ಕರ್ನಾಟಕದ ಸಿಎಂ ಬದಲಾಗಲಿದ್ದಾರೆ ಎಂಬ ವದಂತಿಗಳ ಮಧ್ಯೆ “ಅಂತಹದ್ದೇನೂ ಇಲ್ಲ, ಬಿ.ಎಸ್.ಯಡಿಯೂರಪ್ಪ ಸಿಎಂ ಆಗಿದ್ದು, ಅವರು ಉತ್ತಮ ಕೆಲಸ ಮಾಡುತ್ತಿದ್ದಾರೆ. ಅವರು ಸಿಎಂ ಆಗಿ ಮುಂದುವರಿಯಲಿದ್ದಾರೆ” ಎಂದು ರಾಜ್ಯ ಬಿಜೆಪಿ ಉಸ್ತುವಾರಿ ಹೊತ್ತಿರುವ ಬಿಜೆಪಿ ಪ್ರಧಾನ ಕಾರ್ಯದರ್ಶಿ ಅರುಣ್ ಸಿಂಗ್ ಹೇಳಿದ್ದಾರೆ.
ಕೋವಿಡ್ ನಿರ್ವಹಣೆಯಲ್ಲಿ ಮುಖ್ಯಮಂತ್ರಿ ಯಡಿಯೂರಪ್ಪನವರು ಉತ್ತಮ ಕೆಲಸ ಮಾಡಿದ್ದಾರೆ. ಅವರೊಂದಿಗೆ ಎಲ್ಲಾ ಮಂತ್ರಿಗಳೂ ಸಹ ಕೈಜೋಡಿಸಿದ್ದಾರೆ. ಹಾಗಾಗಿ ಅವರೇ ಸಿಎಂ ಆಗಿ ಮುಂದುವರೆಯಲಿದ್ದಾರೆ ಎಂದು ಅವರು ಹೇಳಿದ್ದಾಗಿ ಎಎನ್‌ಐ ವರದಿ ಮಾಡಿದೆ.
There is nothing like that. BS Yediyurappa is the CM, he is doing good work. He will continue to be the CM. He, along with all ministers, did good work regarding COVID: Arun Singh, National General Secretary and Karnataka BJP incharge, on leadership row in the state pic.twitter.com/BQGDsgmROm
— ANI (@ANI) June 10, 2021
ಕರ್ನಾಟಕ ಬಿಜೆಪಿ ರಾಜ್ಯಾಧ್ಯಕ್ಷರಾದ ನಳೀನ್ ಕುಮಾರ್ ಕಟೀಲ್‌ರವರನ್ನು ಬದಲಿಸುತ್ತೀರಾ ಎಂಬ ಪ್ರಶ್ನೆಗೆ ಉತ್ತರಿಸಿದ ಅವರು, “ಅದೊಂದು ವದಂತಿ. ಅಂತಹ ವದಂತಿಗಳನ್ನು ದಯವಿಟ್ಟು ಹರಡಬೇಡಿ. ಅವರ ನೇತೃತ್ವದಲ್ಲಿ ಬಿಜೆಪಿ ಪಕ್ಷವು ಉತ್ತಮವಾಗಿ ಕಾರ್ಯನಿರ್ವಹಿಸುತ್ತಿದೆ. ನಾವು ಫೀಲ್ಡ್‌ನಲ್ಲಿ ಒಳ್ಳೆಯ ಕೆಲಸ ಮಾಡುತ್ತಿದ್ದೇವೆ. ಹಾಗಾಗಿ ಅವರ ಬದಲಾವಣೆ ಎಂಬುದು ಕೇವಲ ಕಲ್ಪನೆ ಎಂದು ಅರುಣ್ ಸಿಂಗ್ ಹೇಳಿದ್ದಾರೆ.
ಸಿಎಂ ಬಿ.ಎಸ್ ಯಡಿಯೂರಪ್ಪ ಅವರು ನಮ್ಮ ನಾಯಕ. ಅವರನ್ನು ಬೆಂಬಲಿಸಿ 65 ಕ್ಕೂ ಹೆಚ್ಚು ಶಾಸಕರು ಪತ್ರ ಬರೆದಿದ್ದಾರೆ ಎಂದು ಸಿಎಂ ರವರ ರಾಜಕೀಯ ಕಾರ್ಯದರ್ಶಿ ಮತ್ತು ಶಾಸಕ ಎಂ.ಪಿ ರೇಣುಕಾಚಾರ್ಯರವರು ಜೂನ್ 7 ರಂದು ತಿಳಿಸಿದ್ದರು.
ಇದನ್ನೂ ಓದಿ: 65 ಶಾಸಕರು ಯಡಿಯೂರಪ್ಪನವರ ಪರವಿದ್ದಾರೆ: ಎಂ.ಪಿ ರೇಣುಕಾಚಾರ್ಯ


