Homeಮುಖಪುಟಬಾಬಾ ಸಿದ್ದಿಕ್ ಹತ್ಯೆ | ದರೋಡೆಕೋರ ಲಾರೆನ್ಸ್ ಬಿಷ್ಣೋಯ್ ಕೈವಾಡ ಖಚಿತಪಡಿಸಿದ ಪೊಲೀಸರು

ಬಾಬಾ ಸಿದ್ದಿಕ್ ಹತ್ಯೆ | ದರೋಡೆಕೋರ ಲಾರೆನ್ಸ್ ಬಿಷ್ಣೋಯ್ ಕೈವಾಡ ಖಚಿತಪಡಿಸಿದ ಪೊಲೀಸರು

- Advertisement -
- Advertisement -

ಶನಿವಾರ ತಡರಾತ್ರಿ ಗುಂಡಿಗೆ ಬಲಿಯಾದ ನ್ಯಾಷನಲಿಸ್ಟ್ ಕಾಂಗ್ರೆಸ್ ಪಕ್ಷದ (ಎನ್‌ಸಿಪಿ) ನಾಯಕ ಬಾಬಾ ಸಿದ್ದಿಕ್ ಅವರ ಅಂತ್ಯಕ್ರಿಯೆಯನ್ನು ಭಾನುವಾರ ರಾತ್ರಿ ಸರ್ಕಾರಿ ರೀತಿಯಲ್ಲಿ ನಡೆಸಲಾಗುತ್ತದೆ. 2004 ರಿಂದ 2008 ರವರೆಗೆ ಮಹಾರಾಷ್ಟ್ರ ಕ್ಯಾಬಿನೆಟ್‌ನಲ್ಲಿ ಸಚಿವರಾಗಿ ಸೇವೆ ಸಲ್ಲಿಸಿದ ಕಾರಣಕ್ಕಾಗಿ ಮಹಾರಾಷ್ಟ್ರ ಸಿಎಂ ಏಕನಾಥ್ ಶಿಂಧೆ ಅವರು ಈ ಆದೇಶ ನೀಡಿದ್ದಾರೆ. ಬಾಬಾ ಸಿದ್ದಿಕ್ ಹತ್ಯೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
ಇಲ್ಲಿಕ್ಲಿಕ್ ಮಾಡಿ

ಈ ನಡುವೆ ಮುಂಬೈ ಪೊಲೀಸರು ಸಿದ್ದಿಕ್ ಹತ್ಯೆಯಲ್ಲಿ ಜೈಲಿನಲ್ಲಿರುವ ದರೋಡೆಕೋರ ಲಾರೆನ್ಸ್ ಬಿಷ್ಣೋಯ್ ಭಾಗಿಯಾಗಿರುವುದನ್ನು ಖಚಿತಪಡಿಸಿದ್ದಾರೆ. ವೈ ಮಟ್ಟದ ಭದ್ರತೆಯ ಹೊರತಾಗಿಯೂ, ನವೆಂಬರ್‌ನಲ್ಲಿ ನಡೆಯಲಿರುವ ಅಸೆಂಬ್ಲಿ ಚುನಾವಣೆಗೆ ಮುನ್ನ ಅವರನ್ನು ಗುಂಡಿಕ್ಕಿ ಕೊಳ್ಳಲಾಗಿದೆ. ಬಾಬಾ ಸಿದ್ದಿಕ್ ಹತ್ಯೆ

ಆರೋಪಿಗಳಾದ ಗುರ್ಮೈಲ್ ಸಿಂಗ್ ಮತ್ತು ಧರ್ಮರಾಜ್ ಅವರನ್ನು ಮುಂಬೈನ ಕಿಲ್ಲಾ ನ್ಯಾಯಾಲಯಕ್ಕೆ ಪೊಲೀಸರು ಇಂದು ಹಾಜರುಪಡಿಸಿದ್ದಾರೆ. ತಲೆಮರೆಸಿಕೊಂಡಿರುವ ಆರೋಪಿಯನ್ನು ಶಿವಕುಮಾರ್ ಎಂದು ಗುರುತಿಸಲಾಗಿದೆ.

