ಶನಿವಾರ ತಡರಾತ್ರಿ ಗುಂಡಿಗೆ ಬಲಿಯಾದ ನ್ಯಾಷನಲಿಸ್ಟ್ ಕಾಂಗ್ರೆಸ್ ಪಕ್ಷದ (ಎನ್‌ಸಿಪಿ) ನಾಯಕ ಬಾಬಾ ಸಿದ್ದಿಕ್ ಅವರ ಅಂತ್ಯಕ್ರಿಯೆಯನ್ನು ಭಾನುವಾರ ರಾತ್ರಿ ಸರ್ಕಾರಿ ರೀತಿಯಲ್ಲಿ ನಡೆಸಲಾಗುತ್ತದೆ. 2004 ರಿಂದ 2008 ರವರೆಗೆ ಮಹಾರಾಷ್ಟ್ರ ಕ್ಯಾಬಿನೆಟ್‌ನಲ್ಲಿ ಸಚಿವರಾಗಿ ಸೇವೆ ಸಲ್ಲಿಸಿದ ಕಾರಣಕ್ಕಾಗಿ ಮಹಾರಾಷ್ಟ್ರ ಸಿಎಂ ಏಕನಾಥ್ ಶಿಂಧೆ ಅವರು ಈ ಆದೇಶ ನೀಡಿದ್ದಾರೆ. ಬಾಬಾ ಸಿದ್ದಿಕ್ ಹತ್ಯೆ
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
ಇಲ್ಲಿಕ್ಲಿಕ್ ಮಾಡಿ
ಈ ನಡುವೆ ಮುಂಬೈ ಪೊಲೀಸರು ಸಿದ್ದಿಕ್ ಹತ್ಯೆಯಲ್ಲಿ ಜೈಲಿನಲ್ಲಿರುವ ದರೋಡೆಕೋರ ಲಾರೆನ್ಸ್ ಬಿಷ್ಣೋಯ್ ಭಾಗಿಯಾಗಿರುವುದನ್ನು ಖಚಿತಪಡಿಸಿದ್ದಾರೆ. ವೈ ಮಟ್ಟದ ಭದ್ರತೆಯ ಹೊರತಾಗಿಯೂ, ನವೆಂಬರ್‌ನಲ್ಲಿ ನಡೆಯಲಿರುವ ಅಸೆಂಬ್ಲಿ ಚುನಾವಣೆಗೆ ಮುನ್ನ ಅವರನ್ನು ಗುಂಡಿಕ್ಕಿ ಕೊಳ್ಳಲಾಗಿದೆ. ಬಾಬಾ ಸಿದ್ದಿಕ್ ಹತ್ಯೆ
ಆರೋಪಿಗಳಾದ ಗುರ್ಮೈಲ್ ಸಿಂಗ್ ಮತ್ತು ಧರ್ಮರಾಜ್ ಅವರನ್ನು ಮುಂಬೈನ ಕಿಲ್ಲಾ ನ್ಯಾಯಾಲಯಕ್ಕೆ ಪೊಲೀಸರು ಇಂದು ಹಾಜರುಪಡಿಸಿದ್ದಾರೆ. ತಲೆಮರೆಸಿಕೊಂಡಿರುವ ಆರೋಪಿಯನ್ನು ಶಿವಕುಮಾರ್ ಎಂದು ಗುರುತಿಸಲಾಗಿದೆ.
ರಾಜ್ಯದಲ್ಲಿ “ಬೆಳೆಯುತ್ತಿರುವ ಅಪರಾಧ ಚಟುವಟಿಕೆಗಳಿಗೆ” ಶಿಂಧೆ ನೇತೃತ್ವದ ಸರ್ಕಾರವೆ ಹೊಣೆ ಎಂದು ಘಟನೆಯನ್ನು ಖಂಡಿಸಿ ಕಾಂಗ್ರೆಸ್ ಸೇರಿದಂತೆ ಪ್ರತಿಪಕ್ಷಗಳಾದ್ಯಂತ ನಾಯಕರು ಆರೋಪಿಸಿದ್ದಾರೆ. ಶರದ್ ಪವಾರ್ ಸೇರಿದಂತೆ ಹಲವು ನಾಯಕರು ಮಹಾರಾಷ್ಟ್ರ ಗೃಹ ಸಚಿವ ದೇವೇಂದ್ರ ಫಡ್ನವಿಸ್ ರಾಜೀನಾಮೆಗೆ ಒತ್ತಾಯಿಸಿದ್ದಾರೆ.
