Homeಮುಖಪುಟಅಯೋಧ್ಯೆ ತೀರ್ಪು : ’ವಿವಾದಿತ ಜಾಗ ಮಂದಿರ ನಿರ್ಮಾಣಕ್ಕೆ - ಮಸೀದಿಗೆ ಬೇರೆಡೆ ಐದು...

ಅಯೋಧ್ಯೆ ತೀರ್ಪು : ’ವಿವಾದಿತ ಜಾಗ ಮಂದಿರ ನಿರ್ಮಾಣಕ್ಕೆ – ಮಸೀದಿಗೆ ಬೇರೆಡೆ ಐದು ಎಕರೆ ಜಮೀನು’

- Advertisement -
- Advertisement -

ಅಯೋಧ್ಯೆ ವಿವಾದ ಪ್ರಕರಣದಲ್ಲಿ ಸುಪ್ರೀಕೋರ್ಟ್‌ ಐತಿಹಾಸಿಕ ತೀರ್ಪು ನೀಡಿದೆ. ಸುಪ್ರೀಂಕೋರ್ಟ್‌‌ನ ಐದು ನ್ಯಾಯಮೂರ್ತಿಗಳ ಪಂಚಪೀಠ ಸರ್ವಾನುಮತದ ತೀರ್ಪು ಪ್ರಕಟಿಸಿದೆ. ಅಯೋಧ್ಯೆ ವಿವಾದಿತ ಸ್ಥಳವನ್ನು ಮಂದಿರ ನಿರ್ಮಾಣಕ್ಕೆ ಬಿಟ್ಟು ಕೊಡಬೇಕು, ಮತ್ತು ಇದಕ್ಕೆ ಪ್ರತಿಯಾಗಿ ಮಸೀದಿಯನ್ನು ನಿರ್ಮಿಸಲು ಸುನ್ನಿ ವಕ್ಫ್ ಮಂಡಳಿಗೆ ಅಯೋಧ್ಯದಲ್ಲೆ ಐದು ಎಕರೆ ಸೂಕ್ತ ಜಮೀನನ್ನು ಬೇರೆ ಕಡೆ ನೀಡಬೇಕು ಎಂದು ತೀರ್ಪಿನಲ್ಲಿ ಉಲ್ಲೇಖಿಸಲಾಗಿದೆ.

ರಾಮಮಂದಿರ ನಿರ್ಮಾಣಕ್ಕೆ ಕೇಂದ್ರ ಸರ್ಕಾರವು ಮೂರು ತಿಂಗಳ ಒಳಗೆ ಟ್ರಸ್ಟ್ ರೂಪಿಸಬೇಕು ಎಂಬ ಸ್ಪಷ್ಟ ನಿರ್ದೇಶನವನ್ನೂ ಸುಪ್ರೀಂ ಕೋರ್ಟ್ ನೀಡಿದೆ.

2010ರಲ್ಲಿ ಇದೇ ವಿವಾದದಲ್ಲಿ ಅಲಹಾಬಾದ್ ಹೈಕೋರ್ಟ್ ನೀಡಿದ್ದ ತೀರ್ಪನ್ನು ಸರ್ವೋಚ್ಛ ನ್ಯಾಯಾಲಯವು  ತಳ್ಳಿಹಾಕಿದೆ. ರಾಮ್ ಲಲ್ಲಾ, ನಿರ್ಮೋಹಿ ಅಖಾಡಾ ಮತ್ತು ಸುನ್ನಿ ವಕ್ಫ್ ಬೋರ್ಡ್ ಗೆ ವಿವಾದಿತ ಜಾಗವನ್ನು ಅಲಹಾಬಾದ್ ಹೈಕೋರ್ಟ್ ಸಮನಾಗಿ ಹಂಚಿಕೆ ಮಾಡಿತ್ತು.

ಮುಖ್ಯ ನ್ಯಾಯಮೂರ್ತಿ ರಂಜನ್ ಗೊಗಯ್ ನೇತೃತ್ವ ವಹಿಸಿದ್ದ ಪೀಠದಲ್ಲಿ ಎಸ್.ಎ.ಬೊಬ್ಡೆ, ಧನಂಜಯ್ ಚಂದ್ರಚೂಡ್, ಎಸ್.ಅಬ್ದುಲ್ ನಜೀರ್ ಮತ್ತು ಅಶೋಕ್ ಭೂಷಣ್ ನ್ಯಾಯಮೂರ್ತಿಗಳಾಗಿದ್ದರು.

 

ಹೆಚ್ಚಿನ ಅಪಡೇಟ್ ಪಡೆಯಲು ನಾನುಗೌರಿ.ಕಾಂ ವೀಕ್ಷಿಸುತ್ತಿರಿ…..

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ಪಶ್ಚಿಮ ಬಂಗಾಳದ ಹೂಗ್ಲಿಯಲ್ಲಿ ಬಾಂಬ್ ಸ್ಫೋಟ: ಬಾಲಕ ಮೃತ್ಯು, ಇಬ್ಬರಿಗೆ ಗಂಭೀರ ಗಾಯ

0
ಪಶ್ಚಿಮ ಬಂಗಾಳದ ಹೂಗ್ಲಿ ಜಿಲ್ಲೆಯಲ್ಲಿ ಕಚ್ಚಾ ಬಾಂಬ್ ಸ್ಫೋಟ ಸಂಭವಿಸಿ ಏಳು ವರ್ಷದ ಬಾಲಕ ಸಾವನ್ನಪ್ಪಿದ್ದು, ಇತರ ಇಬ್ಬರು ಅಪ್ರಾಪ್ತ ಬಾಲಕರಿಗೂ ತೀವ್ರ ಗಾಯಗಳಾಗಿದೆ. ಮೃತ ಬಾಲಕನನ್ನು ರಾಜ್ ಬಿಸ್ವಾಸ್ ಎಂದು ಗುರುತಿಸಲಾಗಿದೆ. ಘಟನೆಯಲ್ಲಿ...