Homeಕರ್ನಾಟಕಬಿ.ನಾರಾಯಣರಾವ್ ನಿಧನ: ರಾಜಕಾರಣಿಗಳು, ಗಣ್ಯರ ಸಂತಾಪ

ಬಿ.ನಾರಾಯಣರಾವ್ ನಿಧನ: ರಾಜಕಾರಣಿಗಳು, ಗಣ್ಯರ ಸಂತಾಪ

ಮೊದಲ‌ ಸಲ ಶಾಸಕರಾಗಿ ಭರವಸೆಯ ನಾಯಕನಾಗಿ ಬೆಳೆಯುತ್ತಿದ್ದ ಬಿ.ನಾರಾಯಣ ರಾವ್ ನಡುಹಾದಿಯಲ್ಲಿ ಬಾಳಪಯಣ ಕೊನೆಗೊಳಿಸಿ ನಮ್ಮನ್ನು ಶೋಕದಲ್ಲಿ ಮುಳುಗಿಸಿದ್ದಾರೆ- ಸಿದ್ದರಾಮಯ್ಯ

- Advertisement -
- Advertisement -

ಬಸವಕಲ್ಯಾಣ ಕ್ಷೇತ್ರದ ಕಾಂಗ್ರೆಸ್ ಶಾಸಕ ಬಿ.ನಾರಾಯಣರಾವ್ ಇಂದು ಕೊರೊನಾದಿಂದ ಬೆಂಗಳೂರಿನ ಮಣಿಪಾಲ್ ಆಸ್ಪತ್ರೆಯಲ್ಲಿ ನಿಧನರಾಗಿದ್ದು, ರಾಜಕಾರಣಿಗಳು ಸೇರಿದಂತೆ ಹಲವು ಗಣ್ಯರು ಸಂತಾಪ ವ್ಯಕ್ತಪಡಿಸಿದ್ದಾರೆ.

ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಟ್ವೀಟ್ ಮಾಡಿ, “ಮೊದಲ‌ ಸಲ ಶಾಸಕರಾಗಿ ಭರವಸೆಯ ನಾಯಕನಾಗಿ ಬೆಳೆಯುತ್ತಿದ್ದ ಬಿ.ನಾರಾಯಣ ರಾವ್ ನಡುಹಾದಿಯಲ್ಲಿ ಬಾಳಪಯಣ ಕೊನೆಗೊಳಿಸಿ ನಮ್ಮನ್ನು ಶೋಕದಲ್ಲಿ ಮುಳುಗಿಸಿದ್ದಾರೆ. ವೈಯಕ್ತಿಕವಾಗಿ ನನಗೆ ಆತ್ಮೀಯರಾಗಿದ್ದ ನಾರಾಯಣ ರಾವ್, ಹಲವಾರು ಕನಸುಗಳನ್ನು ಕಟ್ಟಿಕೊಂಡಿದ್ದ ಸಾಮಾಜಿಕ ಬದ್ದತೆಯ ನಾಯಕ. ಹೀಗಾಗಬಾರದಿತ್ತು. ನನ್ನ ಸಂತಾಪಗಳು” ಎಂದು ಬರೆದುಕೊಂಡಿದ್ದಾರೆ.

ಇದನ್ನೂ ಓದಿ: ಲಿಂಗಾಯಿತರು ನನಗೆ ಮತ ಕೊಡದಿದ್ದರೂ ಪರವಾಗಿಲ್ಲ, ಬಸವ ತತ್ವದ ಮೇಲೆ ನಡೆದರೆ ಸಾಕು: ಶಾಸಕ ಬಿ.ನಾರಾಯಣರಾವ್ ಸಂದರ್ಶನ…

