Homeಮುಖಪುಟಅಜೀಂ ಪ್ರೇಮ್‌ಜಿ ಫೌಂಡೇಶನ್ ಬಾಲಕಿಯರ ವಿದ್ಯಾರ್ಥಿ ವೇತನ | ಕರ್ನಾಟಕ ಸೇರಿದಂತೆ 18 ರಾಜ್ಯಗಳಿಗೆ ವಿಸ್ತರಣೆ

ಅಜೀಂ ಪ್ರೇಮ್‌ಜಿ ಫೌಂಡೇಶನ್ ಬಾಲಕಿಯರ ವಿದ್ಯಾರ್ಥಿ ವೇತನ | ಕರ್ನಾಟಕ ಸೇರಿದಂತೆ 18 ರಾಜ್ಯಗಳಿಗೆ ವಿಸ್ತರಣೆ

- Advertisement -
- Advertisement -

ಅಜೀಂ ಪ್ರೇಮ್‌ಜಿ ಫೌಂಡೇಶನ್ (ಎಪಿಎಫ್) 2024-25ರ ಶೈಕ್ಷಣಿಕ ವರ್ಷದಲ್ಲಿ ನಾಲ್ಕು ರಾಜ್ಯಗಳಲ್ಲಿ ಪ್ರಾಯೋಗಿಕ ಆಧಾರದ ಮೇಲೆ ಪ್ರಾರಂಭಿಸಲಾಗಿದ್ದ ಬಾಲಕಿಯರ ವಿದ್ಯಾರ್ಥಿ ವೇತನವನ್ನು ಈಗ ಕರ್ನಾಟಕ ಸೇರಿದಂತೆ 18 ರಾಜ್ಯಗಳಿಗೆ 2025-26ರ ಶೈಕ್ಷಣಿಕ ವರ್ಷಕ್ಕೆ ವಿಸ್ತರಿಸಲಾಗಿದೆ.

ಸರ್ಕಾರಿ ಶಾಲೆ ಅಥವಾ ಕಾಲೇಜಿನಿಂದ 10 ಮತ್ತು 12 ನೇ ತರಗತಿಗಳನ್ನು ಪೂರ್ಣಗೊಳಿಸಿದ ಮತ್ತು ಉತ್ತಮ ಉನ್ನತ ಶಿಕ್ಷಣ ಸಂಸ್ಥೆ, ಪದವಿ ಅಥವಾ ಡಿಪ್ಲೊಮಾ ಕೋರ್ಸ್‌ನಲ್ಲಿ ಪ್ರವೇಶ ಪಡೆದ ಹುಡುಗಿಯರು ಈ ವಿದ್ಯಾರ್ಥಿ ವೇತನವನ್ನು ಪಡೆಯಲು ಅರ್ಹರಾಗಿರುತ್ತಾರೆ.

ಪೌಂಡೇಷನ್‌ನಿಂದ ಈ ವರ್ಷ 2.5 ಲಕ್ಷ ಹುಡುಗಿಯರಿಗೆ ಅನುಕೂಲವಾಗಲಿದೆ ಎಂದು ಅಂದಾಜಿಸಲಾಗಿದ್ದು, ವಾರ್ಷಿಕ ವಿದ್ಯಾರ್ಥಿವೇತನದ ಮೊತ್ತವು ವರ್ಷಕ್ಕೆ 750 ಕೋಟಿ ರೂ.ಗಳಾಗಿದ್ದು, ಮುಂದಿನ ಮೂರು ವರ್ಷಗಳವರೆಗೆ ಅದರ ಮೊತ್ತ ಸುಮಾರು 2,250 ಕೋಟಿ ರೂ.ಗಳಷ್ಟಾಗುತ್ತದೆ ಎಂದು ತಿಳಿಸಿದೆ.

