Homeಕರೋನಾ ತಲ್ಲಣಆಯುಷ್ ವೈದ್ಯರು ಕೊರೊನಾ ತಗುಲದಂತೆ ತಡೆಯುವ ಔಷಧಿಗಳ ಶಿಫಾರಸ್ಸು ಮಾಡಬಹುದು: ಕೇಂದ್ರ

ಆಯುಷ್ ವೈದ್ಯರು ಕೊರೊನಾ ತಗುಲದಂತೆ ತಡೆಯುವ ಔಷಧಿಗಳ ಶಿಫಾರಸ್ಸು ಮಾಡಬಹುದು: ಕೇಂದ್ರ

- Advertisement -
- Advertisement -

ದೇಹದಲ್ಲಿ ಪ್ರತಿರೋಧ ಶಕ್ತಿಯನ್ನು ಹೆಚ್ಚಿಸಲು ಆಯುರ್ವೇದ, ಯುನಾನಿ ಮತ್ತು ಹೋಮಿಯೋಪಥಿ ವೈದ್ಯರು ಕೊರೊನಾ ಸೋಂಕು ತಗುಲದಂತೆ ತಡೆಯುವ ಔಷಧಿಗಳನ್ನು ಶಿಫಾರಸ್ಸು ಮಾಡಬಹುದು ಎಂದು ಸುಪ್ರೀಂಕೋರ್ಟ್‌ನಲ್ಲಿ ಕೇಂದ್ರ ಸರ್ಕಾರ ಹೇಳಿದ್ದು, ಆದರೆ ತಾವು ನೀಡುವ ಔಷಧಿ ಕೊರೊನಾವನ್ನು ಗುಣಪಡಿಸುತ್ತದೆ ಎಂದು ಹೇಳಿಕೊಳ್ಳುವಂತಿಲ್ಲ ಎಂದು ತಿಳಿಸಿದೆ.

ಇದನ್ನೂ ಓದಿ:ಇಡೀ ದೇಶದ ಜನರಿಗೆ ಲಸಿಕೆ ಹಾಕುವುದಾಗಿ ಸರ್ಕಾರ ಎಂದೂ ಹೇಳಿಲ್ಲ: ಉಲ್ಟಾ ಹೊಡೆದ ಆರೋಗ್ಯ ಸಚಿವಾಲಯ

ಕೇಂದ್ರ ಸರ್ಕಾರದ ಪರವಾಗಿ ಹಾಜರಾದ ಸಾಲಿಸಿಟರ್ ಜನರಲ್ ತುಷಾರ್ ಮೆಹ್ತಾ, “ಪ್ರತಿರೋಧ ಶಕ್ತಿಯನ್ನು ಹೆಚ್ಚಿಸುವ ಔಷಧಿಗಳನ್ನು ಶಿಫಾರಸ್ಸು ಮಾಡುವಲ್ಲಿ ವೈದ್ಯರು ಅನುಸರಿಸಬೇಕಾದ ಕ್ರಮಗಳ ಬಗ್ಗೆ ಮತ್ತು ಕೊರೊನಾ ರೋಗಲಕ್ಷಣ ಹೊಂದಿರುವ ರೋಗಿಗಳ ಚಿಕಿತ್ಸೆಯಲ್ಲಿ ಅನುಸರಿಸಬೇಕಾದ ವಿಧಾನಗಳ ಬಗ್ಗೆ ಅವರಿಗೆ ಮಾಹಿತಿ ನೀಡಲಾಗಿದೆ” ಎಂದು ಸ್ಪಷ್ಟಪಡಿಸಿದ್ದಾರೆ.

“ವೈದ್ಯರು ತಾವು ನೀಡಿದ ಔಷಧಿ ಕೊರೊನಾವನ್ನು ಗುಣಪಡಿಸುತ್ತವೆ ಎಂದು ಹೇಳಿಕೊಳ್ಳುವಂತಿಲ್ಲ ಎನ್ನುವ ಷರತ್ತಿನ ಮೇಲೆ ಆಯುಷ್ ಸಚಿವಾಲಯ ಇದಕ್ಕೆ ಅನುಮೋದನೆ ನೀಡಿದೆ” ತುಷಾತ್‌ ಮೆಹ್ತಾ ಹೇಳಿದರು.

ಈ ನಿಯಮಗಳನ್ನು ಆಯಷ್ ವೈದ್ಯರು ಕಟ್ಟುನಿಟ್ಟಾಗಿ ಪಾಲಿಸಬೇಕು ಎಂದು ಎಂದು ಸುಪ್ರೀಂಕೋರ್ಟ್ ನ್ಯಾಯಮೂರ್ತಿಗಳಾದ ಅಶೋಕ್ ಭೂಷಣ್, ಆರ್.ಎಸ್.ರೆಡ್ಡಿ ಮತ್ತು ಎಂ.ಆರ್.ಶಾ ಅವರಿದ್ದ ನ್ಯಾಯಪೀಠ ಹೇಳಿದೆ.

ಇದನ್ನೂ ಓದಿ: ಲಸಿಕೆ ಬರುವವರೆಗೂ ದೆಹಲಿಯಲ್ಲಿ ಶಾಲೆ ಆರಂಭವಿಲ್ಲ- ಮನೀಶ್ ಸಿಸೋಡಿಯಾ

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ಮಹಿಳೆಯ ಕೊಲೆಗೆ ರಾಜಕೀಯ ಬಣ್ಣ ಬಳಿದ ಅಣ್ಣಾಮಲೈ: ಪ್ರಕರಣ ದಾಖಲು

0
ಮಹಿಳೆಯೋರ್ವರ ಸಾವಿಗೆ ಸಂಬಂಧಿಸಿ ಸಾಮಾಜಿಕ ಮಾಧ್ಯಮದಲ್ಲಿ ಸುಳ್ಳು ಮಾಹಿತಿ ಪೋಸ್ಟ್ ಮಾಡಿದ ಆರೋಪದ ಮೇಲೆ ಬಿಜೆಪಿಯ ತಮಿಳುನಾಡು ರಾಜ್ಯ ಘಟಕದ ಮುಖ್ಯಸ್ಥ ಕೆ ಅಣ್ಣಾಮಲೈ ವಿರುದ್ಧ ಪ್ರಕರಣ ದಾಖಲಿಸಲಾಗಿದೆ. ತಮಿಳುನಾಡಿನ ಕಡಲೂರು ಜಿಲ್ಲೆಯ ಪಕ್ಕಿರಿಮಣಿಯಂ...