Homeಮುಖಪುಟಮತ್ತೆ ಮುನ್ನೆಲೆಗೆ ಬಂದ 'Avalkoppam': ದಿಲೀಪ್ ಖುಲಾಸೆ ಬಳಿಕ ಕೇರಳದಾದ್ಯಂತ ಪ್ರತಿಭಟನೆ

ಮತ್ತೆ ಮುನ್ನೆಲೆಗೆ ಬಂದ ‘Avalkoppam’: ದಿಲೀಪ್ ಖುಲಾಸೆ ಬಳಿಕ ಕೇರಳದಾದ್ಯಂತ ಪ್ರತಿಭಟನೆ

- Advertisement -
- Advertisement -

ಬಹುಭಾಷಾ ನಟಿಯ ಅಪಹರಣ ಮತ್ತು ಅತ್ಯಾಚಾರ ಪ್ರಕರಣದಲ್ಲಿ ನಟ ದಿಲೀಪ್ ಅವರನ್ನು ಖುಲಾಸೆಗೊಳಿಸಿರುವ ನ್ಯಾಯಾಲಯದ ತೀರ್ಪಿಗೆ ಕೇರಳದಾದ್ಯಂತ ದೊಡ್ಡ ಮಟ್ಟದಲ್ಲಿ ಅಸಮಾಧಾನ ವ್ಯಕ್ತವಾಗುತ್ತಿದೆ.

2017ರಲ್ಲಿ ನಟಿ ಮೇಲೆ ದೌರ್ಜನ್ಯ ನಡೆದಾಗ ಹಮ್ಮಿಕೊಂಡಿದ್ದ ‘ಅವಳ್‌ಕೊಪ್ಪಂ’ (ಅವಳ ಜೊತೆ) ಎಂಬ ಪ್ರತಿರೋಧ ಮತ್ತು ಸಂತ್ರಸ್ತೆಯ ಜೊತೆಗಿನ ಒಗಟ್ಟಿನ ಅಭಿಯಾನ ಮತ್ತೆ ಮುನ್ನೆಲೆಗೆ ಬಂದಿದೆ.

ಭಾನುವಾರ (ಡಿಸೆಂಬರ್ 14) ಕೇರಳದ ಅಂತಾರಾಷ್ಟ್ರೀಯ ಚಲನಚಿತ್ರೋತ್ಸವದಲ್ಲಿ (ಐಎಫ್‌ಎಫ್‌ಕೆ) ಪ್ರತಿಭಟನೆ ನಡೆದಿದೆ. ಈ ವೇಳೆ ಮಾತನಾಡಿರುವ ಮಲಯಾಳಂ ನಟಿ ರೀಮಾ ಕಲ್ಲಿಂಗಲ್ ‘ನಿಜವಾದ ಹೋರಾಟ ಈಗ ಪ್ರಾರಂಭವಾಗಿದೆ’ ಎಂದು ಹೇಳಿದ್ದಾರೆ.

ಪ್ರತಿಭಟನಾ ಸಭೆಯಲ್ಲಿ ಪ್ರಕರಣದ ಪ್ರಮುಖ ಸಾಕ್ಷಿಯಾಗಿದ್ದ ಚಲನಚಿತ್ರ ನಿರ್ಮಾಪಕ ದಿವಂಗತ ಬಾಲಚಂದ್ರಕುಮಾರ್ ಅವರ ಪತ್ನಿ ಹಿರಿಯ ಡಬ್ಬಿಂಗ್ ಕಲಾವಿದೆ ಭಾಗ್ಯಲಕ್ಷ್ಮಿ ಮತ್ತು ಸಿಪಿಐ(ಎಂ) ಕೇರಳ ರಾಜ್ಯ ಕಾರ್ಯದರ್ಶಿ ಎಂ.ವಿ ಗೋವಿಂದನ್ ಸೇರಿದಂತೆ ಹಲವಾರು ಪ್ರಮುಖರು ಭಾಗವಹಿಸಿದ್ದರು.