ಶಾಸಕ. ಬಿ. ನಾರಾಯಣರಾವ್ ಅವರ ನಿಧನಕ್ಕೆ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ತೀವ್ರ ಸಂತಾಪ ವ್ಯಕ್ತಪಡಿಸಿದ್ದು, “ನಿನ್ನೆಯಷ್ಟೇ ಕೇಂದ್ರ ರೈಲ್ವೆ ಖಾತೆ ರಾಜ್ಯ ಸಚಿವ ಸುರೇಶ್ ಅಂಗಡಿಯವರನ್ನು ಕಳೆದುಕೊಂಡಿರುವ ದು:ಖದಿಂದ ಚೇತರಿಸಿಕೊಳ್ಳುವ ಮುನ್ನವೇ ಶಾಸಕ. ಬಿ. ನಾರಾಯಣರಾವ್ ಅವರು ಮೃತಪಟ್ಟಿರುವುದು ಮತ್ತೊಂದು ಆಘಾತ ತಂದಿದೆ. 2018ರ ವಿಧಾನಸಭೆಯ ಚುನಾವಣೆಯಲ್ಲಿ ಬಸವಕಲ್ಯಾಣ ಕ್ಷೇತ್ರದಿಂದ ಸ್ಪರ್ಧಿಸಿ ನಾರಾಯಣರಾವ್ ಅವರು ಗೆಲುವು ಸಾಧಿಸಿದ್ದರು. ವಿಧಾನಸಭೆಯಲ್ಲಿ ಜ್ವಲಂತ ಸಮಸ್ಯೆಗಳ ಕುರಿತು ಧ್ವನಿ ಎತ್ತುತ್ತಿದ್ದ ಅವರು ಅಸಾಧರಣ ವಾಗ್ಮಿಗಳಾಗಿದ್ದರು. ಕಾಂಗ್ರೆಸ್ ಪಕ್ಷದ ನಿಷ್ಠಾವಂತ ಕಾರ್ಯಕರ್ತರಾಗಿ ದುಡಿದು, ಬಸವಕಲ್ಯಾಣ ಕ್ಷೇತ್ರದ ಅಭಿವೃದ್ಧಿಗೆ ಬಹಳಷ್ಟು ಕೊಡುಗೆ ನೀಡಿದ್ದಾರೆ. ಅವರ ನಿಧನದಿಂದ ಅತ್ಯುತ್ತಮ ಶಾಸಕರೊಬ್ಬರನ್ನು ಕಳೆದುಕೊಂಡಂತಾಗಿದೆ. ಮೃತರ ಆತ್ಮಕ್ಕೆ ಭಗವಂತ ಸದ್ಗತಿ ನೀಡಲಿ ಹಾಗೂ ಅವರ ಕುಟುಂಬದ ಸದಸ್ಯರಿಗೆ ದುಃಖವನ್ನು ಭರಿಸುವ ಶಕ್ತಿಯನ್ನು ನೀಡಲಿ” ಎಂದು ತಿಳಿಸಿದ್ದಾರೆ.

ಶಾಸಕರಾದ ಕೆ.ಜೆ.ಜಾರ್ಜ್ ಸಂತಾಪ ಸೂಚಿಸಿ, “ಕಾಂಗ್ರೆಸ್ ಪಕ್ಷದ ಹಿರಿಯ ನಾಯಕ ಹಾಗೂ ಬಸವ ಕಲ್ಯಾಣ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಶಾಸಕ ಶ್ರೀ ಬಿ. ನಾರಾಯಣ ರಾವ್ ಅವರ ನಿಧನದ ಸುದ್ದಿ ತಿಳಿದು ಬಹಳ ಆಘಾತವಾಗಿದೆ. ಅವರ ಆತ್ಮಕ್ಕೆ ಶಾಂತಿ ಸಿಗಲಿ ಮತ್ತು ಅವರ ಕುಟುಂಬಕ್ಕೆ ದುಃಖವನ್ನು ಭರಿಸುವ ಶಕ್ತಿಯನ್ನು ಭಗವಂತ ನೀಡಲಿ ಎಂದು ಪ್ರಾರ್ಥಿಸುತ್ತೇನೆ” ಎಂದು ಟ್ವೀಟ್ ಮಾಡಿದ್ದಾರೆ.

