Homeಮುಖಪುಟತಲೆಕೆಳಗಾದ ಎಕ್ಸಿಟ್ ಪೋಲ್ ಸಮೀಕ್ಷೆ: ಲೈವ್ ಟಿವಿಯಲ್ಲಿ ಕಣ್ಣೀರಿಟ್ಟ ಆಕ್ಸಿಸ್ ಮೈ ಇಂಡಿಯಾದ ಪ್ರದೀಪ್ ಗುಪ್ತಾ

ತಲೆಕೆಳಗಾದ ಎಕ್ಸಿಟ್ ಪೋಲ್ ಸಮೀಕ್ಷೆ: ಲೈವ್ ಟಿವಿಯಲ್ಲಿ ಕಣ್ಣೀರಿಟ್ಟ ಆಕ್ಸಿಸ್ ಮೈ ಇಂಡಿಯಾದ ಪ್ರದೀಪ್ ಗುಪ್ತಾ

- Advertisement -
- Advertisement -

ಲೋಕಸಭೆ ಚುನಾವಣೆಯ ಎಕ್ಸಿಟ್ ಪೋಲ್ ಸಮೀಕ್ಷೆ ವಿಫಲವಾದ ಹಿನ್ನೆಲೆ ‘ಆಕ್ಸಿಸ್ ಮೈ ಇಂಡಿಯಾ’ ಸಂಸ್ಥೆಯ ಅಧ್ಯಕ್ಷ ಹಾಗೂ ವ್ಯವಸ್ಥಾಪಕ ನಿರ್ದೇಶಕ ಪ್ರದೀಪ್ ಗುಪ್ತಾ ಲೈವ್ ಟಿವಿಯಲ್ಲಿ ಕಣ್ಣೀರಿಟ್ಟಿದ್ದಾರೆ.

ಈ ಬಾರಿಯ ಚುನಾವಣೆಯಲ್ಲಿ ಎನ್‌ಡಿಎ ಒಕ್ಕೂಟ 361-401 ಸ್ಥಾನಗಳು, ಇಂಡಿಯಾ ಮೈತ್ರಿಕೂಟ 131-166 ಸ್ಥಾನಗಳು ಮತ್ತು ಇತರರು 8-20 ಸ್ಥಾನಗಳನ್ನು ಗೆಲ್ಲಬಹುದು ಎಂದು ಆಕ್ಸಿಸ್ ಮೈ ಇಂಡಿಯಾ ಎಕ್ಸಿಟ್ ಪೋಲ್ ಸಮೀಕ್ಷೆಯಲ್ಲಿ ಹೇಳಿತ್ತು.

ಆದರೆ, ಎಕ್ಸಿಟ್ ಪೋಲ್ ಸಂಪೂರ್ಣ ತಲೆಕೆಳಗಾಗಿದೆ. ಇದುವರೆಗಿನ ಮತ ಎಣಿಕೆಯ ಪ್ರಕಾರ, ಎನ್‌ಡಿಎ ಒಕ್ಕೂಟ 293, ಇಂಡಿಯಾ ಮೈತ್ರಿಕೂಟ 233 ಮತ್ತು ಇತರರು 17 ಸ್ಥಾನಗಳಲ್ಲಿ ಮುನ್ನಡೆ ಸಾಧಿಸಿದ್ದಾರೆ. ಹಾಗಾಗಿ, ಇಂಡಿಯಾ ಟುಡೇ ವಾಹಿನಿಯ ಲೈವ್‌ ಟಿವಿ ಡಿಬೇಟ್‌ನಲ್ಲಿ ಪ್ರದೀಪ್ ಗುಪ್ತಾ ಕಣ್ಣೀರಿಟ್ಟಿದ್ದಾರೆ.

ಮತ ಎಣಿಕೆಯ ಮುನ್ನಾದಿನ (ಜೂನ್ 3) ಎಎನ್‌ಐ ಜೊತೆ ಮಾತನಾಡಿದ್ದ ಪ್ರದೀಪ್ ಗುಪ್ತಾ, “ಆಕ್ಸಿಸ್ ಮೈ ಇಂಡಿಯಾ ಕಳೆದ 10 ವರ್ಷಗಳಿಂದ ನಿರಂತರವಾಗಿ ಎಕ್ಸಿಟ್ ಪೋಲ್‌ಗಳನ್ನು ಮಾಡಿದೆ. ಎರಡು ಲೋಕಸಭೆ ಚುನಾವಣೆ ಸೇರಿದಂತೆ 69 ಚುನಾವಣೆಗಳಿಗೆ ಎಕ್ಸಿಟ್ ಪೋಲ್ ಸಮೀಕ್ಷೆ ನಡೆಸಿದ್ದೇವೆ. ಇದುವರೆಗೆ 65 ಬಾರಿ ನಮ್ಮ ಊಹೆ ಸರಿಯಾಗಿದೆ” ಎಂದಿದ್ದರು.

