Homeಮುಖಪುಟಆಜಂ ಖಾನ್‌ ಜಾಮೀನು ಅರ್ಜಿ ವಿಲೇವಾರಿ ವಿಳಂಬ; ಅಲಹಾಬಾದ್‌ ಹೈಕೋರ್ಟ್‌ಗೆ ಸುಪ್ರೀಂ ತರಾಟೆ

ಆಜಂ ಖಾನ್‌ ಜಾಮೀನು ಅರ್ಜಿ ವಿಲೇವಾರಿ ವಿಳಂಬ; ಅಲಹಾಬಾದ್‌ ಹೈಕೋರ್ಟ್‌ಗೆ ಸುಪ್ರೀಂ ತರಾಟೆ

- Advertisement -
- Advertisement -

ಭೂಕಬಳಿಕೆ ಪ್ರಕರಣದಲ್ಲಿ ಸಮಾಜವಾದಿ ಪಕ್ಷದ ನಾಯಕ ಆಜಂ ಖಾನ್ ಅವರು ವಿರುದ್ಧ ದಾಖಲಾಗಿರುವ ಜಾಮೀನು ಅರ್ಜಿಯನ್ನು ವಿಲೇವಾರಿ ಮಾಡುವಲ್ಲಿ ಅಲಹಾಬಾದ್ ಹೈಕೋರ್ಟ್ ವಿಳಂಬ ಮಾಡುತ್ತಿರುವುದನ್ನು ಸುಪ್ರೀಂ ಕೋರ್ಟ್ ಪ್ರಶ್ನಿಸಿದೆ. ಹೈಕೋರ್ಟ್ ನಡೆಗೆ ಅಸಮಧಾನ ವ್ಯಕ್ತಪಡಿಸಿರುವ ಸುಪ್ರೀಂ, “ಇದು ನ್ಯಾಯದ ಅಪಹಾಸ್ಯ” ಎಂದು ಕಟುವಾಗಿ ಟೀಕಿಸಿದೆ.

“ಜಾಮೀನು ಅರ್ಜಿಯ ತೀರ್ಪನ್ನು ಹೈಕೋರ್ಟ್ ಕಾಯ್ದಿರಿಸಿದೆ” ಎಂದು ಆಜಂ ಖಾನ್ ಪರ ವಾದ ಮಂಡಿಸಿದ ವಕೀಲರು ಸುಪ್ರೀಂ ಕೋರ್ಟ್‌ಗೆ ತಿಳಿಸಿದರು.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ನ್ಯಾಯಮೂರ್ತಿಗಳಾದ ಎಲ್.ನಾಗೇಶ್ವರ ರಾವ್ ಮತ್ತು ಬಿ.ಆರ್.ಗವಾಯಿ ಇದ್ದ ಪೀಠರವು ವಿಷಯವನ್ನು ಗಂಭೀರವಾಗಿ ಪರಿಗಣಿಸಿ, 87 ಪ್ರಕರಣಗಳ ಪೈಕಿ 86 ಪ್ರಕರಣಗಳಲ್ಲಿ ಖಾನ್‌ ಅವರಿಗೆ ಜಾಮೀನು ಸಿಕ್ಕಿರುವುದನ್ನು ಗಮನಿಸಿದ್ದಾರೆ. ಮೇ 11ರಂದು ಈ ವಿಷಯದ ಕುರಿತು ವಿಚಾರಣೆ ನಡೆಸುವುದಾಗಿ ನ್ಯಾಯಮೂರ್ತಿಗಳು ಹೇಳಿದ್ದು, “ಆ ವೇಳೆಗೆ ಹೈಕೋರ್ಟ್ ಆದೇಶವನ್ನು ನೀಡುತ್ತದೆ” ಎಂದು ಭರವಸೆ ನೀಡಿದ್ದಾರೆ.

ಮೊಹಮ್ಮದ್ ಅಲಿ ಜೌಹರ್ ವಿಶ್ವವಿದ್ಯಾಲಯದ ಪ್ರಾಜೆಕ್ಟ್‌ಗಾಗಿ ಆಸ್ತಿ ಕಬಳಿಕೆ ಮಾಡಿದ್ದಾರೆಂಬ ಆರೋಪಕ್ಕೆ ಗುರಿಯಾಗಿರುವ ಖಾನ್ ಅವರ ಜಾಮೀನು ಅರ್ಜಿಯ ತೀರ್ಪನ್ನು ಅಲಹಾಬಾದ್ ಹೈಕೋರ್ಟ್ ಗುರುವಾರ ಕಾಯ್ದಿರಿಸಿತ್ತು.

