೆ: ಪ್ರಧಾನಿ ಅಲ್ಬನೀಸ್ ನೇತೃತ್ವದ ಎಡಪಕ್ಷಕ್ಕೆ ಮತ್ತೆ ಗೆಲುವು

- Advertisement -
- Advertisement -

ಆಸ್ಟ್ರೇಲಿಯಾ ಪ್ರಧಾನಿ ಆಂಥೋನಿ ಅಲ್ಬನೀಸ್ ಅವರ ಎಡಪಂಥೀಯ ಲೇಬರ್ ಪಕ್ಷವು ಶನಿವಾರ (ಮೇ 3, 2025) ಸಾರ್ವತ್ರಿಕ ಚುನಾವಣೆಯಲ್ಲಿ ಜಯಗಳಿಸಿದೆ ಎಂದು ವರದಿಯಾಗಿದೆ.

ಈ ಮೂಲಕ , ಆಂಥೋನಿ ಅಲ್ಬನೀಸ್ ಅವರು 21 ವರ್ಷಗಳ ಬಳಿಕ ಮೂರು ವರ್ಷಗಳ ಅಧಿಕಾರವದಿಯನ್ನು ಯಶಸ್ವಿಯಾಗಿ ಪೂರ್ಣಗೊಳಿಸಿ, ಎರಡನೇ ಬಾರಿಗೆ ಆಯ್ಕೆಯಾದ ಮೊದಲ ಆಸ್ಟ್ರೇಲಿಯಾದ ಪ್ರಧಾನಿ ಎನಿಸಿಕೊಂಡಿದ್ದಾರೆ.

“ಪ್ರಚಾರದ ಸಮಯದಲ್ಲಿ ನಾವು ಸಾಕಷ್ಟು ಉತ್ತಮವಾಗಿ ಕಾರ್ಯನಿರ್ವಹಿಸಿಲ್ಲ. ಫಲಿತಾಂಶ ಬಂದಾಗ ಅದು ಸ್ಪಷ್ಟವಾಗಿದೆ. ಈ ಸೋಲಿನ ಸಂಪೂರ್ಣ ಹೊಣೆಯನ್ನು ನಾನು ಹೊರುತ್ತೇನೆ” ಎಂದು ವಿರೋಧ ಪಕ್ಷದ ನಾಯಕ ಪೀಟರ್ ಡಟ್ಟನ್ ಚುನಾವಣೆಯ ಸೋಲಿನ ಬಳಿಕ ಹೇಳಿದ್ದಾರೆ.

“ಚುನಾವಣೆಯಲ್ಲಿ ಗೆದ್ದಿರುವ ಪ್ರಧಾನಿ ಅಲ್ಬನೀಸ್ ಅವರಿಗೆ ಕರೆ ಮಾಡಿ ಅಭಿನಂದನೆ ಹೇಳಿದ್ದೇನೆ.
ಇದು ಲೇಬರ್ ಪಕ್ಷಕ್ಕೆ ಒಂದು ಐತಿಹಾಸಿಕ ಸಂದರ್ಭವಾಗಿದೆ. ನಾವು ಅದನ್ನು ಗುರುತಿಸುತ್ತೇವೆ” ಎಂದು ಡಟ್ಟನ್ ತಿಳಿಸಿದ್ದಾರೆ.

