ನ್ಯಾಯಮೂರ್ತಿ ಭೂಷಣ್ ರಾಮಕೃಷ್ಣ ಗವಾಯಿ ಬುಧವಾರ ಭಾರತದ 52 ನೇ ಮುಖ್ಯ ನ್ಯಾಯಮೂರ್ತಿಯಾಗಿ ಪ್ರಮಾಣ ವಚನ ಸ್ವೀಕರಿಸಿದರು. ರಾಷ್ಟ್ರಪತಿ ಭವನದಲ್ಲಿ ನಡೆದ ಸಮಾರಂಭದಲ್ಲಿ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಪ್ರಮಾಣ ವಚನ ಬೋಧಿಸಿದರು. ಭಾರತದ ಮುಖ್ಯ ನ್ಯಾಯಮೂರ್ತಿಯಾಗಿ
ಮಂಗಳವಾರ ನಿವೃತ್ತರಾದ ಮುಖ್ಯ ನ್ಯಾಯಮೂರ್ತಿ ಸಂಜೀವ್ ಖನ್ನಾ ಅವರ ನಂತರ ಗವಾಯಿ ಅಧಿಕಾರ ವಹಿಸಿಕೊಳ್ಳುತ್ತಾರೆ. ನವೆಂಬರ್ 23 ರಂದು ನಿವೃತ್ತರಾಗಲಿರುವ ಬಿಆರ್ ಗವಾಯಿ ಅವರು ಆರು ತಿಂಗಳ ಅಧಿಕಾರಾವಧಿಯನ್ನು ಹೊಂದಿರುತ್ತಾರೆ.
ಉಪರಾಷ್ಟ್ರಪತಿ ಜಗದೀಪ್ ಧಂಖರ್, ಪ್ರಧಾನಿ ನರೇಂದ್ರ ಮೋದಿ, ಕೇಂದ್ರ ಗೃಹ ಸಚಿವ ಅಮಿತ್ ಶಾ, ರಕ್ಷಣಾ ಸಚಿವ ರಾಜನಾಥ್ ಸಿಂಗ್ ಮತ್ತು ವಿದೇಶಾಂಗ ಸಚಿವ ಎಸ್. ಜೈಶಂಕರ್ ಅವರು ಸಮಾರಂಭದಲ್ಲಿ ಭಾಗವಹಿಸಿದ್ದರು ಎಂದು ದಿ ಇಂಡಿಯನ್ ಎಕ್ಸ್‌ಪ್ರೆಸ್ ವರದಿ ಮಾಡಿದೆ.
VIDEO | Delhi: Justice Bhushan Ramkrishna Gavai takes oath as Chief Justice of India.
(Source: Third Party)
(Full video available on PTI Videos – https://t.co/n147TvqRQz) pic.twitter.com/o136ayhiJM
— Press Trust of India (@PTI_News) May 14, 2025
ನ್ಯಾಯಮೂರ್ತಿ ಗವಾಯಿ ಅವರು 1987 ಮತ್ತು 1990 ರ ನಡುವೆ ಬಾಂಬೆ ಹೈಕೋರ್ಟ್‌ನಲ್ಲಿ, ಮುಖ್ಯವಾಗಿ ನಾಗ್ಪುರ ಪೀಠದಲ್ಲಿ ವಕೀಲರಾಗಿ ಸೇವೆ ಸಲ್ಲಿಸಿದ್ದರು. ಅವರು 2000 ರಿಂದ 2003 ರವರೆಗೆ ನಾಗಪುರ ಪೀಠಕ್ಕೆ ಸರ್ಕಾರಿ ವಕೀಲ ಮತ್ತು ಸಾರ್ವಜನಿಕ ಅಭಿಯೋಜಕರಾಗಿ ಸೇವೆ ಸಲ್ಲಿಸಿದ್ದರು. ನಂತರ ಅವರನ್ನು ಹೆಚ್ಚುವರಿ ನ್ಯಾಯಾಧೀಶರನ್ನಾಗಿ ಮಾಡಲಾಯಿತು. 2005 ರಲ್ಲಿ ಅವರು ಖಾಯಂ ನ್ಯಾಯಾಧೀಶರಾದರು. ಗವಾಯಿ ಅವರನ್ನು ಮೇ 2019 ರಲ್ಲಿ ಸುಪ್ರೀಂಕೋರ್ಟ್ ನ್ಯಾಯಾಧೀಶರನ್ನಾಗಿ ಬಡ್ತಿ ನೀಡಲಾಯಿತು.