“ನಾವು ನಿಮಗೆ ಹೇಳುತ್ತೇವೆ ಎಂದು ಈಗ ತೀರ್ಪನ್ನು ಕಾಯ್ದಿರಿಸಲು ಸಾಧ್ಯವಿಲ್ಲ. 137 ದಿನಗಳಾಗಿವೆ. ಯಾವುದೇ ಆದೇಶ ಜಾರಿಯಾಗಿಲ್ಲ. ಆಜಂ ಖಾನ್‌ 86 ಪ್ರಕರಣಗಳಲ್ಲಿ ಜಾಮೀನಿನ ಮೇಲೆ ಬಿಡುಗಡೆಯಾಗಿದ್ದರು. ಇನ್ನೊಂದು ಪ್ರಕರಣ ಬಾಖಿ ಇದೆ. ಇದು ನ್ಯಾಯದ ಅಪಹಾಸ್ಯ. ನಾವು ಈಗ ಇಷ್ಟು ಮಾತ್ರ ಹೇಳಬಹುದು. ಅಗತ್ಯವಿದ್ದರೆ ನಾವು ಹೆಚ್ಚು ಹೇಳುತ್ತೇವೆ. ಬುಧವಾರ ಬರಲಿ. ನಾವು ಅವರಿಗೆ ಎರಡು ದಿನಗಳ ಕಾಲ ಅವಕಾಶ ನೀಡೋಣ” ಎಂದು ಪೀಠವು ಹೇಳಿರುವುದಾಗಿ ‘ಲೈವ್ ಲಾ’ ವರದಿ ಮಾಡಿದೆ.

ಖಾನ್ ವಿರುದ್ಧ ಬಾಕಿ ಉಳಿದಿರುವ 87 ಕ್ರಿಮಿನಲ್ ಪ್ರಕರಣಗಳಲ್ಲಿ 84 ಎಫ್‌ಐಆರ್‌ಗಳು 2017ರಲ್ಲಿ ಉತ್ತರ ಪ್ರದೇಶದಲ್ಲಿ ಬಿಜೆಪಿ ಅಧಿಕಾರಕ್ಕೆ ಬಂದ ಎರಡು ವರ್ಷಗಳಲ್ಲಿ ದಾಖಲಾಗಿವೆ ಎಂದು ‘ದಿ ವೈರ್‌’ ವರದಿ ಮಾಡಿದೆ.

ಈ 84 ಪ್ರಕರಣಗಳಲ್ಲಿ 81 ಪ್ರಕರಣಗಳು 2019ರ ಲೋಕಸಭೆ ಚುನಾವಣೆಯ ಮೊದಲು ಮತ್ತು ನಂತರದ ಅವಧಿಯಲ್ಲಿ ದಾಖಲಾಗಿವೆ.

ಖಾನ್‌ ಅವರನ್ನು ಅನಿರ್ದಿಷ್ಟಾವಧಿ ಜೈಲಿನಲ್ಲಿ ಇಡಲು ಬಿಜೆಪಿಯವರು ದಾಖಲಿಸಿದ ಎಫ್‌ಐಆರ್‌ಗಳು ಇವೆಂದು ಖಾನ್ ಬೆಂಬಲಿಗರು ಹೇಳುತ್ತಾರೆ.

ಫೆಬ್ರವರಿಯಲ್ಲಿ ಉತ್ತರ ಪ್ರದೇಶ ಚುನಾವಣೆಯ ಪ್ರಚಾರಕ್ಕಾಗಿ ಖಾನ್‌ ಮಧ್ಯಂತರ ಜಾಮೀನು ಕೋರಿದ್ದರು. ಆದರೆ ಸುಪ್ರೀಂ ಕೋರ್ಟ್ ನಿರಾಕರಿಸಿತ್ತು. ಅರ್ಜಿಯ ವಿಲೇವಾರಿಗಾಗಿ ಸಂಬಂಧಪಟ್ಟ ನ್ಯಾಯಾಲಯವನ್ನು ಸಂಪರ್ಕಿಸುವಂತೆ ಹೇಳಿತ್ತು.

ಆಜಂ ಖಾನ್‌ ಸದ್ಯ ಸೀತಾಪುರ ಜೈಲಿನಲ್ಲಿದ್ದಾರೆ.

