`ಅಯೋಧ್ಯೆ ತೀರ್ಪು, ಯಾರದ್ದೋ ಸೋಲು-ಗೆಲುವು ಅಲ್ಲ’: ನರೇಂದ್ರ ಮೋದಿ

ಅಯೋಧ್ಯೆ ವಿವಾದಕ್ಕೆ ಸಂಬಂಧಪಟ್ಟಂತೆ ಸುಪ್ರೀಂ ಕೋರ್ಟ್ ನೀಡಿರುವ ತೀರ್ಪನ್ನು ಸ್ವಾಗತಿಸಿರುವ ಪ್ರಧಾನಿ ನರೇಂದ್ರ ಮೋದಿಯವರು ಟ್ವೀಟ್ ಮಾಡಿ “ಸುಪ್ರೀಂ ಕೋರ್ಟಿನ ಈ ತೀರ್ಪು ಗಮನಾರ್ಹವಾದುದು, ಏಕೆಂದರೆ; ನ್ಯಾಯಾಂಗದ ಸರಿಯಾದ ಪ್ರಕ್ರಿಯೆಯ ಲಯದಲ್ಲಿ ಎಂಥಾ ವಿವಾದವನ್ನೂ ಸೌಹಾರ್ದಯುತವಾಗಿ ಬಗೆಹರಿಸಬಹುದು ಎಂಬುದನ್ನು ಇದು ಸಾಬೀತು ಮಾಡಿದೆ. ಇದು ನಮ್ಮ ನ್ಯಾಯಾಂಗ ವ್ಯವಸ್ಥೆಯ ಸ್ವಾಯತ್ತೆ, ಪಾರದರ್ಶಕತೆ ಮತ್ತು ದೂರದೃಷ್ಟಿತ್ವವನ್ನು ಮತ್ತೊಮ್ಮೆ ದೃಢಪಡಿಸಿದೆ. ಇದು ನ್ಯಾಯಾಂಗದ ಮುಂದೆ ಎಲ್ಲರೂ ಸಮಾನರು ಎಂಬುದನ್ನು ಸ್ಪಷ್ಟವಾಗಿ ಸಾಬೀತು ಮಾಡಿದೆ” ಎಂದಿದ್ದಾರೆ.

ಮತ್ತೊಂದು ಟ್ವೀಟಿನಲ್ಲಿ “ಗೌರವಾನ್ವಿತ ಸರ್ವೋಚ್ಛ ನ್ಯಾಯಾಲಯವು ಅಯೋಧ್ಯ ವಿವಾದಕ್ಕೆ ಸಂಬಂಧಿಸಿದ ತನ್ನ ತೀರ್ಪು ಪ್ರಕಟಿಸಿದೆ. ಈ ತೀರ್ಪನ್ನು ಯಾರದ್ದೋ ಗೆಲುವು, ಮತ್ತ್ಯಾರದ್ದೋ ಸೋಲಿನಂತೆ ಗ್ರಹಿಸಬಾರದು. ಅದು ರಾಮಭಕ್ತಿಯೇ ಇರಲಿ, ರಹೀಮ ಭಕ್ತಿಯೇ ಇರಲಿ, ನಾವು ನಮ್ಮ ರಾಷ್ಟ್ರಭಕ್ತಿಯನ್ನು ಬಲಪಡಿಸುವುದು ಕಡ್ಡಾಯ. ಶಾಂತಿ ಮತ್ತು ಸೌಹಾರ್ದತೆ ಮೇಲುಗೈ ಸಾಧಿಸಲಿ.

Donate

ಜನಪರ ಪತ್ರಿಕೋದ್ಯಮದ ಉಳಿವು ಮತ್ತು ಬೆಳವಣಿಗೆಗಾಗಿ ನಿಮ್ಮ ನಿರಂತರ ಆರ್ಥಿಕ ನೆರವು ಅಗತ್ಯ. ನಿಮ್ಮಿಂದ ಸಾಧ್ಯವಿರುವಷ್ಟು ಹೆಚ್ಚಿನ ವಂತಿಗೆಯನ್ನು ನೀಡಲು ಕೆಳಗಿನ ಲಿಂಕುಗಳನ್ನು ಕ್ಲಿಕ್ಕಿಸಿ.
ಒಂದು ವೇಳೆ ಈ ಲಿಂಕಿನ ಮೂಲಕ ಹಣ ಪಾವತಿ ಮಾಡುವುದಕ್ಕೆ ಅಡಚಣೆ ಇದ್ದರೆ, ಈ ಪುಟದ ಮೇಲೆ ಅಥವಾ ಕೆಳಗೆ ಇರುವ ವಂತಿಗೆ – Donate ಬಟನ್.ಅನ್ನು ಕ್ಲಿಕ್ಕಿಸಿ.
ಧನ್ಯವಾದಗಳು
Independent journalism can’t be independent without your support, contribute by clicking below.

LEAVE A REPLY

Please enter your comment!
Please enter your name here