ವಿದ್ಯಾರ್ಥಿ ವೇತನವು ಆನ್‌ಲೈನ್ ಆಧಾರಿತವಾಗಿರುವುದರಿಂದ, ಪ್ರತಿಷ್ಠಾನವು ಆಗಸ್ಟ್ ಅಥವಾ ಸೆಪ್ಟೆಂಬರ್‌ನಲ್ಲಿ ಪೋರ್ಟಲ್ ಅನ್ನು ತೆರೆಯುತ್ತದೆ. ವಿದ್ಯಾರ್ಥಿ ವೇತನ ವಿಸ್ತರಣೆಯನ್ನು ಘೋಷಿಸಿರುವ ಫೌಂಡೇಶನ್‌ನ ಸಿಇಒ ಅನುರಾಗ್ ಬೆಹರ್, “ಇದು ಅರ್ಹತೆ ಆಧಾರಿತ ವಿದ್ಯಾರ್ಥಿವೇತನವಲ್ಲ. ಆರ್ಥಿಕವಾಗಿ ದುರ್ಬಲ ವರ್ಗಗಳ ಹುಡುಗಿಯರು ಉನ್ನತ ಶಿಕ್ಷಣವನ್ನು ಮುಂದುವರಿಸಲು ಇದು ಪ್ರೋತ್ಸಾಹಿಸುತ್ತದೆ. ಒಂದು ವೇಳೆ ಫಲಾನುಭವಿ ಕೋರ್ಸ್‌ನಿಂದ ಹೊರಗುಳಿದರೆ, ವಿದ್ಯಾರ್ಥಿವೇತನವನ್ನು ನಿಲ್ಲಿಸಲಾಗುತ್ತದೆ.” ಎಂದು ಹೇಳಿದ್ದಾರೆ

ಪ್ರಾಯೋಗಿಕ ಯೋಜನೆಯನ್ನು ಮಧ್ಯಪ್ರದೇಶ ಮತ್ತು ಉತ್ತರ ಪ್ರದೇಶ, ರಾಜಸ್ಥಾನ ಮತ್ತು ಜಾರ್ಖಂಡ್‌ನ ಕೆಲವು ಜಿಲ್ಲೆಗಳಲ್ಲಿ ಪ್ರಾರಂಭಿಸಲಾಗಿತ್ತು.

ಈಗ, ವಿದ್ಯಾರ್ಥಿವೇತನವನ್ನು ಅರುಣಾಚಲ ಪ್ರದೇಶ, ಅಸ್ಸಾಂ, ಬಿಹಾರ, ಛತ್ತೀಸ್‌ಗಢ, ಜಾರ್ಖಂಡ್, ಕರ್ನಾಟಕ, ಮಧ್ಯಪ್ರದೇಶ, ಮಣಿಪುರ, ಮೇಘಾಲಯ, ಮಿಜೋರಾಂ, ನಾಗಾಲ್ಯಾಂಡ್, ಒಡಿಶಾ, ರಾಜಸ್ಥಾನ, ಸಿಕ್ಕಿಂ, ತೆಲಂಗಾಣ, ತ್ರಿಪುರ, ಯುಪಿ ಮತ್ತು ಉತ್ತರಾಖಂಡಗಳಿಗೆ ವಿಸ್ತರಿಸಲಾಗುವುದು.

ಪ್ರಾಯೋಗಿಕ ಅವಧಿಯಲ್ಲಿ, ಅಜೀಂ ಪ್ರೇಮ್‌ಜಿ ಫೌಂಡೇಶನ್ 1.10 ಲಕ್ಷ ಅರ್ಜಿಗಳನ್ನು ಸ್ವೀಕರಿಸಿತು ಮತ್ತು 25,000 ಅರ್ಹರು ಎಂದು ಕಂಡುಬಂದಿದೆ. ಆ ಹುಡುಗಿಯರಿಗಾಗಿ ಈ ವರ್ಷ 75 ಕೋಟಿ ರೂ.ಗಳ ವಿದ್ಯಾರ್ಥಿ ವೇತನ ನೀಡುವ ಬಗ್ಗೆ ಪೌಂಡೇಷನ್ ಒಪ್ಪಿಕೊಂಡಿದೆ.

