Homeಮುಖಪುಟಲಕ್ಷದ್ವೀಪಕ್ಕೆ ನ್ಯಾಯ ಸಿಗುವವರೆಗೆ ಹೋರಾಟ ನಿಲ್ಲಿಸುವುದಿಲ್ಲ: ಆಯಿಷಾ ಸುಲ್ತಾನಾ

ಲಕ್ಷದ್ವೀಪಕ್ಕೆ ನ್ಯಾಯ ಸಿಗುವವರೆಗೆ ಹೋರಾಟ ನಿಲ್ಲಿಸುವುದಿಲ್ಲ: ಆಯಿಷಾ ಸುಲ್ತಾನಾ

- Advertisement -
- Advertisement -

ಲಕ್ಷದ್ವೀಪ ಉಳಿಸಿ ಹೋರಾಟದಲ್ಲಿ ತೊಡಗಿರುವ ಚಿತ್ರ ನಿರ್ಮಾಪಕಿ ಆಯಿಷಾ ಸುಲ್ತಾನ ಲಕ್ಷದ್ವೀಪಕ್ಕಾಗಿ ತಮ್ಮ ಹೋರಾಟವನ್ನು ಮುಂದುವರೆಸುವುದಾಗಿ ಹೇಳಿದ್ದಾರೆ. ಶನಿವಾರ ಆಯಿಷಾ ವಿರುದ್ಧ ರಾಷ್ಟ್ರದ್ರೋಹದ ಪ್ರಕರಣವನ್ನು ದಾಖಲಿಸಲಾಗಿತ್ತು. ಆದರೆ ಯಾವುದೇ ಕೇಸ್‌ಗಳಿಗೂ ಹೆದರುವುದಿಲ್ಲ. ಲಕ್ಷದ್ವೀಪಕ್ಕೆ ನ್ಯಾಯ ಸಿಗುವವರೆಗೆ  ನನ್ನ ಹೋರಾಟ ಮುಂದುವರೆಯುತ್ತದೆ ಎಂದು ಕೊಚ್ಚಿ ವಿಮಾನ ನಿಲ್ಧಾಣದಲ್ಲಿ ಆಯಿಷಾ ಮಾಧ್ಯಮಗಳಿಗೆ ತಿಳಿಸಿದ್ದಾರೆ.

ಭಾನುವಾರ ಕಮರತ್ತಿ ಪೊಲೀಸರ ಮುಂದೆ ವಿಚಾರಣೆಗೆ ಹಾಜರಾಗಲು ಆಯಿಷಾ ಲಕ್ಷದ್ವೀಪಕ್ಕೆ ತೆರಳಿದ್ದಾರೆ. ತಮ್ಮ ಜೊತೆ ವಕೀಲರನ್ನು ಸಹ ಕರೆದುಕೊಂಡು ಹೋಗುವುದಾಗಿ ಆಯಿಷಾ ಹೇಳಿದ್ದಾರೆ.

ನ್ಯಾಯ ಸಿಗುವ ಭರವಸೆಯಿದೆ. ದೇಶದ ನ್ಯಾಯಾಂಗ ವ್ಯವಸ್ಥೆಯಲ್ಲಿ ನಂಬಿಕೆಯಿದೆ ಎಂದು ಆಯಿಷಾ ಸುಲ್ತಾನಾ ವಿಶ್ವಾಸವನ್ನು ವ್ಯಕ್ತಪಡಿಸಿದ್ದಾರೆ.

“ನಾನು ಯಾವುದೇ ತಪ್ಪು ಮಾಡಿಲ್ಲ. ನನ್ನ ಒಂದು ಪದದಿಂದ ಇಷ್ಟೆಲ್ಲಾ ರಾದ್ಧಾಂತ ಸಂಭವಿಸಿದೆ. ನಾನು ಯಾವುದೇ ತಪ್ಪು ಮಾಡಿಲ್ಲ ಎಂದು ಸಾಬೀತು ಪಡಿಸುವ ಜವಾಬ್ಧಾರಿಯಿದೆ. ನಾನು ಸಾಬೀತು ಪಡಿಸುತ್ತೇನೆ” ಎಂದು ಆಯಿಷಾ ಮಾಧ್ಯಮಗಳಿಗೆ ತಿಳಿಸಿದ್ದಾರೆ.

