Homeಬಹುಜನ ಭಾರತಬಹುಜನ ಭಾರತ: ಬಾಬಾಸಾಹೇಬರು ಮನುಸ್ಮೃತಿಯನ್ನು ಸುಟ್ಟಿದ್ದು ಸುಳ್ಳೇನು?

ಬಹುಜನ ಭಾರತ: ಬಾಬಾಸಾಹೇಬರು ಮನುಸ್ಮೃತಿಯನ್ನು ಸುಟ್ಟಿದ್ದು ಸುಳ್ಳೇನು?

ಅಸ್ಪೃಶ್ಯತೆಯು ಮೊದಲು ಅಸ್ಪೃಶ್ಯರನ್ನು ಸರ್ವನಾಶ ಮಾಡಿದೆ. ನಂತರ ಹಿಂದೂ ಸವರ್ಣೀಯರನ್ನು ಸರ್ವನಾಶ ಮಾಡಿದೆ. ಅಂತಿಮವಾಗಿ ಅದು ಇಡೀ ದೇಶವನ್ನೇ ನಾಶ ಮಾಡಿದೆ...

- Advertisement -
- Advertisement -

ಚವಡರ್ ಕೆರೆಯ ನೀರನ್ನು ಮುಟ್ಟುವ ಮಹಾಡ್ ಸತ್ಯಾಗ್ರಹದ ಸಂದರ್ಭದಲ್ಲಿ ಡಾ.ಬಾಬಾಸಾಹೇಬ ಅಂಬೇಡ್ಕರ್ ಅವರು ಮನುಸ್ಮೃತಿಯನ್ನು ಸುಟ್ಟದ್ದು ಇತಿಹಾಸದ ಅಳಿಸಲಾಗದ ಘಟನೆ.

ಶೂದ್ರ-ಚಾಂಡಾಲ-ಮಹಿಳೆಯರನ್ನು ಅಮಾನವೀಯವಾಗಿ ಕಂಡು ಅವರ ಮೇಲೆ ಅಮಾನುಷ ಕಟ್ಟುಕಟ್ಟಳೆಗಳ ವಿಧಿಸಿರುವ ಕೃತಿ ಮನುಸ್ಮೃತಿ. ಕೌನ್ ಬನೇಗಾ ಕರೋಡಪತಿ ಎಂಬ ಶೀರ್ಷಿಕೆಯ ಜನಪ್ರಿಯ ಟಿವಿ ಕಾರ್ಯಕ್ರಮವೊಂದರಲ್ಲಿ ಡಾ.ಬಾಬಾಸಾಹೇಬ ಅಂಬೇಡ್ಕರ್ ಅವರು 1927ರ ಡಿಸೆಂಬರ್ 25ರಂದು ಸುಟ್ಟು ಹಾಕಿದ ಗ್ರಂಥ ಯಾವುದು ಎಂಬ ಪ್ರಶ್ನೆಯನ್ನು ಕೆಲ ದಿನಗಳ ಹಿಂದೆ ಕೇಳಲಾಗುತ್ತದೆ. ಈ ಪ್ರಶ್ನೆ ಕೇಳುವ ಮೂಲಕ ಹಿಂದೂ ಧಾರ್ಮಿಕ ಭಾವನೆಗಳಿಗೆ ಧಕ್ಕೆ ಉಂಟು ಮಾಡಲಾಗಿದೆ ಎಂದು ಕಾರ್ಯಕ್ರಮದ ನಿರೂಪಕ ಅಮಿತಾಭ್ ಬಚ್ಚನ್ ಅವರ ಮೇಲೆ ಎಫ್.ಐ.ಆರ್. ದಾಖಲಿಸಲಾಗಿದೆ.

ಹಾಗಿದ್ದರೆ ನೂರಾರು ವರ್ಷಗಳಿಂದ ಈ ದೇಶದ ತಳಸಮುದಾಯಗಳ ಕೋಟ್ಯಂತರ ಜನರನ್ನು ಪಶುಪ್ರಾಣಿಗಳಿಗಿಂತಲೂ ಕಡೆಯಾಗಿ ನಡೆಸಿಕೊಂಡು ಬರಲಾಗಿದೆ. ತಲೆಮಾರುಗಳಿಂದ ಅವರಲ್ಲಿ ಹೆಪ್ಪುಗಟ್ಟಿರುವ ನೋವು ಅವಮಾನದ ವಿಷಯವೇನು, ಅವುಗಳ ಕುರಿತು ಯಾರ ಮೇಲೆ ಎಫ್.ಐ.ಆರ್. ಹಾಕಬೇಕು ಎಂಬ ಪ್ರಶ್ನೆ ಕೇಳಿದರೆ ಉತ್ತರ ಹೇಳುವವರು ಯಾರು? ಅಂಬೇಡ್ಕರ್ ಅವರು ಮನುಸ್ಮೃತಿಯನ್ನು ಸುಟ್ಟದ್ದು ವಾಸ್ತವ ಅಲ್ಲವೇ?