ಇಲ್ಲಿ ಕ್ಲಿಕ್ ಮಾಡಿ

ಇದನ್ನೂಓದಿ:  ಮಂಗಳೂರು ಕರಾವಳಿಯಲ್ಲಿ ಮುಳುಗುತ್ತಿದ್ದ ಹಡಗಿನಿಂದ ಆರು ಸಿಬ್ಬಂದಿ ರಕ್ಷಿಸಿದ ಭಾರತೀಯ ಕರಾವಳಿ ರಕ್ಷಣಾ ಪಡೆ

ಮಂಗಳೂರು ಕರಾವಳಿಯಲ್ಲಿ ಮುಳುಗುತ್ತಿದ್ದ ಹಡಗಿನಿಂದ ಆರು ಸಿಬ್ಬಂದಿ ರಕ್ಷಿಸಿದ ಭಾರತೀಯ ಕರಾವಳಿ ರಕ್ಷಣಾ ಪಡೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. We are proud that our people citizens of Karnataka coastal districts are brave and they are ready to sacrifice anything for the general public.

LEAVE A REPLY

Please enter your comment!
Please enter your name here

- Advertisment -

ಕಳ್ಳನೆಂದು ಸುಳ್ಳಾರೋಪ ಹೊರಿಸಿ ಜೈಲಿಗಟ್ಟಿದ ಪೊಲೀಸರು : ಸಂತ್ರಸ್ತಗೆ 14 ಲಕ್ಷ ರೂ. ಪರಿಹಾರ ನೀಡಲು ಕೋರ್ಟ್ ಆದೇಶ

ಕಳ್ಳನೆಂದು ಸುಳ್ಳಾರೋಪ ಹೊರಿಸಿ ಪೊಲೀಸರು ಜೈಲಿಗಟ್ಟಿದ ವ್ಯಕ್ತಿಗೆ 14 ಲಕ್ಷ ರೂಪಾಯಿ ಪರಿಹಾರ ಒದಗಿಸುವಂತೆ ಕೇರಳ ಸರ್ಕಾರಕ್ಕೆ ಹೈಕೋರ್ಟ್ ಆದೇಶಿಸಿದೆ. ಕಣ್ಣೂರು ಮೂಲದ ವಿ.ಕೆ ತಾಜುದ್ದೀನ್ ಕಾನೂನು ಹೋರಾಟದಲ್ಲಿ ಗೆದ್ದು ಪರಿಹಾರ ಪಡೆದ ವ್ಯಕ್ತಿ....

ಇರಾನ್‌ನಲ್ಲಿ ತೀವ್ರಗೊಂಡ ಆಡಳಿತ ವಿರೋಧಿ ಪ್ರತಿಭಟನೆ : ಟ್ರಂಪ್ ಮಧ್ಯಪ್ರವೇಶ ಕೋರಿದ ಮಾಜಿ ದೊರೆಯ ಮಗ

ಇರಾನ್‌ನಲ್ಲಿ ಭುಗಿಲೆದ್ದಿರುವ ಆಡಳಿತ ವಿರೋಧಿ ಪ್ರತಿಭಟನೆ ತೀವ್ರ ಸ್ವರೂಪ ಪಡೆದುಕೊಂಡಿದೆ. 2025ರ ಡಿಸೆಂಬರ್ 28ರಂದು ಪ್ರಾರಂಭಗೊಂಡ ಪ್ರತಿಭಟನೆಗಳು ಹಿಂಸಾಚಾರ ರೂಪ ಪಡೆದುಕೊಂಡು 13ನೇ ದಿನವೂ ಮುಂದುವರಿದಿದೆ. ಆರ್ಥಿಕ ಬಿಕ್ಕಟ್ಟಿನ ವಿರುದ್ದ (ರಿಯಾಲ್ ಕರೆನ್ಸಿ ಮೌಲ್ಯ...

