Homeಸಿನಿಮಾಕ್ರೀಡೆಟಿ20 ವಿಶ್ವಕಪ್‌ನ ಮ್ಯಾನ್ ಆಫ್‌ ದಿ ಟೂರ್ನಿಮೆಂಟ್ ಬಾಬರ್ ಅಜಂಗೆ ಕೊಡಬೇಕಿತ್ತು: ಶೋಯಬ್ ಅಖ್ತರ್ ಅಸಮಾಧಾನ

ಟಿ20 ವಿಶ್ವಕಪ್‌ನ ಮ್ಯಾನ್ ಆಫ್‌ ದಿ ಟೂರ್ನಿಮೆಂಟ್ ಬಾಬರ್ ಅಜಂಗೆ ಕೊಡಬೇಕಿತ್ತು: ಶೋಯಬ್ ಅಖ್ತರ್ ಅಸಮಾಧಾನ

ಪಾಕ್ ಆಟಗಾರ ಬಾಬರ್ ಒಟ್ಟು ಅಜಂ 6 ಪಂದ್ಯಗಳಲ್ಲಿ 60.60 ಸರಾಸರಿಯಲ್ಲಿ 303 ರನ್ ಗಳಿಸಿದರೆ ಒಟ್ಟು ರನ್ ಗಳಿಕೆಯಲ್ಲಿ ಮೊದಲ ಸ್ಥಾನದಲ್ಲಿದ್ದಾರೆ.

- Advertisement -
- Advertisement -

ಬಹುನಿರೀಕ್ಷಿತ ಟಿ20 ವಿಶ್ವಕಪ್‌ ಅಭಿಯಾನ ಮುಕ್ತಾಯಗೊಂಡಿದೆ. ನ್ಯೂಜಿಲೆಂಡ್ ಎದುರು ಭಾನುವಾರ ನಡೆದ ಫೈನಲ್‌ ಪಂದ್ಯದಲ್ಲಿ ಕ್ರಿಕೆಟ್ ದಿಗ್ಗಜ ಆಸ್ಟ್ರೇಲಿಯಾ ಜಯಭೇರಿ ಭಾರಿಸಿ ಚೊಚ್ಚಲ ಬಾರಿಗೆ ಟಿ20 ವಿಶ್ವಕಪ್‌ಗೆ ಮುತ್ತಿಟ್ಟಿತು. 2019 ರಲ್ಲಿ ಏಕದಿನ ಕ್ರಿಕೆಟ್ ವಿಶ್ವಕಪ್‌ ಫೈನಲ್ ಪಂದ್ಯದಲ್ಲಿ ಸೂಪರ್ ಓವರ್‌ನಲ್ಲಿ ಇಂಗ್ಲೆಂಡ್ ವಿರುದ್ಧ ಸೋತಿದ್ದ ನ್ಯೂಜಿಲೆಂಡ್ ತಂಡ ಭಾನುವಾದ ಟಿ20 ವಿಶ್ವಕಪ್‌ ಫೈನಲ್‌ನಲ್ಲಿಯೂ ಆಸ್ಟ್ರೇಲಿಯಾ ಎದುರು ಮುಗ್ಗರಿಸಿ ನಿರಾಶೆ ಅನುಭವಿಸಿತು.

