Homeಅಂತರಾಷ್ಟ್ರೀಯಇರಾನ್‌ ಹಂಗಾಮಿ ಸರ್ವೋಚ್ಚ ನಾಯಕರಾಗಿ ಅಯಾತೊಲ್ಲ ಅಲಿರೆಝಾ ಅರಾಫಿ ನೇಮಕ

ಇರಾನ್‌ ಹಂಗಾಮಿ ಸರ್ವೋಚ್ಚ ನಾಯಕರಾಗಿ ಅಯಾತೊಲ್ಲ ಅಲಿರೆಝಾ ಅರಾಫಿ ನೇಮಕ

- Advertisement -
- Advertisement -

ಅಮೆರಿಕ-ಇಸ್ರೇಲ್ ನಡೆಸಿದ ಜಂಟಿ ವೈಮಾನಿಕ ದಾಳಿಯಲ್ಲಿ ಅಯತೊಲ್ಲಾ ಅಲಿ ಖಮೇನಿ ಹತ್ಯೆಯಾದ ಹಿನ್ನೆಲೆ, ಹಿರಿಯ ಧರ್ಮಗುರು ಅಯತೊಲ್ಲಾ ಅಲಿರೆಝಾ ಅರಾಫಿ ಅವರು ಇರಾನ್‌ನ ಹಂಗಾಮಿ ಸರ್ವೋಚ್ಚ ನಾಯಕರಾಗಿ ಆಯ್ಕೆ ಮಾಡಲಾಗಿದೆ ಎಂದು ಸರ್ಕಾರಿ-ಸಂಯೋಜಿತ ISNA ಸುದ್ದಿ ಸಂಸ್ಥೆ ವರದಿ ಮಾಡಿದೆ.

ಖಮೇನಿಯವರ ಹತ್ಯೆಯ ನಂತರ ಇರಾನ್ ತನ್ನ ಸಂವಿಧಾನದ 111ನೇ ವಿಧಿಯನ್ನು ಸಕ್ರಿಯಗೊಳಿಸಿತ್ತು, ಇದು ತುರ್ತು ನಾಯಕತ್ವ ಪ್ರಕ್ರಿಯೆಯನ್ನು ಪ್ರಾರಂಭಿಸಿತ್ತು. ಈ ವಿಧಿಯ ಅಡಿ ಶಾಶ್ವತ ಉತ್ತರಾಧಿಕಾರಿಯನ್ನು ಆಯ್ಕೆ ಮಾಡುವವರೆಗೆ ಮೂವರು ಸದಸ್ಯರ ಮಂಡಳಿಯು ಸುಪ್ರೀಂ ನಾಯಕನ ಅಧಿಕಾರವನ್ನು ವಹಿಸಿಕೊಳ್ಳುತ್ತದೆ.

ಸಂವಿಧಾನದ ನಿಯಮಾವಳಿಗಳ ಅನ್ವಯ, ಗಾರ್ಡಿಯನ್ ಕೌನ್ಸಿಲ್‌ನಿಂದ ಆಯ್ಕೆಯಾದ ನ್ಯಾಯಶಾಸ್ತ್ರಜ್ಞ ಸದಸ್ಯರಾಗಿ ಅಯತೊಲ್ಲಾ ಅಲಿರೆಝಾ ಅರಾಫಿ ಅವರು ಈ ಮಧ್ಯಂತರ ನಾಯಕತ್ವ ಮಂಡಳಿಗೆ ನೇಮಕಗೊಂಡಿದ್ದಾರೆ. ಅವರ ಈ ನೇಮಕಾತಿಯೊಂದಿಗೆ, ಅಧಿಕಾರ ಹಸ್ತಾಂತರದ ಸಮಯದಲ್ಲಿ ಸರ್ವೋಚ್ಚ ನಾಯಕರ ಅಧಿಕಾರವನ್ನು ಚಲಾಯಿಸುವ ಜವಾಬ್ದಾರಿಯನ್ನು ಹೊಂದಿರುವ ಮೂವರು ಸದಸ್ಯರ ಈ ಸಮಿತಿಯು ಈಗ ಪೂರ್ಣಗೊಂಡಂತಾಗಿದೆ.

