Homeಮುಖಪುಟಡಿ.6 ಬಾಬರಿ ಮಸೀದಿ ಧ್ವಂಸ ದಿನ: ಮಥುರಾದಲ್ಲಿ ನಿಷೇದಾಜ್ಞೆ, ಪೊಲೀಸ್ ಬಿಗಿ ಭದ್ರತೆ

ಡಿ.6 ಬಾಬರಿ ಮಸೀದಿ ಧ್ವಂಸ ದಿನ: ಮಥುರಾದಲ್ಲಿ ನಿಷೇದಾಜ್ಞೆ, ಪೊಲೀಸ್ ಬಿಗಿ ಭದ್ರತೆ

- Advertisement -
- Advertisement -

ಬಾಬರಿ ಮಸೀದಿ ಕೆಡವಿದ ದಿನವಾದ ಡಿಸೆಂಬರ್ 6ರಂದು ಯಾವುದೇ ಅಹಿತಕರ ಘಟನೆ ನಡೆಯದಂತೆ ಮಥುರಾದಲ್ಲಿ ನಿಷೇದಾಜ್ಞೆ ಹೇರಲಾಗಿದ್ದು, ಭದ್ರತೆಯನ್ನು ಬಿಗಿಗೊಳಿಸಲಾಗಿದೆ ಎಂದು ಅಧಿಕಾರಿಗಳು ಶನಿವಾರ ತಿಳಿಸಿದ್ದಾರೆ. ಅಯೋಧ್ಯೆಯಲ್ಲಿ 1992ರ ಡಿಸೆಂಬರ್‌ 6 ರಂದು ಬಾಬರಿ ಮಸೀದಿಯನ್ನು ಧ್ವಂಸಗೊಳಿಸಲಾಗಿತ್ತು.

ಅಖಿಲ ಭಾರತ ಹಿಂದೂ ಮಹಾಸಭಾ, ನಾರಾಯಣಿ ಸೇನೆ, ಶ್ರೀಕೃಷ್ಣ ಜನ್ಮಭೂಮಿ ನಿರ್ಮಾಣ್ ನ್ಯಾಸ್ ಮತ್ತು ಶ್ರೀಕೃಷ್ಣ ಮುಕ್ತಿ ದಳ ಎಂಬ ನಾಲ್ಕು ಬಲಪಂಥೀಯ ಗುಂಪುಗಳು ಈ ಹಿಂದೆ ಇಲ್ಲಿ ಕಾರ್ಯಕ್ರಮಗಳನ್ನು ನಡೆಸಲು ಅನುಮತಿ ಕೋರಿದ್ದವು. ಅಲ್ಲದೇ ಅಖಿಲ ಭಾರತ ಹಿಂದೂ ಮಹಾಸಭಾವು ದೇವರ ನಿಜವಾದ ಜನ್ಮಸ್ಥಳವು ಮಥುರಾ ದೇವಾಲಯದ ಬಳಿಯಿರುವ ಮಸೀದಿಯಲ್ಲಿದೆ. ಅಲ್ಲಿ ಕೃಷ್ಣನ ವಿಗ್ರಹವನ್ನು ಸ್ಥಾಪಿಸಲು ಅನುಮತಿ ನೀಡಬೇಕು ಎಂದು ಕೋರಿತ್ತು.

ಇದನ್ನೂ ಓದಿ: ಬಾಬರಿ ಮಸೀದಿ ಒಡೆದ ಆರೋಪಿಗಳನ್ನು ಖುಲಾಸೆಗೊಳಿಸಿ ತೀರ್ಪು ನೀಡಿದ್ದ ನ್ಯಾಯಾಧೀಶ ಯುಪಿ ಉಪಲೋಕಾಯುಕ್ತರಾಗಿ ನೇಮಕ

ಆದರೆ, ಶಾಂತಿ ಕದಡುವ ಯಾವುದೇ ಕಾರ್ಯಕ್ರಮಕ್ಕೂ ಅನುಮತಿ ನೀಡುವ ಪ್ರಶ್ನೆಯೇ ಉದ್ಭವಿಸುವುದಿಲ್ಲ ಎಂದು ಜಿಲ್ಲಾ ಮ್ಯಾಜಿಸ್ಟ್ರೇಟ್ ನವನೀತ್ ಸಿಂಗ್ ಚಾಹಲ್ ಬಲಪಂಥೀಯ ಗುಂಪುಗಳ ಮನವಿಯನ್ನು ತಿರಸ್ಕರಿಸಿದ್ದರು.

