Homeಮುಖಪುಟಅಯೋಧ್ಯೆ: ಮಸೀದಿಗಳ ಮೇಲೆ ಆಕ್ಷೇಪಾರ್ಹ ಪೋಸ್ಟರ್‌ ಅಂಟಿಸಿ ಗಲಭೆಗೆ ಪ್ರಚೋದನೆ; 7 ದುಷ್ಕರ್ಮಿಗಳ ಬಂಧನ

ಅಯೋಧ್ಯೆ: ಮಸೀದಿಗಳ ಮೇಲೆ ಆಕ್ಷೇಪಾರ್ಹ ಪೋಸ್ಟರ್‌ ಅಂಟಿಸಿ ಗಲಭೆಗೆ ಪ್ರಚೋದನೆ; 7 ದುಷ್ಕರ್ಮಿಗಳ ಬಂಧನ

- Advertisement -
- Advertisement -

ಅಯೋಧ್ಯೆಯ ಹಲವು ಮಸೀದಿಗಳ ಮೇಲೆ ಆಕ್ಷೇಪಾರ್ಹ ಪೋಸ್ಟರ್‌ ಹಾಕಿ ಹಾಗೂ ವಸ್ತುಗಳನ್ನು ಎಸೆದು ನಗರದ ಶಾಂತಿಯನ್ನು ಕದಡಲು ಯತ್ನಿಸಿದ ಆರೋಪದ ಮೇಲೆ ಏಳು ಜನರನ್ನು ಅಯೋಧ್ಯೆ ಪೊಲೀಸರು ಗುರುವಾರ ಬಂಧಿಸಿದ್ದಾರೆ.

ಬಂಧಿತ ಆರೋಪಿಗಳನ್ನು ಮಹೇಶ್ ಕುಮಾರ್ ಮಿಶ್ರಾ, ಪ್ರತ್ಯೂಷ್ ಶ್ರೀವಾಸ್ತವ, ನಿತಿನ್ ಕುಮಾರ್, ದೀಪಕ್ ಕುಮಾರ್ ಗೌರ್ ಅಲಿಯಾಸ್ ಗುಂಜನ್, ಬ್ರಿಜೇಶ್ ಪಾಂಡೆ, ಶತ್ರುಘ್ನ ಪ್ರಜಾಪತಿ ಮತ್ತು ವಿಮಲ್ ಪಾಂಡೆ ಎಂದು ಗುರುತಿಸಲಾಗಿದೆ. ಇವರೆಲ್ಲರೂ ಅಯೋಧ್ಯೆಯ ನಿವಾಸಿಗಳಾಗಿದ್ದಾರೆ.

ಹಿರಿಯ ಪೊಲೀಸ್ ವರಿಷ್ಠಾಧಿಕಾರಿ (ಅಯೋಧ್ಯೆ) ಶೈಲೇಶ್ ಕುಮಾರ್ ಪಾಂಡೆ ವಿವರಣೆ ನೀಡಿದ್ದು, “ಘಟನೆಯನ್ನು 11 ಜನರು ನಡೆಸಿದ್ದು, ಅದರಲ್ಲಿ ಏಳು ಮಂದಿಯನ್ನು ಬಂಧಿಸಲಾಗಿದೆ. ನಾಲ್ವರು ತಲೆಮರೆಸಿಕೊಂಡಿದ್ದಾರೆ” ಎಂದು ತಿಳಿಸಿದ್ದಾರೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಮಹೇಶ್ ನೇತೃತ್ವದಲ್ಲಿ ನಾಲ್ಕು ದ್ವಿಚಕ್ರವಾಹನಗಳಲ್ಲಿ ಬಂದ ಒಟ್ಟು ಎಂಟು ಮಂದಿ ಮಸೀದಿಗಳ ಹೊರಗೆ ಆಕ್ಷೇಪಾರ್ಹ ಪೋಸ್ಟರ್‌ಗಳು ಮತ್ತು ವಸ್ತುಗಳನ್ನು ಹಾಕಿದ್ದಾರೆ. ಘಟನೆಯನ್ನು ಗಂಭೀರವಾಗಿ ತೆಗೆದುಕೊಂಡ ಪೊಲೀಸರು ತಕ್ಷಣ ಕಾರ್ಯಪ್ರವೃತ್ತರಾಗಿ ಆರೋಪಿಗಳಿಂದ ಹಲವು ವಸ್ತುಗಳು, ಮೊಬೈಲ್ ಫೋನ್ ಮತ್ತು ವಾಹನಗಳನ್ನು ವಶಪಡಿಸಿಕೊಂಡಿದ್ದಾರೆ.

“ನಾವು ಏಳು ಜನರನ್ನು ಬಂಧಿಸಿದ್ದೇವೆ, ನಾಲ್ವರು ತಲೆಮರೆಸಿಕೊಂಡಿದ್ದಾರೆ. ಶೀಘ್ರದಲ್ಲೇ ಅವರನ್ನು ಬಂಧಿಸುತ್ತೇವೆ. ದರೋಡೆಕೋರರ ಕಾಯಿದೆ ಮತ್ತು ಎನ್‌ಎಸ್‌ಎ ಅಡಿಯಲ್ಲಿ ಅವರ ವಿರುದ್ಧವೂ ಕ್ರಮ ಕೈಗೊಳ್ಳಲಾಗುವುದು” ಎಂದು ಎಸ್‌ಎಸ್‌ಪಿ ತಿಳಿಸಿದ್ದಾರೆ.

