Homeಕರ್ನಾಟಕಬಿಎಸ್‌ವೈ ಆಡಿಯೋ ಕುರಿತು ಸಿದ್ದರಾಮಯ್ಯ-ನಳಿನ್‌ ಕುಮಾರ್‌ ಕಟೀಲ್‌ ನಡುವೆ ಟ್ವೀಟ್‌ ಸಮರ

ಬಿಎಸ್‌ವೈ ಆಡಿಯೋ ಕುರಿತು ಸಿದ್ದರಾಮಯ್ಯ-ನಳಿನ್‌ ಕುಮಾರ್‌ ಕಟೀಲ್‌ ನಡುವೆ ಟ್ವೀಟ್‌ ಸಮರ

- Advertisement -
- Advertisement -

ಮೂರು ದಿನದಿಂದ ಬಿ.ಎಸ್‌ ಯಡಿಯೂರಪ್ಪನವರ ಆಡಿಯೋ ಸಾಕಷ್ಟು ಸದ್ದು ಮಾಡುತ್ತಿದೆ. ಆಪರೇಷನ್‌ ಕಮಲ ಪ್ರಯತ್ನದಲ್ಲಿ ಅಮಿತ್‌ ಶಾರವರ ಕೈವಾಡವಿದೆ ಎನ್ನುವುದು ಆಡಿಯೋದ ಸಾರ. ಈ ಕುರಿತು ಕಾಂಗ್ರೆಸ್‌ ರಾಜ್ಯಪಾಲರ ಮೂಲಕ ರಾಷ್ಟ್ರಪತಿಗಳಿಗೆ ದೂರನ್ನು ಸಹ ನೀಡಿದೆ. ರಾಜ್ಯಪಾಲರು ಆ ದೂರನ್ನು ಕೇಂದ್ರ ಗೃಹ ಇಲಾಖೆಗೂ ಕೂಡ ರವಾನೆ ಮಾಡಿದೆ ಎನ್ನಲಾಗುತ್ತಿದೆ.

ಇನ್ನು ಈ ಕುರಿತು ಬಿ.ಎಸ್‌ ಯಡಿಯೂರಪ್ಪನವರ ಆಡಿಯೋ ರಿಲೀಸ್ ಮಾಡಿದ್ದು ಸಿದ್ದರಾಮಯ್ಯನವರೆ ಎಂದು ಬಿಜೆಪಿ ರಾಜ್ಯಧ್ಯಕ್ಷ ನಳಿನ್‌ ಕುಮಾರ್ ಕಟೀಲ್‌ರವರು ಆರೋಪಿಸಿದ್ದರು. ಇದಕ್ಕೆ ತಿರುಗೇಟು ನೀಡಿದ್ದ ಸಿದ್ದರಾಮಯ್ಯನವರು, ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಅವರ ಆಡಿಯೋ ನನ್ನಿಂದ ರಿಲೀಸ್ ಆಗಿದೆಯೆಂದು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಜೋಕ್ ಮಾಡಿದ್ದಾರೆ.
ಬಿಜೆಪಿ ಕೋರ್ ಕಮಿಟಿ ಸಭೆಗೆ ವಿರೋಧ ಪಕ್ಷದ ನಾಯಕನನ್ನು ಆಹ್ವಾನಿಸಿದ್ದೀರಾ?
ಈ ರೀತಿ ಜೋಕ್ ಮಾಡೋರನ್ನ ‘……’ ಎನ್ನುತ್ತಾರೆ ಗೊತ್ತಾ? ಎಂದು ಖಾರವಾಗಿ ನುಡಿದಿದ್ದರು.

ಇದರಿಂದ ಕುಪಿತಗೊಂಡ ನಳಿನ್‌ ಕುಮಾರ್‌ ಕಟೀಲ್‌ರವರು ಕಳೆದ ಹಲವು ವರ್ಷಗಳಲ್ಲಿ ನಿಮ್ಮ ಅನುಮತಿ ಇಲ್ಲದೆ ನಿಮ್ಮ ಪಕ್ಷದಲ್ಲಿ ಏನಾದರೂ ನಡೆದಿದೆಯೇ ಸಿದ್ದರಾಮಯ್ಯನವರೆ? ಪ್ರತಿ ವಿಷಯದಲ್ಲೂ ಸುಳ್ಳು ಹೇಳುವ ನಿಮ್ಮನ್ನು ಜನ ಏನೆಂದು ಕರೆಯುತ್ತಾರೆ ಗೊತ್ತಾ? ಎಲ್ಲಾ ಕಮಿಟಿಗಳಲ್ಲಿದ್ದು ಕರ್ನಾಟಕ ಕಾಂಗ್ರೆಸ್‌ ಅನ್ನು ನಿರ್ನಾಮ ಮಾಡುತ್ತಿರುವ ನಿಮ್ಮನ್ನು ಬಿಜೆಪಿ ಕೋರ್ ಕಮಿಟಿ ಸಭೆಗೆ ಆಹ್ವಾನಿಸುವುದು ಉಂಟೇ? ಎಂದು ಟೀಕಿಸಿದ್ದಾರೆ.