ನಿವೃತ್ತಿಯ ನಂತರದ ಕೆಲಸವನ್ನು ವಹಿಸಿಕೊಳ್ಳುವುದಿಲ್ಲ: ನಿರ್ಗಮಿತ ಸಿಜೆಐ
ನಿರ್ಗಮಿತ ಮುಖ್ಯ ನ್ಯಾಯಮೂರ್ತಿ ಸಂಜೀವ್ ಖನ್ನಾ ಮಂಗಳವಾರ ನಿವೃತ್ತಿಯ ನಂತರದ ಯಾವುದೇ ಕೆಲಸವನ್ನು ವಹಿಸಿಕೊಳ್ಳುವುದಿಲ್ಲ ಎಂದು ಹೇಳಿದ್ದಾರೆ ಎಂದು ದಿ ಟೆಲಿಗ್ರಾಫ್ ವರದಿ ಮಾಡಿದೆ.
“ನಾನು ನಿವೃತ್ತಿಯ ನಂತರದ ಯಾವುದೇ ಹುದ್ದೆಗಳನ್ನು ಸ್ವೀಕರಿಸುವುದಿಲ್ಲ. ಆದರೆ ಬಹುಶಃ ನನ್ನ ಮೂರನೇ ಇನ್ನಿಂಗ್ಸ್‌ನಲ್ಲಿ ನಾನು ಕಾನೂನಿಗೆ ಸಂಬಂಧಿಸಿದ ಏನಾದರೂ ಮಾಡುತ್ತೇನೆ” ಎಂದು ಖನ್ನಾ ಹೇಳಿರುವುದಾಗಿ ಉಲ್ಲೇಖಿಸಲಾಗಿದೆ.
ಅವರ ಈ ಹೇಳಿಕೆಯು ಅವರ ಹಿಂದಿನ ಕೆಲವು ಮುಖ್ಯ ನ್ಯಾಯಮೂರ್ತಿಗಳಿಗಿಂತ ಭಿನ್ನವಾಗಿದೆ. ಅವರ ಹಿಂದಿನ ಮುಖ್ಯ ನ್ಯಾಯಮೂರ್ತಿಗಳು ನಿವೃತ್ತಿಯ ನಂತರ ರಾಜ್ಯಪಾಲರು ಅಥವಾ ರಾಜ್ಯಸಭಾ ಸದಸ್ಯರಂತಹ ಹುದ್ದೆಗಳನ್ನು ಅಲಂಕರಿಸಿದ್ದಾರೆ. ಉದಾಹರಣೆಗೆ ಮಾಜಿ ಮುಖ್ಯ ನ್ಯಾಯಮೂರ್ತಿಗಳಾದ ಪಿ ಸದಾಶಿವಂ ಮತ್ತು ರಂಜನ್ ಗೊಗೊಯ್. ಭಾರತದ ಮುಖ್ಯ ನ್ಯಾಯಮೂರ್ತಿಯಾಗಿ
ಇಲ್ಲಿ ಕ್ಲಿಕ್ ಮಾಡಿ
ಇದನ್ನೂಓದಿ: ಮುರ್ಷಿದಾಬಾದ್ ಹಿಂಸಾಚಾರ | ಎಸ್‌ಐಟಿ, ಸಿಬಿಐ ತನಿಖೆ ಕೋರಿ ಸಲ್ಲಿಸಿದ ಅರ್ಜಿ ವಿಚಾರಣೆಗೆ ಸುಪ್ರೀಂಕೋರ್ಟ್ ನಕಾರ
ಮುರ್ಷಿದಾಬಾದ್ ಹಿಂಸಾಚಾರ | ಎಸ್‌ಐಟಿ, ಸಿಬಿಐ ತನಿಖೆ ಕೋರಿ ಸಲ್ಲಿಸಿದ ಅರ್ಜಿ ವಿಚಾರಣೆಗೆ ಸುಪ್ರೀಂಕೋರ್ಟ್ ನಕಾರ