ಮತದಾರರ ಹೆಸರು ಅಳಿಸಲು ಯತ್ನ : ಬಿಜೆಪಿ ವಿರುದ್ಧ 5 ವಿಪಕ್ಷಗಳಿಂದ ದೂರು ದಾಖಲು

ಅಸ್ಸಾಂನ ಐದು ವಿರೋಧ ಪಕ್ಷಗಳು ಶುಕ್ರವಾರ (ಜ.9) ಪೊಲೀಸ್ ದೂರು ದಾಖಲಿಸಿದ್ದು, ಆಡಳಿತಾರೂಢ ಭಾರತೀಯ ಜನತಾ ಪಾರ್ಟಿ (ಬಿಜೆಪಿ) ರಾಜ್ಯದ ಮತದಾರರ ಪಟ್ಟಿಯಿಂದ ಹೆಚ್ಚಿನ ಸಂಖ್ಯೆಯ ನಿಜವಾದ ಮತದಾರರ ಹೆಸರನ್ನು ಅಳಿಸಲು ಸಂಚು...

ಐ-ಪ್ಯಾಕ್ ಮೇಲೆ ದಾಳಿ ಪ್ರಕರಣ: ಮಮತಾ ಬ್ಯಾನರ್ಜಿ ದೂರಿನ ಬೆನ್ನಲ್ಲೇ ಜಾರಿ ನಿರ್ದೇಶನಾಲಯದ ವಿರುದ್ಧ ಎಫ್‌ಐಆರ್

ಕೋಲ್ಕತ್ತಾ: ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ನಿವಾಸದ ಮೇಲೆ ಜಾರಿ ನಿರ್ದೇಶನಾಲಯ ನಡೆಸಿದ ದಾಳಿಗೆ ಸಂಬಂಧಿಸಿದಂತೆ ಟಿಎಂಸಿ ಅಧ್ಯಕ್ಷೆ ಮಮತಾ ಬ್ಯಾನರ್ಜಿ...

‘ಭ್ರಷ್ಟ ಜನತಾ ಪಾರ್ಟಿ’: ಬಿಜೆಪಿ ಡಬಲ್ ಎಂಜಿನ್ ಆಡಳಿತದ ವಿರುದ್ಧ ರಾಹುಲ್ ಗಾಂಧಿ ವಾಗ್ದಾಳಿ

ನವದೆಹಲಿ: ವಿವಿಧ ರಾಜ್ಯಗಳಲ್ಲಿ ಬಿಜೆಪಿಯ ಡಬಲ್ ಎಂಜಿನ್ ಸರ್ಕಾರಗಳ ವಿರುದ್ಧ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಾಗ್ದಾಳಿ ನಡೆಸಿದ್ದಾರೆ.  ತಮ್ಮ ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ರಾಹುಲ್, ಉತ್ತರಾಖಂಡದಲ್ಲಿ ಅಂಕಿತ...

ಇಂದೋರ್‌ನಲ್ಲಿ ಕಲುಷಿತ ನೀರಿಗೆ 8 ಮಂದಿ ಬಲಿ: ಆರ್‌ಎಸ್‌ಎಸ್ ಕಚೇರಿಯಲ್ಲಿ ಜಿಲ್ಲಾಧಿಕಾರಿ ಮತ್ತು ಮೇಯರ್: ಭುಗಿಲೆದ್ದ ವಿವಾದ

ಇಂದೋರ್: ಆರ್‌ಎಸ್‌ಎಸ್ ಕಚೇರಿಯಲ್ಲಿ ಬುಧವಾರ ತಡರಾತ್ರಿ ನಡೆದ ಸಭೆಯಲ್ಲಿ ಜಿಲ್ಲಾಧಿಕಾರಿ ಮತ್ತು ಮೇಯರ್ ಭಾಗವಹಿಸಿದ್ದು ಕಂಡುಬಂದ ನಂತರ ಗುರುವಾರ ಇಂದೋರ್‌ನಲ್ಲಿ ರಾಜಕೀಯ ವಿವಾದ ಭುಗಿಲೆದ್ದಿದೆ.  ಕನಿಷ್ಠ ಎಂಟು ಮಂದಿ ಜೀವಗಳನ್ನು ಬಲಿ ಪಡೆದಿರುವ ಕಲುಷಿತ...