ಇದನ್ನೂ ಓದಿ: ಮನುಸ್ಮೃತಿ ಸುಟ್ಟಿದ್ದು ಏಕೆಂದು ವಿವರಿಸಿದ ಅಮಿತಾಬ್ ಬಚ್ಚನ್ ವಿರುದ್ಧ FIR!

ಇತ್ತೀಚಿನ ವರ್ಷಗಳಲ್ಲಿ ಅಂಬೇಡ್ಕರ್ ಅವರನ್ನು ಹಿಂದು ಸಮಾಜದ ವೈದ್ಯರೆಂದೂ, ಸುಧಾರಕರೆಂದೂ ಬಣ್ಣಿಸುವ ಕೃತಿಗಳನ್ನು ಹೊರತರಲಾಗಿದೆ. ‘ವಿದೇಶ ಸಂಚಾರದಲ್ಲೂ ಹಿಂದುತ್ವದ ತಿರುಳು ಮೌಲ್ಯಗಳಿಗೆ ಬದ್ಧರಾಗಿಯೇ ಉಳಿದ ಅವರು ಮದಿರೆ-ಮಾಂಸವನ್ನು ಸೇವಿಸಲಿಲ್ಲ, ಭಗವದ್ಗೀತೆಯನ್ನು ಅವರು ಒಪ್ಪಿಕೊಂಡಿದ್ದರು. ಮನುಸ್ಮೃತಿಯನ್ನು ಸುಟ್ಟರೂ ಆನಂತರ ಮೂಲ ತತ್ವಗಳಲ್ಲಿ ತಮ್ಮ ವಿಶ್ವಾಸವನ್ನು ಪ್ರಕಟಿಸಿದರು’ ಎಂದೆಲ್ಲ ಹೇಳಲಾಗಿದೆ.

2016ರಲ್ಲಿ ಅಂಬೇಡ್ಕರ್ ಅವರ 125ನೆಯ ಜಯಂತಿ ಸಂದರ್ಭದಲ್ಲಿ ಸಂವಿಧಾನ ಶಿಲ್ಪಿಯನ್ನು “ಅಖೈರು ಏಕೀಕರಣಕಾರ” (Ultimate Unifier) ಎಂದು ಹಾಡಿ ಹೊಗಳಿ, ‘ಆರ್ಗನೈಸರ್’ ಪತ್ರಿಕೆ ಹಲವು ಲೇಖನಗಳನ್ನು ಪ್ರಕಟಿಸುತ್ತದೆ. ‘ಅವರ ಲೋಕದೃಷ್ಟಿ ಮತ್ತು ಕ್ರಿಯೆಗಳು ಬ್ರಹ್ಮಸಮಾಜ, ಆರ್ಯಸಮಾಜ, ಪ್ರಾರ್ಥನಾ ಸಮಾಜವನ್ನು ಹೋಲುತ್ತಿದ್ದವು, ಶ್ರಮಿಕರ ಹಕ್ಕುಗಳನ್ನು ಬೆಂಬಲಿಸಿದವರು, ಬ್ರಾಹ್ಮಣ್ಯದ ವಿರೋಧಿಯೇ ವಿನಾ ಬ್ರಾಹ್ಮಣರ ವಿರೋಧಿಯಲ್ಲ, ಕಾಲಾತೀತ ನಾಯಕ’ ಎಂದೆಲ್ಲ ಈ ಲೇಖನಗಳಲ್ಲಿ ಅವರನ್ನು ಕೊಂಡಾಡಲಾಯಿತು.