ರಾಜ್ಯದಲ್ಲಿ “ಬೆಳೆಯುತ್ತಿರುವ ಅಪರಾಧ ಚಟುವಟಿಕೆಗಳಿಗೆ” ಶಿಂಧೆ ನೇತೃತ್ವದ ಸರ್ಕಾರವೆ ಹೊಣೆ ಎಂದು ಘಟನೆಯನ್ನು ಖಂಡಿಸಿ ಕಾಂಗ್ರೆಸ್ ಸೇರಿದಂತೆ ಪ್ರತಿಪಕ್ಷಗಳಾದ್ಯಂತ ನಾಯಕರು ಆರೋಪಿಸಿದ್ದಾರೆ. ಶರದ್ ಪವಾರ್ ಸೇರಿದಂತೆ ಹಲವು ನಾಯಕರು ಮಹಾರಾಷ್ಟ್ರ ಗೃಹ ಸಚಿವ ದೇವೇಂದ್ರ ಫಡ್ನವಿಸ್ ರಾಜೀನಾಮೆಗೆ ಒತ್ತಾಯಿಸಿದ್ದಾರೆ.

ಇದನ್ನೂ ಓದಿ: ಯುಪಿ ಉಪಚುನಾವಣೆ | ಎಸ್‌ಪಿ ಅಭ್ಯರ್ಥಿಗಳನ್ನು ಹೆಸರಿಸಿದ ನಂತರ ಕೂಡಾ ಕಾಂಗ್ರೆಸ್‌ನಲ್ಲಿ ‘ಮೈತ್ರಿ ಭರವಸೆ’!

ಮುಂಬೈ ಪೊಲೀಸರು ಈ ಘಟನೆಗೆ ಸಂಬಂಧಿಸಿದಂತೆ ಇಬ್ಬರು ವ್ಯಕ್ತಿಗಳನ್ನು ಗುರುತಿಸಿ ಬಂಧಿಸಿದ್ದಾರೆ. ಒಬ್ಬ ಆರೋಪಿ ಹರಿಯಾಣವರಾಗಿದ್ದು, ಮತ್ತೊಬ್ಬರು ಉತ್ತರ ಪ್ರದೇಶದವರು. ಮೂರನೇ ವ್ಯಕ್ತಿ ತಲೆಮರೆಸಿಕೊಂಡಿದ್ದು, ಪ್ರಕರಣವನ್ನು ಮುಂಬೈ ಅಪರಾಧ ವಿಭಾಗಕ್ಕೆ ಹಸ್ತಾಂತರಿಸಲಾಗಿದೆ.

ಸಿದ್ದಿಕ್ ಬಾಂದ್ರಾ ಪೂರ್ವದಲ್ಲಿರುವ ತಮ್ಮ ಪುತ್ರ, ಶಾಸಕ ಜೀಶನ್ ಸಿದ್ದಿಕ್ ಅವರ ಕಚೇರಿಯಿಂದ ಹೊರಟು ತಮ್ಮ ಕಾರಿಗೆ ಬರುತ್ತಿದ್ದಾಗ ಈ ಘಟನೆ ನಡೆದಿದೆ. ಪೊಲೀಸರ ಪ್ರಕಾರ, ದುಷ್ಕರ್ಮಿಗಳು ಅವರ ಮೇಲೆ ಆರರಿಂದ ಏಳು ಸುತ್ತು ಗುಂಡು ಹಾರಿಸಿದ್ದಾರೆ. ಅದರಲ್ಲಿ ಎರಡು ಗುಂಡುಗಳು ಅವರ ಎದೆಗೆ ಹೊಕ್ಕಿದ್ದು, ಒಂದು ಗುಂಡು ಅವರ ಹೊಟ್ಟೆಗೆ ತಗುಲಿದೆ.

ದಾಳಿಯಿಂದ ಅವರಿಗೆ ಗಂಭೀರ ಗಾಯಗಳಾಗಿದ್ದು, ಲೀಲಾವತಿ ಆಸ್ಪತ್ರೆಗೆ ಸಾಗಿಸಲಾಗಿತ್ತು. ಅದರೆ ಚಿಕಿತ್ಸೆ ವೇಳೆ ಅವರು ಮೃತಪಟ್ಟಿದ್ದಾರೆ ಎಂದು ಘೋಷಿಸಲಾಗಿದೆ. ಸಿದ್ದಿಕ್ ಅವರು ಮೂರು ಬಾರಿ ಕಾಂಗ್ರೆಸ್‌ನಿಂದ 1999 ರಿಂದ 2014 ರವರೆಗೆ ಶಾಸಕರಾಗಿ ಆಯ್ಕೆಯಾಗಿದ್ದರು. ಈ ವೇಳೆ ಅವರು ಬಾಂದ್ರಾ ಪಶ್ಚಿಮ ಕ್ಷೇತ್ರವನ್ನು ಪ್ರತಿನಿಧಿಸುತ್ತಿದ್ದರು.