ಅಷ್ಟರಲ್ಲಿ ಟಿವಿ ವಾಹಿನಿಯೊಂದಕ್ಕೆ ಪ್ರತಿಕ್ರಿಯಿ ನೀಡಿರುವ ಯಡಿಯೂರಪ್ಪನವರು ಹೌದು ನೂರಕ್ಕೆ ನೂರರಷ್ಟು ಅದು ನನ್ನದೇ ಧ್ವನಿ ಎಂದು ಒಪ್ಪಿಕೊಂಡಿದ್ದರು. ಆದರೆ ಪ್ರಹ್ಲಾದ್‌ ಜೋಶಿಯವರು ಹುಬ್ಬಳ್ಳಿಯಲ್ಲಿ ಆ ರೀತಿಯ ಕೋರ್‌ ಕಮಿಟಿ ಸಭೆ ನಡೆದೇ ಇಲ್ಲ ಎಂದು ಹೇಳಿಕೆ ನೀಡಿದ್ದರು. ಒಟ್ಟಿನಲ್ಲಿ ಆಡಿಯೋವೊಂದು ಇನ್ನಷ್ಟು ರಾದ್ಧಾಂತವನ್ನು ಎಬ್ಬಿಸುವುದು ಗ್ಯಾರಂಟಿ ಎನ್ನಿಸುತ್ತಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಅಸ್ಸಾಂನ ನಾಲ್ವರು ಮುಸ್ಲಿಂ ಮಹಿಳೆಯರ ಗಡೀಪಾರು ಪ್ರಕ್ರಿಯೆಗೆ ಸುಪ್ರೀಂ ತಡೆ: ಕೇಂದ್ರ, ರಾಜ್ಯ ಸರ್ಕಾರಗಳಿಗೆ ನೋಟಿಸ್‌

ಅಸ್ಸಾಂನಲ್ಲಿ 'ವಿದೇಶಿಯರು' ಎಂದು ಘೋಷಿತರಾಗಿ ಗಡೀಪಾರು ಭೀತಿ ಎದುರಿಸುತ್ತಿದ್ದ ನಾಲ್ವರು ಮುಸ್ಲಿಂ ಮಹಿಳೆಯರ ವಿಚಾರದಲ್ಲಿ ಭಾರತದ ಸುಪ್ರೀಂ ಕೋರ್ಟ್ ಮಹತ್ವದ ಮಧ್ಯಪ್ರವೇಶ ಮಾಡಿದೆ. ಈ ಮಹಿಳೆಯರನ್ನು ದೇಶದಿಂದ ಹೊರಹಾಕುವ (ಗಡೀಪಾರು ಮಾಡುವ) ಪ್ರಕ್ರಿಯೆಗೆ...

ದೆಹಲಿಗೆ ಬಂದಿಳಿದ ಕಾಕ್ರೋಚ್ ಪಾರ್ಟಿ ಸಂಸ್ಥಾಪಕ ಅಭಿಜೀತ್ ದೀಪ್ಕೆ : ಜಂತರ್‌ ಮಂತರ್‌ನಲ್ಲಿ ಪ್ರತಿಭಟಿಸಲು ಪೊಲೀಸರಿಂದ ಅನುಮತಿ

ಶನಿವಾರ (ಜೂ.6) ಬೆಳಿಗ್ಗೆ ದೆಹಲಿಗೆ ಆಗಮಿಸಿದ ಕಾಕ್ರೋಚ್ ಜನತಾ ಪಾರ್ಟಿಯ (ಸಿಜೆಪಿ) ಸಂಸ್ಥಾಪಕ ಅಭಿಜೀತ್ ದೀಪ್ಕೆ, ಪ್ರತಿಭಟನೆಗೆ ದೆಹಲಿ ಪೊಲೀಸರು ಅನುಮತಿ ನೀಡಿದ್ದಾರೆ ಎಂದು ತಿಳಿಸಿದ್ದು, ಯೋಜಿತ ಆಂದೋಲನಕ್ಕಾಗಿ ನೇರವಾಗಿ ಜಂತರ್ ಮಂತರ್‌ನಲ್ಲಿ...