ಆಸ್ಟ್ರೇಲಿಯಾ ಚುನಾವಣಾ ಆಯೋಗದ ಮಾಹಿತಿ ಪ್ರಕಾರ, 150 ಸ್ಥಾನಗಳನ್ನು ಹೊಂದಿರುವ ಹೌಸ್ ಆಫ್ ರೆಪ್ರೆಸೆಂಟೇಟಿವ್ಸ್‌ನಲ್ಲಿ ಪ್ರಧಾನಿ ಅಲ್ಬನೀಸ್ ನೇತೃತ್ವದ ಆಡಳಿತಾರೂಢ ಸೆಂಟರ್-ಲೆಫ್ಟ್‌ ಲೇಬರ್ ಪಾರ್ಟಿ 70 ಸ್ಥಾನಗಳು ಮತ್ತು ವಿರೋಧ ಪಕ್ಷದ ನಾಯಕ ಪೀಟರ್ ಡಟ್ಟನ್ ಅವರ ಕನ್ಸರ್ವೇಟಿವ್ ಲಿಬರಲ್ ಪಾರ್ಟಿ ನೇತೃತ್ವದ ವಿರೋಧ ಪಕ್ಷಗಳ ಒಕ್ಕೂಟ 24 ಸ್ಥಾನಗಳನ್ನು ಗೆದ್ದಿವೆ. ಅಲಿಪ್ತ ಸಣ್ಣ ಪಕ್ಷಗಳು ಮತ್ತು ಸ್ವತಂತ್ರ ಅಭ್ಯರ್ಥಿಗಳು 13 ಸ್ಥಾನಗಳನ್ನು ಗೆದ್ದಿದ್ದಾರೆ ಎಂದು ವರದಿಯಾಗಿದೆ.

ಆಸ್ಟ್ರೇಲಿಯನ್ ಬ್ರಾಡ್‌ಕಾಸ್ಟಿಂಗ್ ಕಾರ್ಪೊರೇಷನ್‌ನ ಚುನಾವಣಾ ವಿಶ್ಲೇಷಕ ಆಂಥೋನಿ ಗ್ರೀನ್, ಲೇಬರ್ ಪಾರ್ಟಿ 76 ಸ್ಥಾನ, ಕನ್ಸರ್ವೇಟಿವ್ ಒಕ್ಕೂಟ 36 ಸ್ಥಾನ ಮತ್ತು ಅಲಿಪ್ತ ಪಕ್ಷಗಳು 13 ಸ್ಥಾನಗಳನ್ನು ಅಂತಿಮವಾಗಿ ಗೆಲ್ಲಬಹುದು ಎಂದು ಭವಿಷ್ಯ ನುಡಿದಿದ್ದಾರೆ. ಲೇಬರ್ ಪಾರ್ಟಿ ಬಹುಮತದ ಅಥವಾ ಅಲ್ಪಮತದ ಸರ್ಕಾರ ರಚಿಸಬಹುದು. ಕನ್ಸರ್ವೇಟಿವ್ ಅಲ್ಪಮತದ ಸರ್ಕಾರ ರಚಿಸುವ ಯಾವುದೇ ಭರವಸೆ ಇಲ್ಲ ಎಂದು ಗ್ರೀನ್ ಹೇಳಿದ್ದಾರೆ.

ಇಂಧನ ನೀತಿ ಮತ್ತು ಹಣದುಬ್ಬರ ಚುನಾವಣಾ ಪ್ರಚಾರದ ಪ್ರಮುಖ ವಿಷಯಗಳಾಗಿತ್ತು. ದೇಶವು ಜನರ ಜೀವನ ವೆಚ್ಚದ ಬಿಕ್ಕಟ್ಟನ್ನು ಎದುರಿಸುತ್ತಿದೆ ಎಂದು ಎರಡೂ ಕಡೆಯವರು ಒಪ್ಪಿಕೊಂಡಿದ್ದಾರೆ.