ಹಿಂದೂ ಧರ್ಮದ ಜೀವವಿರೋಧದ ಅಂತರಾಳವನ್ನು ಮತ್ತು ಅದರ ಜಾತಿವ್ಯವಸ್ಥೆಯ ಕ್ರೌರ್ಯವನ್ನು ತಮ್ಮ ಕಡೆಯ ಉಸಿರಿನ ತನಕ ಜಾಲಾಡಿದರು ಬಾಬಾ ಸಾಹೇಬರು. ಬೆಕ್ಕುಗಳು ನಾಯಿಗಳು ಅಸ್ಪೃಶ್ಯರ ಎಂಜಲು ತಿನ್ನುತ್ತವೆ. ಮಕ್ಕಳ ಮಲವನ್ನೂ ತಿನ್ನುತ್ತವೆ. ಇದೇ ನಾಯಿ ಬೆಕ್ಕುಗಳು ಸ್ಪೃಶ್ಯರ ಮನೆಯನ್ನು ಪ್ರವೇಶಿಸಬಹುದು. ಹಾಗೆ ಪ್ರವೇಶಿಸಿದರೆ ಮೈಲಿಗೆಯಿಲ್ಲ. ಈ ಪ್ರಾಣಿಗಳನ್ನು ಸ್ಪೃಶ್ಯರು ಮುಟ್ಟುತ್ತಾರೆ, ಅಪ್ಪಿ ಮುದ್ದಾಡುತ್ತಾರೆ. ಅವು ಉಣ್ಣುವ ತಟ್ಟೆಗೆ ಬಾಯಿ ಹಾಕಿದರೂ ಅವರಿಗೆ ತಕರಾರಿಲ್ಲ. ಯಾವುದೋ ಚಾಕರಿಗೆಂದು ಮನೆಯ ಹೊರಗೆ ನಿಲ್ಲುವ ಅಸ್ಪೃಶ್ಯನನ್ನು ಕಂಡ ಸವರ್ಣೀಯ ಗದರುತ್ತಾನೆ- ದೂರ ನಿಲ್ಲು, ಮಗುವಿನ ಮಲವನ್ನು ಬಾಚಿ ಎಸೆಯುವ ಬೋಕಿ ಬಿಲ್ಲೆಯನ್ನು ಅಲ್ಲಿ ಇಡಲಾಗಿದೆ. ಅದನ್ನೂ ಮುಟ್ಟಿ ಮೈಲಿಗೆ ಮಾಡುತ್ತೀಯೇನು? ಎಂಬ ಹೃದಯವಿದ್ರಾವಕ ಸಾಲುಗಳನ್ನು ಬಾಬಾಸಾಹೇಬರು ಮೂಕನಾಯಕದ 1920ರ ಆಗಸ್ಟ್ ಸಂಚಿಕೆಯ ಸಂಪಾದಕೀಯದಲ್ಲಿ ಬರೆದಿದ್ದಾರೆ.

ಅಸ್ಪೃಶ್ಯತೆಯು ಮೊದಲು ಅಸ್ಪೃಶ್ಯರನ್ನು ಸರ್ವನಾಶ ಮಾಡಿದೆ. ನಂತರ ಹಿಂದೂ ಸವರ್ಣೀಯರನ್ನು ಸರ್ವನಾಶ ಮಾಡಿದೆ. ಅಂತಿಮವಾಗಿ ಅದು ಇಡೀ ದೇಶವನ್ನೇ ನಾಶ ಮಾಡಿದೆ… ಹಿಂದೂ ಧರ್ಮದಲ್ಲಿ ನಿಮ್ನ ವರ್ಗಗಳಿಗೆ ಗೌರವ, ಸಮಾನತೆ, ನ್ಯಾಯ ಸಿಗದೆ ಹೋದರೆ ಇವುಗಳು ಎಲ್ಲಿ ಸಿಗುತ್ತವೆಯೇ ಅಲ್ಲಿಗೆ ಅವರು ಹೋಗುವುದು ಹೇಗೆ ತಾನೆ ತಪ್ಪಾಗುತ್ತದೆ ಎಂಬ ಅಂಬೇಡ್ಕರ್ ಪ್ರಶ್ನೆಗೆ ಸಂಬಂಧಪಟ್ಟವರಿಂದ ಸಮಜಾಯಿಷಿ ಈಗಲೂ ದೊರೆತಿಲ್ಲ.