ವಿಡಿಯೊ ನೋಡಿ: ಒಂದು ಪಟಾಕಿ ಕೊಡೋ ಯೋಗ್ಯತೆ ಇಲ್ಲ, ಆನೆ ಓಡಿಸ್ತೀರೇನ್ರೀ ನೀವು?: ಕಳ್ಳಬೇಟೆ ನಿಗ್ರಹ ಶಿಬಿರಕ್ಕೆ ನುಗ್ಗಿದ ಸ್ಥಳೀಯರು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಿಡದಿ ಟೌನ್‌ಶಿಪ್: 80% ರೈತರ ಒಪ್ಪಿಗೆ ಇದೆ ಎಂಬ ವಾದ ಸಾಬೀತುಪಡಿಸಿ – ಸರ್ಕಾರಕ್ಕೆ ಸಂಯುಕ್ತ ಹೋರಾಟ ಸವಾಲು

ಬಿಡದಿ ಟೌನ್‌ಶಿಪ್ ಯೋಜನೆಗೆ ಭೂಮಿ ನೀಡಲು ಉದ್ದೇಶಿತ ಪ್ರದೇಶದ ಶೇಕಡಾ 80 ರಷ್ಟು ರೈತರು ಒಪ್ಪಿದ್ದಾರೆ ಎಂಬ ಸರ್ಕಾರದ ವಾದಕ್ಕೆ ಯಾವುದೇ ವಾಸ್ತವಿಕ ಆಧಾರವಿಲ್ಲ. ಸರ್ಕಾರಕ್ಕೆ ಧೈರ್ಯವಿದ್ದರೆ ತನ್ನ ಈ ಹೇಳಿಕೆಯನ್ನು ಜನರ...

ವಿದ್ಯಾರ್ಥಿಗಳ ಮೇಲಿನ ಪೊಲೀಸ್ ದೌರ್ಜನ್ಯ: ವಿಚಾರಣೆ ತಿರಸ್ಕರಿಸಿದ ಸುಪ್ರೀಂ; “ವಿಡಿಯೋ ನೋಡಲು ನಮಗೆ ಆಸಕ್ತಿಯೂ ಇಲ್ಲ, ಸಮಯವೂ ಇಲ್ಲ” ಎಂದ ನ್ಯಾಯಮೂರ್ತಿ ಸೂರ್ಯಕಾಂತ್

ನವದೆಹಲಿ: ಪ್ರಶ್ನೆಪತ್ರಿಕೆ ಸೋರಿಕೆ ಮತ್ತು ಪರೀಕ್ಷಾ ಅಕ್ರಮಗಳನ್ನು ಖಂಡಿಸಿ ಶಾಂತಿಯುತವಾಗಿ ಹೋರಾಡುತ್ತಿದ್ದ ಯುವ ಸಮೂಹದ ಮೇಲೆ ದೆಹಲಿ ಪೊಲೀಸರು ನಡೆಸಿದ ಭೀಕರ ದೌರ್ಜನ್ಯದ ವಿರುದ್ಧ ನ್ಯಾಯದ ನಿರೀಕ್ಷೆಯಲ್ಲಿದ್ದ ವಿದ್ಯಾರ್ಥಿಗಳಿಗೆ ದೇಶದ ಅತ್ಯುನ್ನತ ನ್ಯಾಯಾಲಯದಿಂದ...

ರಾಹುಲ್ ಗಾಂಧಿ ವಿದ್ಯಾರ್ಥಿಗಳನ್ನು ‘ರಾಜಕೀಯ ದಾಳ’ವಾಗಿ ಬಳಸುತ್ತಿದ್ದಾರೆ ಎಂದ ಧರ್ಮೇಂದ್ರ ಪ್ರಧಾನ್ ವಿರುದ್ಧ ವ್ಯಾಪಕ ಆಕ್ರೋಶ

ನವದೆಹಲಿ: ದೇಶಾದ್ಯಂತ ನೀಟ್ (NEET) ಪರೀಕ್ಷೆಯ ಅಕ್ರಮಗಳು, ಪ್ರಶ್ನೆಪತ್ರಿಕೆ ಸೋರಿಕೆ ಹಾಗೂ ಶಿಕ್ಷಣ ಇಲಾಖೆಯ ಸರಣಿ ವೈಫಲ್ಯಗಳನ್ನು ಖಂಡಿಸಿ ವಿದ್ಯಾರ್ಥಿಗಳು ಮತ್ತು ವಿರೋಧ ಪಕ್ಷಗಳು ತೀವ್ರ ಪ್ರತಿಭಟನೆ ನಡೆಸುತ್ತಿದ್ದು, ಶಿಕ್ಷಣ ಸಚಿವ ಧರ್ಮೇಂದ್ರ...

