Homeಕರೋನಾ ತಲ್ಲಣಆಯುಷ್ ಸಚಿವ ಶ್ರೀಪಾದ್ ವೈ ನಾಯಕ್‌ಗೆ ಕೊರೊನಾ ಪಾಸಿಟಿವ್

ಆಯುಷ್ ಸಚಿವ ಶ್ರೀಪಾದ್ ವೈ ನಾಯಕ್‌ಗೆ ಕೊರೊನಾ ಪಾಸಿಟಿವ್

ಕೊರೊನಾ ವಿರುದ್ದ ಹೋರಾಡಲು ರೋಗನಿರೋಧಕ ಶಕ್ತಿಯನ್ನು ಹೆಚ್ಚಿಸುವ ಆಯುಷ್ ಕಿಟ್‌ಗಳನ್ನು ಅವರು ಇತ್ತೀಚೆಗೆ ಬಿಡುಗಡೆ ಮಾಡಿದ್ದರು.

- Advertisement -
- Advertisement -

ಕೇಂದ್ರ ಆಯುಷ್ ಮತ್ತು ರಕ್ಷಣಾ ರಾಜ್ಯ ಸಚಿವರಾದ ಶ್ರೀಪಾದ್ ವೈ ನಾಯಕ್‌ರವರಿಗೆ ಕೊರೊನಾ ಸೋಂಕು ತಗುಲಿದೆ. ತಾನು ಪಾಸಿಟಿವ್ ಆಗಿದ್ದೇನೆ ಸಚಿವರು ಟ್ವೀಟ್‌ ಮಾಡಿದ್ದು, ಲಕ್ಷಣ ರಹಿತರಾಗಿರುವುದರಿಂದ ಮನೆಯಲ್ಲಿಯೇ ಐಸೋಲೇಷನ್‌ನಲ್ಲಿರುವುದಾಗಿ ತಿಳಿಸಿದ್ದಾರೆ.

ಕೊರೊನಾ ವಿರುದ್ದ ಹೋರಾಡಲು ರೋಗನಿರೋಧಕ ಶಕ್ತಿಯನ್ನು ಹೆಚ್ಚಿಸುವ ಆಯುಷ್ ಕಿಟ್‌ಗಳನ್ನು ಅವರು ಇತ್ತೀಚೆಗೆ ಬಿಡುಗಡೆ ಮಾಡಿದ್ದರು ಎಂದು ಟ್ವಿಟರ್ ಬಳಕೆದಾರ ಡಾ. ಅಝೀಂ ಹೇಳಿದ್ದಾರೆ.

ಗೋವಾ ಸರ್ಕಾರದ ಪತ್ರಿಕಾ ಪ್ರಕಟಣೆಯಲ್ಲಿ, ಮೇ 19 ರಂದು ಶ್ರೀಪಾದ್ ನಾಯಕ್ ತನ್ನ ಸಚಿವಾಲಯದಿಂದ ರೋಗನಿರೋಧಕ ಶಕ್ತಿಯನ್ನು ಹೆಚ್ಚಿಸುವ ಔಷಧೀಯ ಕಿಟ್‌ಗಳನ್ನು ಪೊಲೀಸ್ ಸಿಬ್ಬಂದಿ ಮತ್ತು ಪಣಜಿಯ ಕಲೆಕ್ಟರೇಟ್ ಸಿಬ್ಬಂದಿಗೆ ವಿತರಿಸಿದೆ ಎಂದು ಉಲ್ಲೇಖಿಸಿದೆ.

ಕಿಟ್‌ನಲ್ಲಿ ಹ್ಯಾಂಡ್ ಸ್ಯಾನಿಟೈಸರ್, ಆಯುರ್ವೇದ ಆರೋಗ್ಯ ಪೂರಕ ಚವಾನ್‌ಪ್ರಾಶ್, ಹೋಮಿಯೋಪತಿ ಮಾತ್ರೆಗಳು ಆರ್ಸೆನಿಕಮ್ ಆಲ್ಬಮ್ -30 ಒಳಗೊಂಡಿದೆ. ಅದರಲ್ಲಿ “ಚವಾನ್‌ಪ್ರಾಶ್ ಮತ್ತು ಪುಡಿ ರೋಗನಿರೋಧಕ ಶಕ್ತಿಯನ್ನು ಹೆಚ್ಚಿಸುತ್ತದೆ” ಎಂದು ಒತ್ತಿಹೇಳಿದೆ.

ಆಯುಷ್ ಸಚಿವಾಲಯವು ವೈದ್ಯಕೀಯ ಸಮಸ್ಯೆಗಳಿಗೆ ದೃಢೀಕರಿಸದ ಪರಿಹಾರಗಳನ್ನು ನೀಡುತ್ತಿದೆ ಎಂಬ ಟೀಕೆಗಳು ಈ ಹಿಂದೆ ಕೇಳಿಬಂದಿದ್ದವು.