ಇದನ್ನೂ ಓದಿರಿ: ಪಶ್ಚಿಮ ಬಂಗಾಳ: ಅನುಮಾನಾಸ್ಪದವಾಗಿ ಬಿಜೆಪಿ ಮುಖಂಡನ ಶವ ಪತ್ತೆ; ‘ರಾಜಕೀಯ ಕೊಲೆ’ ಎಂದ ಅಮಿತ್ ಶಾ

ಡಿಸೆಂಬರ್ 4, 2021 ರಂದು ಹೈಕೋರ್ಟ್ ಪ್ರಸ್ತುತ ಭೂಹಗರಣ ಪ್ರಕರಣದಲ್ಲಿ ಜಾಮೀನಿನ ನಿರ್ಧಾರವನ್ನು ಕಾಯ್ದಿರಿಸಿತ್ತು. ಆದರೆ, ರಾಜ್ಯ ಸರ್ಕಾರವು ನಂತರ ಅರ್ಜಿಯನ್ನು ಸಲ್ಲಿಸಿತು. ಗುರುವಾರ ಸಲ್ಲಿಸಿದ ಹೊಸ ಅಫಿಡವಿಟ್‌ಗಳ ಮೂಲಕ ಕೆಲವು ಹೊಸ ಸಂಗತಿಗಳನ್ನು ಪ್ರಸ್ತುತಪಡಿಸಲು ಅನುಮತಿ ಕೋರಿತು.

ನೂರಾರು ಕೋಟಿ ರೂಪಾಯಿಗಳಿಗೂ ಹೆಚ್ಚು ಸಾರ್ವಜನಿಕ ಹಣವನ್ನು ದುರುಪಯೋಗಪಡಿಸಿಕೊಂಡ ಆರೋಪದ ಮೇಲೆ ಐಪಿಸಿಯ ವಿವಿಧ ಸೆಕ್ಷನ್‌ಗಳು ಮತ್ತು ಸಾರ್ವಜನಿಕ ಆಸ್ತಿ ಹಾನಿ ತಡೆ ಕಾಯ್ದೆಯ ಅಡಿಯಲ್ಲಿ ಖಾನ್ ಮತ್ತು ಇತರರ ವಿರುದ್ಧ ಎಫ್‌ಐಆರ್ ದಾಖಲಿಸಲಾಗಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪ್ರಧಾನಿ ಮೋದಿ ವಿರುದ್ಧ ನಿಂದನೆ: ನನಗೆ ಕೇವಲ 15 ವರ್ಷ ‘ಅನ್ಯರ ಪ್ರಭಾವಕ್ಕೆ ಒಳಗಾಗಿದ್ದೆ’ ಎಂದು ಕ್ಷಮೆ ಕೇಳಿದ ವಿದ್ಯಾರ್ಥಿನಿ ವಿಡಿಯೋ ವೈರಲ್

ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ನೀಡಿ ಭಾರಿ ಆಕ್ರೋಶಕ್ಕೆ ಗುರಿಯಾಗಿದ್ದ ಸಿಜೆಪಿ (CJP) ಪ್ರತಿಭಟನಾಕಾರ ಯುವತಿಯೊಬ್ಬಳು ಸೋಶಿಯಲ್ ಮೀಡಿಯಾದಲ್ಲಿ ಕ್ಷಮೆಯಾಚಿಸಿದ್ದಾಳೆ ಎನ್ನಲಾದ ವೀಡಿಯೊವೊಂದು ಹರಿದಾಡುತ್ತಿದೆ. ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್...

ಸ್ಪೇನ್‌ಗೆ ನುಗ್ಗಿದ ಸಾವಿರಾರು ಮೊರಾಕನ್ನರು : ಬೃಹತ್ ವಲಸೆಯ ಹಿಂದೆ ಇಸ್ರೇಲ್ ಕುತಂತ್ರ?

ಮೊರಾಕೊದಿಂದ ಸ್ಪೇನ್‌ನ ಸಿಯುಟಾ ನಗರಕ್ಕೆ ಸಾವಿರಾರು ವಲಸಿಗರು ನುಗ್ಗಿದ ಬಿಕ್ಕಟ್ಟಿನ ಹಿಂದೆ ಇಸ್ರೇಲ್ ಕೈವಾಡವಿದೆ ಎಂಬ ಆರೋಪಗಳು ಕೇಳಿ ಬಂದಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಇಸ್ರೇಲ್‌ನ ಕುತಂತ್ರ ಬುದ್ದಿಯ ಬಗ್ಗೆ ಭಾರೀ ಚರ್ಚೆಗಳು ನಡೆಯುತ್ತಿವೆ. ಇದೇ...

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....