ಐ-ಪ್ಯಾಕ್ ಮೇಲೆ ಇಡಿ ದಾಳಿ: ಕೋಲ್ಕತ್ತಾದಲ್ಲಿ ಮಮತಾ ಪ್ರತಿಭಟನೆ: ಅಮಿತ್ ಶಾ ಕಚೇರಿಯ ಹೊರಗೆ ಪ್ರತಿಭಟಿಸುತ್ತಿದ್ದ ಟಿಎಂಸಿ ಶಾಸಕರ ಬಂಧನ

ಗುರುವಾರ (ಜ.8) ಬೆಳಿಗ್ಗೆ ಕೋಲ್ಕತ್ತಾದ ಸಾಲ್ಟ್ ಲೇಕ್‌ನಲ್ಲಿರುವ ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ನಡೆಸಿದ...

ಮಹಾರಾಷ್ಟ್ರ ಜಲ್ನಾ ಮಹಾನಗರ ಪಾಲಿಕೆ ಚುನಾವಣೆಯಲ್ಲಿ ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆ ಪ್ರಕರಣದ ಪ್ರಮುಖ ಆರೋಪಿ ಸ್ಪರ್ಧೆ!

ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆಯ ಆರೋಪಿ ಶ್ರೀಕಾಂತ್ ಪಂಗಾರ್ಕರ್ ಮುಂಬರುವ ಜಲ್ನಾ ಮುನ್ಸಿಪಲ್ ಕಾರ್ಪೊರೇಷನ್ ಚುನಾವಣೆಯಲ್ಲಿ ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧಿಸುತ್ತಿದ್ದಾರೆ ಎಂಬ ಸುದ್ದಿ  ಹಲವು ರಾಷ್ಟ್ರೀಯ ಮಾಧ್ಯಮಗಳಲ್ಲಿ ವರದಿಯಾಗಿದೆ.  ಗೌರಿ ಲಂಕೇಶ್ ಹತ್ಯೆ ಸೇರಿದಂತೆ...

‘ಮೋದಿ ಟ್ರಂಪ್‌ಗೆ ಕರೆ ಮಾಡದ ಕಾರಣ ಭಾರತ-ಯುಎಸ್ ವ್ಯಾಪಾರ ಒಪ್ಪಂದ ನಡೆಯಲಿಲ್ಲ’: ಹೊವಾರ್ಡ್ ಲುಟ್ನಿಕ್ 

ಪ್ರಧಾನಿ ನರೇಂದ್ರ ಮೋದಿ ಅವರು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರಿಗೆ ಸರಿಯಾದ ಸಮಯಕ್ಕೆ ಕರೆ ಮಾಡದ ಕಾರಣ ಭಾರತದೊಂದಿಗಿನ ವ್ಯಾಪಾರ ಒಪ್ಪಂದ ನಡೆಯಲಿಲ್ಲ ಎಂದು ಅಮೆರಿಕದ ವಾಣಿಜ್ಯ ಕಾರ್ಯದರ್ಶಿ ಹೊವಾರ್ಡ್ ಲುಟ್ನಿಕ್...

‘ರೈಲ್ವೆ ಸಚಿವಾಲಯವನ್ನು ವೈಯಕ್ತಿಕ ಆಸ್ತಿಯಾಗಿ ಬಳಸಿಕೊಳ್ಳಲಾಗಿದೆ’: ಲಾಲು ಮತ್ತು ಕುಟುಂಬದ ವಿರುದ್ಧ ದೆಹಲಿ ನ್ಯಾಯಾಲಯ ಆರೋಪ

ನವದೆಹಲಿ: ಉದ್ಯೋಗಕ್ಕಾಗಿ ಭೂಮಿ ಹಗರಣದಲ್ಲಿ ಆರ್‌ಜೆಡಿ ಮುಖ್ಯಸ್ಥ ಮತ್ತು ಮಾಜಿ ರೈಲ್ವೆ ಸಚಿವ ಲಾಲು ಪ್ರಸಾದ್ ಯಾದವ್, ಅವರ ಕುಟುಂಬದ ಸದಸ್ಯರು ಮತ್ತು ಇತರರ ವಿರುದ್ಧ ದೆಹಲಿ ನ್ಯಾಯಾಲಯ ಗಂಭೀರ ಆರೋಪಗಳನ್ನು ಮಾಡಿದೆ.  ಯಾದವ್...