ಆಗಸ್ಟ್ 12 ರಂದು, ಶ್ರೀಪಾದ್ ನಾಯಕ್ ತಮ್ಮ ಸಚಿವಾಲಯವು ಪ್ರಾರಂಭಿಸಿದ “ಆಯುಷ್ ಫಾರ್ ಇಮ್ಯೂನಿಟಿ” ಅಭಿಯಾನದ ವೀಡಿಯೊ ಸಭೆಯ ಅಧ್ಯಕ್ಷತೆ ವಹಿಸಿದ್ದರು. ಅದರಲ್ಲಿ ಪ್ರಸ್ತುತ ಸಾಂಕ್ರಾಮಿಕ ರೋಗದಲ್ಲಿ ಯೋಗ ಮತ್ತು ಆಯುರ್ವೇದದ ಪಾತ್ರ ಮಹತ್ವದ್ದು ಎಂದು ಅವರು ಹೇಳಿದ್ದರು.

ಆಯುಷ್ ಸಚಿವಾಲಯವು ಜನವರಿ 29 ರಂದು ಬೆಳಿಗ್ಗೆ 10: 30 ಕ್ಕೆ ಪತ್ರಿಕಾ ಹೇಳಿಕೆ ನೀಡಿದ್ದು, ಅದರಲ್ಲಿ ಕೊರೊನಾ ವೈರಸ್‌ನಿಂದ ತಮ್ಮನ್ನು ರಕ್ಷಿಸಿಕೊಳ್ಳಲು ವಿವಿಧ ಹೋಮಿಯೋಪತಿ ಮತ್ತು ಆಯುರ್ವೇದ ತಂತ್ರಗಳನ್ನು ವಿವರಿಸಿದೆ.


ಓದಿ: ಹಪ್ಪಳ ತಿಂದರೆ ಕೊರೊನಾ ತಡೆಗಟ್ಟಬಹುದು ಎಂದಿದ್ದ ಕೇಂದ್ರ ಸಚಿವನಿಗೆ ಕೊರೊನಾ ಪಾಸಿಟಿವ್!


 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

31 ವರ್ಷಗಳ ಹಳೇ ಸಾಲ ತೀರಿಸಲು 1200 ಕಿ.ಮೀ ಪ್ರಯಾಣಿಸಿದ ಕೇರಳದ ಇಸ್ಮಾಯಿಲ್

"ನನ್ನ ಕಣ್ಣುಗಳಿಂದ ಆನಂದಬಾಷ್ಪಗಳು ಉದುರಿದವು. ನನ್ನ ಮನಸ್ಸಿಗೆ ಅದೆಷ್ಟು ನೆಮ್ಮದಿ ಸಿಕ್ಕಿತೆಂದರೆ, ಅದನ್ನು ವಿವರಿಸಲು ಪದಗಳೇ ಸಾಲದು. ಆತನಿಗೂ ಅಷ್ಟೇ ದೊಡ್ಡ ಸಮಾಧಾನ." ಹೀಗೆ ಭಾವುಕರಾಗಿ ನುಡಿಯುತ್ತಾರೆ ಮೊಹಮ್ಮದ್ ಇಸ್ಮಾಯಿಲ್. 1995ರಲ್ಲಿ ಸೌದಿ...

ಬಂಡಾಯದ ಬಳಿಕ ಟಿಎಂಸಿಗೆ ಮತ್ತೊಂದು ಸವಾಲು : ಪಕ್ಷದ ಬ್ಯಾಂಕ್ ಖಾತೆಗಳು ಫ್ರೀಝ್

ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ಮೂರು ಬ್ಯಾಂಕ್ ಖಾತೆಗಳಲ್ಲಿರುವ 440 ಕೋಟಿ ರೂಪಾಯಿ ಹಣವನ್ನು ಭಾಗಶಃ ಬಳಸಲು ಕಲ್ಕತ್ತಾ ಹೈಕೋರ್ಟ್ ಅನುಮತಿ ನೀಡಿದ ಮರುದಿನವೇ, ಪಶ್ಚಿಮ ಬಂಗಾಳ ಪೊಲೀಸರು...

ಮಂದಿರ ನಿರ್ಮಾಣದ ಕ್ರೆಡಿಟ್‌ಗೆ ಇದ್ದ ಯಜಮಾನಿಕೆ, ಕೊಳ್ಳೆ ಹೊಡೆದಾಗ ಯಾಕಿಲ್ಲ ಸೇವಕರೇ?

