Homeಮುಖಪುಟಅಯೋಧ್ಯೆ ಕಾರ್ಯಕ್ರಮ: ಉಮಾ ಭಾರತಿಗೆ ಆಹ್ವಾನ - ಎಲ್.ಕೆ.ಅಡ್ವಾಣಿ, ಎಂ.ಎಂ.ಜೋಶಿಗಿಲ್ಲ...

ಅಯೋಧ್ಯೆ ಕಾರ್ಯಕ್ರಮ: ಉಮಾ ಭಾರತಿಗೆ ಆಹ್ವಾನ – ಎಲ್.ಕೆ.ಅಡ್ವಾಣಿ, ಎಂ.ಎಂ.ಜೋಶಿಗಿಲ್ಲ…

- Advertisement -
- Advertisement -

ಆಗಸ್ಟ್ 5 ರಂದು ಉತ್ತರ ಪ್ರದೇಶದ ಅಯೋಧ್ಯೆಯಲ್ಲಿ ರಾಮ ದೇವಾಲಯ ನಿರ್ಮಾಣದ ಭೂಮಿ ಪೂಜೆ ಸಮಾರಂಭಕ್ಕೆ ಬಾಬ್ರಿ ಮಸೀದಿ ಪ್ರಕರಣದ ಆರೋಪಿಗಳಲ್ಲೊಬ್ಬರಾದ ಕೇಂದ್ರ ಸಚಿವೆ ಉಮಾ ಭಾರತಿ ಮತ್ತು ಉತ್ತರ ಪ್ರದೇಶದ ಮಾಜಿ ಮುಖ್ಯಮಂತ್ರಿ ಕಲ್ಯಾಣ್ ಸಿಂಗ್ ಅವರನ್ನು ಆಹ್ವಾನಿಸಲಾಗಿದೆ.

ಆದರೆ ಬಾಬರಿ ಮಸೀದಿಯ ಧ್ವಂಸಕ್ಕೆ ಸಂಬಂಧಿಸಿದ ಪ್ರಶ್ನೆಗಳಿಗೆ ಉತ್ತರಿಸಲು ಕಳೆದ ವಾರ ಲಕ್ನೋದ ವಿಶೇಷ ಸಿಬಿಐ ನ್ಯಾಯಾಲಯಕ್ಕೆ ಹಾಜರಾದ ಹಿರಿಯ ಬಿಜೆಪಿ ಮುಖಂಡ ಮತ್ತು ಈ ಪ್ರಕರಣದ ಆರೋಪಿಗಳಲ್ಲಿ ಒಬ್ಬರಾದ ಎಲ್.ಕೆ.ಅಡ್ವಾಣಿಗೆ ಆಹ್ವಾನ ನೀಡಿಲ್ಲ ಎಂದು ಎನ್‌ಡಿಟಿವಿ ವರದಿ ಮಾಡಿದೆ.

ನಾಲ್ಕುವರೆ ಗಂಟೆಗಳ ವಿಚಾರಣೆಯ ಅವಧಿಯಲ್ಲಿ 1000 ಕ್ಕೂ ಹೆಚ್ಚು ಪ್ರಶ್ನೆಗಳನ್ನು ಅಡ್ವಾಣಿಯವರಿಗೆ ಕೇಳಲಾಗಿದ್ದು, ಅವರ ವಿರುದ್ಧದ ಎಲ್ಲಾ ಆರೋಪಗಳನ್ನು ನಿರಾಕರಿಸಿದ್ದಾರೆ ಎಂದು ಅವರ ವಕೀಲರು ತಿಳಿಸಿದ್ದಾರೆ.

ಸಿಬಿಐ ನ್ಯಾಯಾಲಯದ ಮುಂದೆ ತಮ್ಮ ಹೇಳಿಕೆಯನ್ನು ದಾಖಲಿಸಿದ ಬಿಜೆಪಿಯ ಮತ್ತೊಬ್ಬ ಹಿರಿಯ ಮುಖಂಡ ಮುರಳಿ ಮನೋಹರ್ ಜೋಶಿ ಅವರಿಗೂ ಭೂಮಿಪೂಜೆ ಕಾರ್ಯಕ್ರಮಕ್ಕೆ ಆಹ್ವಾನ ನೀಡಿಲ್ಲ ಎಂದು ತಿಳಿದುಬಂದಿದೆ.


ಇದನ್ನೂ ಓದಿ: ರಾಮ ಮಂದಿರದ ’ಭೂಮಿ ಪೂಜೆ’ಗೆ ಬಾಬರಿ ಮಸೀದಿ ಧ್ವಂಸಗೊಳಿಸಿದವರನ್ನು ಆಹ್ವಾನಿಸಿ: ದುಬೆ

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

‘ಇವಿಎಂ’ ತಿರುಚಲು ಶಿವಸೇನಾ ನಾಯಕನಿಗೆ 2.5 ಕೋಟಿ ರೂ.ಬೇಡಿಕೆ ಇಟ್ಟ ಯೋಧ!

0
ವಿದ್ಯುನ್ಮಾನ ಮತಯಂತ್ರಗಳನ್ನು(ಇವಿಎಂ) ತಿರುಚಲು ಶಿವಸೇನಾ ಉದ್ಧವ್‌ ಬಣದ ನಾಯಕ ಅಂಬಾದಾಸ್ ದನ್ವೆ ಅವರಿಂದ 2.5 ಕೋಟಿ ರೂಪಾಯಿಗೆ ಬೇಡಿಕೆಯಿಟ್ಟಿದ್ದಕ್ಕಾಗಿ ಮಹಾರಾಷ್ಟ್ರ ಪೊಲೀಸರು ಛತ್ರಪತಿ ಸಂಭಾಜಿನಗರದಲ್ಲಿ ಸೇನಾ ಯೋಧನೋರ್ವನನ್ನು ಬಂಧಿಸಿದ್ದಾರೆ. ಮಾರುತಿ ಧಕ್ನೆ(42) ವಿರುದ್ಧ ದೂರು...