ಜಾಗತಿಕವಾಗಿ ಮೂರು ವರ್ಷಗಳಲ್ಲಿ 600 ಪರಿಸರ ರಕ್ಷಕರ ಹತ್ಯೆ: ವಿಶ್ವಸಂಸ್ಥೆ ತೀವ್ರ ಕಳವಳ: ಜಾಗತಿಕ ತಾಪಮಾನಕ್ಕೆ ಸಾಕ್ಷಿಯಾಗುತ್ತಿರುವ ಭಾರತ

ಜೂನ್ 5 ವಿಶ್ವ ಪರಿಸರ ದಿನ. ಜಗತ್ತಿನಾದ್ಯಂತ ಗಿಡ ನೆಡುವ, ಹಸಿರು ಭಾಷಣ ಬಿಗಿಯುವ ಮತ್ತು ಪರಿಸರ ಕಾಳಜಿಯ ಸಡಗರದ ಆಚರಣೆಗಳು ಎಲ್ಲೆಡೆ ವಿಭಿನ್ನ ರೀತಿಗಳಲ್ಲಿ ವಿಜೃಂಭಿಸುತ್ತಿವೆ. ಆದರೆ, ಇದೇ ಹೊತ್ತಿನಲ್ಲಿ ವಿಶ್ವಸಂಸ್ಥೆಯು...

ಮಣಿಪುರ ಎಸ್‌ಐಆರ್ ವಿರೋಧಿಸಿದ ಕುಕಿ-ಝೋ ಗುಂಪುಗಳು

ಮಣಿಪುರ ರಾಜ್ಯದಲ್ಲಿ ಪ್ರಸ್ತುತ ನಡೆಯುತ್ತಿರುವ ಮತದಾರರ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆ ವಿರುದ್ಧ ಪ್ರತಿಭಟನೆ ವ್ಯಕ್ತವಾಗಿದೆ. ಕುಕಿ-ಝೋ ಬುಡಕಟ್ಟು ಜನಾಂಗದ ಸಾಂಪ್ರದಾಯಿಕ ಗುಂಪಾದ ಕುಕಿ ಇನ್ಪಿ ಮಣಿಪುರ (ಕೆಐಎಂ) ಮತದಾರರ ಪಟ್ಟಿ...

ಹೇಗಿತ್ತು ‘ಕಾಕ್ರೋಚ್ ಜನತಾ ಪಕ್ಷ’ದ ಮೊದಲ ಸುದ್ದಿಗೋಷ್ಠಿ…? ಧರ್ಮೇಂದ್ರ ಪ್ರಧಾನ್‌ ರಾಜೀನಾಮೆಗೆ ಕರೆ

ಜೂನ್ 6, 2026 ರಂದು ಜಂತರ್ ಮಂತರ್‌ನಲ್ಲಿ ನಡೆಯಲಿರುವ 'ಶಾಂತಿಯುತ ಪ್ರತಿಭಟನೆ'ಗೆ ಮುನ್ನ ಜಿರಳೆ ಜನತಾ ಪಕ್ಷ (ಸಿಜೆಪಿ) ತನ್ನ ಮೊದಲ ಪತ್ರಿಕಾಗೋಷ್ಠಿಯನ್ನು ನಡೆಸಿದೆ. ಬುಧವಾರ ಸಂಜೆ (ಜೂ.3) ಸಿಜೆಪಿಯ ಮೂವರು ವಕ್ತಾರರು...

‘ಇದು ಆತ್ಮಹತ್ಯೆಯಲ್ಲ, ಮೋದಿ ಸರ್ಕಾರದ ಭ್ರಷ್ಟ ವ್ಯವಸ್ಥೆ ಮಾಡಿದ ಕೊಲೆ’: ನೀಟ್ ಆಕಾಂಕ್ಷಿಯ ಸಾವಿಗೆ ರಾಹುಲ್ ಗಾಂಧಿ ಆಕ್ರೋಶ

ದೇಶದ ವೈದ್ಯಕೀಯ ಪ್ರವೇಶ ಪರೀಕ್ಷೆಯಾದ ‘ನೀಟ್-ಯುಜಿ’ (NEET-UG) ವಿವಾದ ಮತ್ತು ವಿದ್ಯಾರ್ಥಿಗಳ ಸಾವುಗಳು ಭಾರತದ ಒಟ್ಟಾರೆ ಶಿಕ್ಷಣ ವ್ಯವಸ್ಥೆಯ ದಯನೀಯ ಸ್ಥಿತಿಗೆ ಕನ್ನಡಿ ಹಿಡಿದಿವೆ. ಪರೀಕ್ಷಾ ಅಕ್ರಮಗಳು, ಪ್ರಶ್ನೆ ಪತ್ರಿಕೆ ಸೋರಿಕೆ ಮತ್ತು...