ಸಿಜೆಪಿ ಪ್ರತಿಭಟನಾಕಾರರ ಮೇಲೆ ಪೆಲೆಟ್ ಗನ್ ಬಳಕೆ, ವಿದ್ಯುತ್ ಲಾಠಿ ಪ್ರಹಾರ: ಆರೋಪ ನಿರಾಕರಿಸಿದ ಪೊಲೀಸರು

ಸೋಮವಾರ (ಜುಲೈ 20) ಕಾಕ್ರೋಚ್ ಜನತಾ ಪಕ್ಷ (ಸಿಜೆಪಿ) ಕರೆ ನೀಡಿದ್ದ ಸಂಸತ್ ಚಲೋ ಮೆರವಣಿ ಸಂದರ್ಭದಲ್ಲಿ ನಡೆದ ಪೊಲೀಸರ ದೌರ್ಜನ್ಯದಲ್ಲಿ ಗಾಯಗೊಂಡ 80 ಪ್ರತಿಭಟನಾಕಾರರಲ್ಲಿ ಕನಿಷ್ಠ ಒಬ್ಬರಿಗೆ ಪೆಲೆಟ್ ಗನ್ ಗಾಯಗಳಾಗಿವೆ...

ಪ್ರತಿಭಟನಾನಿರತ ಮಹಿಳೆಯ ಕೆನ್ನೆಗೆ ಹೊಡೆದ ದೆಹಲಿ ಪೊಲೀಸ್ ಅಧಿಕಾರಿ ಸಂದೀಪ್ ಲಂಬಾ: ವಿಡಿಯೋ ವೈರಲ್ ನಂತರ ವ್ಯಾಪಕ ಟೀಕೆ

ದೆಹಲಿ: ಶಾಂತಿಯುತವಾಗಿ ತಮ್ಮ ಹಕ್ಕುಗಳಿಗಾಗಿ ಹೋರಾಡುತ್ತಿದ್ದ ಪ್ರತಿಭಟನಾಕಾರರ ಮೇಲೆ ದೆಹಲಿ ಪೊಲೀಸರು ನಡೆಸಿದ ಕ್ರೂರ ದಮನ ಕಾರ್ಯಾಚರಣೆಯ ಭೀಕರ ಮುಖವಾಡವೊಂದು ಮತ್ತೆ ಜಗಜ್ಜಾಹೀರಾಗಿದೆ. ಸೋಮವಾರ ಸಂಸತ್ತಿನ ಮೆರವಣಿಗೆಯಲ್ಲಿ ಭಾಗವಹಿಸಿದ್ದ ಪ್ರತಿಭಟನಾಕಾರರನ್ನು ಹತ್ತಿಕ್ಕುವ ನೆಪದಲ್ಲಿ,...

‘ಪೊಲೀಸರನ್ನು ನಿಯಂತ್ರಿಸದಿದ್ದರೆ ಜರ್ಮನಿಯ ನಾಜಿಗಳಂತೆ ಆಗಬಹುದು’: ದಲಿತ ವ್ಯಕ್ತಿಯ ಮೇಲಿನ ದೌರ್ಜನ್ಯ ಪ್ರಕರಣದಲ್ಲಿ ಪಾಟ್ನಾ ಹೈಕೋರ್ಟ್ ಕಳವಳ

ದಲಿತ ವ್ಯಕ್ತಿಯೊಬ್ಬರ ಜಾತಿ ತಿಳಿದ ನಂತರ ಅವರ ಮೇಲೆ ಕ್ರೂರವಾಗಿ ಹಲ್ಲೆ ನಡೆಸಿದ ಆರೋಪ ಎದುರಿಸುತ್ತಿರುವ ಬಿಹಾರದ ಮಾಜಿ ಪೊಲೀಸ್ ಅಧಿಕಾರಿಯ ವಿರುದ್ಧ ತಕ್ಷಣವೇ ಎಫ್‌ಐಆರ್ (FIR) ದಾಖಲಿಸುವಂತೆ ಪಾಟ್ನಾ ಹೈಕೋರ್ಟ್ ನಿರ್ದೇಶಿಸಿದೆ....

