Homeಕರ್ನಾಟಕಬಾಬಾ ಬುಡಾನ್ | ರಾಜ್ಯ ಸರಕಾರ ಸುಪ್ರೀಂ ಕೋರ್ಟ್‌ಗೆ ತನ್ನ ನಿಲುವು ತಿಳಿಸಲಿ: ಸೈಯದ್ ಫಕ್ರುದ್ದೀನ್...

ಬಾಬಾ ಬುಡಾನ್ | ರಾಜ್ಯ ಸರಕಾರ ಸುಪ್ರೀಂ ಕೋರ್ಟ್‌ಗೆ ತನ್ನ ನಿಲುವು ತಿಳಿಸಲಿ: ಸೈಯದ್ ಫಕ್ರುದ್ದೀನ್ ಶಾ ಖಾದ್ರಿ

- Advertisement -
- Advertisement -

ಚಿಕ್ಕಮಗಳೂರು: ಶ್ರೀ ಗುರು ದತ್ತಾತ್ರೇಯ ಬಾಬಾ ಬುಡಾನ್ ಸ್ವಾಮಿ ದರ್ಗಾದ ವಿಚಾರದಲ್ಲಿ ನ್ಯಾಯಬದ್ಧವಾದ ನಿರ್ಧಾರ ತೆಗೆದುಕೊಳ್ಳುವಲ್ಲಿ ಬಿಜೆಪಿ ಸೇರಿದಂತೆ ಹಿಂದಿನ ಸರಕಾರಗಳು ಸಂಪೂರ್ಣವಾಗಿ ವಿಫಲವಾಗಿವೆ. ದರ್ಗಾದ ವಿಚಾರಗಳ ಬಗ್ಗೆ ರಾಜ್ಯ ಸರಕಾರ ತನ್ನ ನಿಲುವು ತಿಳಿಸಬೇಕೆಂದು ಸುಪ್ರೀಂ ಕೋರ್ಟ್ ನಿರ್ದೇಶಿಸಿರುವ ಹಿನ್ನೆಲೆಯಲ್ಲಿ ಸರಕಾರ ಪೂರಕ ದಾಖಲೆಗಳನ್ನು ಪರಿಶೀಲಿಸಿ ನ್ಯಾಯಾಲಯಕ್ಕೆ ತನ್ನ ನಿಲುವು ತಿಳಿಸಬೇಕು ಎಂದು ಸೈಯದ್ ಬುಡಾನ್ ಶಾ ಖಾದ್ರಿ ವಂಶಸ್ಥರ ಸಂಘದ ಪ್ರಧಾನ ಕಾರ್ಯದರ್ಶಿ ಸೈಯದ್ ಫಕ್ರುದ್ದೀನ್ ಶಾ ಖಾದ್ರಿ (ಅಜ್ಮತ್ ಪಾಷ) ಒತ್ತಾಯಿಸಿದ್ದಾರೆ.

ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಶ್ರೀಗುರು ದತ್ತಾತ್ರೇಯ ಬಾಬಾ ಬುಡಾನ್ ಸ್ವಾಮಿ ದರ್ಗಾದ ವಿಚಾರ ಮುಂದಿಟ್ಟುಕೊಂಡು ಬಿಜೆಪಿ ರಾಜಕೀಯ ಲಾಭ ಪಡೆಯುವ ಕೆಲಸ ಮಾಡುತ್ತಿದ್ದರೆ, ಸಂಘಪರಿವಾರ ವಿವಾದ ಸೃಷ್ಟಿಸಿ ಕೋಮು ಸಾಮರಸ್ಯ ಹದಗೆಡಿಸುವ ಕೆಲಸವನ್ನು ನಿರಂತರವಾಗಿ ಮಾಡುತ್ತಿದೆ. ಇದನ್ನು ಕೂಡಲೇ ನಿಲ್ಲಿಸಬೇಕೆಂದು ಹೇಳಿದರು.