ಮಲಯಾಳಂ ಟಿವಿ ಡಿಬೇಟ್ ಒಂದರಲ್ಲಿ ಭಾಗವಹಿಸಿದ ಸಂದರ್ಭದಲ್ಲಿ ಆಯಿಷಾ ಲಕ್ಷದ್ವೀಪ ಲೆಫ್ಟೆನೆಂಟ್ ಗವರ್ನರ್ ವಿರುದ್ಧ ಆಕ್ಷೇಪಕಾರಿ ಪದ ಬಳಕೆ ಮಾಡಿದ್ದಾರೆ ಎಂದು ಲಕ್ಷದ್ವೀಪದ ಕವರತ್ತಿ ಪೊಲೀಸರು ಆಯಿಷಾ ವಿರುದ್ಧ ರಾಷ್ಟ್ರದ್ರೋಹದ ಪ್ರಕರಣವನ್ನು ದಾಖಲಿಸಿಕೊಂಡಿದ್ದರು. ಹಾಗೇ ಜೂನ್ 20 ರಂದು ವಿಚಾರಣೆಗೆ ಹಾಜರಾಗುವಂತೆ ನೋಟಿಸ್ ಕೂಡ ನೀಡಿದ್ದರು. ಆಯಿಷಾ ಆ ಕಾರಣದಿಂದ  ವಿಚಾರಣೆ ಎದುರಿಸಲು ಲಕ್ಷದ್ವೀಪಕ್ಕೆ ತೆರಳಿದ್ದಾರೆ.

ಇದನ್ನೂ ಓದಿ : ಆತಂಕದ ಸುಳಿಯಲ್ಲಿದೆ ಗೇರು ಹಣ್ಣಿನ ಪೆನ್ನಿ ನಂಬಿ ಬದುಕಿದ್ದ ಕುಟುಂಬಗಳ ಬದುಕು!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. ಲಕ್ಷ ದ್ವೀಪದಲ್ಲಿ ಇರುವ ಪಾನ ನಿಷೇಧ ನಿಜವಾಗಿಯೂ genuine ನ್ನೋ ಅಥವಾ ನಮ್ಮ ಗುಜರಾತ್ ನಂತೆ ನಾಮ್ ಕಾ ವಾಸ್ತೆ ನೋ….

    ಯಾರಾದ್ರೂ ಸ್ಪಷ್ಟಿಕರಿಸಿ ?

LEAVE A REPLY

Please enter your comment!
Please enter your name here

- Advertisment -

ಕುಸಿಯುವುದರಲ್ಲಿ ರೂಪಾಯಿ ಮತ್ತು ಬಿಜೆಪಿ ವರ್ಚಸ್ಸಿನ ನಡುವೆ ತೀವ್ರ ಪೈಪೋಟಿಯಿದೆ : ಅಖಿಲೇಶ್ ಯಾದವ್ ವ್ಯಂಗ್ಯ

ಕುಸಿಯುವುದರಲ್ಲಿ ರೂಪಾಯಿ ಮತ್ತು ಬಿಜೆಪಿ ವರ್ಚಸ್ಸಿನ ನಡುವೆ ತೀವ್ರ ಪೈಪೋಟಿ ನಡೆಯುತ್ತಿದೆ ಎಂದು ಸಮಾಜವಾದಿ ಪಕ್ಷದ ಮುಖ್ಯಸ್ಥ ಅಖಿಲೇಶ್ ಯಾದವ್ ವ್ಯಂಗ್ಯವಾಡಿದ್ದಾರೆ. ಬಿಜೆಪಿ ನಾಯಕರು ಹಾಗೂ ಅವರ ಸಹವರ್ತಿಗಳ ಭ್ರಷ್ಟಾಚಾರ ಮತ್ತು ದುರ್ನಡತೆಯ ಪ್ರಕರಣಗಳು...