‘ಅವಳ್‌ಕೊಪ್ಪಂ’ ಇಂದು ಎಂದಿಗಿಂತಲೂ ಹೆಚ್ಚು ಪ್ರಸ್ತುತವಾಗಿದೆ. ನಿಜವಾದ ಹೋರಾಟ ಈಗ ಪ್ರಾರಂಭವಾಗಿದೆ ಎಂದು ನಾನು ನಂಬುತ್ತೇನೆ” ಎಂದು ರೀಮಾ ತೀರ್ಪಿಗೆ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

“ನ್ಯಾಯಾಲಯದ ತೀರ್ಪು ಯಾವುದೇ ರೀತಿಯ ಆಶ್ವಾಸನೆ ನೀಡುವುದಿಲ್ಲ. ಈ ದೀರ್ಘ ಹೋರಾಟದಲ್ಲಿ ಸಂತ್ರಸ್ತೆಯ ಜೊತೆಗೆ, ಆಕೆಯ ಪರವಾಗಿ ನಿಂತವರ ಬಗೆಗಿನ ಆತಂಕಕ್ಕಿಂತ ಹೆಚ್ಚಾಗಿ, ಈ ತೀರ್ಪು ಮುಂದಿನ ಪೀಳಿಗೆಗೆ ಕಳುಹಿಸುವ ಸಂದೇಶದ ಬಗ್ಗೆ ನನಗೆ ಆತಂಕವಿದೆ. ಯುವಜನರು ಇದನ್ನು ಸೂಕ್ಷ್ಮವಾಗಿ ಗಮನಿಸುತ್ತಿದ್ದಾರೆ. ಈ ತೀರ್ಪು ಅತ್ಯಂತ ಕೆಟ್ಟ ಉದಾಹರಣೆಯನ್ನು ಕೊಡುತ್ತದೆ. ನಮ್ಮ ಸುತ್ತಲೂ ನಡೆಯುತ್ತಿರುವ ಸಂಗತಿಗಳ ಬಗ್ಗೆ ನಾವು ಬಹಳ ದೃಢವಾದ ಸಂದೇಶವನ್ನು ಕಳುಹಿಸಬೇಕಾಗಿದೆ” ಎಂದು ಪ್ರತಿಭಟನೆಯ ನಂತರ ಸುದ್ದಿ ಮಾಧ್ಯಮ ಒನ್‌ಮನೋರಮ ಜೊತೆ ಮಾತನಾಡುವಾಗ ರೀಮಾ ಹೇಳಿದ್ದಾರೆ.

ಮಾಧ್ಯಮಗಳೊಂದಿಗೆ ಮಾತನಾಡಿದ ಭಾಗ್ಯಲಕ್ಷ್ಮಿ, “ಸಮಾಜವು ಸಂತ್ರಸ್ತೆಯ ಜೊತೆ ದೃಢವಾಗಿ ನಿಲ್ಲಬೇಕಾದ ಸಮಯ ಇದು” ಎಂದು ಹೇಳಿದ್ದಾರೆ. ನಟ ದಿಲೀಪ್ ಅವರನ್ನು ಉಲ್ಲೇಖಿಸಿ, “ತೀರ್ಪಿನ ನಂತರ ಅಪರಾಧಕ್ಕೆ ಸಂಚು ರೂಪಿಸಿದವರು ಅವರೇ ಎಂದು ಎಲ್ಲರೂ ಅರ್ಥಮಾಡಿಕೊಂಡಿದ್ದಾರೆ. ದಿಲೀಪ್ ಖುಲಾಸೆಯಾದ ನಂತರ, ಕೇವಲ ಸಂತೋಷವನ್ನು ವ್ಯಕ್ತಪಡಿಸುವ ಅಥವಾ ‘ಸತ್ಯ ಗೆದ್ದಿದೆ’ ಎಂದು ಹೇಳುವ ಬದಲು, ಅವರು ಒಬ್ಬರು ಮಹಿಳೆಯ ಹೆಸರನ್ನು ಹೇಳಿದ್ದಾರೆ. ಸಂತ್ರಸ್ತೆ ಪಿತೂರಿಯ ಬಗ್ಗೆ ಮಾತನಾಡುವಾಗ ದಿಲೀಪ್ ಹೆಸರನ್ನು ಎಂದಿಗೂ ಹೇಳಿರಲಿಲ್ಲ. ಹೀಗಿರುವಾಗ ಅವರು ತನ್ನನ್ನು ಗುರಿಯಾಗಿಸಿಕೊಂಡಿದ್ದಾರೆಂದು ಭಾವಿಸುವುದು ಏಕೆ? ಏಕೆಂದರೆ ಅದನ್ನು ಮಾಡಿದವರು ಅವರೇ” ಎಂದಿದ್ದಾರೆ.