ವಿರೋಧ ಪಕ್ಷದ ಡಟ್ಟನ್ ಅವರ ಕನ್ಸರ್ವೇಟಿವ್ ಲಿಬರಲ್ ಪಾರ್ಟಿ, ಹಣದುಬ್ಬರ ಮತ್ತು ಬಡ್ಡಿದರಗಳ ಹೆಚ್ಚಳಕ್ಕೆ ಸರ್ಕಾರಿ ದುಂದುವೆಚ್ಚ ಕಾರಣ ಎಂದು ಲೇಬರ್ ಪಾರ್ಟಿ ಸರ್ಕಾರವನ್ನು ದೂಷಿಸಿತ್ತು. ಸರ್ಕಾರಿ ವೆಚ್ಚವನ್ನು ಕಡಿಮೆ ಮಾಡಲು ಅಧಿಕಾರಕ್ಕೆ ಬಂದರೆ ಐದು ಸಾರ್ವಜನಿಕ ಸೇವಾ ಉದ್ಯೋಗಗಳಲ್ಲಿ ಒಂದಕ್ಕಿಂತ ಹೆಚ್ಚು ಉದ್ಯೋಗಗಳನ್ನು ಕಡಿತಗೊಳಿಸುವುದಾಗಿ ಪ್ರತಿಜ್ಞೆ ಮಾಡಿತ್ತು.

2050ರ ವೇಳೆಗೆ ದೇಶವು ಶೂನ್ಯ ಹಸಿರುಮನೆ ಅನಿಲ ಹೊರಸೂಸುವಿಕೆಯ ಗುರಿಯನ್ನು ತಲುಪಬೇಕು ಎಂದು ಎರಡೂ ಕಡೆಯವರು ಹೇಳುತ್ತಿದ್ದರು. ಸೌರ ಮತ್ತು ಪವನ ಟರ್ಬೈನ್‌ಗಳಂತಹ ನವೀಕರಿಸಬಹುದಾದ ಇಂಧನ ಮೂಲಗಳ ಬದಲಿಗೆ, ಹೆಚ್ಚಿನ ಪರಮಾಣು ಶಕ್ತಿಯನ್ನು ಅವಲಂಬಿಸುವುದರಿಂದ ಕಡಿಮೆ ವೆಚ್ಚದ ವಿದ್ಯುತ್ ದೊರೆಯುತ್ತದೆ ಎಂದು ಡಟ್ಟನ್ ವಾದಿಸಿದ್ದರು.

ಲೇಬರ್ ಪಾರ್ಟಿ ವಿರೋಧ ಪಕ್ಷದ ನಾಯಕನನ್ನು “ಡಾಗ್-ವೈ ಡಟ್ಟನ್” ಎಂದು ಕರೆದಿತ್ತು. ಅವರ ಪಕ್ಷವು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಮತ್ತು ಅವರ ಸರ್ಕಾರಿ ದಕ್ಷತೆಯ ಇಲಾಖೆಯನ್ನು ಅನುಕರಿಸುತ್ತಿದೆ ಎಂದು ಆರೋಪಿಸಿತ್ತು. ಡಟ್ಟನ್ ಅವರ ವಿರೋಧ ಪಕ್ಷಗಳ ಒಕ್ಕೂಟ ಅಧಿಕಾರಕ್ಕೆ ಬಂದರೆ ಪರಮಾಣು ಮಹತ್ವಾಕಾಂಕ್ಷೆಗಳನ್ನು ಪೂರೈಸಲು ಸರ್ಕಾರಿ ಸೇವೆಗಳನ್ನು ಕಡಿತಗೊಳಿಸಲಿದೆ ಎಂದು ಲೇಬರ್ ಪಕ್ಷ ಹೇಳಿತ್ತು.

“ಆಸ್ಟ್ರೇಲಿಯನ್ನರನ್ನು ಪರಸ್ಪರ ಎತ್ತಿಕಟ್ಟುವ ಮೂಲಕ ಅಮೆರಿಕನ್ ಶೈಲಿಯ ರಾಜಕೀಯ ಮಾಡುವ ಪ್ರಯತ್ನವನ್ನು ಡಟ್ಟನ್ ಮಾಡುತ್ತಿದ್ದಾರೆ. ಇದು ಆಸ್ಟ್ರೇಲಿಯಾಕ್ಕೆ ಹೇಳಿದ್ದಲ್ಲ ಎಂದು” ಎಂದು ಅಲ್ಬನೀಸ್ ಚುನಾವಣೆ ಪ್ರಚಾರದ ವೇಳೆ ಕಿಡಿಕಾರಿದ್ದರು.