ಸಂಘಪರಿವಾರದವರು ಗುಹೆಯ ಒಳ ಭಾಗದಲ್ಲಿರುವ ಸೂಫಿ ಪಂಥದ ಗಾದಿ(ಪೀಠ), ಛಿಲ್ಲಾ(ಧ್ಯಾನ ಸ್ಥಳ), ಚಿರಾಗ್(ನಂದಾದೀಪ) ಮತ್ತು ಖಡಾವೆ(ಪಾದುಕೆ)ಗಳ ವಿಚಾರ ಮುಂದಿಟ್ಟುಕೊಂಡು ದೇಶದ ಮುಜರಾಯಿ ಇಲಾಖೆ ಅಧೀನದಲ್ಲಿರುವ ಮುಹಮ್ಮದನ್ ಸಂಸ್ಥೆಯ ಧಾರ್ಮಿಕ ಆಚರಣೆಗಳನ್ನು ಸಂಪೂರ್ಣವಾಗಿ ಬದಲಾಯಿಸುವ ಹುನ್ನಾರ ನಡೆಸುತ್ತಿದ್ದಾರೆ. ಈ ಸಂಸ್ಥೆಯ ವಿಚಾರದಲ್ಲಿ ಕೆಲ ಪಕ್ಷಗಳು ನಾವು ಅಲ್ಪಸಂಖ್ಯಾತರ ಪರ ಇದ್ದೇವೆ ಎನ್ನುತ್ತಿದ್ದರೂ ಅಲ್ಪಸಂಖ್ಯಾತರಿಗೆ ನ್ಯಾಯ ಒದಗಿಸುವಲ್ಲಿ ವಿಫಲವಾಗಿವೆ. ಬಿಜೆಪಿ ಪಕ್ಷ ಈ ವಿಚಾರದಲ್ಲಿ ಹಿಂದೂಗಳ ಪರ ಎಂಬಂತೆ ಬಿಂಬಿಸಿಕೊಂಡು ರಾಜಕೀಯ ಲಾಭ ಪಡೆಯುವ ಷಡ್ಯಂತ್ರ ನಡೆಸುತ್ತಿದೆ ಎಂದು ಆರೋಪಿಸಿದರು.

ಮುಹಮ್ಮದನ್ ಸಂಸ್ಥೆಯಲ್ಲಿನ ಸೂಫಿ ಪಂಥದ ಆಚರಣೆಗಳನ್ನು ತಡೆಯುವ ಹುನ್ನಾರಗಳು ಇತ್ತೀಚೆಗೆ ನಡೆಯುತ್ತಿವೆ. ಇದರ ವಿರುದ್ಧ ಸರಕಾರ ಮತ್ತು ಸಂಬಂಧಿಸಿದ ಇಲಾಖಾಧಿಕಾರಿಗಳು ಮೇಲಿನ ದಾಖಲೆಗಳನ್ನು ಪರಿಶೀಲಿಸಿ ಕಾನೂನು ಕ್ರಮ ಕೈಗೊಳ್ಳಬೇಕು ಹಾಗೂ ನಮಗೆ ನ್ಯಾಯ ಒದಗಿಸಬೇಕು. ದತ್ತಾತ್ರೇಯ ಬಾಬಾ ಬುಡಾನ್ ಸ್ವಾಮಿ ದರ್ಗಾದಲ್ಲಿನ ಪೂಜೆ ಹಕ್ಕಿನ ಕುರಿತು 8 ವಾರಗಳ ಒಳಗೆ ತನ್ನ ನಿಲುವು ತಿಳಿಸಬೇಕೆಂದು ಸುಪ್ರೀಂ ಕೋರ್ಟ್ ರಾಜ್ಯ ಸರಕಾರಕ್ಕೆ ಗಡುವು ನೀಡಿದ್ದು, ಸರಕಾರ ಮೇಲಿನ ಸರಕಾರಿ ಆದೇಶ, ಮಹಾರಾಜರ ಕಾಲದ ಸರಕಾರಿ ಆದೇಶ ಹಾಗೂ ಗೆಜೆಟ್ ದಾಖಲೆಗಳನ್ನು ಪರಿಶೀಲಿಸಬೇಕು ಹಾಗೂ ನಮ್ಮೊಂದಿಗೆ ಚರ್ಚಿಸಿ ನ್ಯಾಯಾಲಯಕ್ಕೆ ಸೂಕ್ತ ನಿಲುವು ತಿಳಿಸಿ, ನ್ಯಾಯ ಒದಗಿಸಬೇಕು ಎಂದು ಶಾಖಾದ್ರಿ ಆಗ್ರಹಿಸಿದರು.

ಸುದ್ದಿಗೋಷ್ಠಿಯಲ್ಲಿ ಸೈಯದ್ ನಿಝಾಮುದ್ದೀನ್ ಖಾದ್ರಿ, ಸಲೀಂ ಮಲಿಕ್, ಅರ್ಬಾಝ್, ತನ್ವೀರ್ ಅಹ್ಮದ್, ಮುಹಮ್ಮದ್ ಅತೀಕ್ ಉಪಸ್ಥಿತರಿದ್ದರು.