ಹತ್ಯೆಯಾದ ಖಮೇನಿ ಜಾಗಕ್ಕೆ ಸರ್ವೋಚ್ಚ ನಾಯಕರಾಗಿ ನೇಮಕಗೊಂಡ ಅರಾಫಿ, ಅಧ್ಯಕ್ಷ ಮಸೂದ್ ಪೆಜೆಶ್ಕಿಯನ್ ಮತ್ತು ಮುಖ್ಯ ನ್ಯಾಯಮೂರ್ತಿ ಘೋಲಂ-ಹೊಸೇನ್ ಮೊಹ್ಸೇನಿ-ಎಜೆಈ ಅವರೊಂದಿಗೆ ಜಂಟಿಯಾಗಿ ದೇಶವನ್ನು ಮುನ್ನಡೆಸಲಿದ್ದಾರೆ.

1959ರಲ್ಲಿ ಜನಿಸಿದ 67 ವರ್ಷದ ಅಯತೊಲ್ಲಾ ಅಲಿರೆಝಾ ಅರಾಫಿ ಅವರು, ಇರಾನ್‌ನ ಧಾರ್ಮಿಕ ಶ್ರೇಣೀಕೃತ ವ್ಯವಸ್ಥೆಯಲ್ಲಿ ಅತ್ಯಂತ ಹಿರಿಯ ವ್ಯಕ್ತಿಯಾಗಿದ್ದಾರೆ. ಈ ಮಧ್ಯಂತರ ನಾಯಕತ್ವದ ಪಾತ್ರವನ್ನು ವಹಿಸಿಕೊಳ್ಳುವ ಮೊದಲು, ಅವರು ಏಕಕಾಲದಲ್ಲಿ ಹಲವಾರು ಪ್ರಮುಖ ಹುದ್ದೆಗಳನ್ನು ಹೊಂದಿದ್ದರು. ಅವರು ಇರಾನ್‌ನ ಇಸ್ಲಾಮಿಕ್ ಸೆಮಿನರಿಗಳ (ಧಾರ್ಮಿಕ ಶಿಕ್ಷಣ ಸಂಸ್ಥೆಗಳು) ರಾಷ್ಟ್ರೀಯ ಜಾಲದ ಮುಖ್ಯಸ್ಥರಾಗಿದ್ದಾರೆ, ಗಾರ್ಡಿಯನ್ ಕೌನ್ಸಿಲ್‌ನ ಧಾರ್ಮಿಕ ಸದಸ್ಯರಾಗಿ ಸೇವೆ ಸಲ್ಲಿಸುತ್ತಿದ್ದಾರೆ ಮತ್ತು ಅಸೆಂಬ್ಲಿ ಆಫ್ ಎಕ್ಸ್‌ಪರ್ಟ್ಸ್‌ನ (ತಜ್ಞರ ಮಂಡಳಿ) ಸದಸ್ಯರೂ ಆಗಿದ್ದಾರೆ.

ಶನಿವಾರ ನಡೆದ ದಾಳಿಯಲ್ಲಿ ಇರಾನ್‌ನ ಇಸ್ಲಾಮಿಕ್ ರೆವಲ್ಯೂಷನರಿ ಗಾರ್ಡ್ ಕಾರ್ಪ್ಸ್ (ಐಆರ್‌ಜಿಸಿ) ಮುಖ್ಯಸ್ಥರಾದ ಜನರಲ್ ಮೊಹಮ್ಮದ್ ಪಾಕ್‌ಪೋರ್ ಅವರು ಹತರಾದ ಹಿನ್ನೆಲೆ, ಆ ಸಂಸ್ಥೆಯ ನಾಯಕತ್ವದಲ್ಲಿ ಬದಲಾವಣೆಯನ್ನು ಘೋಷಿಸಲಾಗಿದೆ. ಇರಾನ್ ಸರ್ಕಾರಿ ಸ್ವಾಮ್ಯದ ಮಾಧ್ಯಮಗಳ ಪ್ರಕಾರ, ಅಹ್ಮದ್ ವಾಹಿದಿ ಅವರನ್ನು ಐಆರ್‌ಜಿಸಿಯ ಹೊಸ ಮುಖ್ಯಸ್ಥರನ್ನಾಗಿ ನೇಮಕ ಮಾಡಲಾಗಿದೆ.

ಐಆರ್‌ಜಿಸಿ ಇರಾನ್‌ನ ಅತ್ಯಂತ ಶಕ್ತಿಶಾಲಿ ಸಂಸ್ಥೆಗಳಲ್ಲಿ ಒಂದಾಗಿದೆ. ಇದು ದೇಶದ ಮಿಲಿಟರಿ, ರಾಜಕೀಯ ಮತ್ತು ಆರ್ಥಿಕ ಕ್ಷೇತ್ರಗಳಲ್ಲಿ ಹೆಚ್ಚಿನ ಪ್ರಭಾವವನ್ನು ಹೊಂದಿದೆ. ವಿಶೇಷವೆಂದರೆ, ಇದು ದೇಶದ ಸಾಮಾನ್ಯ ಸಶಸ್ತ್ರ ಪಡೆಗಳಿಂದ ಪ್ರತ್ಯೇಕವಾಗಿ ಕಾರ್ಯನಿರ್ವಹಿಸುತ್ತದೆ.