ಬಾಲರಾಮನ ಪ್ರಾಣಪ್ರತಿಷ್ಠಾಪನೆಗೆ ಮುನ್ನ ಪ್ರಧಾನಿಯವರು 11 ದಿನಗಳ ಕಾಲ ಕಠಿಣ ಉಪವಾಸ ವ್ರತ ಆಚರಿಸಿದ್ದರು, ಕೇವಲ ಎಳನೀರು ಕುಡಿದರು, ನೆಲದ ಮೇಲೆ ಮಲಗಿದರು ಎಂದು ಇಡೀ ದೇಶಕ್ಕೆ ಸಾರಲಾಗಿತ್ತು. ಅಯೋಧ್ಯೆಯಿಂದ ಹೊಸ ಕಾಲದ...

‘ಫ್ರೀ ಪ್ಯಾಲೆಸ್ತೀನ್’ ಘೋಷಣೆಯನ್ನು ತಮಾಷೆ ಮಾಡಿದ ಸೈಫ್ ಅಲಿ ಖಾನ್ – ನಿರೂಪಕಿ ಅನುಪಮಾ ಚೋಪ್ರಾ

ಸ್ಪ್ಯಾನಿಷ್ ನಟ ಜೇವಿಯರ್ ಬಾರ್ಡೆಮ್ ಅವರ "ಫ್ರೀ ಪ್ಯಾಲೆಸ್ತೀನ್" ಹೇಳಿಕೆ ಕುರಿತು ಸೈಫ್ ಅಲಿ ಖಾನ್ ಮತ್ತು ಚಲನಚಿತ್ರ ಪತ್ರಕರ್ತೆ ಅನುಪಮಾ ಚೋಪ್ರಾ ನಗುತ್ತಿರುವ ಕ್ಲಿಪ್ ಆನ್‌ಲೈನ್‌ನಲ್ಲಿ ವೈರಲ್ ಆಗಿದ್ದು, ನಟನ ಅಸೂಕ್ಷ್ಮ...

ತೆಲಂಗಾಣ : ಪೋಕ್ಸೋ ಪ್ರಕರಣದ ಆರೋಪಿಯಿಂದ ಸಂತ್ರಸ್ತೆ ಸೇರಿ 6 ಜನರ ಹತ್ಯೆ

ಪೋಕ್ಸೋ ಪ್ರಕರಣದ ಆರೋಪಿಯೊಬ್ಬ ಸಂತ್ರಸ್ತೆ ಸೇರಿದಂತೆ ಒಟ್ಟು ಆರು ಜನರನ್ನು ಭೀಕರವಾಗಿ ಹತ್ಯೆ ಮಾಡಿರುವ ಘಟನೆ ತೆಲಂಗಾಣದ ರಂಗಾರೆಡ್ಡಿ ಜಿಲ್ಲೆಯ ಶಾಬಾದ್ ಮಂಡಲದಲ್ಲಿ ಶುಕ್ರವಾರ (ಜು.10) ರಾತ್ರಿ ನಡೆದಿದೆ. 28 ವರ್ಷ ವಯಸ್ಸಿನ...

‘ನನ್ನನ್ನು ಮೌನಗೊಳಿಸಲು, ನೀವು ನನ್ನನ್ನು ಕೊಲ್ಲಬೇಕಾಗುತ್ತದೆ’: ಟಿಎಂಸಿ ಬಿಕ್ಕಟ್ಟಿನ ನಡುವೆ ಬಿಜೆಪಿ ವಿರುದ್ಧ ಮಮತಾ ಬ್ಯಾನರ್ಜಿ ಆಕ್ರೋಶ  

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಆಡಳಿತಾರೂಢ ತೃಣಮೂಲ ಕಾಂಗ್ರೆಸ್ (TMC) ಪಕ್ಷದಲ್ಲಿ ಆಂತರಿಕ ಬಿಕ್ಕಟ್ಟು ತಾರಕಕ್ಕೇರಿರುವ ಬೆನ್ನಲ್ಲೇ, ಪಕ್ಷದ ಸುಪ್ರೀಮೋ ಹಾಗೂ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಇತ್ತೀಚಿನ ತಿಂಗಳುಗಳಲ್ಲೇ ಅತ್ಯಂತ ಪ್ರಬಲವಾದ ರಾಜಕೀಯ...