ಗಾಜಾದಾದ್ಯಂತ ಇಸ್ರೇಲ್ ನಡೆಸಿದ ಹೊಸ ವಾಯುದಾಳಿಗೆ 32 ಪ್ಯಾಲೆಸ್ತೀನಿಯನ್ನರು ಬಲಿ

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇವಲ ಪ್ರತಿಭಟಿಸಿದ್ದಕ್ಕೆ ವಿದ್ಯಾರ್ಥಿಗಳು ಜೈಲುಪಾಲು; ಗಂಗೆಯ ದೋಣಿಯಲ್ಲಿ ಬಿರಿಯಾನಿ ತಿಂದವರಿಗೂ ಸಿಗುತ್ತಿಲ್ಲ ಜಾಮೀನು : ನ್ಯಾಯಮೂರ್ತಿ ಉಜ್ಜಲ್ ಭುಯಾನ್ ಕಳವಳ

ಭಾರತದಲ್ಲಿ ಭಿನ್ನಾಭಿಪ್ರಾಯಗಳನ್ನು ಗೌರವಿಸುವ ಮತ್ತು ಅವುಗಳಿಗೆ ಅವಕಾಶ ನೀಡುವ ಸಾರ್ವಜನಿಕ ಸ್ಥಳಗಳು ಎಷ್ಟು ಕಡಿಮೆಯಾಗುತ್ತಿವೆ ಎಂದರೆ, ತಮ್ಮ ಹಕ್ಕುಗಳಿಗಾಗಿ ಪ್ರತಿಭಟಿಸುವ ವಿದ್ಯಾರ್ಥಿಗಳನ್ನು ಬಂಧಿಸಿ ಅವರಿಗೆ ಜಾಮೀನು ನಿರಾಕರಿಸಲಾಗುತ್ತಿದೆ ಎಂದು ಸುಪ್ರೀಂ ಕೋರ್ಟ್‌ನ ನ್ಯಾಯಮೂರ್ತಿ...

ಪ.ಬಂಗಾಳ: ನೂತನ ‘ಗೂಂಡಾ ಕಾಯ್ದೆ’ ಅಡಿ NEET ಪ್ರತಿಭಟನೆಯಲ್ಲಿ ಭಾಗಿಯಾದ 10 ಮುಸ್ಲಿಂ ಯುವಕರು ಸೇರಿದಂತೆ 11 ಜನರ ಬಂಧನ 

ಕೋಲ್ಕತ್ತಾ: ಕೇಂದ್ರದ ನರೇಂದ್ರ ಮೋದಿ ಸರ್ಕಾರದ ಶಿಕ್ಷಣ ಕ್ಷೇತ್ರದ ವೈಫಲ್ಯಗಳು ಹಾಗೂ ನೀಟ್-ಯುಜಿ (NEET-UG) ಪ್ರಶ್ನೆ ಪತ್ರಿಕೆ ಸೋರಿಕೆ ಹಗರಣವನ್ನು ಖಂಡಿಸಿ ಶುಕ್ರವಾರ ಕೋಲ್ಕತ್ತಾದಲ್ಲಿ ನಡೆದ ಬೃಹತ್ ವಿದ್ಯಾರ್ಥಿ ಪ್ರತಿಭಟನೆಯು ತೀವ್ರ ರಾಜಕೀಯ...