ಶಾಹಿ ಈದ್ಗಾದಲ್ಲಿ ಮಹಾ ಜಲಾಭಿಷೇಕ ನಂತರ ಶುದ್ಧೀಕರಣಕ್ಕಾಗಿ ವಿಗ್ರಹವನ್ನು ಪ್ರತಿಷ್ಠಾಪಿಸುವುದಾಗಿ ಒಂದು ಗುಂಪಿನವರು ಹೇಳಿದ್ದರು. ಹೀಗಾಗಿ ಇವುಗಳನ್ನು ಗಮನದಲ್ಲಿಟ್ಟುಕೊಂಡು ಭದ್ರತಾ ಉದ್ದೇಶಗಳಿಂದ ಮಥುರಾವನ್ನು ಮೂರು ವಲಯಗಳಾಗಿ ವಿಂಗಡಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಕೇಶವ ದೇವ್ ದೇವಸ್ಥಾನ ಮತ್ತು ಶಾಹಿ ಈದ್ಗಾ ಪ್ರದೇಶವನ್ನು ಕೆಂಪು ವಲಯ ಎಂದು ಗುರುತಿಸಲಾಗಿದ್ದು ಅಲ್ಲಿ ಅತ್ಯಧಿಕ ಭದ್ರತಾ ಸಿಬ್ಬಂದಿಯನ್ನು ನಿಯೋಜಿಸಲಾಗಿದೆ.

“ಮಥುರಾದ ಪ್ರತಿ ಪ್ರವೇಶ ದ್ವಾರಗಳಲ್ಲಿಯೂ ಸಾಕಷ್ಟು ಭದ್ರತಾ ಪಡೆಗಳನ್ನು ನಿಯೋಜಿಸಲಾಗಿದೆ. ಮಥುರಾದಲ್ಲಿ ಸಿಆರ್‌ಪಿಸಿಯ ಸೆಕ್ಷನ್ 144 ರ ಅಡಿಯಲ್ಲಿ ನಿಷೇಧಾಜ್ಞೆ ಈಗಾಗಲೇ ಜಾರಿಯಲ್ಲಿವೆ. ಒಂದು ಪ್ರದೇಶದಲ್ಲಿ ನಾಲ್ಕು ಅಥವಾ ಅದಕ್ಕಿಂತ ಹೆಚ್ಚು ಜನರು ಸೇರುವುದನ್ನು ನಿಷೇಧಿಸಲಾಗಿದೆ” ಎಂದು ಹಿರಿಯ ಪೊಲೀಸ್ ವರಿಷ್ಠಾಧಿಕಾರಿ ಗೌರವ್ ಗ್ರೋವರ್ ಹೇಳಿದ್ದಾರೆ.


ಇದನ್ನೂ ಓದಿ: ಬಾಬರಿ ಮಸೀದಿ ಧ್ವಂಸದ ಕತೆ ಹೇಳುವ ‘ರಾಮ್‌ ಕೆ ನಾಮ್’ ಸಾಕ್ಷ್ಯ ಚಿತ್ರ ಪ್ರದರ್ಶನ ಮಾಡಲಿರುವ ಜೆಎನ್‌ಯು ವಿದ್ಯಾರ್ಥಿ ಒಕ್ಕೂಟ

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ಪ್ರಜ್ವಲ್ ರೇವಣ್ಣ ಲೈಂಗಿಕ ದೌರ್ಜನ್ಯ ಪ್ರಕರಣ: ಅಪಹರಣಕ್ಕೊಳಗಾಗಿದ್ದ ಸಂತ್ರಸ್ತೆಯ ರಕ್ಷಣೆ

0
ಅಪಹರಣಕ್ಕೊಳಗಾಗಿದ್ದ ಪ್ರಜ್ವಲ್ ರೇವಣ್ಣ ಲೈಂಗಿಕ ದೌರ್ಜನ್ಯ ಪ್ರಕರಣದ ಸಂತ್ರಸ್ತೆ, ಶಾಸಕ ಹೆಚ್‌.ಡಿ ರೇವಣ್ಣ ಅವರ ಮನೆ ಕೆಲಸದ ಮಹಿಳೆಯನ್ನು ವಿಶೇಷ ತನಿಖಾ ತಂಡ (ಎಸ್‌ಐಟಿ)ದ ಅಧಿಕಾರಿಗಳು ಇಂದು (ಮೇ 4) ರಕ್ಷಣೆ ಮಾಡಿದ್ದಾರೆ. ಪ್ರಜ್ವಲ್...