ಡಿಸೆಂಬರ್ 8ರಂದು ತೀರ್ಪು ಪ್ರಕಟಿಸಿದ್ದ ಎರ್ನಾಕುಲಂ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಲಯ ದಿಲೀಪ್ ಅವರನ್ನು ಖುಲಾಸೆಗೊಳಿಸಿತ್ತು. ಈ ಬೆನ್ನಲ್ಲೇ ಮಾಧ್ಯಮಗಳ ಮುಂದೆ ಮಾತನಾಡಿದ್ದ ದಿಲೀಪ್, “ಈ ಪ್ರಕರಣದಲ್ಲಿ ನನ್ನನ್ನು ಸಿಲುಕಿಸಲು ಪಿತೂರಿ ನಡೆಸಲಾಗಿದೆ. ನಾನೇ ಈ ಪ್ರಕರಣದ ನಿಜವಾದ ಬಲಿಪಶು. ನನ್ನ ವೃತ್ತಿ ಜೀವನ, ಪ್ರತಿಷ್ಠೆ ಮತ್ತು ಸಮಾಜದಲ್ಲಿ ನನ್ನ ಜೀವನವನ್ನು ನಾಶಮಾಡುವ ಉದ್ದೇಶದಿಂದ ಈ ಪಿತೂರಿ ನಡೆಸಲಾಗಿದೆ. ಈ ಪ್ರಕರಣದಲ್ಲಿ ಕ್ರಿಮಿನಲ್ ಪಿತೂರಿ ಇದೆ ಎಂದು ಮೊದಲು ಹೇಳಿದ್ದೇ ಮಂಜು ವಾರಿಯರ್. ಅವರು ಹೀಗೆ ಹೇಳಿದ ದಿನದಿಂದಲೇ ನನ್ನ ವಿರುದ್ಧದ ಪಿತೂರಿ ಶುರುವಾಯಿತು”ಎಂದು ಹೇಳಿದ್ದರು.

ಭಾನುವಾರ ಪ್ರತಿಭಟನೆಯ ಬಳಿಕ ಮಾತನಾಡಿದ ಸಿಪಿಐ(ಎಂ) ರಾಜ್ಯ ಕಾರ್ಯದರ್ಶಿ ಎಂ.ವಿ ಗೋವಿಂದನ್, “ಅಪರಾಧದಲ್ಲಿ ಪಿತೂರಿ ನಡೆಸಿದವರನ್ನು ಗುರುತಿಸಿ ವಿಚಾರಣೆಗೆ ಒಳಪಡಿಸುವಲ್ಲಿ ವಿಫಲವಾಗಿರುವುದು ದೊಡ್ಡ ಸಮಸ್ಯೆಯಾಗಿದೆ. ಅಪರಾಧವನ್ನು ಯೋಜಿಸಿದವರನ್ನು ಗುರುತಿಸಲು ಮತ್ತು ಅವರನ್ನು ಕಾನೂನಿನ ಮುಂದೆ ತರಲು ಅಸಮರ್ಥವಾಗಿರುವುದು ನಾವು ಎದುರಿಸುತ್ತಿರುವ ಸಮಸ್ಯೆಯಾಗಿದೆ. ಪಿತೂರಿಗಾರರನ್ನು ನ್ಯಾಯಾಂಗದ ಮುಂದೆ ತರುವುದನ್ನು ಖಚಿತಪಡಿಸಿಕೊಳ್ಳುವುದು ಕೇರಳದ ಪ್ರತಿಯೊಬ್ಬ ವ್ಯಕ್ತಿಯ ಜವಾಬ್ದಾರಿಯಾಗಿದೆ” ಎಂದಿದ್ದಾರೆ.