ಮಾಜಿ ಶಾಸಕರಾದ ಸತೀಶ್ ಕೆ.ಸೈಲ್ ಟ್ವೀಟ್ ಮಾಡಿ, “ಬಸವ ಕಲ್ಯಾಣ ವಿಧಾನಸಭಾ ಕ್ಷೇತ್ರದ ಶಾಸಕ ಶ್ರೀ ಬಿ. ನಾರಾಯಣ ರಾವ್ ಅವರ ನಿಧನದ ಸುದ್ದಿ ತಿಳಿದು ಬಹಳ ಆಘಾತವಾಗಿದೆ. ಅವರ ಆತ್ಮಕ್ಕೆ ಶಾಂತಿ ಸಿಗಲಿ ಮತ್ತು ಅವರ ಕುಟುಂಬಕ್ಕೆ ದುಃಖವನ್ನು ಭರಿಸುವ ಶಕ್ತಿಯನ್ನು ಭಗವಂತ ನೀಡಲಿ ಎಂದು ಪ್ರಾರ್ಥಿಸುತ್ತೇನೆ” ಎಂದು ಹೇಳಿದ್ದಾರೆ.

ನೇರ, ನಿಷ್ಟುರ ಮತ್ತು ಪ್ರಾಮಾಣಿಕ ರಾಜಕಾರಣಿಯಾಗಿದ್ದ ಬಿ.ನಾರಾಯಣರಾವ್ ಅವರ ನಿಧನ ರಾಜ್ಯಕ್ಕೆ ತುಂಬಲಾರದ ನಷ್ಟವಾಗಿದ್ದು, ಹಲವರು ಸಂತಾಪ ಸೂಚಿಸಿದ್ದಾರೆ.


ಇದನ್ನೂ ಓದಿ: ಸದನದಲ್ಲಿ ಮಿಂಚಿದ ಬಸವ ಪ್ರಣೀತ ಶಾಸಕ ನಾರಾಯಣರಾವ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

2,000 ರೂ.ವರೆಗಿನ UPI ಪಾವತಿಗೆ ಶುಲ್ಕವಿಲ್ಲ ಎಂದ ಕೇಂದ್ರ ಸರ್ಕಾರ

ಡಿಜಿಟಲ್ ಪಾವತಿ ಬಳಸುವ ಕೋಟ್ಯಂತರ ಸಾಮಾನ್ಯ ಜನರಿಗೆ ಕೇಂದ್ರ ಹಣಕಾಸು ಸಚಿವಾಲಯ ಮಹತ್ವದ ಸ್ಪಷ್ಟನೆ ನೀಡಿದ್ದು, 2,000 ರೂಪಾಯಿವರೆಗಿನ ಯುಪಿಐ (UPI) ವಹಿವಾಟುಗಳಿಗೆ ಯಾವುದೇ ರೀತಿಯ ಶುಲ್ಕ ವಿಧಿಸುವಂತಿಲ್ಲ ಎಂದು ಅಧಿಸೂಚನೆ ಹೊರಡಿಸಿದೆ....

ಯಾದಗಿರಿ| ಸಿದ್ಧಲಿಂಗೇಶ್ವರ ದೇವಸ್ಥಾನಕ್ಕೆ ತೆರಳಿದ್ದ ದಲಿತರ ಮೇಲೆ ಮಾರಣಾಂತಿಕ ಹಲ್ಲೆ

ಸಿದ್ಧಲಿಂಗೇಶ್ವರ ದೇವಸ್ಥಾನಕ್ಕೆ ತೆರಳಿದ್ದ ದಲಿತ ಸಮುದಾಯದ ಭಕ್ತರ ಮೇಲೆ ಸವರ್ಣೀಯರು ಮಾರಣಾಂತಿಕ ಹಲ್ಲೆ ನಡೆದಿರುವ ಆರೋಪ ಯಾದಗಿರಿ ಜಿಲ್ಲೆಯ ವಡಗೇರಾ ತಾಲೂಕಿನ ಗುರುಸುಣಿಗಿ ಗುಡ್ಡದಲ್ಲಿ ಕೇಳಿಬಂದಿದೆ. ಚಾಮನಾಳ ಗ್ರಾಮದ ದಲಿತ ಭಕ್ತರನ್ನು ಗುರಿಯಾಗಿಸಿಕೊಂಡು ಗುರುಸುಣಿಗಿ...

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...