……………………………………………………….

ತಾಲ್ಲೂಕಿನ ಗುರು ದತ್ತಾತ್ರೇಯ ಬಾಬಾ ಬುಡನ್ ಸ್ವಾಮಿ ದರ್ಗಾಕ್ಕೆ ಕಳೆದ ವರ್ಷ ಜನವರಿಯಲ್ಲಿ ಬಾಬಾ ಬುಡನ್ ವಂಶಸ್ಥ ಸಯ್ಯದ್ ಫಕ್ರುದ್ದೀನ್ ಷಾ ಖಾದ್ರಿ ಅವರು ಭೇಟಿ ನೀಡಿದ ಸಂದರ್ಭದಲ್ಲಿ  ಕಲಿಮ ತಯ್ಯಿಬಿನ ಜಪ ನಡಿಸಿ, ಪ್ರತಿವರ್ಷದಂತೆ ಹರಕೆಯ ರೀತಿಯಲ್ಲಿ ಝಿಕ್ರ್ ಎ ಕಲಿಮ ಎ ಫಾತೀಹ ನಡೆಸಿದ್ದರು. ಈ ವೇಳೆ ತಮ್ಮ ಪೂರ್ವಜರ ಇತಿಹಾಸ ಹಂಚಿಕೊಂಡ ಅವರು, ದರ್ಗಾದ ವ್ಯವಸ್ಥಾಪನಾ ಸಮಿತಿ ರಚನೆ ಆದ ಬಳಿಕ ಅಲ್ಲಿರುವ ಪವಿತ್ರ ಕಲಿಮ ತಯ್ಯಿಬವನ್ನು ಮರೆಮಾಚಿಸಿ ಆ ಶ್ಲೋಕದ ಮೇಲೆ ಮುಜಾವರ್ ಹಾಗೂ ಅರ್ಚಕರಿಗೆ ಮಾತ್ರ ಅವಕಾಶವೆಂದು ಬರೆದು ಶ್ಲೋಕವನ್ನು ರಟ್ಟಿನ ತುಂಡಿನಿಂದ ಮರೆಮಾಚಲಾಗಿತ್ತು.

ಐತಿಹಾಸಿಕ ಶ್ಲೋಕದ ಪ್ರಕಾರ ದರ್ಗಾಕ್ಕೆ ಸಂಬಂಧಪಟ್ಟ ಗುರುಗಳಾದ ಸಜ್ಜಾದ್ ಎ ನಶೀನ್ ಹಾಗೂ ಶಾ ಖಾದ್ರಿ ಮತ್ತು ನಂತರ ಮುಜಾವರ್ ಅವರಿಗೆ ಪ್ರವೇಶಕ್ಕೆ ಅವಕಾಶವಿತ್ತು. ಈಚೆಗೆ ಹಲವಾರು ವಿರೋಧದ ನಡುವೆ ನೇಮಕವಾದ ಅರ್ಚಕರು ಪವಿತ್ರವಾದ ಕಲಿಮ ತಯ್ಯಿಬವನ್ನೂ ಒಪ್ಪಿ ಒಳಗಡೆ ಪ್ರವೇಶ ಮಾಡಿದ್ದಾರೆಂದು ನಾವು ನಂಬಿದ್ದೇವೆ ಎಂದಿದ್ದರು.

ದರ್ಗಾದ ಸಜ್ಜಾದ್ ಎ ನಶೀನ್(ಪೀಠಾಧಿಪತಿ) ಎಂದರೇನು? ಶಾ ಖಾದ್ರಿ (ಪೀಠಾಧೀಶರು) ಎಂದರೇನು? ಎಂಬುದನ್ನು ಮುಜರಾಯಿ ಇಲಾಖೆ ಗೆಜೆಟ್‌ನಲ್ಲಿ ಸ್ಪಷ್ಟವಾಗಿ ವಿವರಿಸಿದೆ. ಅದರಂತೆ ಸಜ್ಜಾದ್ ಎ ನಶೀನ್ ಹಜರತ್ ಸಯ್ಯದ್ ಗೌಸ್ ಮೊಹಿಯುದ್ದೀನ್ ಶಾಖಾದ್ರಿ ಅವರಿಗೂ ಇಲಾಖೆ ಗೌರವ ನೀಡಬೇಕು. ಜಿಕರ್ ಫಾತೀಹಾ ನಡೆಸಲು ಅವಕಾಶ ಮಾಡಿ ಕೊಟ್ಟ ಅಧಿಕಾರಿಗಳಿಗೆ ಧನ್ಯವಾದ ಸಲ್ಲಿಸಿದ್ದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಿಡದಿ ಟೌನ್‌ಶಿಪ್: 80% ರೈತರ ಒಪ್ಪಿಗೆ ಇದೆ ಎಂಬ ವಾದ ಸಾಬೀತುಪಡಿಸಿ – ಸರ್ಕಾರಕ್ಕೆ ಸಂಯುಕ್ತ ಹೋರಾಟ ಸವಾಲು