ಆಸ್ಟ್ರೇಲಿಯಾ ಮೊದಲ ಬಾರಿಗೆ ಟಿ20 ವಿಶ್ವಕಪ್‌ ಗೆದ್ದರೆ ಅದೇ ತಂಡದ ಅನುಭವಿ ಬ್ಯಾಟ್ಸ್‌ಮನ್ ಡೇವಿಡ್ ವಾರ್ನರ್ ಮ್ಯಾನ್ ಆಫ್‌ ದಿ ಟೂರ್ನಿಮೆಂಟ್ ಮುಡಿಗೇರಿಸಿಕೊಂಡರು. ಈ ವಿಷಯವಾಗಿ ಪಾಕಿಸ್ತಾನದ ಮಾಜಿ ಆಟಗಾರ ಶೋಯಬ್ ಅಖ್ತರ್ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಡೇವಿಡ್ ವಾರ್ನರ್‌ಗಿಂತ ಹೆಚ್ಚು ರನ್ ಗಳಿಸಿದ್ದ, ಹೆಚ್ಚು ಬ್ಯಾಟಿಂಗ್ ಸರಾಸರಿ ಹೊಂದಿದ್ದ ಪಾಕಿಸ್ತಾನದ ನಾಯಕ ಮತ್ತು ಬ್ಯಾಟ್ಸ್‌ಮನ್ ಬಾಬರ್ ಅಜಂರವರಿಗೆ ಆ ಶ್ರೇಯ ಸಲ್ಲಬೇಕಿತ್ತು ಎಂದು ಅಖ್ತರ್ ಅಭಿಪ್ರಾಯಪಟ್ಟಿದ್ದು, ಇದು ಐಸಿಸಿಯ ‘ಅನ್ಯಾಯದ ನಿರ್ಧಾರ’ ಎಂದು ಕರೆದಿದ್ದಾರೆ.

ಈ ಕುರಿತು ಟ್ವೀಟ್ ಮಾಡಿರುವ ಅವರು, “ಬಾಬರ್ ಅಜಂ ಮ್ಯಾನ್ ಆಫ್‌ ದಿ ಟೂರ್ನಿಮೆಂಟ್ ಆಗುತ್ತಾರೆ ಎಂದು ನಿರೀಕ್ಷಿಸಿದ್ದೆ. ನಿಜಕ್ಕೂ ಅನ್ಯಾಯದ ನಿರ್ಧಾರ” ಎಂದಿದ್ದಾರೆ.

ಪಾಕ್ ಆಟಗಾರ ಬಾಬರ್ ಒಟ್ಟು ಅಜಂ 6 ಪಂದ್ಯಗಳಲ್ಲಿ 60.60 ಸರಾಸರಿಯಲ್ಲಿ 303 ರನ್ ಗಳಿಸಿದರೆ ಮೊದಲ ಸ್ಥಾನದಲ್ಲಿದ್ದರೆ, ಆಸ್ಟ್ರೇಲಿಯಾದ ಡೇವಿಡ್ ವಾರ್ನರ್ ಒಟ್ಟು 7 ಪಂದ್ಯಗಳಲ್ಲಿ 48.16 ಸರಾಸರಿಯಲ್ಲಿ 289 ರನ್ ಗಳಿಸಿದ್ದಾರೆ. ಪಾಕ್ ತಂಡದ ಮತ್ತೊಬ್ಬ ಆಟಗಾರ ಮೊಹಮ್ಮದ್ ರಿಜ್ವಾನ್ ಕೂಡ 6 ಪಂದ್ಯಗಳಲ್ಲಿ 70.25 ಸರಾಸರಿಯಲ್ಲಿ 281 ರನ್ ಗಳಿಸಿ ಮೂರನೇ ಸ್ಥಾನದಲ್ಲಿದ್ದಾರೆ. ಬಾಬರ್ ಅಜಂ ಡೇವಿಡ್ ವಾರ್ನರ್‌ಗಿಂತ ಒಂದು ಇನ್ನಿಂಗ್ಸ್ ಕಡಿಮೆ ಆಡಿದರೂ ಸಹ ಅವರಿಗಿಂತ 14 ರನ್ ಹೆಚ್ಚು ಗಳಿಸಿದ್ದಾರೆ. ಸರಾಸರಿ ಸಹ ಉತ್ತಮವಾಗಿದೆ. ಹಾಗಾಗಿ ಅವರಿಗೆ ಮ್ಯಾನ್ ಆಫ್‌ ದಿ ಟೂರ್ನಿಮೆಂಟ್ ಪ್ರಶಸ್ತಿ ನೀಡಬೇಕಿತ್ತು ಎಂಬುದು ಅಖ್ತರ್‌ರವರ ವಾದವಾಗಿದೆ.

