- Advertisement -
- Advertisement -
ಅಯೋಧ್ಯೆ ವಿವಾದಿತ ಐತಿಹಾಸಿಕ ತೀರ್ಪು ಪ್ರಕಟಗೊಂಡ ಬೆನ್ನಲ್ಲೇ ಹಲವು ನಾಯಕರು ತಮ್ಮ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ. ಯಾರು ಏನು ಹೇಳಿದ್ರು ಅನ್ನೋದನ್ನ ನೋಡೋಣ….
ಹಿಂದೂ ಮಹಾಸಭಾ ವಕೀಲ ವಿಷ್ಣು ಕುಮಾರ್ ಸಿನ್ಹಾ ಮಾತನಾಡಿ, ಇದು ಐತಿಹಾಸಿಕ ತೀರ್ಪು. ಸುಪ್ರೀಂಕೋರ್ಟ್ ನೀಡಿರುವ ತೀರ್ಪು ದೇಶದ ಏಕತೆ ಮತ್ತು ವೈವಿಧ್ಯತೆಯನ್ನು ಎತ್ತಿ ಹಿಡಿದಿದೆ ಎಂದು ಹೇಳಿದರು.
ಸುನ್ನಿ ವಕ್ಫ್ ಬೋರ್ಡ್ ವಕೀಲ ಜಫ್ರ್ಯಾಬ್ ಜಿಲಾನಿ ಮಾತನಾಡಿ, ನಾವು ಸುಪ್ರೀಂಕೋರ್ಟ್ ನೀಡಿದ ತೀರ್ಪನ್ನು ಗೌರವಿಸುತ್ತೇವೆ. ಆದರೆ ತೀರ್ಪು ನಮಗೆ ತೃಪ್ತಿದಾಯಕವಾಗಿಲ್ಲ. ಮುಂದಿನ ಕ್ರಮದ ಬಗ್ಗೆ ಆಲೋಚನೆ ಮಾಡಿ ತೀರ್ಮಾನಿಸುತ್ತೇವೆ.
ಕೇಂದ್ರ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಮಾತನಾಡಿ, ಎಲ್ಲರೂ ಸುಪ್ರೀಂಕೋರ್ಟ್ ತೀರ್ಪನ್ನು ಗೌರವಿಸಬೇಕು. ಎಲ್ಲರಿಗೂ ಸಮಾನವಾದ ತೀರ್ಪು ನೀಡಲಾಗಿದೆ. ಶಾಂತಿ ಮತ್ತು ಸೌಹಾರ್ದತೆಯನ್ನು ಕಾಪಾಡಬೇಕು ಎಂದು ಮನವಿ ಮಾಡಿದರು.
ಕೇಂದ್ರ ಸಚಿವ ನಿತಿನ್ ಗಡ್ಕರಿ ಮಾತನಾಡಿ, ಸುಪ್ರೀಂಕೋರ್ಟ್ ತೀರ್ಪನ್ನು ಎಲ್ಲರೂ ಒಪ್ಪಿಕೊಳ್ಳಬೇಕು. ಸುಪ್ರೀಂ ತೀರ್ಪು ಶಾಂತಿ ಕಾಪಾಡಿದೆ ಎಂದರು.
ಬಿಹಾರ ಸಿಎಂ ನಿತೀಶ್ ಕುಮಾರ್ ಮಾತನಾಡಿ, ಸುಪ್ರೀಂಕೋರ್ಟ್ ತೀರ್ಪನ್ನು ಎಲ್ಲರೂ ಸ್ವಾಗತಿಸಬೇಕು. ಸಾಮಾಜಿಕ ಸಾಮರಸ್ಯ ಕಾಪಾಡಲು ತೀರ್ಪು ಸಹಕಾರಿಯಾಗಿದೆ ಎಂದರು.
ಮಾಜಿ ಸಿಎಂ, ವಿರೋಧ ಪಕ್ಷ ನಾಯಕ ಸಿದ್ದರಾಮಯ್ಯ ಟ್ವೀಟ್ ಮಾಡಿದ್ದು, ರಾಮಜನ್ಮಭೂಮಿ-ಬಾಬರಿ ಮಸೀದಿ ಭೂವ್ಯಾಜ್ಯದ ಸುಪ್ರೀಂಕೋರ್ಟ್ ತೀರ್ಪನ್ನು ಗೌರವಿಸೋಣ. ಪ್ರಜಾಪ್ರಭುತ್ವದ ಧರ್ಮವಾದ ಸಂವಿಧಾನದ ಮೇಲೆ ಭರವಸೆ ಇಡೋಣ. ಶಾಂತಿ ಮತ್ತು ಸೌಹಾರ್ದತೆಯನ್ನು ಕಾಪಾಡೋಣ ಎಂದಿದ್ದಾರೆ.