“ಎಕ್ಸಿಟ್ ಪೋಲ್ ವಿಶ್ವಾಸಾರ್ಹತೆಗೆ ಸಂಬಂಧಿಸಿದಂತೆ ಪ್ರಶ್ನೆಗಳನ್ನು ಎತ್ತುವ ಜನರು ನಮ್ಮ ದಾಖಲೆಯನ್ನು ನೋಡಬೇಕು. ಅವರು ತೃಪ್ತರಾಗುತ್ತಾರೆ” ಎಂದು ಹೇಳಿದ್ದರು.

ಜೂನ್ 1ರಂದು ಶನಿವಾರದ ಅಂತಿಮ ಸುತ್ತಿನ ಮತದಾನದ ನಂತರ ಪ್ರಕಟಗೊಂಡ ಬಹುಪಾಲು ಎಕ್ಸಿಟ್ ಪೋಲ್‌ಗಳು ಬಿಜೆಪಿ ನೇತೃತ್ವದ ಎನ್‌ಡಿಎ ಭಾರೀ ಮುನ್ನಡೆ ಸಾಧಿಸಲಿದೆ ಎಂದು ಹೇಳಿತ್ತು. ವರದಿಗಳ ಪ್ರಕಾರ, ಒಟ್ಟು 14 ಎಕ್ಸಿಟ್ ಪೋಲ್‌ಗಳನ್ನು ಒಟ್ಟುಗೂಡಿಸಿ ನಡೆಸಿದ ಪೋಲ್‌ ಆಫ್‌ ಪೋಲ್‌ನಲ್ಲೂ ಎನ್‌ಡಿಎ 365 ಸ್ಥಾನಗಳನ್ನು ಗೆಲ್ಲುವುದಾಗಿ ಹೇಳಿತ್ತು.

ಇದನ್ನೂ ಓದಿ : ರಾಜ್ಯ ರಾಜಧಾನಿಯಲ್ಲಿ ಕಾಂಗ್ರೆಸ್‌ಗೆ ಭಾರೀ ಹಿನ್ನಡೆ: ಬೆಂಗಳೂರಿನ ಎಲ್ಲಾ ಕ್ಷೇತ್ರಗಳು ಬಿಜೆಪಿ ಪಾಲು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ವೋಟ್‌ಯಿಂದ ಹಿಡಿದು ಮಂದಿರದ ಚಂದಾದವರೆಗೆ ಬಿಜೆಪಿಯದ್ದು ಬರೀ ‘ಚೋರಿ’ ಎಂದ ಕಾಂಗ್ರೆಸ್

ಅಯೋಧ್ಯೆಯ ರಾಮ ಮಂದಿರದಲ್ಲಿ ನಡೆದಿದೆ ಎನ್ನಲಾದ ದೇಣಿಗೆ ದುರುಪಯೋಗದ ವಿಚಾರವಾಗಿ ಭಾನುವಾರ ಕಾಂಗ್ರೆಸ್ ಪಕ್ಷವು ಬಿಜೆಪಿ-ಆರ್‌ಎಸ್‌ಎಸ್ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದೆ. ಇದು ಅವರದೇ ಆದ ಇಕೋ ಸಿಸ್ಟಮ್‌ನ ದೊಡ್ಡ "ಹಗರಣ"ವಾಗಿದ್ದು, ಈ...

ಮುಸ್ಲಿಮರನ್ನು ಮಾದಕ ದ್ರವ್ಯ, ಭಯೋತ್ಪಾದನೆಗೆ ಲಿಂಕ್ ಮಾಡಿ ಪೋಸ್ಟ್: ಕೇರಳ ಹಿಂದೂ ಐಕ್ಯ ವೇದಿಕೆ ಮುಖ್ಯಸ್ಥ ಆರ್‌ವಿ ಬಾಬು ವಿರುದ್ಧ ಪ್ರಕರಣ ದಾಖಲು

ಕೊಚ್ಚಿ: ಮುಸ್ಲಿಂ ಸಮುದಾಯ ಮತ್ತು ಅದರ ಧಾರ್ಮಿಕ ಮುಖಂಡರನ್ನು ಗುರಿಯಾಗಿಸಿಕೊಂಡು ಸಾಮಾಜಿಕ ಮಾಧ್ಯಮದಲ್ಲಿ ಆಕ್ಷೇಪಾರ್ಹ ಹಾಗೂ ಕೋಮು ಪ್ರಚೋದನಾತ್ಮಕ ಪೋಸ್ಟ್ ಹಂಚಿಕೊಂಡಿದ್ದಕ್ಕಾಗಿ ಕೇರಳದ ಹಿಂದೂ ಐಕ್ಯ ವೇದಿಕೆಯ ರಾಜ್ಯ ಅಧ್ಯಕ್ಷ ಆರ್.ವಿ. ಬಾಬು...