ಡೇವಿಡ್ ವಾರ್ನರ್ 3 ಅರ್ಧಶತಕಗಳನ್ನು ಭಾರಿಸಿ, 146.70 ಬ್ಯಾಟಿಂಗ್ ಸ್ಟ್ರೈಕ್‌ ರೇಟ್ ನಲ್ಲಿ ರನ್ ಗಳಿಸಿದ್ದಾರೆ. ಅಲ್ಲದೆ ಸೆಮಿಫೈನಲ್ ಪಂದ್ಯದಲ್ಲಿ ಪಾಕ್ ಎದುರು ಮತ್ತು ಫೈನಲ್ ಪಂದ್ಯದಲ್ಲಿ ನ್ಯೂಜಿಲೆಂಡ್ ಎದುರು ಆಸ್ಟ್ರೇಲಿಯಾ ಜಯ ಸಾಧಿಸುವುದರಲ್ಲಿ ಪ್ರಮುಖ ಪಾತ್ರ ವಹಿಸಿದ್ದರು. ಹಾಗಾಗಿ ಅವರನ್ನು ಮ್ಯಾನ್ ಆಫ್‌ ದಿ ಟೂರ್ನಿಮೆಂಟ್ ಪ್ರಶಸ್ತಿಗೆ ಆಯ್ಕೆ ಮಾಡಲಾಗಿದೆ ಎಂದು ಹಲವರು ಸಮರ್ಥಿಸಿಕೊಂಡಿದ್ದಾರೆ. ಬಾಬರ್ ಅಜಂ 4 ಅರ್ಧಶತಕಗಳನ್ನು ಗಳಿಸಿದ್ದರು ಮತ್ತು ಅವರ ಬ್ಯಾಟಿಂಗ್ ಸ್ಟ್ರೈಕ್‌ ರೇಟ್ 126.25 ಆಗಿದೆ.

ಫೈನಲ್ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ನ್ಯೂಜಿಲೆಂಡ್ 20 ಓವರ್‌ಗಳಲ್ಲಿ ನಾಲ್ಕು ವಿಕೆಟ್ ಕಳೆದುಕೊಂಡು 172 ರನ್ ಪೇರಿಸಿತ್ತು. ಅದಕ್ಕೆ ಉತ್ತರವಾಗಿ ಬ್ಯಾಟ್ ಮಾಡಿದ ಆಸ್ಟ್ರೇಲಿಯಾ ತಂಡದ ಆಟಗಾರರು ಲೀಲಾಜಾಲವಾಗಿ ಬ್ಯಾಟ್ ಬೀಸಿದರು. 18.5 ಓವರ್‌ಗಳಲ್ಲಿ 2 ವಿಕೆಟ್‌ ಕಳೆದುಕೊಂಡು ನಿರಾಯಾಸವಾಗಿ ಗೆಲುವಿನ ಗುರಿ ಮುಟ್ಟಿದರು. 8 ವಿಕೆಟ್‌ಗಳ ಜಯ ಸಾಧಿಸಿ ಟಿ20 ವಿಶ್ವಕಪ್ ಮುಡಿಗೇರಿಸಿಕೊಂಡರು.


ಇದನ್ನೂ ಓದಿ: ಟಿ20 ಕ್ರಿಕೆಟ್‌ನಲ್ಲಿ ದಾಖಲೆ: 4 ಓವರ್‌ನಲ್ಲಿ ಒಂದೂ ರನ್ ಕೊಡದ ಮೊದಲ ಬೌಲರ್ ಅಕ್ಷಯ್!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕಾಂಗ್ರೆಸ್ ನಿಂದ ಏಪ್ರಿಲ್ 12ರಂದು ‘ರನ್ ಫಾರ್ ಅಂಬೇಡ್ಕರ್, ರನ್ ಫಾರ್ ಕಾನ್ಸ್ಟಿಟ್ಯೂಷನ್’ ಮ್ಯಾರಥಾನ್ ಆಯೋಜನೆ