1989ರಿಂದ ಇರಾನ್ ಅನ್ನು ಆಳುತ್ತಿದ್ದ 86 ವರ್ಷದ ಅಯತೊಲ್ಲಾ ಅಲಿ ಖಮೇನಿ ಅವರು ಶನಿವಾರ ನಡೆದ ಅಮೆರಿಕ-ಇಸ್ರೇಲ್‌ನ ಬೃಹತ್ ಮಿಲಿಟರಿ ದಾಳಿಯಲ್ಲಿ ಹತರಾಗಿದ್ದಾರೆ. ಈ ಕಾರ್ಯಾಚರಣೆಯು ಮಿಲಿಟರಿ ನೆಲೆಗಳು, ಸರ್ಕಾರಿ ಕೇಂದ್ರಗಳು ಮತ್ತು ರಕ್ಷಣಾ ಸಚಿವ ಅಮೀರ್ ನಾಸರ್ಜಾದೆ ಹಾಗೂ ಕಮಾಂಡರ್-ಇನ್-ಚೀಫ್ ಮೊಹಮ್ಮದ್ ಪಾಕ್‌ಪೋರ್ ಅವರಿಗೆ ಸಂಬಂಧಿಸಿದ ಸ್ಥಳಗಳು ಸೇರಿದಂತೆ ಹಿರಿಯ ನಾಯಕತ್ವದ ತಾಣಗಳನ್ನು ಗುರಿಯಾಗಿಸಿಕೊಂಡಿತ್ತು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

14 ವರ್ಷದೊಳಗಿನ ಮಕ್ಕಳ ಧಾರ್ಮಿಕ ಶಿಕ್ಷಣ ನಿಯಂತ್ರಣಕ್ಕೆ ಅರ್ಜಿ: ಕೇಂದ್ರ ಶಿಕ್ಷಣ ಕಾರ್ಯದರ್ಶಿಗೆ ಸುಪ್ರೀಂ ಕೋರ್ಟ್ ನೋಟಿಸ್

14 ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳಿಗೆ ಧಾರ್ಮಿಕ ಶಿಕ್ಷಣ ನೀಡುತ್ತಿರುವ ಸಂಸ್ಥೆಗಳ ನೋಂದಣಿ, ಮೇಲ್ವಿಚಾರಣೆ ಮತ್ತು ನಿಯಂತ್ರಣಕ್ಕೆ ಸಂಬಂಧಿಸಿದಂತೆ ಸಲ್ಲಿಸಲಾದ ಅರ್ಜಿಯನ್ನು ಪರಿಗಣಿಸುವಲ್ಲಿ ವಿಳಂಬವಾಗಿದೆ ಎಂಬ ಆರೋಪದ ಹಿನ್ನೆಲೆಯಲ್ಲಿ ಕೇಂದ್ರ ಶಿಕ್ಷಣ ಕಾರ್ಯದರ್ಶಿ...

ಸರ್ಕಾರದ 100 ದಿನ: ಪ್ರಚಾರದ ಸ್ವರೂಪವನ್ನೇ ಬದಲಿಸಿದ ಸರ್ಕಾರಿ ಜಾಹೀರಾತು

ಸಾಂಪ್ರದಾಯಿಕ ಪತ್ರಿಕಾ ಜಾಹೀರಾತುಗಳು, ಬ್ಯಾನರ್‌ಗಳು ಹಾಗೂ ಸರ್ಕಾರಿ ಕಾರ್ಯಕ್ರಮಗಳ ನಡುವೆ ಪ್ರಸಾರವಾಗುತ್ತಿದ್ದ ಜಾಹೀರಾತುಗಳ ಕಾಲವೀಗ ಬದಲಾಗಿದೆ. ಪ್ರಜೆಗಳ ಮನಸ್ಸನ್ನು ತಲುಪಲು ಅಧಿಕಾರದಲ್ಲಿರುವವರು ಆಯ್ದುಕೊಳ್ಳುವ ಮಾರ್ಗಗಳು ದಿನದಿಂದ ದಿನಕ್ಕೆ ರೂಪಾಂತರಗೊಳ್ಳುತ್ತಿವೆ. ಇದಕ್ಕೆ ಜ್ವಲಂತ ನಿದರ್ಶನ...