ಕೇರಳದ ಇತರ ಭಾಗಗಳಲ್ಲೂ ನ್ಯಾಯಾಲಯದ ತೀರ್ಪಿಗೆ ಅಸಮಾಧಾನ ವ್ಯಕ್ತವಾಗಿದೆ. ಡಿಸೆಂಬರ್ 13ರಂದು, ತಿರುವನಂತಪುರದಿಂದ ಪ್ರಯಾಣಿಸುತ್ತಿದ್ದ ಕೆಎಸ್‌ಆರ್‌ಟಿಸಿ ಬಸ್‌ನಲ್ಲಿ ಮಹಿಳಾ ಪ್ರಯಾಣಿಕರ ಗುಂಪೊಂದು ಪ್ರಯಾಣದ ಸಮಯದಲ್ಲಿ ದಿಲೀಪ್ ಅವರ ಸಿನಿಮಾ ಹಾಕಿದ್ದನ್ನು ವಿರೋಧಿಸಿತ್ತು. ಅವರ ಆಕ್ಷೇಪಣೆಯ ನಂತರ ಬಸ್ ಸಿಬ್ಬಂದಿ ಸಿನಿಮಾ ನಿಲ್ಲಿಸಿದ್ದರು.

ಎರ್ನಾಕುಲಂನ ದೇವಾಲಯದ ಕಾರ್ಯಕ್ರಮದಲ್ಲಿ ದಿಲೀಪ್ ಭಾಗವಹಿಸುವ ಪ್ರಸ್ತಾಪದ ಬಗ್ಗೆ ಮತ್ತೊಂದು ವಿವಾದ ಭುಗಿಲೆದ್ದಿತು. ಶಿವ ದೇವಾಲಯದಲ್ಲಿ ಮುಂದೆ ನಡೆಯಲಿರುವ ಉತ್ಸವದ ಕೂಪನ್‌ಗಳ ವಿತರಣೆಯನ್ನು ಉದ್ಘಾಟಿಸಲು ದಿಲೀಪ್ ಅವರನ್ನು ಆಹ್ವಾನಿಸಲಾಗಿತ್ತು. ಪ್ರತಿಭಟನೆಗಳ ನಂತರ, ಕೊಚ್ಚಿನ್ ದೇವಸ್ವಂ ಮಂಡಳಿಯ ಅಡಿಯಲ್ಲಿ ಬರುವ ದೇವಾಲಯವು ಆಹ್ವಾನವನ್ನು ಹಿಂತೆಗೆದುಕೊಳ್ಳಲು ನಿರ್ಧರಿಸಿತು.

ಡಿಸೆಂಬರ್ 8ರಂದು ನ್ಯಾಯಾಲಯ ತೀರ್ಪು ಪ್ರಕಟಿಸುವ ಸ್ವಲ್ಪ ಮುಂಚೆ ‘ವುಮೆನ್‌ ಇನ್ ಸಿನಿಮಾ ಕಲೆಕ್ಟಿವ್ (ಡಬ್ಲ್ಯುಸಿಸಿ)’ ಸಾಮಾಜಿಕ ಜಾಲತಾಣಗಳಲ್ಲಿ ‘ಅವಳ್‌ಕೊಪ್ಪಂ’ ಎಂದು ಪೋಸ್ಟ್ ಹಾಕಿತ್ತು. ಈ ಮೂಲಕ ತೀರ್ಪು ಏನೇ ಬಂದರೂ ಸಂತ್ರಸ್ತೆಯ ಜೊತೆಗಿದ್ದೇವೆ ಎಂದಿತ್ತು.

ತೀರ್ಪು ಪ್ರಕಟಗೊಂಡ ಬಳಿಕ ಅನೇಕ ನಟ, ನಟಿಯರು ‘ಅವಳ್‌ಕೊಪ್ಪಂ’ ಹ್ಯಾಷ್‌ಟ್ಯಾಗ್ ಮೂಲಕ ಸಾಮಾಜಿಕ ಜಾಲತಾಣಗಳಲ್ಲಿ ತಮ್ಮ ಅಭಿಪ್ರಾಯಗಳನ್ನು ವ್ಯಕ್ತಪಡಿಸಿದ್ದಾರೆ.