ನವದೆಹಲಿ: ಬಿ.ಆರ್. ಅಂಬೇಡ್ಕರ್ ಅವರ ಜನ್ಮ ದಿನಾಚರಣೆಯ ಅಂಗವಾಗಿ ಕಾಂಗ್ರೆಸ್ ಭಾನುವಾರ 'ಅಂಬೇಡ್ಕರ್‌ಗಾಗಿ ಓಟ, ಸಂವಿಧಾನಕ್ಕಾಗಿ ಓಟ' ಮ್ಯಾರಥಾನ್ ಆಯೋಜಿಸಿದೆ. ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರು ಇಲ್ಲಿನ ಮಂಡಿ ಹೌಸ್‌ನಿಂದ ಮ್ಯಾರಥಾನ್‌ಗೆ...

ಮುಖ್ಯವಾಹಿನಿಗೆ ಬಂದ 42 ಕೇಡರ್‌ಗಳು; ರಾಜ್ಯದಲ್ಲಿ’ಮಾವೋವಾದಿ ಕಾರ್ಯಾಚರಣೆ’ ಅಂತ್ಯವಾಗಿದೆ ಎಂದ ತೆಲಂಗಾಣ ಪೊಲೀಸರು

ರಾಜ್ಯದಲ್ಲಿ ಸಿಪಿಐ (ಮಾವೋವಾದಿ) ಸಂಘಟನೆಯ ಕಾರ್ಯಚರಣೆ ಅಂತಿಮವಾಗಿದೆ ಎಂದು ತೆಲಂಗಾಣ ಪೊಲೀಸರು ಘೋಷಣೆ ಮಾಡಿದ್ದಾರೆ. ಬೆಟಾಲಿಯನ್ ಕಮಾಂಡರ್ ಮತ್ತು ಎರಡು ಪ್ರಮುಖ ಗುಂಪುಗಳ ಹಿರಿಯ ನಾಯಕತ್ವ ಸೇರಿದಂತೆ ನಿಷೇಧಿತ ಸಂಘಟನೆಯ 42 ಕೇಡರ್‌ಗಳು...

‘ಹಿಂದಿ ನಿರ್ಮೂಲನೆ ಮಾಡುತ್ತೇವೆ’ ಎಂದು ಸಚಿವರು ಹೇಳಿಲ್ಲ; ಹಿಂದಿ ಪರ ಅರ್ಜಿ ವಜಾ; ₹1 ಲಕ್ಷ ದಂಡ ವಿಧಿಸಿದ ಹೈಕೋರ್ಟ್‌

ಎಸ್‌ಎಸ್‌ಎಲ್‌ಸಿ ಪರೀಕ್ಷೆಗಳಲ್ಲಿ ಹಿಂದಿ ಸೇರಿದಂತೆ ತೃತೀಯ ಭಾಷಾ ವಿಷಯಗಳ ಮೌಲ್ಯಮಾಪನ ಸಂಬಂಧ ರಾಜ್ಯ ಶಿಕ್ಷಣ ಸಚಿವ ಮಧು ಬಂಗಾರಪ್ಪ ಅವರು ನೀಡಿದ ಹೇಳಿಕೆಯ ವಿರುದ್ಧ ಸಲ್ಲಿಸಲಾದ ಸಾರ್ವಜನಿಕ ಹಿತಾಸಕ್ತಿ ಮೊಕದ್ದಮೆಯನ್ನು (ಪಿಐಎಲ್) ಕರ್ನಾಟಕ...

