Homeಕರ್ನಾಟಕಬಾಬಾ ಬುಡನ್‌ಗಿರಿ ಪ್ರಕರಣ: ನ್ಯಾಯಾಲಯಕ್ಕೆ ​ಸರ್ಕಾರದ ನಿಲುವು ತಿಳಿಸಲು ಐವರು ಸಚಿವರ ಸಂಪುಟ ಉಪಸಮಿತಿ ರಚನೆ

ಬಾಬಾ ಬುಡನ್‌ಗಿರಿ ಪ್ರಕರಣ: ನ್ಯಾಯಾಲಯಕ್ಕೆ ​ಸರ್ಕಾರದ ನಿಲುವು ತಿಳಿಸಲು ಐವರು ಸಚಿವರ ಸಂಪುಟ ಉಪಸಮಿತಿ ರಚನೆ

- Advertisement -
- Advertisement -

ಚಿಕ್ಕಮಗಳೂರು ಜಿಲ್ಲೆಯ ಇನಾಂ ದತ್ತಾತ್ರೇಯ ಪೀಠದ ಗುರು ದತ್ತಾತ್ರೇಯ ಬಾಬಾ ಬುಡನ್ ಸ್ವಾಮಿ ಅಧಿಸೂಚಿತ ಸಂಸ್ಥೆಗೆ ಸಂಬಂಧಿಸಿದಂತೆ ಸೈಯದ್ ಮೊಹಿಯುದ್ದೀನ್ ಶಾ ಖಾದ್ರಿ ಕೇಸ್ ವಿಚಾರವಾಗಿ ಸರ್ವೋಚ್ಚ ನ್ಯಾಯಾಲಯಕ್ಕೆ ರಾಜ್ಯ ಸರ್ಕಾರದ ನಿಲುವು ತಿಳಿಸಲು ಐವರು ಸಚಿವರನ್ನೊಳಗೊಂಡ ಸಂಪುಟ ಉಪಸಮಿತಿಯನ್ನು ರಚನೆ ಮಾಡಲಾಗಿದೆ.

ನಿನ್ನೆ( ಜ.18) ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದಲ್ಲಿ ನಡೆದ ಸಚಿವ ಸಂಪುಟ ಸಭೆಯಲ್ಲಿ ಸಮಿತಿ ರಚನೆ ಮಾಡಲಾಗಿದ್ದು, ಸಮಿತಿಯ ಅಧ್ಯಕ್ಷರಾಗಿ ಗೃಹ ಸಚಿವ ಡಾ. ಜಿ. ಪರಮೇಶ್ವರ್ ಅವರನ್ನು ನೇಮಕ ಮಾಡಲಾಗಿದೆ. ಕಾನೂನು, ಸಂಸದೀಯ ವ್ಯವಹಾರಗಳು ಮತ್ತು ಪ್ರವಾಸೋದ್ಯಮ ಇಲಾಖೆ ಸಚಿವ ಹೆಚ್.ಕೆ ಪಾಟೀಲ್,​ ಸಾರಿಗೆ ಮತ್ತು ಮುಜರಾಯಿ ಸಚಿವ ರಾಮಲಿಂಗಾರೆಡ್ಡಿ, ಕಂದಾಯ ಸಚಿವ ಕೃಷ್ಣಬೈರೇಗೌಡ, ಚಿಕ್ಕಮಗಳೂರು ಜಿಲ್ಲಾ ಉಸ್ತುವಾರಿ ಸಚಿವರು ಕೆಜೆ. ಜಾರ್ಜ್ ಅವರು ಸಮಿತಿ ಸದಸ್ಯರಾಗಿ ನೇಮಕಗೊಂಡಿದ್ದಾರೆ.