‘ಉಮರ್ ಖಾಲಿದ್ ಒಬ್ಬ ದೇಶಭಕ್ತ..’; ಸಾಕ್ಷ್ಯಚಿತ್ರ ಪ್ರದರ್ಶನ ವಿರೋಧಿಸಿದ ಎಬಿವಿಪಿ ವಿರುದ್ಧ ಹರಿಪ್ರಸಾದ್ ವಾಗ್ದಾಳಿ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯುನಿವರ್ಸಿಟಿಯಲ್ಲಿ (ಎನ್‌ಎಲ್‌ಎಸ್‌ಐಯು) ಹೋರಾಟಗಾರ ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನವನ್ನು ವಿರೋಧಿಸಿದ್ದಕ್ಕಾಗಿ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಬಿಕೆ ಹರಿಪ್ರಸಾದ್ ಅವರು ಮಂಗಳವಾರ...

ಜಂತರ್ ಮಂತರ್ ಹಲ್ಲೆ ಪ್ರಕರಣ: ಎಸ್‌ಸಿ/ಎಸ್‌ಟಿ, ಪೋಕ್ಸೊ ಕಾಯ್ದೆಯಡಿ ಬಂಧಿಸಲಾಗಿದ್ದ ಆರೋಪಿ ಸ್ವತಂತ್ರ ಭಾರದ್ವಾಜ್‌ಗೆ ಮಧ್ಯಂತರ ಜಾಮೀನು

ನವದೆಹಲಿ: ಜಂತರ್ ಮಂತರ್‌ನಲ್ಲಿ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ನಡೆಸಿದ ಆರೋಪ ಎದುರಿಸುತ್ತಿರುವ ಸ್ವತಂತ್ರ ಭಾರದ್ವಾಜ್‌ಗೆ ದೆಹಲಿಯ ಪಟಿಯಾಲ ಹೌಸ್ ನ್ಯಾಯಾಲಯ ಮೂರು ವಾರಗಳ ಮಧ್ಯಂತರ ಜಾಮೀನು ಮಂಜೂರು ಮಾಡಿದೆ....

ವಿಡಿಯೋದಲ್ಲಿ ‘ಅಸ್ಸಲಾಮು ಅಲೈಕುಮ್’ – ‘ಇನ್ಶಾ ಅಲ್ಲಾ’ ಎಂದಿದ್ದಕ್ಕೆ ಐಪಿಎಸ್ ಅಧಿಕಾರಿ ವರ್ಗಾವಣೆ

'ಅಸ್ಸಲಾಮು ಅಲೈಕುಮ್' ಮತ್ತು 'ಇನ್ಶಾ ಅಲ್ಲಾ' ಎಂದಿದ್ದಕ್ಕೆ ಬಲಪಂಥೀಯ ಸಂಘಟನೆಯೊಂದು ಪಶ್ಚಿಮ ಬಂಗಾಳದ ಗೃಹ ಕಾರ್ಯದರ್ಶಿಗೆ ದೂರು ನೀಡಿದ ಬೆನ್ನಲ್ಲೇ, ಭಾರತೀಯ ಪೊಲೀಸ್ ಸೇವೆ (ಐಪಿಎಸ್) ಅಧಿಕಾರಿ ಬುಷ್ರಾ ಬಾನೋ ಅವರನ್ನು ವರ್ಗಾವಣೆ...

ಪಾನ್ ಮಸಾಲಾ ಜಾಹೀರಾತು ವಿವಾದ: ಶಾರುಖ್, ಅಜಯ್ , ಶ್ರಾಫ್‌ ಅರ್ಜಿ ವಜಾಗೊಳಿಸಿದ ದೆಹಲಿ ಹೈಕೋರ್ಟ್‌

ವಿಮಲ್ ಇಲಾಯಚಿ ಹೆಸರಿನಲ್ಲಿ ನಿಷೇಧಿತ ಪಾನ್ ಮಸಾಲಾ ಉತ್ಪನ್ನದ ಪರೋಕ್ಷ ಪ್ರಚಾರ ನಡೆಸಿದ ಆರೋಪಕ್ಕೆ ಸಂಬಂಧಿಸಿದಂತೆ ಬಾಲಿವುಡ್ ನಟರಾದ ಶಾರುಖ್ ಖಾನ್, ಅಜಯ್ ದೇವಗನ್ ಹಾಗೂ ಟೈಗರ್ ಶ್ರಾಫ್ ಅವರಿಗೆ ಮಹಾರಾಷ್ಟ್ರ ಆಹಾರ...