ದೆಹಲಿ| ಮುಸ್ಲಿಮರ ಮೇಲಿನ ದ್ವೇಷಕ್ಕೆ ಜೀವಂತ ಹಂದಿಗಳನ್ನು ಪೂಜಿಸುತ್ತಿರುವ ಹಿಂದೂಗಳು

ಹಳೆಯ ದೆಹಲಿಯ ಹಿಂದೂ-ಮುಸ್ಲಿಂ ಜನರು ವಾಸಿಸುವ ತ್ರನಗರದ ನೆರೆಹೊರೆಯಲ್ಲಿ ಹಿಂದೂ ಕುಟುಂಬಗಳು ಜೀವಂತ ಹಂದಿಗಳನ್ನು ಪೂಜಿಸುತ್ತಿದ್ದಾರೆ. ಮುಸ್ಲಿಮರ ಮೇಲಿನ ದ್ವೇಷಕ್ಕೆ ಮನೆಯ ಮುಂಭಾಗ ಅಲಂಕೃತ ಹಂದಿ (ವರಹಾಸ್ವಾಮಿ) ಚಿತ್ರಗಳನ್ನು ಅಳವಡಿಸಿದ್ದಾರೆ ಎಂದು 'ದಿ...

ಪ. ಬಂಗಾಳ: ಮಹಿಳೆಯರಿಗೆ ₹3,000 ರಿಂದ 6 ತಿಂಗಳಲ್ಲಿ ಏಕರೂಪ ನಾಗರಿಕ ಸಂಹಿತೆ ಜಾರಿ ಸೇರಿದಂತೆ ಹಲವು ಭರವಸೆ ನೀಡಿದ ಬಿಜೆಪಿ 

ಕೋಲ್ಕತ್ತಾ : ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣೆಗೆ ಪ್ರಚಾರ ಆರಂಭವಾಗಿದ್ದು, ಮೊದಲ ಹಂತದ ಮತದಾನಕ್ಕೆ ಕೆಲವೇ ದಿನಗಳು ಬಾಕಿ ಇರುವಾಗ, ಕೇಂದ್ರ ಗೃಹ ಸಚಿವ ಅಮಿತ್ ಶಾ ಶುಕ್ರವಾರ ಪಶ್ಚಿಮ ಬಂಗಾಳದ ಬಿಜೆಪಿ...

ಹಾಸನ| ರೈತ ಮುಖಂಡ ವಾಸುದೇವ ಕಲ್ಕೆರೆ ಮೇಲೆ ಹಲ್ಲೆ; ದುಷ್ಕರ್ಮಿಗಳ ಬಂಧನಕ್ಕೆ ಕೆಪಿಆರ್‌ಎಸ್‌ ಆಗ್ರಹ

ಹಾಸನ ಜಿಲ್ಲೆಯ ಚನ್ನರಾಯಪಟ್ಟಣ ತಾಲ್ಲೂಕಿನ ಕರ್ನಾಟಕ ಪ್ರಾಂತ ರೈತ ಸಂಘದ (ಕೆಪಿಆರ್‌ಎಸ್‌) ಕಾರ್ಯದರ್ಶಿ ಹಾಗೂ ಕಲ್ಕೆರೆ ಗ್ರಾಮ ಪಂಚಾಯತಿ ಮಾಜಿ ಅಧ್ಯಕ್ಷ, ಡಿವೈಎಫ್‌ಐ ಜಿಲ್ಲಾಧ್ಯಕ್ಷ ವಾಸುದೇವ ಕಲ್ಕೆರೆ ಮೇಲೆ ಹಲ್ಲೆ-ದೌರ್ಜನ್ಯ ನಡೆಸಿರುವ ಗೂಂಡಾಗಳನ್ನು...

ಉತ್ತರ ಪ್ರದೇಶ| ಡಿಜಿಟಲ್ ಬಂಧನದಿಂದ ಪೋಷಕರನ್ನು ರಕ್ಷಿಸಿದ 8ನೇ ತರಗತಿ ವಿದ್ಯಾರ್ಥಿ

ಸುಮಾರು 10 ಗಂಟೆಗಳ ಕಾಲ ವೀಡಿಯೊ ಕರೆ ಮೂಲಕ ಡಿಜಿಟಲ್ ಬಂಧನಕ್ಕೆ ಒಳಗಾಗಿದ್ದ ತನ್ನ ಹೆತ್ತವರು ಹಣ ಕಳೆದುಕೊಳ್ಳದಂತೆ 8ನೇ ತರಗತಿಯ ಬಾಲಕನೊಬ್ಬ ರಕ್ಷಿಸಿರುವ ಘಟನೆ ಬೆಳಕಿಗೆ ಬಂದಿದೆ. ಉತ್ತರ ಪ್ರದೇಶದ ಬರೇಲಿಯಲ್ಲಿ...