ತಕ್ಷಣವೇ ‘SIR ಹೆಲ್ಪ್‌ ಡೆಸ್ಕ್‌’ ಸ್ಥಾಪಿಸುವಂತೆ ಅಧಿಕಾರಿಗಳಿಗೆ ಸಿಎಂ ಸೂಚನೆ

ರಾಜ್ಯದಲ್ಲಿ ಭಾರತೀಯ ಚುನಾವಣಾ ಆಯೋಗದಿಂದ ನಡೆಯುತ್ತಿರುವ ಎಸ್‌ಐಆರ್ (Special Electoral Roll Purification) ಪ್ರಕ್ರಿಯೆ ಸಂದರ್ಭದಲ್ಲಿ ರಾಜ್ಯದ ಯಾವುದೇ ಪ್ರಜೆಯೂ ತನ್ನ ಅತ್ಯಮೂಲ್ಯವಾದ ಮತದಾನದ ಹಕ್ಕನ್ನು ಕಳೆದುಕೊಳ್ಳಬಾರದು ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್...

ವಿಷಾಹಾರಕ್ಕೆ ಜಾಗತಿಕವಾಗಿ ವರ್ಷಕ್ಕೆ 15 ಲಕ್ಷ ಜನರು ಬಲಿ: ಮಕ್ಕಳಿಗೆ ಹೆಚ್ಚಿನ ಅಪಾಯ: ಭಾರತದ ಸ್ಥಿತಿಯೂ ಆತಂಕಕಾರಿ! 

ನಾವು ದಿನನಿತ್ಯ ಸೇವಿಸುವ ಆಹಾರವೇ ನಮ್ಮ ಜೀವಕ್ಕೆ ಕಂಟಕವಾಗುತ್ತಿದೆಯೇ? ಹೌದು ಎನ್ನುತ್ತದೆ ವಿಶ್ವ ಆರೋಗ್ಯ ಸಂಸ್ಥೆಯ (WHO) ಇತ್ತೀಚಿನ ಆಘಾತಕಾರಿ ವರದಿ. ಜಾಗತಿಕವಾಗಿ ಅಸುರಕ್ಷಿತ ಮತ್ತು ಕಲುಷಿತ ಆಹಾರದ ಸೇವನೆಯಿಂದಾಗಿ ಪ್ರತಿ ವರ್ಷ...

ಡಿಕೆಶಿ ಸಂಪುಟದಲ್ಲಿ ಅಲ್ಪಸಂಖ್ಯಾತರಿಗೆ ಸಿಗುತ್ತಾ ಸೂಕ್ತ ಪ್ರಾತಿನಿಧ್ಯ?

ಮಹತ್ವದ ರಾಜಕೀಯ ಬೆಳವಣಿಗೆಯಲ್ಲಿ ರಾಜ್ಯದ ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ಅವರು ರಾಜೀನಾಮೆ ನೀಡಿ, ಡಿ.ಕೆ ಶಿವಕುಮಾರ್ ಹೊಸ ಮುಖ್ಯಮಂತ್ರಿಯಾಗಿ ಅಧಿಕಾರ ವಹಿಸಿಕೊಂಡಾಗಿದೆ. ಈ ಮೂಲಕ ಕಳೆದ ಒಂದು ವರ್ಷದಿಂದ ನಡೆಯುತ್ತಿದ್ದ ಸಿಎಂ ಬದಲಾವಣೆಯ...

‘ಕರ್ನಾಟಕದಲ್ಲಿ SIR’ ಮತ ಉಳಿಸಿಕೊಳ್ಳುವಂತೆ ಕಾರ್ಯಕರ್ತರಿಗೆ CM ಡಿ.ಕೆ ಶಿವಕುಮಾರ್ ಕರೆ!

ಕರ್ನಾಟಕ ರಾಜಕಾರಣದಲ್ಲಿ ಹೊಸ ಯುಗ ಆರಂಭವಾಗಿದೆ. ರಾಜ್ಯದ 25ನೇ ಮುಖ್ಯಮಂತ್ರಿಯಾಗಿ ಡಿ.ಕೆ. ಶಿವಕುಮಾರ್ ಅವರು ಪ್ರಮಾಣವಚನ ಸ್ವೀಕರಿಸಿದ್ದಾರೆ. ಅಧಿಕಾರ ವಹಿಸಿಕೊಂಡ ಬೆನ್ನಲ್ಲೇ ಕೆಲಸ ಮಾಡದಿರುವ ಸಚಿವ ಮತ್ತು ಶಾಸಕರನ್ನು ಸುಮ್ಮನೆ ಬಿಡುವುದಿಲ್ಲ ಎಂದು...