ರಾಜ್ಯದಲ್ಲಿ 18 ರಿಂದ 45 ವರ್ಷ ವಯಸ್ಸಿನವರಿಗೆ ಉಚಿತ ಲಸಿಕೆ- ಸಿಎಂ ಯಡಿಯೂರಪ್ಪ

ಅಕ್ರಮ ಡಿನೋಟಿಫಿಕೇಶನ್‌ ಭ್ರಷ್ಟಾಚಾರದ ಪ್ರಕರಣದಲ್ಲಿ ಕರ್ನಾಟಕ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ವಿರುದ್ಧದ ತನಿಖೆಗೆ ಸುಪ್ರೀಂ ಕೋರ್ಟ್ ತಾತ್ಕಾಲಿಕ ತಡೆ ನೀಡಿದೆ.

ಖಾಸಗಿ ವ್ಯಕ್ತಿಗಳಿಗೆ 24 ಎಕರೆ ಸರಕಾರಿ ಭೂಮಿಯನ್ನು ಅಕ್ರಮವಾಗಿ ಹಂಚಿಕೆ ಮಾಡಿದ ಆರೋಪ ಯಡಿಯೂರಪ್ಪರವರ ಮೇಲಿದೆ. 2012 ರಲ್ಲಿ ಲೋಕಾಯುಕ್ತರು ಸಲ್ಲಿಸಿದ್ದ ಚಾರ್ಜ್‌ಶೀಟ್‌ನ ಆಧಾರದ ಮೇಲೆ ಆರೋಪಗಳನ್ನು ಗಮನದಲ್ಲಿಟ್ಟುಕೊಂಡು ತನಿಖೆ ನಡೆಸುವಂತೆ ಕರ್ನಾಟಕ ಹೈಕೋರ್ಟ್ ವಿಶೇಷ ನ್ಯಾಯಾಲಯಕ್ಕೆ ಸೂಚಿಸಿತ್ತು.

ಇದನ್ನು ಪ್ರಶ್ನಿಸಿ ಬಿಎಎಸ್‌ವೈ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ್ದರು. ಇಂದು ಸುಪ್ರೀಂ ಕೋರ್ಟ್ ಹೈಕೋರ್ಟ್ ಆದೇಶಕ್ಕೆ ಸದ್ಯಕ್ಕೆ ತಡೆ ನೀಡಿದೆ.

ಕರ್ನಾಟಕದ ಪ್ರಸ್ತುತ ಮುಖ್ಯಮಂತ್ರಿಯಾಗಿರುವ ಬಿ.ಎಸ್.ಯಡಿಯುರಪ್ಪ 2006 ರಲ್ಲಿ ರಾಜ್ಯದ ಉಪಮುಖ್ಯಮಂತ್ರಿಯಾಗಿದ್ದರು. ಈ ಅಧಿಕಾರಾವಧಿಯಲ್ಲಿ ಅಕ್ರಮವಾಗಿ ಭೂಮಿಯ ಡಿ-ನೋಟಿಫೈ ನಡೆಸಿದ್ದಾರೆ ಎಂದು ಆರೋಪಿಸಲಾಗಿದೆ.


ಇದನ್ನೂ ಓದಿ: ಯಡಿಯೂರಪ್ಪ ವಿರುದ್ಧ ಭ್ರಷ್ಟಾಚಾರ ಪ್ರಕರಣ: FIR ರದ್ದತಿ ಕೋರಿದ್ದ ಮನವಿ ತಿರಸ್ಕರಿಸಿದ ಹೈಕೋರ್ಟ್‌

LEAVE A REPLY

Please enter your comment!
Please enter your name here