ಅಸ್ಸಾಂ: ಪವನ್ ಖೇರಾ ವಿರುದ್ಧದ ಪ್ರಕರಣದಲ್ಲಿ ಒಂದು ವಾರದ ನಿರೀಕ್ಷಣ ಜಾಮೀನು ನೀಡಿದ ತೆಲಂಗಾಣ ಹೈಕೋರ್ಟ್

ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಅವರ ಪತ್ನಿ ರಿನಿಕಿ ಭುಯಾನ್ ಶರ್ಮಾ ಅವರು ಸಲ್ಲಿಸಿದ ಎಫ್‌ಐಆರ್‌ಗೆ ಸಂಬಂಧಿಸಿದಂತೆ ತೆಲಂಗಾಣ ಹೈಕೋರ್ಟ್ ಶುಕ್ರವಾರ ಕಾಂಗ್ರೆಸ್ ನಾಯಕ ಪವನ್ ಖೇರಾ ಅವರಿಗೆ ಒಂದು ವಾರದ...

ನಿವಾಸದಲ್ಲಿ ನಗದು ಪತ್ತೆ ಪ್ರಕರಣದಲ್ಲಿ ಸಿಲುಕಿದ್ದ ನ್ಯಾಯಮೂರ್ತಿ ಯಶವಂತ್ ವರ್ಮಾ ರಾಜೀನಾಮೆ

ತಮ್ಮ ನಿವಾಸದಲ್ಲಿ ನಗದು ಪತ್ತೆ ಆರೋಪದ ಕೇಂದ್ರಬಿಂದುವಾಗಿದ್ದ ಅಲಹಾಬಾದ್ ಹೈಕೋರ್ಟ್ ನ್ಯಾಯಾಧೀಶ ನ್ಯಾಯಮೂರ್ತಿ ಯಶವಂತ್ ವರ್ಮಾ ಅವರು ರಾಷ್ಟ್ರಪತಿ ದ್ರೌಪದಿ ಮುರ್ಮು ಅವರಿಗೆ ತಮ್ಮ ರಾಜೀನಾಮೆಯನ್ನು ಸಲ್ಲಿಸಿದ್ದಾರೆ. ಕಳೆದ ವರ್ಷ ಏಪ್ರಿಲ್ 5...

ಆಂಧ್ರಪ್ರದೇಶ: ಬೇಸಿಗೆ ವಿಹಾರಕ್ಕೆಂದು ತೆರಳಿದ್ದ ಮೂವರು ಅಪ್ರಾಪ್ತ ಬಾಲಕಿಯರು ಅನಂತಗಿರಿ ಜಲಪಾತದಲ್ಲಿ ಮುಳುಗಿ ಸಾವು 

ಅನಂತಗಿರಿ: ಬೇಸಿಗೆ ವಿಹಾಕ್ಕೆಂದು ತೆರಳಿದ್ದ ಮೂವರು ಅಪ್ರಾಪ್ತ ಬಾಲಕಿಯರು ಅನಂತಗಿರಿ ಜಲಪಾತದಲ್ಲಿ ಸೆಲ್ಫಿ ತೆಗೆದುಕೊಳ್ಳಲು ಜಲಪಾತಕ್ಕೆ ಇಳಿದು ನೀರಲ್ಲಿ ಮುಳುಗಿ ಸಾವನ್ನಪ್ಪಿದ್ದಾರೆ ಎಂದು ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಅಲ್ಲೂರಿ ಸೀತಾರಾಮರಾಜು ಮೂಲಗುಮ್ಮಿ ಗ್ರಾಮದಲ್ಲಿ ನಾಲ್ವರು...