ಅನೇಕ ಸಾಮಾನ್ಯ ಜನರು ಕೂಡ ಸಾಮಾಜಿಕ ಜಾಲತಾಣಗಳಲ್ಲಿ ‘ಅವಳ್‌ಕೊಪ್ಪಂ’ ಹ್ಯಾಷ್‌ಟ್ಯಾಗ್‌ ಮೂಲಕ ಸಂತ್ರಸ್ತೆ ನಟಿಗೆ ಬೆಂಬಲ ಮತ್ತು ನ್ಯಾಯಾಲಯದ ತೀರ್ಪಿನ ಬಗ್ಗೆ ಬೇಸರ ವ್ಯಕ್ತಪಡಿಸಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಪೊಲೀಸರನ್ನು ನಿಯಂತ್ರಿಸದಿದ್ದರೆ ಜರ್ಮನಿಯ ನಾಜಿಗಳಂತೆ ಆಗಬಹುದು’: ದಲಿತ ವ್ಯಕ್ತಿಯ ಮೇಲಿನ ದೌರ್ಜನ್ಯ ಪ್ರಕರಣದಲ್ಲಿ ಪಾಟ್ನಾ ಹೈಕೋರ್ಟ್ ಕಳವಳ

ದಲಿತ ವ್ಯಕ್ತಿಯೊಬ್ಬರ ಜಾತಿ ತಿಳಿದ ನಂತರ ಅವರ ಮೇಲೆ ಕ್ರೂರವಾಗಿ ಹಲ್ಲೆ ನಡೆಸಿದ ಆರೋಪ ಎದುರಿಸುತ್ತಿರುವ ಬಿಹಾರದ ಮಾಜಿ ಪೊಲೀಸ್ ಅಧಿಕಾರಿಯ ವಿರುದ್ಧ ತಕ್ಷಣವೇ ಎಫ್‌ಐಆರ್ (FIR) ದಾಖಲಿಸುವಂತೆ ಪಾಟ್ನಾ ಹೈಕೋರ್ಟ್ ನಿರ್ದೇಶಿಸಿದೆ....

“ಎಷ್ಟೊಂದು ದುರಹಂಕಾರ!”: ಜೆ.ಪಿ.ನಡ್ಡಾ ಹೇಳಿಕೆಗೆ ಕಪಿಲ್ ಸಿಬಲ್ ತೀವ್ರ ಆಕ್ಷೇಪ; ಪ್ರತಿಭಟನಾನಿರತ ಸಿಜೆಪಿ ಬೆಂಬಲಿಸಿ ವೀಡಿಯೋ ಸಂದೇಶ

ಪರೀಕ್ಷಾ ಅಕ್ರಮಗಳನ್ನು ಖಂಡಿಸಿ ಕ್ರಾಂತಿಕಾರಿ ಜಿರಳೆ ಜನತಾ ಪಕ್ಷ (ಸಿಜೆಪಿ) ನಡೆಸುತ್ತಿರುವ ವಿದ್ಯಾರ್ಥಿ ಪ್ರತಿಭಟನೆಯ ವಿಚಾರದಲ್ಲಿ ಕೇಂದ್ರ ಸರ್ಕಾರದ ನಡೆಗೆ ದೇಶಾದ್ಯಂತ ತೀವ್ರ ಆಕ್ರೋಶ ವ್ಯಕ್ತವಾಗುತ್ತಿದೆ. ಈ ನಡುವೆ ಕೇಂದ್ರ ಸಚಿವ ಜೆ.ಪಿ....

ವಿದ್ಯಾರ್ಥಿಗಳ ಮೇಲೆ ಪೊಲೀಸ್ ದೌರ್ಜನ್ಯ: ಮೋದಿ-ಅಮಿತ್ ಶಾ ರಾಜೀನಾಮೆಗೆ ರಾಹುಲ್ ಗಾಂಧಿ ಆಗ್ರಹ

ನೀಟ್‌ ಪ್ರಶ್ನೆ ಪತ್ರಿಕೆ ಸೋರಿಕೆ ಹೊಣೆ ಹೊತ್ತು ಕೇಂದ್ರ ಶಿಕ್ಷಣ ಸಚಿವ ರಾಜೀನಾಮೆ ನೀಡಬೇಕು ಎಂದು ಆಗ್ರಹಿಸಿ 'ಸಂಸತ್ ಚಲೋ' ಹಮ್ಮಿಕೊಂಡಿದ್ದ ವಿದ್ಯಾರ್ಥಿಗಳ ಮೇಲೆ ನಡೆದ ಪೊಲೀಸ್ ದೌರ್ಜನ್ಯವನ್ನು ಕಾಂಗ್ರೆಸ್ ನಾಯಕ ರಾಹುಲ್...