ಸುಪ್ರೀಂ ಕೋರ್ಟ್‌ನಲ್ಲಿ ಜಡ್ಜ್‌ಗಳನ್ನೇ ‘ನ್ಯಾಯಾಂಗ ಸೇವಕರು’ ಎಂದ ಅರ್ಜಿದರ

ಸುಪ್ರೀಂ ಕೋರ್ಟ್‌ನಲ್ಲಿ ಶುಕ್ರವಾರ ಅತ್ಯಂತ ನಾಟಕೀಯ ಹಾಗೂ ಆಘಾತಕಾರಿ ದೃಶ್ಯವೊಂದು ತೆರೆದುಕೊಂಡಿದೆ. ಪ್ರಕರಣವೊಂದರ ವಿಚಾರಣೆ ವೇಳೆ ಖುದ್ದಾಗಿ ಹಾಜರಾಗಿದ್ದ ಅರ್ಜಿದಾರನೊಬ್ಬ, ಲಕ್ನೋದ ಪೊಲೀಸ್ ಅಧಿಕಾರಿಯೊಬ್ಬರ ವಿರುದ್ಧ ಎಫ್‌ಐಆರ್ (FIR) ದಾಖಲಿಸಲು ನಾನು ನ್ಯಾಯಪೀಠಕ್ಕೆ...

ಮದ್ಯದ ಅಮಲಿನಲ್ಲಿ ಸಾರಿಗೆ ಬಸ್‌ ಅಪಹರಿಸಿದ ವ್ಯಕ್ತಿ; 21 ಕಿ.ಮೀ. ಪ್ರಯಾಣದ ನಂತರ ಅಪಘಾತ

ತೆಲಂಗಾಣದ ಜನಗಾಂವ್ ಬಸ್ ನಿಲ್ದಾಣದಲ್ಲಿ ನಿಂತಿದ್ದ ತೆಲಂಗಾಣ ರಾಜ್ಯ ರಸ್ತೆ ಸಾರಿಗೆ ನಿಗಮದ (ಟಿಜಿಎಸ್‌ಆರ್‌ಟಿಸಿ) ಬಸ್‌ ಅನ್ನು ವ್ಯಕ್ತಿಯೊಬ್ಬ ಕುಡಿದ ಮತ್ತಿನಲ್ಲಿ ಕದ್ದಿದ್ದಾನೆ. ನಂತರ ಅದನ್ನು ಸುಮಾರು 21 ಕಿ.ಮೀ. ದೂರ ಓಡಿಸಿ,...

ಬೆಂಗಳೂರಿನಲ್ಲಿ: ರಸ್ತೆ ಬದಿ ವಾರಗಟ್ಟಲೆ ವಾಹನ ನಿಲ್ಲಿಸಿದರೆ ಜಪ್ತಿ ಮಾಡಿ ‘ಹರಾಜು’ ಹಾಕಲಿದೆ ಸರ್ಕಾರ!

ಸಿಲಿಕಾನ್ ಸಿಟಿಯ ಟ್ರಾಫಿಕ್ ದಟ್ಟಣೆಗೆ ಮುಕ್ತಿ ಹಾಡಲು ಮತ್ತು ಪಾದಚಾರಿಗಳ ಹಕ್ಕನ್ನು ರಕ್ಷಿಸಲು ರಾಜ್ಯ ಸರ್ಕಾರ ಈಗ ಅತ್ಯಂತ ಕಠಿಣ ಹೆಜ್ಜೆಯನ್ನಿಟ್ಟಿದೆ. ನಗರದ ರಸ್ತೆ ಬದಿ ಹಾಗೂ ಫುಟ್‌ಪಾತ್‌ಗಳಲ್ಲಿ ತಿಂಗಳುಗಟ್ಟಲೆ ಧೂಳು ತಿನ್ನುತ್ತಾ...

ಸರ್ಕಾರಿ ಶಾಲೆಗಳಲ್ಲಿ 86 ಲಕ್ಷ ವಿದ್ಯಾರ್ಥಿಗಳ ಕುಸಿತ, ಖಾಸಗಿ ಶಾಲೆಗಳತ್ತ ಮುಖ ಮಾಡಿದ 88 ಲಕ್ಷ ಮಕ್ಕಳು: ಕಳವಳಕಾರಿ ವರದಿ

ನವದೆಹಲಿ: ದೇಶದ ಶಾಲಾ ಶಿಕ್ಷಣ ವ್ಯವಸ್ಥೆಯಲ್ಲಿ ಮಹತ್ತರ ಬದಲಾವಣೆಗಳು ಕಂಡುಬರುತ್ತಿದ್ದು, ಸರ್ಕಾರಿ ಶಾಲೆಗಳ ದಾಖಲಾತಿಯಲ್ಲಿ ಭಾರಿ ಕುಸಿತ ಉಂಟಾಗಿದೆ. 2023–24 ಮತ್ತು 2025–26ರ ಶೈಕ್ಷಣಿಕ ವರ್ಷಗಳ ನಡುವಿನ ಅವಧಿಯಲ್ಲಿ ದೇಶಾದ್ಯಂತ ಸರ್ಕಾರಿ ಶಾಲೆಗಳಲ್ಲಿ...