ದೆಹಲಿಯ ಜಹಾಂಗೀರ್ಪುರಿಯಲ್ಲಿ ಇತ್ತೀಚೆಗೆ ನಡೆದ ಘಟನೆಗೆ ವಿರೋಧವಾಗಿ ಪ್ರಮುಖ ಸಂಚುಕೋರ ಮಹೇಶ್ ಕುಮಾರ್ ಮಿಶ್ರಾ ಮತ್ತು ಆತನ ಇತರ ಸಹಚರರೊಂದಿಗೆ ಬ್ರಿಜೇಶ್ ಪಾಂಡೆ ಮನೆಯಲ್ಲಿ ಸಂಚು ರೂಪಿಸಲಾಗಿದೆ ಎಂದು ತನಿಖೆಯ ವೇಳೆ ತಿಳಿದುಬಂದಿದೆ.

ಬುಧವಾರ ರಾತ್ರಿ ಆರೋಪಿಗಳು ಮೊದಲು ಬೆನ್ನಿಗಂಜ್ ತಿರಾಹಾಕ್ಕೆ ಹೋಗಿದ್ದರು. ಅಲ್ಲಿ ಪೊಲೀಸ್ ರೆಸ್ಪಾನ್ಸ್ ವೆಹಿಕಲ್ (ಪಿಆರ್‌ವಿ) ನೋಡಿದರು. ಹೀಗಾಗಿ ಬೆಣಿಗಂಜ್ ಮಸೀದಿಯ ಬಳಿ ದುಷ್ಕೃತ್ಯ ನಡೆಸಲು ಸಾಧ್ಯವಾಗಲಿಲ್ಲ. ಆನಂತರ ಇತರ ಮಸೀದಿಗಳಿಗೆ ತೆರಳುತ್ತಾರೆ. ದುಷ್ಕರ್ಮಿಗಳು ಅಯೋಧ್ಯೆಯ ಮಸೀದಿ ಕಾಶ್ಮೀರಿ ಮೊಹಲ್ಲಾ, ತತ್ಶಾ ಮಸೀದಿ, ಘೋಸಿಯಾನ ರಾಮನಗರ ಮಸೀದಿ, ಈದ್ಗಾ ಸಿವಿಲ್ ಲೈನ್ ಮಸೀದಿ ಮತ್ತು ದರ್ಗಾ ಜೈಲಿನ ಹಿಂಭಾಗದಲ್ಲಿರುವ ಗುಲಾಬ್ ಶಾ ದರ್ಗಾದಲ್ಲಿ ಆಕ್ಷೇಪಾರ್ಹ ಪೋಸ್ಟರ್‌ಗಳು ಮತ್ತು ವಸ್ತುಗಳನ್ನು ಹಾಕಿದ್ದಾರೆ.

ಇದನ್ನೂ ಓದಿರಿ: ಗುಜರಾತ್ ಶಾಸಕ, ದಲಿತ ನಾಯಕ ಜಿಗ್ನೇಶ್ ಮೇವಾನಿಗೆ ಜಾಮೀನು ಮಂಜೂರು

ಬಂಧಿತ ಏಳು ಮಂದಿಯ ಪೈಕಿ ಮೂವರು ಆರೋಪಿಗಳು ಈ ಹಿಂದೆ ಹಲವು ಕೃತ್ಯಗಳಲ್ಲಿ ಭಾಗಿಯಾಗಿರುವ ಇತಿಹಾಸವನ್ನು ಹೊಂದಿದ್ದಾರೆ.

“ಆರೋಪಿ ಮಹೇಶ್ ವಿರುದ್ಧ ಕೊತ್ವಾಲಿ ಪೊಲೀಸ್ ಠಾಣೆಯಲ್ಲಿ ಅಯೋಧ್ಯೆಯಲ್ಲಿ ನಾಲ್ಕು ಪ್ರಕರಣಗಳು ದಾಖಲಾಗಿವೆ. ಇದಲ್ಲದೆ ಆರೋಪಿಗಳಾದ ನಿತಿನ್ ಮತ್ತು ವಿಮಲ್ ಅವರ ವಿರುದ್ಧವೂ ಪ್ರಕರಣಗಳು ದಾಖಲಾಗಿವೆ” ಎಂದು ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಎಲ್ಲಾ ಏಳು ಆರೋಪಿಗಳ ವಿರುದ್ಧ ಐಪಿಸಿ ಸೆಕ್ಷನ್ 295 (ಯಾವುದೇ ವರ್ಗದ ಧರ್ಮವನ್ನು ಅವಮಾನಿಸುವ ಉದ್ದೇಶದಿಂದ ಪೂಜಾ ಸ್ಥಳಗಳನ್ನು ಅಪವಿತ್ರಗೊಳಿಸುವುದು), ಮತ್ತು 295-ಎ (ಯಾವುದೇ ವರ್ಗದ ಧಾರ್ಮಿಕ ಭಾವನೆಗಳನ್ನು ಆಕ್ರೋಶಗೊಳಿಸುವ ಉದ್ದೇಶದಿಂದ ಉದ್ದೇಶಪೂರ್ವಕ ಮತ್ತು ದುರುದ್ದೇಶಪೂರಿತ ಕೃತ್ಯಗಳು) ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...