ಬಿಡದಿ ಟೌನ್‌ಶಿಪ್ ಯೋಜನೆಗೆ ಭೂಮಿ ನೀಡಲು ಉದ್ದೇಶಿತ ಪ್ರದೇಶದ ಶೇಕಡಾ 80 ರಷ್ಟು ರೈತರು ಒಪ್ಪಿದ್ದಾರೆ ಎಂಬ ಸರ್ಕಾರದ ವಾದಕ್ಕೆ ಯಾವುದೇ ವಾಸ್ತವಿಕ ಆಧಾರವಿಲ್ಲ. ಸರ್ಕಾರಕ್ಕೆ ಧೈರ್ಯವಿದ್ದರೆ ತನ್ನ ಈ ಹೇಳಿಕೆಯನ್ನು ಜನರ...

ವಿದ್ಯಾರ್ಥಿಗಳ ಮೇಲಿನ ಪೊಲೀಸ್ ದೌರ್ಜನ್ಯ: ವಿಚಾರಣೆ ತಿರಸ್ಕರಿಸಿದ ಸುಪ್ರೀಂ; “ವಿಡಿಯೋ ನೋಡಲು ನಮಗೆ ಆಸಕ್ತಿಯೂ ಇಲ್ಲ, ಸಮಯವೂ ಇಲ್ಲ” ಎಂದ ನ್ಯಾಯಮೂರ್ತಿ ಸೂರ್ಯಕಾಂತ್

ನವದೆಹಲಿ: ಪ್ರಶ್ನೆಪತ್ರಿಕೆ ಸೋರಿಕೆ ಮತ್ತು ಪರೀಕ್ಷಾ ಅಕ್ರಮಗಳನ್ನು ಖಂಡಿಸಿ ಶಾಂತಿಯುತವಾಗಿ ಹೋರಾಡುತ್ತಿದ್ದ ಯುವ ಸಮೂಹದ ಮೇಲೆ ದೆಹಲಿ ಪೊಲೀಸರು ನಡೆಸಿದ ಭೀಕರ ದೌರ್ಜನ್ಯದ ವಿರುದ್ಧ ನ್ಯಾಯದ ನಿರೀಕ್ಷೆಯಲ್ಲಿದ್ದ ವಿದ್ಯಾರ್ಥಿಗಳಿಗೆ ದೇಶದ ಅತ್ಯುನ್ನತ ನ್ಯಾಯಾಲಯದಿಂದ...

ರಾಹುಲ್ ಗಾಂಧಿ ವಿದ್ಯಾರ್ಥಿಗಳನ್ನು ‘ರಾಜಕೀಯ ದಾಳ’ವಾಗಿ ಬಳಸುತ್ತಿದ್ದಾರೆ ಎಂದ ಧರ್ಮೇಂದ್ರ ಪ್ರಧಾನ್ ವಿರುದ್ಧ ವ್ಯಾಪಕ ಆಕ್ರೋಶ

ನವದೆಹಲಿ: ದೇಶಾದ್ಯಂತ ನೀಟ್ (NEET) ಪರೀಕ್ಷೆಯ ಅಕ್ರಮಗಳು, ಪ್ರಶ್ನೆಪತ್ರಿಕೆ ಸೋರಿಕೆ ಹಾಗೂ ಶಿಕ್ಷಣ ಇಲಾಖೆಯ ಸರಣಿ ವೈಫಲ್ಯಗಳನ್ನು ಖಂಡಿಸಿ ವಿದ್ಯಾರ್ಥಿಗಳು ಮತ್ತು ವಿರೋಧ ಪಕ್ಷಗಳು ತೀವ್ರ ಪ್ರತಿಭಟನೆ ನಡೆಸುತ್ತಿದ್ದು, ಶಿಕ್ಷಣ ಸಚಿವ ಧರ್ಮೇಂದ್ರ...