ಪ್ರಗತಿಪರ ಹಿಂದು ಸಂಹಿತೆ ವಿಧೇಯಕಗಳನ್ನು (Hindu Code Bill) ಬಲಪಂಥೀಯ ಒತ್ತಡದ ಕಾರಣ ವಿಳಂಬಗೊಳಿಸಲಾಗುತ್ತಿದೆ ಎಂದು ಪ್ರತಿಭಟಿಸಿ ಬಾಬಾ ಸಾಹೇಬರು 1951ರಲ್ಲಿ ನೆಹರೂ ಸಚಿವ ಸಂಪುಟಕ್ಕೆ ರಾಜೀನಾಮೆ ನೀಡುತ್ತಾರೆ. ಬಲಪಂಥೀಯ ಶಕ್ತಿಗಳು ಮತ್ತು ಕಾಂಗ್ರೆಸ್ಸಿನ ಪ್ರಬಲ ವರ್ಗವೊಂದು ಈ ಸುಧಾರಣೆಗಳನ್ನು ವಿರೋಧಿಸಿರುತ್ತದೆ. ಸ್ವಾತಂತ್ರ್ಯೋತ್ತರ ಭಾರತದ 70 ವರ್ಷಗಳಲ್ಲಿ ಬಾಬಾ ಸಾಹೇಬರ ಕುರಿತು ಕಟ್ಟರ್‌ವಾದಿ ಬಲಪಂಥೀಯ ಶಕ್ತಿಗಳು ತಮ್ಮ ನಿಲುವನ್ನು ಹೇಗೆಲ್ಲ ಬದಲಿಸುತ್ತ ಬಂದಿದೆ ಎಂಬುದನ್ನು ಇತಿಹಾಸಕಾರ ರಾಮಚಂದ್ರ ಗುಹಾ ಪುರಾವೆ ಸಹಿತ ನಿಚ್ಚಳವಾಗಿ ದಾಖಲಿಸಿದ್ದಾರೆ.

ಒಂದೆಡೆ ಅಂಬೇಡ್ಕರ್ ವಿಚಾರಗಳನ್ನು ಕಡೆಗಣಿಸಿ ಮತ್ತೊಂದೆಡೆ ಅವರ ಹೆಸರನ್ನು ತಲೆ ಮೇಲೆ ಹೊತ್ತು ಮೆರೆಸುತ್ತಿದ್ದೇವೆಂಬ ಇಬ್ಬಗೆಯ ಆಚರಣೆಯ ಅರ್ಥವೇನು ಎಂಬುದನ್ನು ಕಂಡುಕೊಳ್ಳಬೇಕಿದೆ.


ಇದನ್ನೂ ಓದಿ: ಹಿಂದೂಗಳ ಕಣ್ಣಿಗೆ ದಲಿತರು ಮನುಷ್ಯರಂತೆ ಕಾಣುವುದೆಂದು? – ಡಿ.ಉಮಾಪತಿ
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

2020ರ ದೆಹಲಿ ಗಲಭೆ ಪ್ರಕರಣ: ಐವರು ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದಂತೆ ಬೆಂಕಿ ಹಚ್ಚುವಿಕೆ, ಗಲಭೆ ಮತ್ತು ವಿಧ್ವಂಸಕ ಕೃತ್ಯದ ಆರೋಪ ಹೊತ್ತಿರುವ ಐವರನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ. ಅಬ್ದುಲ್ ಸತ್ತಾರ್, ಮುಹಮ್ಮದ್ ಖಾಲಿದ್, ಹುನೈನ್, ತನ್ವೀರ್ ಮತ್ತು ಆರಿಫ್ ವಿರುದ್ಧದ...

ಕಾರ್‌ ಚಲಾಯಿಸುವಾಗ ಫೋನ್‌ನಲ್ಲಿ ಮಾತನಾಡದಂತೆ ಹೇಳಿದ್ದಕ್ಕೆ ಪತ್ರಕರ್ತನ ಮೇಲೆ ರಾಡ್‌ನಿಂದ ಹಲ್ಲೆ

ಆ್ಯಪ್ ಆಧಾರಿತ ಟ್ಯಾಕ್ಸಿ ಬುಕಿಂಗ್‌ ಮಾಡುವ ಪ್ರಯಾಣಿಕರ ಸುರಕ್ಷತೆ ಮತ್ತು ಚಾಲಕರ ನಡವಳಿಕೆಯ ಕುರಿತ ಕಳವಳವಳಕಾರಿ ಘಟನೆಯೊಂದು ಹರಿಯಾಣದ ಫರಿದಾಬಾದ್‌ನಲ್ಲಿ ಬೆಳಕಿಗೆ ಬಂದಿದೆ. ರ್ಯಾಪಿಡೋ ಟ್ಯಾಕ್ಸಿ ಚಾಲಕನೊಬ್ಬ ಪ್ರಯಾಣಿಕನ ಮೇಲೆ ಕಬ್ಬಿಣದ ರಾಡ್‌ನಿಂದ...