ಪೊಲೀಸರ ಅನುಮತಿ ಪಡೆದಿದ್ದರೂ ನೀಟ್ ಪ್ರತಿಭಟನೆಗೆ ವಾಟ್ಸಾಪ್ ಗ್ರೂಪ್ ರಚಿಸಿದ್ದಕ್ಕಾಗಿ ಅಸ್ಸಾಂನಲ್ಲಿ ಮೂವರು ಮುಸ್ಲಿಂ ವಿದ್ಯಾರ್ಥಿಗಳ ಬಂಧನ

ಅಸ್ಸಾಂನಲ್ಲಿ ಬಿಜೆಪಿ ಸರ್ಕಾರದ ಕೋಮುವಾದಿ ಧೋರಣೆ ಮತ್ತು ಪ್ರಜಾಸತ್ತಾತ್ಮಕ ಹಕ್ಕುಗಳ ದಮನದ ದಾರುಣ ಚಿತ್ರಣವೊಂದು ಮತ್ತೆ ಮುನ್ನೆಲೆಗೆ ಬಂದಿದೆ. ದೇಶಾದ್ಯಂತ ಸದ್ದು ಮಾಡಿದ್ದ 'ನೀಟ್' (NEET) ಅಕ್ರಮಗಳ ವಿರುದ್ಧ ಧ್ವನಿ ಎತ್ತಲು ಮತ್ತು...

‘ವಿದ್ಯಾರ್ಥಿಗಳ ಮೇಲಿನ ವಿಕೃತ ದಾಳಿಗೆ ನಿಮ್ಮ ಸಮ್ಮತಿ ಇತ್ತೇ?’: ಪತ್ರದ ಮೂಲಕ ಅಮಿತ್ ಶಾಗೆ ರಾಹುಲ್ ಗಾಂಧಿ ಪ್ರಶ್ನೆ

ನವದೆಹಲಿ: ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಕಾರಣವಾದ ದೇಶವ್ಯಾಪಿ ವಿದ್ಯಾರ್ಥಿ ಆಂದೋಲನದ ವೇಳೆ ದೆಹಲಿ ಪೊಲೀಸರು ನಡೆಸಿದ ಭೀಕರ ದೌರ್ಜನ್ಯ ಮತ್ತು ಮಿತಿಮೀರಿದ ಬಲಪ್ರಯೋಗದ ವಿರುದ್ಧ ಲೋಕಸಭೆಯ ವಿರೋಧ...

‘ಮಗ ಬೇಗನೆ ಮನೆಗೆ ಬರಲಿ..’; ಭಾವುಕರಾದ ಅಭಿಜೀತ್ ದಿಪ್ಕೆ ಅವರ ಪೋಷಕರು

ಸಿಜೆಪಿ ಸಂಸ್ಥಾಪಕ ಅಭಿಜೀತ್ ದಿಪ್ಕೆ ನೇತೃತ್ವದಲ್ಲಿ ನಡೆದ ಅಸಾಧಾರಣ ಹೋರಾಟವು ಕೇಂದ್ರ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜಿನಾಮೆಯಲ್ಲಿ ಅಂತಿಮವಾಗಿದೆ. ಈ ಕುರಿತು ಮಾಧ್ಯಮಗಳಿಗೆ ಪ್ರತಿಕ್ರಿಯಿಸಿರುವ ಅವರ ಪೋಷಕರು ಭಾವುಕರಾಗಿದ್ದಾರೆ. "ಮಗ ಬೇಗನೆ ಮನೆಗೆ...

ಧರ್ಮೇಂದ್ರ ಪ್ರಧಾನ್ ರಾಜೀನಾಮೆ: ಕಾಕ್ರೋಚ್‌ಗಳಿಗೆ ಅಭಿನಂದಿಸಿದ ಸೋನಮ್ ವಾಂಗ್‌ಚುಕ್ – ಪ್ರಕಾಶ್‌ ರಾಜ್

ದೇಶದ ಯುವಜನರ ಹಲವು ದಿನಗಳ ಹೋರಾಟದ ಬಳಿಕ ಮೋದಿ ನೇತೃತ್ವದ ಕೇಂದ್ರ ಸರ್ಕಾರ ವಿದ್ಯಾರ್ಥಿಗಳ ಮುಂದೆ ಮಂಡಿಯೂರಿದೆ; ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡಿದ್ದಾರೆ. ಈ ಗೆಲುವಿಗೆ ಕಾಕ್ರೋಚ್ ಜನತಾ ಪಕ್ಷದ...

ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಜಿರಳೆಗಳ ಹರ್ಷೋದ್ಗಾರ: ದೆಹಲಿ ಪೊಲೀಸರಿಂದ ಸಾರ್ವಜನಿಕ ಕ್ಷಮೆಯಾಚನೆಗೆ ಆಗ್ರಹ

ದೇಶಾದ್ಯಂತ ನಡೆಯುತ್ತಿರುವ ಸಿಜೆಪಿ ಪ್ರತಿಭಟನೆಗಳ ನಡುವೆ ನೀಟ್ ಪತ್ರಿಕೆ ಸೋರಿಕೆಗೆ ಸಂಬಂಧಿಸಿದಂತೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ರಾಜೀನಾಮೆ ನೀಡಿದ್ದು, ದೆಹಲಿಯ ಜಂತರ್‌ ಮಂತರ್‌ನಲ್ಲಿ ಪ್ರತಿಭಟನೆ ನಡೆಸುತ್ತಿರುವ ಕಾಕ್ರೋಚ್‌ ಜನತಾ...

ಕಾಕ್ರೋಚ್‌ಗಳಿಗೆ ಮಣಿದ ಮೋದಿ ಸರ್ಕಾರ; ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್‌ ರಾಜೀನಾಮೆ

ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ನೇತೃತ್ವದಲ್ಲಿ ದೇಶಾದ್ಯಂತ ನಡೆಯುತ್ತಿರುವ ಪ್ರತಿಭಟನೆಗಳ ಮಧ್ಯೆ, ನೀಟ್ ಅಕ್ರಮಗಳಿಗೆ ಸಂಬಂಧಿಸಿದಂತೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ಇಂದು (ಜುಲೈ 25) ಪ್ರಧಾನ ಮಂತ್ರಿಗಳಿಗೆ ತಮ್ಮ...

ಅಭಿಜೀತ್ ದಿಪ್ಕೆಗೆ ಟೈಫಾಯ್ಡ್; ಪ್ರತಿಭಟನೆ ಮುಂದುವರಿಯಲಿದೆ ಎಂದ ಸಿಜೆಪಿ ಸಂಸ್ಥಾಪಕ

ತನಗೆ ಟೈಫಾಯ್ಡ್ ಇರುವುದು ಪತ್ತೆಯಾಗಿದೆ ಎಂದು ಕಾಕ್ರೋಚ್‌ ಜನತಾ ಪಕ್ಷದ (ಸಿಜೆಪಿ) ಸಂಸ್ಥಾಪಕ ಅಭಿಜೀತ್ ದಿಪ್ಕೆ ಅವರು ಇಂದು ಹೇಳಿದ್ದಾರೆ. "ನನ್ನ ಅನಾರೋಗ್ಯವು ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ...

ಮುಸ್ಲಿಮರ ಬಗ್ಗೆ ನಿಂದನಾತ್ಮಕ, ಪ್ರಚೋದನಕಾರಿ ಹೇಳಿಕೆ : ಸಿ.ಟಿ ರವಿ ವಿರುದ್ಧ FIR

ಮುಸ್ಲಿಮರ ವಿರುದ್ಧ ನಿಂದನಾತ್ಮಕ ಹಾಗೂ ಪ್ರಚೋದನಕಾರಿ ಹೇಳಿಕೆ ನೀಡಿದ ವಿಧಾನಪರಿಷತ್ ಸದಸ್ಯ ಸಿ.ಟಿ ರವಿ ವಿರುದ್ಧ ಚಿಕ್ಕಮಗಳೂರು ನಗರ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ. ನಗರದ ಜಾಮಿಯಾ ಮಸೀದಿಯ ಅಧ್ಯಕ್ಷ ಮುದಸ್ಸಿರ್ ಪಾಷಾ ಅವರು...