ಗುರು ದತ್ತಾತ್ರೇಯ ಬಾಬಾ ಬುಡನ್​ಸ್ವಾಮಿ ದರ್ಗಾ ಇನಾಂ ದತ್ತಪೀಠಕ್ಕೆ ಅರ್ಚಕರನ್ನು ನೇಮಕ ಮಾಡುವ ವಿಚಾರವಾಗಿ ಈ ಹಿಂದೆ ಬಿಜೆಪಿ ನೇತೃತ್ವದ ರಾಜ್ಯ ಸರ್ಕಾರ ಆಡಳಿತ ಮಂಡಳಿ ರಚನೆ ಮಾಡಿತ್ತು. ಈ ಆಡಳಿತ ಮಂಡಳಿಯಲ್ಲಿ ಓರ್ವ ಮುಸ್ಲಿಂ ಸದಸ್ಯ ಸೇರಿ ಒಟ್ಟು 8 ಜನರು ಇದ್ದಾರೆ. ಅರ್ಚಕರನ್ನು ನೇಮಿಸುವ ಅಧಿಕಾರ ಈ ಆಡಳಿತ ಮಂಡಳಿಗೆ ಇದೆ ಎಂದು ರಾಜ್ಯ ಸರ್ಕಾರ ಸುತ್ತೋಲೆಯಲ್ಲಿ ತಿಳಿಸಿತ್ತು.

ಇದನ್ನು ಪ್ರಶ್ನಿಸಿ ಬಾಬಾ ಬುಡನ್‌ಗಿರಿ ದರ್ಗಾದ ಉಸ್ತುವಾರಿ ನೋಡಿಕೊಳ್ಳುವ ಸೈಯದ್ ಗೌಸ್ ಮೊಹಿಯುದ್ದೀನ್ ಶಾ ಖಾದ್ರಿ ಸುಪ್ರೀಂ ಕೋರ್ಟ್‌ನಲ್ಲಿ ದಾವೆ ಹೂಡಿದ್ದಾರೆ. ಈ ಹಿನ್ನೆಲೆ, ಪ್ರಕರಣದ ಸಂಬಂಧ ನ್ಯಾಯಾಲಯಕ್ಕೆ ರಾಜ್ಯ ಸರ್ಕಾರದ ನಿಲುವನ್ನು ವ್ಯಕ್ತಪಡಿಸಲು ಸಹಾಯ ಮಾಡುವ ಸಲುವಾಗಿ ಸಂಪುಟ ಉಪಸಮಿತಿಯನ್ನು ರಚಿಸಲಾಗಿದೆ.

ಇದನ್ನೂ ಓದಿ : ಬಸವಣ್ಣರನ್ನು ‘ಕರ್ನಾಟಕದ ಸಾಂಸ್ಕೃತಿಕ ನಾಯಕ’ನೆಂದು ಘೋಷಿಸಲು ನಿರ್ಧರಿಸಿದ ರಾಜ್ಯ ಸರ್ಕಾರ

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ಅಮೇಥಿ ಕಾಂಗ್ರೆಸ್ ಕಚೇರಿ ಮೇಲೆ ದಾಳಿ, ಕಾರ್ಯಕರ್ತನಿಗೆ ಹಲ್ಲೆ: ಬಿಜೆಪಿ ಮುಖಂಡರು ಸೇರಿ 10...

0
ಉತ್ತರ ಪ್ರದೇಶದ ಅಮೇಥಿಯಲ್ಲಿ ಕಾಂಗ್ರೆಸ್ ಪಕ್ಷದ ಕಚೇರಿ ಮೇಲೆ ಭಾನುವಾರ (ಮೇ 5) ಮಧ್ಯರಾತ್ರಿ ಅಪರಿಚಿತ ದುಷ್ಕರ್ಮಿಗಳ ಗುಂಪೊಂದು ದಾಳಿ ಮಾಡಿದೆ. ಪಕ್ಷದ ಕಚೇರಿಯ ಹೊರಗೆ ನಿಲ್ಲಿಸಿದ್ದ ಹಲವು ವಾಹನಗಳನ್ನು ಧ್ವಂಸಗೊಳಿಸಿದ ದುಷ್ಕರ್ಮಿಗಳು,...