ಸಿಜೆಪಿ ಪ್ರತಿಭಟನಾಕಾರರ ಮೇಲೆ ಪೆಲೆಟ್ ಗನ್ ಬಳಕೆ, ವಿದ್ಯುತ್ ಲಾಠಿ ಪ್ರಹಾರ: ಆರೋಪ ನಿರಾಕರಿಸಿದ ಪೊಲೀಸರು

ಸೋಮವಾರ (ಜುಲೈ 20) ಕಾಕ್ರೋಚ್ ಜನತಾ ಪಕ್ಷ (ಸಿಜೆಪಿ) ಕರೆ ನೀಡಿದ್ದ ಸಂಸತ್ ಚಲೋ ಮೆರವಣಿ ಸಂದರ್ಭದಲ್ಲಿ ನಡೆದ ಪೊಲೀಸರ ದೌರ್ಜನ್ಯದಲ್ಲಿ ಗಾಯಗೊಂಡ 80 ಪ್ರತಿಭಟನಾಕಾರರಲ್ಲಿ ಕನಿಷ್ಠ ಒಬ್ಬರಿಗೆ ಪೆಲೆಟ್ ಗನ್ ಗಾಯಗಳಾಗಿವೆ...

ಪ್ರತಿಭಟನಾನಿರತ ಮಹಿಳೆಯ ಕೆನ್ನೆಗೆ ಹೊಡೆದ ದೆಹಲಿ ಪೊಲೀಸ್ ಅಧಿಕಾರಿ ಸಂದೀಪ್ ಲಂಬಾ: ವಿಡಿಯೋ ವೈರಲ್ ನಂತರ ವ್ಯಾಪಕ ಟೀಕೆ

ದೆಹಲಿ: ಶಾಂತಿಯುತವಾಗಿ ತಮ್ಮ ಹಕ್ಕುಗಳಿಗಾಗಿ ಹೋರಾಡುತ್ತಿದ್ದ ಪ್ರತಿಭಟನಾಕಾರರ ಮೇಲೆ ದೆಹಲಿ ಪೊಲೀಸರು ನಡೆಸಿದ ಕ್ರೂರ ದಮನ ಕಾರ್ಯಾಚರಣೆಯ ಭೀಕರ ಮುಖವಾಡವೊಂದು ಮತ್ತೆ ಜಗಜ್ಜಾಹೀರಾಗಿದೆ. ಸೋಮವಾರ ಸಂಸತ್ತಿನ ಮೆರವಣಿಗೆಯಲ್ಲಿ ಭಾಗವಹಿಸಿದ್ದ ಪ್ರತಿಭಟನಾಕಾರರನ್ನು ಹತ್ತಿಕ್ಕುವ ನೆಪದಲ್ಲಿ,...

‘ಪೊಲೀಸರನ್ನು ನಿಯಂತ್ರಿಸದಿದ್ದರೆ ಜರ್ಮನಿಯ ನಾಜಿಗಳಂತೆ ಆಗಬಹುದು’: ದಲಿತ ವ್ಯಕ್ತಿಯ ಮೇಲಿನ ದೌರ್ಜನ್ಯ ಪ್ರಕರಣದಲ್ಲಿ ಪಾಟ್ನಾ ಹೈಕೋರ್ಟ್ ಕಳವಳ

ದಲಿತ ವ್ಯಕ್ತಿಯೊಬ್ಬರ ಜಾತಿ ತಿಳಿದ ನಂತರ ಅವರ ಮೇಲೆ ಕ್ರೂರವಾಗಿ ಹಲ್ಲೆ ನಡೆಸಿದ ಆರೋಪ ಎದುರಿಸುತ್ತಿರುವ ಬಿಹಾರದ ಮಾಜಿ ಪೊಲೀಸ್ ಅಧಿಕಾರಿಯ ವಿರುದ್ಧ ತಕ್ಷಣವೇ ಎಫ್‌ಐಆರ್ (FIR) ದಾಖಲಿಸುವಂತೆ ಪಾಟ್ನಾ ಹೈಕೋರ್ಟ್ ನಿರ್ದೇಶಿಸಿದೆ....