ಕೇಂದ್ರ ಸಚಿವ ಜೆ.ಪಿ.ನಡ್ಡಾ ಅವರನ್ನು ಭೇಟಿಯಾದ ಸಿಜೆಪಿ ನಿಯೋಗ; ಮನವಿ ಪತ್ರ ಸಲ್ಲಿಕೆ

ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್‌ ರಾಜೀನಾಮೆಗೆ ಆಗ್ರಹಿಸಿ ನವದೆಹಲಿಯಲ್ಲಿ ಪ್ರತಿಭಟನೆ ತೀವ್ರಗೊಂಡಿರುವ ಬೆನ್ನಲ್ಲೇ ಇಂದು ಕೇಂದ್ರ ಸಚಿವ ಜೆಪಿ ನಡ್ಡಾ ಅವರನ್ನು ಸಿಜೆಪಿ ಸದಸ್ಯರಾದ ಸೌರವ್ ದಾಸ್ ಮತ್ತು ಅಶುತೋಷ್ ರಂಕಾ...

‘ಸಂಸತ್ ಚಲೋ’: ‘ಸೋನಮ್ ವಾಂಗ್ಚುಕ್ ಪತ್ನಿ ಮೇಲೆ ದೆಹಲಿ ಪೊಲೀಸರಿಂದ ಹಲ್ಲೆ’: ವಿದ್ಯಾರ್ಥಿಗಳ ಮೇಲೂ ಲಾಠಿ ಚಾರ್ಜ್  

ನವದೆಹಲಿ: ರಾಷ್ಟ್ರ ರಾಜಧಾನಿಯಲ್ಲಿ ಆಯೋಜಿಸಲಾಗಿದ್ದ ‘ಸಂಸದ್ ಚಲೋ’ ಮೆರವಣಿಗೆಯ ವೇಳೆ ಶಿಕ್ಷಣ ತಜ್ಞ ಹಾಗೂ ಲಡಾಖ್ ಹೋರಾಟಗಾರ ಸೋನಮ್ ವಾಂಗ್ಚುಕ್ ಅವರ ಪತ್ನಿ ಗೀತಾಂಜಲಿ ಜೆ. ಆಂಗ್ಮೋ ಸೇರಿದಂತೆ ಹಲವಾರು ಪ್ರತಿಭಟನಾಕಾರರ ಮೇಲೆ...

ಕನಿಷ್ಠ 20 ಸಾವಿರ ‘ಕಾಕ್ರೋಚ್‌’ಗಳಿಂದ ಸಂಸತ್ತಿಗೆ ಮೆರವಣಿಗೆ; ವಿದ್ಯಾರ್ಥಿಗಳ ಮೇಲೆ ಪೊಲೀಸರಿಂದ ಲಾಠಿಚಾರ್ಜ್ – ಅಶ್ರುವಾಯು

ಧರ್ಮೇಂದ್ರ ಪ್ರಧಾನ್ ರಾಜೀನಾಮಗೆ ಒತ್ತಾಯಿಸಿ ಮುಂಗಾರು ಅಧಿವೇಶನದ ಮೊದಲ ದಿನದಂದು ಸಂಸತ್ತಿಗೆ ಮೆರವಣಿಗೆ ನಡೆಸಲು ದೆಹಲಿಯಲ್ಲಿ ಜಮಾಯಿಸಿದ್ದ ಕಾಕ್ರೋಚ್ ಜನತಾ ಪಕ್ಷದ (ಸಿಜೆಪಿ) ಸಾವಿರಾರು ಬೆಂಬಲಿಗರನ್ನು ಚದುರಿಸಲು ದೆಹಲಿ ಪೊಳಿಸರು ಅಶ್ರುವಾಯು ಶೆಲ್‌ಗಳನ್ನು...

ಸಿಜೆಪಿ ಪ್ರತಿಭಟನೆಗೆ ನಡುಗಿದ ಕೇಂದ್ರ ಸರ್ಕಾರ; ತರಾತುರಿಯಲ್ಲಿ ಸಂಸತ್ತಿನ ಗೇಟ್ ಮುಚ್ಚಿದ ಭದ್ರತಾ ಸಿಬ್ಬಂದಿ

ನೀಟ್‌ ಪರೀಕ್ಷೆಯಲ್ಲಿ ನಡೆದಿದೆ ಎನ್ನಲಾದ ಅಕ್ರಮಗಳನ್ನು ವಿರೋಧಿಸಿ, ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಒತ್ತಾಯಿಸಿ ಇಂದು ಕಾಕ್ರೋಚ್ ಜನತಾ ಪಕ್ಷ (ಸಿಜೆಪಿ) ಹಮ್ಮಿಕೊಂಡಿರುವ ಸಂಸತ್ ಮೆರವಣಿಗೆಗೆ ಕೇಂದ್ರ ಸರ್ಕಾರ...