ಅಂತರ್ಧರ್ಮೀಯ ‘ಲಿವ್-ಇನ್’ ಸಂಬಂಧ ಅಪರಾಧವಲ್ಲ: ಅಲಹಾಬಾದ್ ಹೈಕೋರ್ಟ್

ಅಂತರ್ಧರ್ಮೀಯ ಲಿವ್-ಇನ್ ಸಂಬಂಧವನ್ನು ನಿಷೇಧಿಸಲಾಗಿಲ್ಲ ಅಥವಾ ಯಾವುದೇ ಕಾನೂನಿನ ಅಡಿಯಲ್ಲಿ ಅಪರಾಧವಲ್ಲಎಂದು ತೀರ್ಪು ನೀಡಿರುವ ಅಲಹಾಬಾದ್ ಹೈಕೋರ್ಟ್, ಮಹಿಳೆಯ ಕುಟುಂಬದಿಂದ ಬೆದರಿಕೆ ಎದುರಿಸುತ್ತಿರುವ ದಂಪತಿಗಳಿಗೆ ರಕ್ಷಣೆ ನೀಡಿದೆ. ಸೋನ್‌ಭದ್ರಾದ ಕಾಜಲ್ ಪ್ರಜಾಪತಿ ಮತ್ತು ಅವರ...

‘ವೇತನ ಸಹಿತ ಪಿತೃತ್ವ ರಜೆಯನ್ನು ಕಾನೂನುಬದ್ಧಗೊಳಿಸಬೇಕು’; ರಾಜ್ಯಸಭೆಯಲ್ಲಿ ಎಎಪಿ ಸಂಸದ ರಾಘವ್ ಚಡ್ಡಾ ಒತ್ತಾಯ

ಭಾರತದಲ್ಲಿ ವೇತನ ಸಹಿತ ಪಿತೃತ್ವ ರಜೆಯನ್ನು ಕಾನೂನುಬದ್ಧ ಹಕ್ಕನ್ನಾಗಿ ಮಾಡಲು, ಹಂಚಿಕೆಯ ಆರೈಕೆ ಜವಾಬ್ದಾರಿಗಳನ್ನು ಒತ್ತಿಹೇಳಲು ಕಾನೂನನ್ನು ಜಾರಿಗೆ ತರಬೇಕೆಂದು ಎಎಪಿ ಸಂಸದ ರಾಘವ್ ಚಡ್ಡಾ ಒತ್ತಾಯಿಸಿದ್ದಾರೆ. ರಾಜ್ಯಸಭೆಯಲ್ಲಿ ಮಾತನಾಡಿದ ಅವರು, ತಂದೆ ಉದ್ಯೋಗ...

ಬಿಜೆಪಿ ಇತರ ರಾಜ್ಯಗಳ ಅಕ್ರಮ ಮತದಾರರನ್ನು ಸೇರಿಸುತ್ತಿದೆ : ಮಮತಾ ಬ್ಯಾನರ್ಜಿ ಆರೋಪ

ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಮಂಗಳವಾರ (ಮಾ.31) ಬಿಜೆಪಿ ಬಿಹಾರ, ರಾಜಸ್ಥಾನ, ಹರಿಯಾಣ ಮತ್ತು ಉತ್ತರ ಪ್ರದೇಶದ ಅಕ್ರಮ ಮತದಾರರನ್ನು ರಾಜ್ಯದ ಮತದಾರರ ಪಟ್ಟಿಯಲ್ಲಿ ಸೇರಿಸಲು ಪ್ರಯತ್ನಿಸುತ್ತಿದೆ ಎಂದು ಆರೋಪಿಸಿದರು. ಪಶ್ಚಿಮ...