“ಏಕರೂಪತೆಯು ಸಮಾನತೆಯಲ್ಲ”: 21 ಎನ್‌ಡಿಎ ಆಡಳಿತದ ರಾಜ್ಯಗಳಲ್ಲಿ ಯುಸಿಸಿ ಜಾರಿ ಕುರಿತ ಅಮಿತ್ ಶಾ ಘೋಷಣೆಗೆ ವಿಪಕ್ಷಗಳ ಕಿಡಿ

2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆಯನ್ನು (ಯುಸಿಸಿ) ಜಾರಿಗೊಳಿಸಲಾಗುವುದು ಎಂದು ಅಮಿತ್ ಶಾ ಘೋಷಿಸಿದ ಬೆನ್ನಲ್ಲೇ, ವಿಪಕ್ಷಗಳು ಬಿಜೆಪಿ ತನ್ನ...

ಉತ್ತರ ಪ್ರದೇಶ| ಫಿರೋಜಾಬಾದ್ ಖಾಕಿ ದೌರ್ಜನ್ಯ; ಪೊಲೀಸರ ಭೂಟು ಕಾಲಿನ ಒದೆತಕ್ಕೆ ಗರ್ಭಿಣಿ ಸಾವು

ಉತ್ತರ ಪ್ರದೇಶದ ಫಿರೋಜಾಬಾದ್‌ನ ಶಿಕೋಹಾಬಾದ್ ಪ್ರದೇಶದಲ್ಲಿ ಕಳ್ಳತನ ಪ್ರಕರಣದ ಶಂಕಿತ ಆರೋಪಿಯೊಬ್ಬನನ್ನು ಬಂಧಿಸಲು ಬಂದಿದ್ದ ಪೊಲೀಸರು ಆತನ ಗರ್ಭಿಣಿ ಹೆಂಡತಿಗೆ ಒದ್ದಿದ್ದರಿಂದ ಆಕೆ ಮೃತಪಟ್ಟಿದ್ದು, ಈ ಘಟನೆಗೆ ಸಂಬಂಧಿಸಿದಂತೆ ಇಬ್ಬರು ಸಬ್‌ಇನ್ಸ್‌ಪೆಕ್ಟರ್‌ಗಳು ಸೇರಿದಂತೆ...

ಕೋಲ್ಕತ್ತಾ | 48 ದಿನಗಳಿಂದ ಮುಸ್ಲಿಂ ಕಾಲೋನಿಗೆ ನೀರು ಬಂದ್ : ಬಿಜೆಪಿ ಸರ್ಕಾರದಿಂದ ದ್ವೇಷ ಸಾಧನೆ ಆರೋಪ

ಉತ್ತರ ಕೋಲ್ಕತ್ತಾದ ಕಾಶಿಪುರದ ಜ್ಯೋತಿನಗರ ಕಾಲೋನಿ ನಿವಾಸಿಗಳು ಕಳೆದ 48 ದಿನಗಳಿಂದ ಕುಡಿಯುವ ನೀರಿಗಾಗಿ ಹಾಹಾಕಾರಪಡುತ್ತಿದ್ದಾರೆ. ಇಲ್ಲಿನ ನೂರಾರು ಕುಟುಂಬಗಳಿಗೆ ನೀರಿನ ಮೂಲವಾಗಿರುವ ಐದು ಸಾರ್ವಜನಿಕ ನಲ್ಲಿಗಳು ಸಂಪೂರ್ಣವಾಗಿ ಒಣಗಿ ಹೋಗಿವೆ. ಇದರಿಂದಾಗಿ...

ಗುರುಗ್ರಾಮ| ಮಹಿಳಾ ಬೈಕರ್‌ಗೆ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಕಾರು ಚಾಲಕನ ಬಂಧನ

ಗುರುಗ್ರಾಮದಲ್ಲಿ ಮಹಿಳಾ ಸ್ಪೋರ್ಟ್ಸ್ ಬೈಕ್ ಸವಾರೆಗೆ ಕಾರಿನಿಂದ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ, ಚಾಲಕ ಕಲ್ಯಾಣ್ ಬೈನ್ಸ್ಲಾನನ್ನು ರಾಜಸ್ಥಾನದ ರಾಜ್‌ಗಢದಲ್ಲಿ ಮಂಗಳವಾರ ಬಂಧಿಸಲಾಗಿದೆ ಎಂದು ಗುರುಗ್ರಾಮ ಕಮಿಷನರ್ ಸಿಬಾಶ್ ಕಬೀರಾಜ್ ತಿಳಿಸಿದ್ದಾರೆ. ಈ...