Homeಅಂತರಾಷ್ಟ್ರೀಯಪಾಕಿಸ್ತಾನ ಸುಪ್ರೀಂಕೋರ್ಟ್‌ನ ಮೊದಲ ಮಹಿಳಾ ನ್ಯಾಯಮೂರ್ತಿಯಾಗಿ ಆಯೆಷಾ ಮಲಿಕ್ ನೇಮಕ

ಪಾಕಿಸ್ತಾನ ಸುಪ್ರೀಂಕೋರ್ಟ್‌ನ ಮೊದಲ ಮಹಿಳಾ ನ್ಯಾಯಮೂರ್ತಿಯಾಗಿ ಆಯೆಷಾ ಮಲಿಕ್ ನೇಮಕ

- Advertisement -
- Advertisement -

ಪಾಕಿಸ್ತಾನದ ಮೊದಲ ಮಹಿಳಾ ಸುಪ್ರೀಂ ಕೋರ್ಟ್ ನ್ಯಾಯಮೂರ್ತಿಯಾಗಿ ಆಯೇಷಾ ಮಲಿಕ್ ಅವರು ಸೋಮವಾರ ಪ್ರಮಾಣ ವಚನ ಸ್ವೀಕರಿಸಿದ್ದಾರೆ. ದೇಶದ ರಾಜಧಾನಿ ಇಸ್ಲಾಮಾಬಾದ್‌ನಲ್ಲಿ ನಡೆದ ಸಮಾರಂಭದಲ್ಲಿ ಪಾಲ್ಗೊಂಡ ಅವರು ಪಾಕಿಸ್ತಾನದ ಅತ್ಯುನ್ನತ ನ್ಯಾಯಾಲಯದಲ್ಲಿ 16 ಪುರುಷ ಸಹೋದ್ಯೋಗಿಗಳೊಂದಿಗೆ ಅವರು ಕೆಲಸ ಮಾಡಲಿದ್ದಾರೆ.

“ಇದು ಪಾಕಿಸ್ತಾನದ ನ್ಯಾಯಾಂಗದ ಇತಿಹಾಸದಲ್ಲಿ ಒಂದು ಮಹತ್ವದ ಹೆಜ್ಜೆಯಾಗಿದೆ” ಎಂದು ವಕೀಲೆ ಮತ್ತು ಮಹಿಳಾ ಹಕ್ಕುಗಳ ಹೋರಾಟಗಾರ್ತಿ ನಿಘತ್ ದಾಡ್ ಎಎಫ್‌ಪಿಗೆ ತಿಳಿಸಿದ್ದಾರೆ. ಆಯೆಷಾ ಮಲಿಕ್ ಅವರು ಹಾರ್ವರ್ಡ್ ವಿಶ್ವವಿದ್ಯಾನಿಲಯದಲ್ಲಿ ಶಿಕ್ಷಣ ಪಡೆದಿದ್ದು, ಕಳೆದ ಎರಡು ದಶಕಗಳಿಂದ ಲಾಹೋರ್‌ನ ಪೂರ್ವ ನಗರದ ಉಚ್ಚ ನ್ಯಾಯಾಲಯದ ನ್ಯಾಯಮೂರ್ತಿಯಾಗಿ ಸೇವೆ ಸಲ್ಲಿಸಿದ್ದಾರೆ.

ಇದನ್ನೂ ಓದಿ: ಫ್ಯಾಕ್ಟ್‌ಚೆಕ್: ಪಾಕಿಸ್ತಾನದ ಸಂಸತ್‌ನಲ್ಲಿ ಮೋದಿ ಮೋದಿ ಎಂಬ ಘೋಷಣೆ ಕೂಗಿದ್ದು ನಿಜವೇ?