ಹಕ್ಕುಗಳ ಕಾಯ್ದೆಗೆ 7 ವರ್ಷ: ಕಾಗದದಲ್ಲಷ್ಟೇ ಸಮಾನತೆ, ಉದ್ಯೋಗ ಸಿಗದೆ ಬೀದಿಗೆ ತಳ್ಳಲ್ಪಡುತ್ತಿರುವ ಟ್ರಾನ್ಸ್‌ಜೆಂಡರ್‌ ಸಮುದಾಯ

ಬೆಂಗಳೂರು: ರಾಷ್ಟ್ರೀಯ ಮಟ್ಟದಲ್ಲಿ ‘ಟ್ರಾನ್ಸ್‌ಜೆಂಡರ್ ವ್ಯಕ್ತಿಗಳ (ಹಕ್ಕುಗಳ ರಕ್ಷಣೆ) ಕಾಯ್ದೆ-2019’ ಜಾರಿಗೆ ಬಂದು ಏಳು ವರ್ಷಗಳು ಕಳೆದಿದ್ದರೂ, ಸಮುದಾಯದ ಆರ್ಥಿಕ ಸಬಲೀಕರಣ ಇನ್ನೂ ಕನಸಾಗಿಯೇ ಉಳಿದಿದೆ. ಬೆಂಗಳೂರಿನ ಸಾಮಾಜಿಕ ಮತ್ತು ಆರ್ಥಿಕ ಬದಲಾವಣೆ...

ಸಂಸತ್‌ ಚಲೋ: ಕಾಕ್ರೋಚ್ ಜನತಾ ಪಾರ್ಟಿ ಪ್ರತಿಭಟನೆಗೆ ಭಾರೀ ಬೆಂಬಲ

ದೇಶಾದ್ಯಂತ ಭಾರಿ ಸಂಚಲನ ಸೃಷ್ಟಿಸಿರುವ ನೀಟ್‌ (NEET) ಪ್ರಶ್ನೆಪತ್ರಿಕೆ ಸೋರಿಕೆ, ಸಾಲು ಸಾಲು ವಿದ್ಯಾರ್ಥಿಗಳ ಆತ್ಮಹತ್ಯೆ ಹಾಗೂ ದೇಶದ ಪರೀಕ್ಷಾ ವ್ಯವಸ್ಥೆಯ ಸರಣಿ ವೈಫಲ್ಯಗಳನ್ನು ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ (CJP) ಆಯೋಜಿಸಿರುವ...

ಡಿಜಿಟಲೀಕರಣಗೊಂಡ 2002ರ ಮತದಾರರ ಪಟ್ಟಿಯಿಂದ ಬೆಂಗಳೂರಿನ ಮತಗಟ್ಟೆಗಳೇ ಮಾಯ: ಮಾಹಿತಿ ಸಿಗದೆ ಆತಂಕದಲ್ಲಿ ನೂರಾರು ಮತದಾರರು

ಬೆಂಗಳೂರು: ಸಿಲಿಕಾನ್ ಸಿಟಿ ಬೆಂಗಳೂರಿನ ಹಲವು ಭಾಗಗಳಲ್ಲಿ 2002ರ ಡಿಜಿಟಲೀಕರಣಗೊಂಡ ಮತದಾರರ ಪಟ್ಟಿಯಿಂದ ಇಡೀ ಮತಗಟ್ಟೆಗಳೇ ಕಾಣೆಯಾಗಿರುವ ಗಂಭೀರ ಪ್ರಕರಣವೊಂದು ಬೆಳಕಿಗೆ ಬಂದಿದೆ. ಇದರಿಂದಾಗಿ ನೂರಾರು ಮತದಾರರು ಆತಂಕ ಮತ್ತು ಗೊಂದಲಕ್ಕೊಳಗಾಗಿದ್ದಾರೆ ಎಂದು...