“ಎಷ್ಟೊಂದು ದುರಹಂಕಾರ!”: ಜೆ.ಪಿ.ನಡ್ಡಾ ಹೇಳಿಕೆಗೆ ಕಪಿಲ್ ಸಿಬಲ್ ತೀವ್ರ ಆಕ್ಷೇಪ; ಪ್ರತಿಭಟನಾನಿರತ ಸಿಜೆಪಿ ಬೆಂಬಲಿಸಿ ವೀಡಿಯೋ ಸಂದೇಶ

ಪರೀಕ್ಷಾ ಅಕ್ರಮಗಳನ್ನು ಖಂಡಿಸಿ ಕ್ರಾಂತಿಕಾರಿ ಜಿರಳೆ ಜನತಾ ಪಕ್ಷ (ಸಿಜೆಪಿ) ನಡೆಸುತ್ತಿರುವ ವಿದ್ಯಾರ್ಥಿ ಪ್ರತಿಭಟನೆಯ ವಿಚಾರದಲ್ಲಿ ಕೇಂದ್ರ ಸರ್ಕಾರದ ನಡೆಗೆ ದೇಶಾದ್ಯಂತ ತೀವ್ರ ಆಕ್ರೋಶ ವ್ಯಕ್ತವಾಗುತ್ತಿದೆ. ಈ ನಡುವೆ ಕೇಂದ್ರ ಸಚಿವ ಜೆ.ಪಿ....

ವಿದ್ಯಾರ್ಥಿಗಳ ಮೇಲೆ ಪೊಲೀಸ್ ದೌರ್ಜನ್ಯ: ಮೋದಿ-ಅಮಿತ್ ಶಾ ರಾಜೀನಾಮೆಗೆ ರಾಹುಲ್ ಗಾಂಧಿ ಆಗ್ರಹ

ನೀಟ್‌ ಪ್ರಶ್ನೆ ಪತ್ರಿಕೆ ಸೋರಿಕೆ ಹೊಣೆ ಹೊತ್ತು ಕೇಂದ್ರ ಶಿಕ್ಷಣ ಸಚಿವ ರಾಜೀನಾಮೆ ನೀಡಬೇಕು ಎಂದು ಆಗ್ರಹಿಸಿ 'ಸಂಸತ್ ಚಲೋ' ಹಮ್ಮಿಕೊಂಡಿದ್ದ ವಿದ್ಯಾರ್ಥಿಗಳ ಮೇಲೆ ನಡೆದ ಪೊಲೀಸ್ ದೌರ್ಜನ್ಯವನ್ನು ಕಾಂಗ್ರೆಸ್ ನಾಯಕ ರಾಹುಲ್...

ಕೇಂದ್ರ ಸಚಿವ ಜೆ.ಪಿ.ನಡ್ಡಾ ಅವರನ್ನು ಭೇಟಿಯಾದ ಸಿಜೆಪಿ ನಿಯೋಗ; ಮನವಿ ಪತ್ರ ಸಲ್ಲಿಕೆ

ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್‌ ರಾಜೀನಾಮೆಗೆ ಆಗ್ರಹಿಸಿ ನವದೆಹಲಿಯಲ್ಲಿ ಪ್ರತಿಭಟನೆ ತೀವ್ರಗೊಂಡಿರುವ ಬೆನ್ನಲ್ಲೇ ಇಂದು ಕೇಂದ್ರ ಸಚಿವ ಜೆಪಿ ನಡ್ಡಾ ಅವರನ್ನು ಸಿಜೆಪಿ ಸದಸ್ಯರಾದ ಸೌರವ್ ದಾಸ್ ಮತ್ತು ಅಶುತೋಷ್ ರಂಕಾ...

‘ಸಂಸತ್ ಚಲೋ’: ‘ಸೋನಮ್ ವಾಂಗ್ಚುಕ್ ಪತ್ನಿ ಮೇಲೆ ದೆಹಲಿ ಪೊಲೀಸರಿಂದ ಹಲ್ಲೆ’: ವಿದ್ಯಾರ್ಥಿಗಳ ಮೇಲೂ ಲಾಠಿ ಚಾರ್ಜ್  

ನವದೆಹಲಿ: ರಾಷ್ಟ್ರ ರಾಜಧಾನಿಯಲ್ಲಿ ಆಯೋಜಿಸಲಾಗಿದ್ದ ‘ಸಂಸದ್ ಚಲೋ’ ಮೆರವಣಿಗೆಯ ವೇಳೆ ಶಿಕ್ಷಣ ತಜ್ಞ ಹಾಗೂ ಲಡಾಖ್ ಹೋರಾಟಗಾರ ಸೋನಮ್ ವಾಂಗ್ಚುಕ್ ಅವರ ಪತ್ನಿ ಗೀತಾಂಜಲಿ ಜೆ. ಆಂಗ್ಮೋ ಸೇರಿದಂತೆ ಹಲವಾರು ಪ್ರತಿಭಟನಾಕಾರರ ಮೇಲೆ...