ಅವರು ತನ್ನ ಪಂಜಾಬ್ ಪ್ರಾಂತ್ಯದ ಅಧಿಕಾರ ವ್ಯಾಪ್ತಿಯಲ್ಲಿ ಪಿತೃಪ್ರಧಾನ ಕಾನೂನು ನೀತಿಗಳನ್ನು ಹಿಂದಕ್ಕೆ ಪಡೆದ ಕೀರ್ತಿಗೆ ಪಾತ್ರರಾಗಿದ್ದರು. ಕಳೆದ ವರ್ಷವಷ್ಟೇ, ಮಹಿಳೆಯ ಲೈಂಗಿಕ ಅನುಭವದ ಮಟ್ಟವನ್ನು ನಿರ್ಧರಿಸಲು ಬಳಸುವ ವೈದ್ಯಕೀಯವಾಗಿ ಕುಖ್ಯಾತಿ ಪಡೆದ ಪರೀಕ್ಷೆಯನ್ನು ಕಾನೂನುಬಾಹಿರಗೊಳಿಸಿದ್ದರು.

ಪಾಕಿಸ್ತಾನದಲ್ಲಿ ಅತ್ಯಾಚಾರ ಮತ್ತು ಲೈಂಗಿಕ ದೌರ್ಜನ್ಯ ಪ್ರಕರಣಗಳಲ್ಲಿ ನ್ಯಾಯ ಪಡೆಯಲು ಮಹಿಳೆಯರು ಸಾಮಾನ್ಯವಾಗಿ ಹೆಣಗಾಡುತ್ತಾರೆ.

“ಅವರು ನ್ಯಾಯಾಂಗ ವ್ಯವಸ್ಥೆಯಲ್ಲಿನ ಎಲ್ಲಾ ಅಡೆತಡೆಗಳನ್ನು ಮುರಿದಿದ್ದಾರೆ. ಇದು ವ್ಯವಸ್ಥೆಯಲ್ಲಿ ಇತರ ಮಹಿಳೆಯರಿಗೆ ಮುಂದುವರಿಯಲು ಅನುವು ಮಾಡಿಕೊಡುತ್ತದೆ ಮತ್ತು ಭವಿಷ್ಯದಲ್ಲಿ ನ್ಯಾಯಾಂಗದಿಂದ ಹೆಚ್ಚಿನ ಮಹಿಳಾ ಕೇಂದ್ರಿತ ನಿರ್ಧಾರಗಳಿಗೆ ಕಾರಣವಾಗುತ್ತದೆ ಎಂದು ನಾನು ಭಾವಿಸುತ್ತೇನೆ” ಎಂದು ವಕೀಲೆ ಮತ್ತು ಮಹಿಳಾ ಹಕ್ಕುಗಳ ಹೋರಾಟಗಾರ್ತಿ ಖದೀಜಾ ಸಿದ್ದಿಕಿ ಹೇಳಿದ್ದಾರೆ.

ಇದನ್ನೂ ಓದಿ: ಧರ್ಮ ಸಂಸದ್‌ನಲ್ಲಿ ದ್ವೇ‍ಷ ಭಾಷಣ: ಭಾರತದ ಉನ್ನತ ರಾಜತಾಂತ್ರಿಕರಿಗೆ ಸಮನ್ಸ್ ನೀಡಿದ ಪಾಕಿಸ್ತಾನ

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ಮೋದಿಯವರ ಹಲವಾರು ಹೇಳಿಕೆಗಳಿಂದ ಮಾದರಿ ನೀತಿ ಸಂಹಿತೆ ಉಲ್ಲಂಘನೆ: ಸೀತಾರಾಂ ಯೆಚೂರಿ

0
'ದೇಶದ ವಿವಿಧ ಭಾಗಗಳಲ್ಲಿ ತಮ್ಮ ಲೋಕಸಭಾ ಚುನಾವಣಾ ಪ್ರಚಾರದ ವೇಳೆ ಪ್ರಧಾನಿ ನರೇಂದ್ರ ಮೋದಿ ಅವರು ಮಾದರಿ ನೀತಿ ಸಂಹಿತೆ ಉಲ್ಲಂಘಿಸುವ ಹೇಳಿಕೆಗಳನ್ನು ನೀಡಿದ್ದಾರೆ' ಎಂದು ಸಿಪಿಐ(ಎಂ) ಪ್ರಧಾನ ಕಾರ್ಯದರ್ಶಿ ಸೀತಾರಾಂ ಯೆಚೂರಿ...