Homeಮುಖಪುಟವಿಶ್ವಾಸಮತ ಗೆದ್ದ ಯಡಿಯೂರಪ್ಪ: ಸ್ಪೀಕರ್ ಸ್ಥಾನಕ್ಕೆ ರಾಜೀನಾಮೆ ನೀಡಿದ ರಮೇಶ್ ಕುಮಾರ್

ವಿಶ್ವಾಸಮತ ಗೆದ್ದ ಯಡಿಯೂರಪ್ಪ: ಸ್ಪೀಕರ್ ಸ್ಥಾನಕ್ಕೆ ರಾಜೀನಾಮೆ ನೀಡಿದ ರಮೇಶ್ ಕುಮಾರ್

- Advertisement -
- Advertisement -

ಸದನದಲ್ಲಿ ಇಂದು ನಡೆದ ವಿಶ್ವಾಸಮತ ಯಾಚನೆಯಲ್ಲಿ ನಿರೀಕ್ಷೆಯಂತೆ ಬಿಜೆಪಿಯ ಬಿ.ಎಸ್ ಯಡಿಯೂರಪ್ಪ ವಿಶ್ವಾಸಮತ ಸಾಬೀತುಪಡಿಸುವ ಮೂಲಕ ತಮ್ಮ ಮುಖ್ಯಮಂತ್ರಿಯ ಸ್ಥಾನವನ್ನು ಮತ್ತಷ್ಟು ಭದ್ರಪಡಿಸಿಕೊಂಡಿದ್ದಾರೆ.

ಸದನ ಆರಂಭವಾಗುತ್ತಿದ್ದಂತೆ ಸಭಾಧ್ಯಕ್ಷ ರಮೇಶ್ ಕುಮಾರ್ ರವರು ವಿಶ್ವಾಸ ಮತ ಪ್ರಸ್ತಾವನೆ ಮಂಡಿಸಲು ಅವಕಾಶ ನೀಡಿದರು. ಯಡಿಯೂರಪ್ಪನವರು ಪ್ರಸ್ತಾವನೆ ಮಂಡಿಸಿದ ಕೂಡಲೇ ಧ್ವನಿಮತದ ಮೂಲಕ ಪ್ರಸ್ತಾವನೆಯ ಪರವಾಗಿ ಮತಗಳನ್ನು ಅಂಗೀಕರಿಸಲಾಯಿತು.

ನಂತರ ಮಾತನಾಡಿದ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ‘ನರೇಂದ್ರ ಮೋದಿ’ಯವರ ಎಲ್ಲಾ ಯೋಜನೆಗಳನ್ನು ಮುಂದುವರೆಸುವುದಾಗಿ ಹೇಳಿದರು. ಹಾಗೆಯೇ ಮಾಜಿ ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯ ಮತ್ತು ಕುಮಾರಸ್ವಾಮಿಯವರು ಎಂದೂ ದ್ವೇಷದ ರಾಜಕಾರಣ ಮಾಡಿಲ್ಲ. ನಾನು ಕೂಡ ದ್ವೇಷದ ರಾಜಕಾರಣ ಮಾಡೋಲ್ಲ ಎಂದರು.

ನಂತರ ಮಾತನಾಡಿದ ಸ್ಪೀಕರ್ ರಮೇಶ್ ಕುಮಾರ್ ರವರು ತಾವು ಸದನದ ಸಭಾಧ್ಯಕ್ಷರಾದ ಪರಿಯನ್ನು ವಿವರಿಸಿದರು. ನಾನು ಈ ಜವಾಬ್ದಾರಿಯನ್ನು ಸಮರ್ಪಕವಾಗಿ ನಿರ್ವಹಿಸಿದ್ದೇನೆ ಎಂಬ ಭಾವವನ್ನು ವ್ಯಕ್ತಪಡಿಸಿದ ಅವರು ಶಾಸಕರುಗಳು ಭ್ರಷ್ಟಾಚಾರ ನಿಲ್ಲಿಸಿ ಬಡವರ ಪರ ಕೆಲಸ ಮಾಡಬೇಕೆಂದು ಕೋರಿದರು.

ಸಾಮಾನ್ಯ ಕುಟುಂಬದಿಂದ ಬಂದವನು, ವಿದ್ಯಾರ್ಥಿ ಚಳವಳಿಯಲ್ಲಿ ಲಾಠಿ ಚಾರ್ಜ್ ಆದಾಗ ವಿರೋಧ ಪಕ್ಷದವರನ್ನು ನೋಡಲು ಹೋದವನು ಇಲ್ಲಿಗೆ ಬಂದು ನಿಂತಿದ್ದೇನೆ. ನನ್ನ ಜೀವನದಲ್ಲಿ ಇದು ಬಹಳ ದೊಡ್ಡ ಗೌರವ ಎಂದು ಭಾವಿಸಿದ್ದೇನೆ. ಈಗ ನಾನು ರಾಜೀನಾಮೆ ನೀಡುತ್ತಿದ್ದೇನೆ. ಉಪಸಭಾಧ್ಯಕ್ಷರು ಕಲಾಪ ನಡೆಸುವಂತೆ ಕೋರುತ್ತೇನೆ ಎಂದರು.

ಮಾನ್ಯ ಯಡಿಯೂರಪ್ಪನವರ ಮೂಲಕ ರಾಜ್ಯಕ್ಕೆ ಒಳ್ಳೆಯದಾಗಲಿ. ಬಲಾಢ್ಯರಿಗಲ್ಲ ಬದಲಿಗೆ ದಿಕ್ಕಿಲ್ಲದವರಿಗೆ, ಬಡವರಿಗೆ, ಅನ್ಯಾಯಕ್ಕೆ ಒಳಗಾದವರಿಗೆ ನ್ಯಾಯ ಸಿಗಲಿ ಎಂದು ಹಾರೈಸುತ್ತೇನೆ ಎಂದು ಹೇಳಿ ರಾಜೀನಾಮೆ ನೀಡಿದರು.

 

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ಪಶ್ಚಿಮ ಬಂಗಾಳದ ಹೂಗ್ಲಿಯಲ್ಲಿ ಬಾಂಬ್ ಸ್ಫೋಟ: ಬಾಲಕ ಮೃತ್ಯು, ಇಬ್ಬರಿಗೆ ಗಂಭೀರ ಗಾಯ

0
ಪಶ್ಚಿಮ ಬಂಗಾಳದ ಹೂಗ್ಲಿ ಜಿಲ್ಲೆಯಲ್ಲಿ ಕಚ್ಚಾ ಬಾಂಬ್ ಸ್ಫೋಟ ಸಂಭವಿಸಿ ಏಳು ವರ್ಷದ ಬಾಲಕ ಸಾವನ್ನಪ್ಪಿದ್ದು, ಇತರ ಇಬ್ಬರು ಅಪ್ರಾಪ್ತ ಬಾಲಕರಿಗೂ ತೀವ್ರ ಗಾಯಗಳಾಗಿದೆ. ಮೃತ ಬಾಲಕನನ್ನು ರಾಜ್ ಬಿಸ್ವಾಸ್ ಎಂದು ಗುರುತಿಸಲಾಗಿದೆ. ಘಟನೆಯಲ್ಲಿ...