ಇರಾನ್ ಜನರು ಅವರನ್ನು ದ್ವೇಷಿಸುತ್ತಾರೆ ಅಂದುಕೊಂಡಿದ್ದೆ: ಖಮೇನಿ ಅಂತ್ಯಕ್ರಿಯೆಯ ಜನಸಾಗರ ನೋಡಿ ಶಾಕ್ ಆದ ಟ್ರಂಪ್

ಇರಾನ್‌ನ ಮಾಜಿ ಸರ್ವೋಚ್ಚ ನಾಯಕ ಅಯತೊಲ್ಲಾ ಅಲಿ ಖಮೇನಿ ಅವರ ಅಂತ್ಯಕ್ರಿಯೆಯಲ್ಲಿ ಲಕ್ಷಾಂತರ ಜನರು ಭಾಗವಹಿಸಿ ಕಣ್ಣೀರು ಹಾಕುತ್ತಿರುವುದನ್ನು ನೋಡಿ ತಮಗೆ ತೀವ್ರ ಆಘಾತವಾಗಿದೆ ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹೇಳಿದ್ದಾರೆ....

‘ನಿಮ್ಮ ಮೌನ ಯುವಜನರನ್ನು ಕೇವಲ ಕೀಟಗಳಂತೆ ನೋಡುತ್ತೀರಿ ಎಂಬುದಕ್ಕೆ ಒಪ್ಪಿಗೆಯಾಗಿದೆ’: ಮೋದಿಗೆ ಬಹಿರಂಗ ಪತ್ರ ಬರೆದ ಸಿಜೆಪಿ

"ಈ ದೇಶದ ಯುವಜನರನ್ನು ನೀವು ಕೇವಲ ನಿರ್ಲಕ್ಷಿಸಬೇಕಾದ ಕೀಟಗಳಂತೆ ನೋಡುತ್ತಿದ್ದೀರಾ?" ಎಂದು ಪ್ರಶ್ನಿಸಿ ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ಪ್ರಧಾನಿ ನರೇಂದ್ರ ಮೋದಿ ಅವರಿಗೆ ಶನಿವಾರ (ಜುಲೈ 4) ಬಹಿರಂಗ ಪತ್ರ ಬರೆದಿದೆ. ದೇಶದ...

ಮಮತಾ ಬ್ಯಾನರ್ಜಿಗೆ ಬಿಗ್ ಶಾಕ್: ನೇಮಕಗೊಂಡ ತಿಂಗಳಲ್ಲೇ ಟಿಎಂಸಿ ರಾಜ್ಯಾಧ್ಯಕ್ಷೆ ಚಂದ್ರಿಮಾ ಭಟ್ಟಾಚಾರ್ಯ ರಾಜೀನಾಮೆ

ಪಶ್ಚಿಮ ಬಂಗಾಳದ ವಿಧಾನಸಭಾ ಚುನಾವಣೆಯ ಹೀನಾಯ ಸೋಲಿನ ಹಿನ್ನೆಲೆಯಲ್ಲಿ, ಅತ್ಯಂತ ನಿರ್ಣಾಯಕವಾದ ಸಾಂಸ್ಥಿಕ ಜವಾಬ್ದಾರಿಗೆ ನೇಮಕಗೊಂಡ ಕೇವಲ ಒಂದು ತಿಂಗಳ ಒಳಗಾಗಿಯೇ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ರಾಜ್ಯ ಘಟಕದ ಅಧ್ಯಕ್ಷೆ ಚಂದ್ರಿಮಾ...

ಜಿಲ್ಲಾ ನ್ಯಾಯಾಧೀಶೆ ತಬಸ್ಸುಮ್ ಖಾನ್‌ಗೆ ಬಲಪಂಥೀಯರಿಂದ ಬೆದರಿಕೆ : ಗಂಭೀರವಾಗಿ ಪರಿಗಣಿಸಿದ ಹೈಕೋರ್ಟ್

ನರ್ಮದಾಪುರಂ ಜಿಲ್ಲಾ ನ್ಯಾಯಾಧೀಶರಾದ ತಬಸ್ಸುಮ್ ಖಾನ್ ಅವರು ತಮ್ಮ ಕರ್ತವ್ಯ ನಿರ್ವಹಣೆಯ ಕಾರಣಕ್ಕಾಗಿ ಬೆದರಿಕೆ ಮತ್ತು ನಿಂದನೆಗೆ ಒಳಗಾಗಿರುವುದನ್ನು ಗಂಭೀರವಾಗಿ ಪರಿಗಣಿಸಿರುವ ಮಧ್ಯಪ್ರದೇಶ ಹೈಕೋರ್ಟ್, ಅವರಿಗೆ ಸೂಕ್ತ ರಕ್ಷಣೆ ನೀಡುವಂತೆ ಮತ್ತು ಅಪರಾಧಿಗಳನ್ನು ಪತ್ತೆಹಚ್ಚಲು ಕೈಗೊಂಡಿರುವ...