ಬಿಹಾರ: ವಿವಾಹಿತ ಮಹಿಳೆ ಮೇಲೆ ಸಾಮೂಹಿಕ ಅತ್ಯಾಚಾರಕ್ಕೆ ಯತ್ನ; ಹಲ್ಲೆ ಮಾಡಿ ವಿಡಿಯೋ ಹರಿಬಿಟ್ಟ ದುಷ್ಟರು: ಇಬ್ಬರ ಬಂಧನ 

ಬಿಹಾರದ ನಳಂದ ಜಿಲ್ಲೆಯಲ್ಲಿ ನಾಚಿಕೆಗೇಡಿನ ಮತ್ತು ಆತಂಕಕಾರಿ ಘಟನೆಯೊಂದು ಬೆಳಕಿಗೆ ಬಂದಿದೆ. ನೂರ್ಸರಾಯ್ ಪೊಲೀಸ್ ಠಾಣೆ ವ್ಯಾಪ್ತಿಯ ಹಳ್ಳಿಯೊಂದರಲ್ಲಿ ಮೂವರು ಪುರುಷರು ವಿವಾಹಿತ ಮಹಿಳೆಯ ಮೇಲೆ ಸಾರ್ವಜನಿಕವಾಗಿ ಸಾಮೂಹಿಕ ಅತ್ಯಾಚಾರಕ್ಕೆ ಯತ್ನಿಸಿದ್ದಾರೆ. ದೌರ್ಜನ್ಯ ವಿರೋಧಿಸಿ...

‘ಹಿಂದುತ್ವ ಉಗ್ರವಾದವನ್ನು ಏಕೆ ನಿರ್ಲಕ್ಷಿಸಬೇಕು..?’; ಸಂಸತ್ತಿನಲ್ಲಿ ಪ್ರಶ್ನಿಸಿದ ರುಹುಲ್ಲಾ ಮೆಹದಿ

"ದೇಶದಲ್ಲಿ ಹೆಚ್ಚುತ್ತಿರುವ ಬಲಪಂಥೀಯ ಉಗ್ರವಾದವನ್ನು ನಿರ್ಲಕ್ಷಿಸಿ ಎಡಪಂಥೀಯ ಬೆದರಿಕೆಗಳ ಮೇಲೆ ಮಾತ್ರ ಗಮನಹರಿಸಲಾಗುತ್ತಿದೆ" ಎಂದು ಲೋಕಸಭೆಯಲ್ಲಿ ಜಮ್ಮು-ಕಾಶ್ಮೀರದ ಶ್ರೀನಗರ ಸಂಸದ ಆಗಾ ಸೈಯದ್ ರುಹುಲ್ಲಾ ಮೆಹದಿ ನರೇಂದ್ರ ಮೋದಿ ನೇತೃತ್ವದ ಸರ್ಕಾರದ ಮೇಲೆ...

ವಿರೋಧದ ನಡುವೆಯೂ ಟ್ರಾನ್ಸ್‌ಜೆಂಡರ್ ತಿದ್ದುಪಡಿ ಮಸೂದೆಗೆ ರಾಷ್ಟ್ರಪತಿ ಅಂಕಿತ

ತೀವ್ರ ವಿರೋಧಗಳ ನಡುವೆಯೂ ಟ್ರಾನ್ಸ್‌ಜೆಂಡರ್‌ ವ್ಯಕ್ತಿಗಳ (ಹಕ್ಕುಗಳ ರಕ್ಷಣೆ) ತಿದ್ದುಪಡಿ ಮಸೂದೆಗೆ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಅಂಕಿತ ಹಾಕಿದ್ದಾರೆ ಎಂದು ಕೇಂದ್ರ ಕಾನೂನು ಸಚಿವಾಲಯ ಸೋಮವಾರ (ಮಾ. 30) ಗೆಜೆಟ್ ಅಧಿಸೂಚನೆಯಲ್ಲಿ...