ಇದನ್ನೂ ಓದಿ: ಯುಪಿ ಉಪಚುನಾವಣೆ | ಎಸ್‌ಪಿ ಅಭ್ಯರ್ಥಿಗಳನ್ನು ಹೆಸರಿಸಿದ ನಂತರ ಕೂಡಾ ಕಾಂಗ್ರೆಸ್‌ನಲ್ಲಿ ‘ಮೈತ್ರಿ ಭರವಸೆ’!
ಮುಂಬೈ ಪೊಲೀಸರು ಈ ಘಟನೆಗೆ ಸಂಬಂಧಿಸಿದಂತೆ ಇಬ್ಬರು ವ್ಯಕ್ತಿಗಳನ್ನು ಗುರುತಿಸಿ ಬಂಧಿಸಿದ್ದಾರೆ. ಒಬ್ಬ ಆರೋಪಿ ಹರಿಯಾಣವರಾಗಿದ್ದು, ಮತ್ತೊಬ್ಬರು ಉತ್ತರ ಪ್ರದೇಶದವರು. ಮೂರನೇ ವ್ಯಕ್ತಿ ತಲೆಮರೆಸಿಕೊಂಡಿದ್ದು, ಪ್ರಕರಣವನ್ನು ಮುಂಬೈ ಅಪರಾಧ ವಿಭಾಗಕ್ಕೆ ಹಸ್ತಾಂತರಿಸಲಾಗಿದೆ.
ಸಿದ್ದಿಕ್ ಬಾಂದ್ರಾ ಪೂರ್ವದಲ್ಲಿರುವ ತಮ್ಮ ಪುತ್ರ, ಶಾಸಕ ಜೀಶನ್ ಸಿದ್ದಿಕ್ ಅವರ ಕಚೇರಿಯಿಂದ ಹೊರಟು ತಮ್ಮ ಕಾರಿಗೆ ಬರುತ್ತಿದ್ದಾಗ ಈ ಘಟನೆ ನಡೆದಿದೆ. ಪೊಲೀಸರ ಪ್ರಕಾರ, ದುಷ್ಕರ್ಮಿಗಳು ಅವರ ಮೇಲೆ ಆರರಿಂದ ಏಳು ಸುತ್ತು ಗುಂಡು ಹಾರಿಸಿದ್ದಾರೆ. ಅದರಲ್ಲಿ ಎರಡು ಗುಂಡುಗಳು ಅವರ ಎದೆಗೆ ಹೊಕ್ಕಿದ್ದು, ಒಂದು ಗುಂಡು ಅವರ ಹೊಟ್ಟೆಗೆ ತಗುಲಿದೆ.
ದಾಳಿಯಿಂದ ಅವರಿಗೆ ಗಂಭೀರ ಗಾಯಗಳಾಗಿದ್ದು, ಲೀಲಾವತಿ ಆಸ್ಪತ್ರೆಗೆ ಸಾಗಿಸಲಾಗಿತ್ತು. ಅದರೆ ಚಿಕಿತ್ಸೆ ವೇಳೆ ಅವರು ಮೃತಪಟ್ಟಿದ್ದಾರೆ ಎಂದು ಘೋಷಿಸಲಾಗಿದೆ. ಸಿದ್ದಿಕ್ ಅವರು ಮೂರು ಬಾರಿ ಕಾಂಗ್ರೆಸ್‌ನಿಂದ 1999 ರಿಂದ 2014 ರವರೆಗೆ ಶಾಸಕರಾಗಿ ಆಯ್ಕೆಯಾಗಿದ್ದರು. ಈ ವೇಳೆ ಅವರು ಬಾಂದ್ರಾ ಪಶ್ಚಿಮ ಕ್ಷೇತ್ರವನ್ನು ಪ್ರತಿನಿಧಿಸುತ್ತಿದ್ದರು.
ವಿಡಿಯೊ ನೋಡಿ: ಒಂದು ಪಟಾಕಿ ಕೊಡೋ ಯೋಗ್ಯತೆ ಇಲ್ಲ, ಆನೆ ಓಡಿಸ್ತೀರೇನ್ರೀ ನೀವು?: ಕಳ್ಳಬೇಟೆ ನಿಗ್ರಹ ಶಿಬಿರಕ್ಕೆ ನುಗ್ಗಿದ ಸ್ಥಳೀಯರು