ಎಸ್ಐಆರ್ ಪ್ರಕ್ರಿಯೆಯಲ್ಲಿ ಚುನಾವಣಾ ಆಯೋಗದ ಪಕ್ಷಪಾತದ ಬಗ್ಗೆ ಸಿಜೆಐಗೆ ಪ್ರತಿಪಕ್ಷಗಳಿಂದ ಪತ್ರ: ‘ಪ್ರಜಾಪ್ರಭುತ್ವ ಅಪಾಯದಲ್ಲಿದೆ’ ಎಂದು ಆರೋಪ

ದೇಶದಲ್ಲಿ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಭಾರತೀಯ ಚುನಾವಣಾ ಆಯೋಗವು (ECI) ಪಕ್ಷಪಾತ ಧೋರಣೆ ತಳೆದಿದೆ ಎಂದು ಆರೋಪಿಸಿ, 24 ವಿರೋಧ ಪಕ್ಷಗಳ ನಾಯಕರು ಹಾಗೂ ಒಬ್ಬರು ಸ್ವತಂತ್ರ...

ಬೆಂಗಳೂರು| ಕೆ.ಆರ್. ವೃತ್ತದ ಬಳಿ ಬಿಎಂಟಿಸಿ ಬಸ್‌ಗಳ ನಡುವೆ ಅಪಘಾತ; ಹಲವರಿಗೆ ಗಾಯ

ಇಂದು ಬೆಳಿಗ್ಗೆ ವಿಧಾನಸೌಧದಿಂದ ಸ್ವಲ್ಪ ದೂರದಲ್ಲಿರುವ ಜನನಿಬಿಡ ಕೆ.ಆರ್. ವೃತ್ತ ಜಂಕ್ಷನ್ ಬಳಿ ಎರಡು ಬಿಎಂಟಿಸಿ ಬಸ್‌ಗಳು ಡಿಕ್ಕಿ ಹೊಡೆದ ಪರಿಣಾಮ ಹಲವಾರು ಪ್ರಯಾಣಿಕರು ಗಾಯಗೊಂಡರು. ಡಿಕ್ಕಿಯ ಪರಿಣಾಮ ಬಸ್ಸಿನೊಳಗೆ ಹಲವಾರು ಪ್ರಯಾಣಿಕರು...

ಎಸ್‌ಐಆರ್ ಪ್ರಕ್ರಿಯೆಯಲ್ಲಿ ಲೋಪ ಆರೋಪ; ಕೋಲಾರ-ಮೈಸೂರಿನ ಅಧಿಕಾರಿಗಳಿಗೆ ನೋಟಿಸ್ ಜಾರಿ

ರಾಜ್ಯದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್)ಗೆ ಸಂಬಂಧಿಸಿದಂತೆ, ಕೋಲಾರ ಮತ್ತು ಮೈಸೂರಿನಲ್ಲಿ ನಡೆದ ಕಾರ್ಯವಿಧಾನದಲ್ಲಿ ನಿಯಮ ಉಲ್ಲಂಘನೆ ಆರೋಪ ಕೇಳಿಬಂದೆ. ಕೋಲಾರದಲ್ಲಿ, ಪರಿಷ್ಕರಣಾ ಕಾರ್ಯದ ಸಮಯದಲ್ಲಿ ಕರ್ತವ್ಯ...

ಸೂರತ್ ಧ್ವಂಸ ಕಾರ್ಯಾಚರಣೆ ಸಂಪೂರ್ಣ ‘ಕಾನೂನುಬಾಹಿರ’: 100 ನಿರಾಶ್ರಿತ ಕುಟುಂಬಗಳ ಪುನರ್ವಸತಿಗೆ ಗುಜರಾತ್ ಹೈಕೋರ್ಟ್ ಆದೇಶ

ಅಹಮದಾಬಾದ್: ಗುಜರಾತ್‌ನ ಸೂರತ್‌ನ ನಾಸಿರ್ ನಗರದಲ್ಲಿ ನಡೆದ ಮನೆಗಳ ಧ್ವಂಸ ಕಾರ್ಯಾಚರಣೆಯನ್ನು ತೀವ್ರವಾಗಿ ಖಂಡಿಸಿರುವ ಗುಜರಾತ್ ಹೈಕೋರ್ಟ್, ಇದನ್ನು "ಸಂಪೂರ್ಣ ಕಾನೂನುಬಾಹಿರ" ಎಂದು ಕರೆದಿದೆ. ಮೇ 30 ರಂದು ನಡೆದ ಈ "ಅನಧಿಕೃತ"...