ಮಶಾದ್ ವಿಮಾನ ನಿಲ್ದಾಣದ ಮೇಲೆ ಅಮೆರಿಕ ದಾಳಿ: ದೆಹಲಿಗೆ ತೆರಳುತ್ತಿದ್ದ ನೆರವು ವಿಮಾನಕ್ಕೆ ಡಿಕ್ಕಿ: ಇದು ‘ಯುದ್ಧ ಅಪರಾಧ’ ಎಂದ ಇರಾನ್ 

ಇರಾನ್‌ನ ಮಶಾದ್ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಅಮೆರಿಕದ ವಾಯುದಾಳಿಯ ಸಂದರ್ಭದಲ್ಲಿ ನವದೆಹಲಿಗೆ ಹಾರಲು ನಿಗದಿಯಾಗಿದ್ದ ಮಹಾನ್ ಏರ್ ವಿಮಾನವು ಡಿಕ್ಕಿ ಹೊಡೆದಿದೆ ಎಂದು ವರದಿಯಾಗಿದೆ.  ಈ ವಿಮಾನವು ಔಷಧಿಗಳು ಸೇರಿದಂತೆ ಮಾನವೀಯ ನೆರವು ಸಾಗಣೆಗೆ...

ಪ್ಯಾಲೆಸ್ತೀನಿಯರಿಗೆ ಮರಣದಂಡನೆ ವಿಧಿಸುವ ಕಾನೂನು ಅಂಗೀಕಾರ : ಇಸ್ರೇಲ್ ಕ್ರಮಕ್ಕೆ ಜಾಗತಿಕ ಖಂಡನೆ

ಮಾರಣಾಂತಿಕ ದಾಳಿಗಳ ಅಪರಾಧ ಸಾಬೀತಾದ ಪ್ಯಾಲೆಸ್ತೀನಿಯರಿಗೆ ಮರಣದಂಡನೆಯನ್ನು ಕಡ್ಡಾಯ ಶಿಕ್ಷೆಯನ್ನಾಗಿ ನಿಗದಿಪಡಿಸಿದ ಇಸ್ರೇಲ್‌ನ ಹೊಸ ಕಾನೂನನ್ನು ಮಾನವ ಹಕ್ಕುಗಳ ಸಂಘಟನೆಗಳು, ವಿವಿಧ ರಾಷ್ಟ್ರಗಳ ನಾಯಕರು ಸೇರಿದಂತೆ ಜಾಗತಿಕ ಸಮುಯದಾಯ ತೀವ್ರವಾಗಿ ವಿರೋಧಿಸಿದೆ. ಈ...

ಬರೇಲಿ: ಮುಸ್ಲಿಂ ಯುವಕರ ಮೇಲೆ ಹಲ್ಲೆ, ಹಿಂದುತ್ವ ಘೋಷಣೆಗಳನ್ನು ಪಠಿಸುವಂತೆ ಬಲವಂತ; ಪ್ರಮುಖ ಆರೋಪಿ ಬಂಧನ

ಉತ್ತರ ಪ್ರದೇಶದ ಬರೇಲಿಯಲ್ಲಿ ಮುಸ್ಲಿಂ ಯುವಕನ ಮೇಲೆ ಹಲ್ಲೆ, ಅವಮಾನ ಮತ್ತು ಹಿಂದುತ್ವ ಘೋಷಣೆಗಳನ್ನು ಪಠಿಸುವಂತೆ ಒತ್ತಾಯಿಸಲಾಗಿದೆ ಎಂದು ಆರೋಪಿಸಲಾಗಿದೆ. ಪ್ರಮುಖ ಆರೋಪಿ ರಿಷಭ್ ಠಾಕೂರ್ ನನ್ನು ಪೊಲೀಸರು ಬಂಧಿಸಿದ್ದು, ಮತ್ತಷ್ಟು ಬಂಧನಗಳು ನಡೆಯುವ...