“ಎಷ್ಟೊಂದು ದುರಹಂಕಾರ!”: ಜೆ.ಪಿ.ನಡ್ಡಾ ಹೇಳಿಕೆಗೆ ಕಪಿಲ್ ಸಿಬಲ್ ತೀವ್ರ ಆಕ್ಷೇಪ; ಪ್ರತಿಭಟನಾನಿರತ ಸಿಜೆಪಿ ಬೆಂಬಲಿಸಿ ವೀಡಿಯೋ ಸಂದೇಶ

ಪರೀಕ್ಷಾ ಅಕ್ರಮಗಳನ್ನು ಖಂಡಿಸಿ ಕ್ರಾಂತಿಕಾರಿ ಜಿರಳೆ ಜನತಾ ಪಕ್ಷ (ಸಿಜೆಪಿ) ನಡೆಸುತ್ತಿರುವ ವಿದ್ಯಾರ್ಥಿ ಪ್ರತಿಭಟನೆಯ ವಿಚಾರದಲ್ಲಿ ಕೇಂದ್ರ ಸರ್ಕಾರದ ನಡೆಗೆ ದೇಶಾದ್ಯಂತ ತೀವ್ರ ಆಕ್ರೋಶ ವ್ಯಕ್ತವಾಗುತ್ತಿದೆ. ಈ ನಡುವೆ ಕೇಂದ್ರ ಸಚಿವ ಜೆ.ಪಿ....

ವಿದ್ಯಾರ್ಥಿಗಳ ಮೇಲೆ ಪೊಲೀಸ್ ದೌರ್ಜನ್ಯ: ಮೋದಿ-ಅಮಿತ್ ಶಾ ರಾಜೀನಾಮೆಗೆ ರಾಹುಲ್ ಗಾಂಧಿ ಆಗ್ರಹ

ನೀಟ್‌ ಪ್ರಶ್ನೆ ಪತ್ರಿಕೆ ಸೋರಿಕೆ ಹೊಣೆ ಹೊತ್ತು ಕೇಂದ್ರ ಶಿಕ್ಷಣ ಸಚಿವ ರಾಜೀನಾಮೆ ನೀಡಬೇಕು ಎಂದು ಆಗ್ರಹಿಸಿ 'ಸಂಸತ್ ಚಲೋ' ಹಮ್ಮಿಕೊಂಡಿದ್ದ ವಿದ್ಯಾರ್ಥಿಗಳ ಮೇಲೆ ನಡೆದ ಪೊಲೀಸ್ ದೌರ್ಜನ್ಯವನ್ನು ಕಾಂಗ್ರೆಸ್ ನಾಯಕ ರಾಹುಲ್...

ಕೇಂದ್ರ ಸಚಿವ ಜೆ.ಪಿ.ನಡ್ಡಾ ಅವರನ್ನು ಭೇಟಿಯಾದ ಸಿಜೆಪಿ ನಿಯೋಗ; ಮನವಿ ಪತ್ರ ಸಲ್ಲಿಕೆ

ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್‌ ರಾಜೀನಾಮೆಗೆ ಆಗ್ರಹಿಸಿ ನವದೆಹಲಿಯಲ್ಲಿ ಪ್ರತಿಭಟನೆ ತೀವ್ರಗೊಂಡಿರುವ ಬೆನ್ನಲ್ಲೇ ಇಂದು ಕೇಂದ್ರ ಸಚಿವ ಜೆಪಿ ನಡ್ಡಾ ಅವರನ್ನು ಸಿಜೆಪಿ ಸದಸ್ಯರಾದ ಸೌರವ್ ದಾಸ್ ಮತ್ತು ಅಶುತೋಷ್ ರಂಕಾ...

‘ಸಂಸತ್ ಚಲೋ’: ‘ಸೋನಮ್ ವಾಂಗ್ಚುಕ್ ಪತ್ನಿ ಮೇಲೆ ದೆಹಲಿ ಪೊಲೀಸರಿಂದ ಹಲ್ಲೆ’: ವಿದ್ಯಾರ್ಥಿಗಳ ಮೇಲೂ ಲಾಠಿ ಚಾರ್ಜ್  

ನವದೆಹಲಿ: ರಾಷ್ಟ್ರ ರಾಜಧಾನಿಯಲ್ಲಿ ಆಯೋಜಿಸಲಾಗಿದ್ದ ‘ಸಂಸದ್ ಚಲೋ’ ಮೆರವಣಿಗೆಯ ವೇಳೆ ಶಿಕ್ಷಣ ತಜ್ಞ ಹಾಗೂ ಲಡಾಖ್ ಹೋರಾಟಗಾರ ಸೋನಮ್ ವಾಂಗ್ಚುಕ್ ಅವರ ಪತ್ನಿ ಗೀತಾಂಜಲಿ ಜೆ. ಆಂಗ್ಮೋ ಸೇರಿದಂತೆ ಹಲವಾರು ಪ್ರತಿಭಟನಾಕಾರರ ಮೇಲೆ...