ರಾಜಸ್ಥಾನ| ಎಥೆನಾಲ್ ಸ್ಥಾವರದ ವಿರುದ್ಧ ಪ್ರತಿಭಟನೆ: 40 ಜನರ ಬಂಧನ

ರಾಜಸ್ಥಾನದ ಹನುಮಾನ್‌ಗಢ ಜಿಲ್ಲೆಯ ರೈತರು, ಪ್ರಸ್ತಾವಿತ ಎಥೆನಾಲ್ ಕಾರ್ಖಾನೆಯ ವಿರುದ್ಧ ಎರಡನೇ ದಿನವೂ ಪ್ರತಿಭಟನೆ ಮುಂದುವರೆಸಿದ್ದಾರೆ, ಈ ಪ್ರದೇಶದಲ್ಲಿ ಹೆಚ್ಚಿನ ಭದ್ರತೆ ಮತ್ತು ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ. ಗುರುವಾರ ಮುಂಜಾನೆ ಟಿಬ್ಬಿ ಬಳಿಯ ಗುರುದ್ವಾರದಲ್ಲಿ...

ವಿಧಾನಸಭೆಯಲ್ಲಿ ‘ಗೃಹಲಕ್ಷ್ಮಿ’ ಗದ್ದಲ : ಬಿಜೆಪಿ ಸದಸ್ಯರಿಂದ ಸಭಾತ್ಯಾಗ, ಕ್ಷಮೆ ಕೋರಿದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್

ಗೃಹಲಕ್ಷಿ ಯೋಜನೆಯ ಹಣ ಬಿಡುಗಡೆ ಸಂಬಂಧ ಸಚಿವರು ಸದನಕ್ಕೆ ತಪ್ಪು ಮಾಹಿತಿ ನೀಡಿದ್ದಾರೆ ಎಂಬ ವಿಚಾರ ಇಂದು (ಡಿ.17 ಬುಧವಾರ) ವಿಧಾನಸಭೆಯಲ್ಲಿ ದೊಡ್ಡ ಮಟ್ಟದ ವಾಗ್ವಾದ, ಆರೋಪ-ಪ್ರತ್ಯಾರೋಪ, ಗದ್ದಲ, ಪ್ರತಿಭಟನೆ, ಸಭಾತ್ಯಾಗ ಮತ್ತು...

ತಂಪು ಪಾನೀಯದಲ್ಲಿ ಮತ್ತು ಬರುವ ಔಷಧ ಬೆರೆಸಿ ಅಪ್ರಾಪ್ತ ಬಾಲಕಿಯರ ಮೇಲೆ ಅತ್ಯಾಚಾರ: ಆರೋಪಿ ಬಂಧನ

ಮುಂಬೈ ನಗರವನ್ನೇ ಬೆಚ್ಚಿಬೀಳಿಸಿದ ಆಘಾತಕಾರಿ ಘಟನೆಯಲ್ಲಿ, ವಕ್ತಿಯೋರ್ವ ಮತ್ತು ಬರುವ ತಂಪು ಪಾನೀಯ ನೀಡಿ ಅಪ್ರಾಪ್ತ ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ. ಅಪರಾಧದ ಅಶ್ಲೀಲ ವೀಡಿಯೊಗಳನ್ನು ರೆಕಾರ್ಡ್ ಮಾಡಿ, ನಂತರ ವೀಡಿಯೊಗಳನ್ನು...

ಮನರೇಗಾ ಬದಲು ವಿಬಿ-ಜಿ ರಾಮ್ ಜಿ : ಲೋಕಸಭೆಯಲ್ಲಿ ಮಸೂದೆ ಅಂಗೀಕಾರದ ವೇಳೆ ಸಭಾತ್ಯಾಗಕ್ಕೆ ನಿರ್ಧರಿಸಿದ ವಿಪಕ್ಷಗಳು

ನರೇಗಾ ಬದಲು ತಂದಿರುವ ವಿಕಸಿತ್ ಭಾರತ್-ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕಾ ಮಿಷನ್ (ಗ್ರಾಮೀಣ್) ಮಸೂದೆ, 2025 (ವಿಬಿ–ಜಿ ರಾಮ್ ಜಿ ಮಸೂದೆ) ಲೋಕಸಭೆಯಲ್ಲಿ ಅಂಗೀಕಾರದ ವೇಳೆ ಸಹಕರಿಸದಿರಲು ವಿರೋಧ ಪಕ್ಷಗಳ ಸಂಸದರು...

ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ ಆರೋಪ: ಮ್ಯೂಸಿಕ್ ಮೈಲಾರಿ ಮೇಲೆ ಪೋಕ್ಸೋ ಪ್ರಕರಣ ದಾಖಲು 

ಬೆಂಗಳೂರು: ಉತ್ತರ ಕರ್ನಾಟಕದ ಜನಪದ ಗಾಯಕ ಹಾಗೂ ಯೂಟ್ಯೂಬ್ ಸ್ಟಾರ್ ಎಂದೇ ಖ್ಯಾತಿ ಪಡೆದಿದ್ದ ‘ಮ್ಯೂಸಿಕ್ ಮೈಲಾರಿ’ಎಂಬಾತನನ್ನು ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಡಿ ಮಹಾಲಿಂಗಪುರ ಪೊಲೀಸರು ಬಂಧಿಸಿದ್ದಾರೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಮೈಲಾರಿ...

ಇಂಧನ ಖರೀದಿಗೆ ‘ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ’ ಕಡ್ಡಾಯಗೊಳಿಸಿದ ದೆಹಲಿ ಸರ್ಕಾರ

ರಾಷ್ಟ್ರ ರಾಜಧಾನಿ ದೆಹಲಿಯ ವಾಹನ ಮಾಲೀಕರು ಕಟ್ಟುನಿಟ್ಟಾದ ಆದೇಶ ಎದುರಿಸುತ್ತಾರೆ. ಡಿಸೆಂಬರ್ 18 ರಿಂದ ನಗರದಾದ್ಯಂತದ ಪೆಟ್ರೋಲ್ ಬಂಕ್‌ಗಳಲ್ಲಿ ಇಂಧನ ಖರೀದಿಗೆ ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ (ಪಿಯುಸಿ) ಕಡ್ಡಾಯಗೊಳಿಸಲಾಗಿದೆ. ದೆಹಲಿ ಪರಿಸರ ಸಚಿವ ಮಂಜಿಂದರ್...

ವೈದ್ಯೆಯ ಹಿಜಾಬ್ ಎಳೆದ ಬಿಹಾರ ಸಿಎಂ, ಅವಹೇಳನ ಮಾಡಿದ ಯುಪಿ ಸಚಿವನ ವಿರುದ್ದ ದೂರು ದಾಖಲು

ವೈದ್ಯೆಯ ಹಿಜಾಬ್ ಎಳೆದ ಬಿಹಾರದ ಮುಖ್ಯಮಂತ್ರಿ ನಿತೀಶ್ ಕುಮಾರ್ ಮತ್ತು ಈ ಘಟನೆಯ ಕುರಿತು ಮಾತನಾಡುವಾಗ ಮಹಿಳೆಯನ್ನು ಅವಮಾನಿಸಿದ ಉತ್ತರ ಪ್ರದೇಶದ ಸಂಪುಟ ಸಚಿವ ಸಂಜಯ್ ನಿಶಾದ್ ವಿರುದ್ದ ಲಕ್ನೋದ ಕೈಸರ್‌ಬಾಗ್ ಪೊಲೀಸ್...

1 ಲಕ್ಷ ರೂಪಾಯಿ ಸಾಲ 74 ಲಕ್ಷ ರೂಪಾಯಿಗೆ ಏರಿಕೆ, ಸಾಲ ತೀರಿಸಲು ಕಿಡ್ನಿ ಮಾರಿದ ರೈತ 

ಅಕ್ರಮವಾಗಿ ಸಾಲ ನೀಡುವವರಿಂದ 1 ಲಕ್ಷ ಸಾಲ ಪಡೆದಿದ್ದು, ಅದಕ್ಕೆ ಹೆಚ್ಚಿನ ದಿನದ ಬಡ್ಡಿ ಸೇರಿ 75 ಲಕ್ಷ ಸಾಲ ಏರಿಕೆಯಾದ ಕಾರಣ ವ್ಯಕ್ತಿಯೊಬ್ಬ ತನ್ನ ಕಿಡ್ನಿಯನ್ನೇ ಮಾರಾಟ ಮಾಡಿರುವ ಘಟನೆ ಮಹಾರಾಷ್ಟ್ರದಲ್ಲಿ...