Homeಕರ್ನಾಟಕಬಾಬರಿ ಮಸೀದಿ ಒಡೆದು ಕಟ್ಟಿರುವ ರಾಮ ಮಂದಿರದ ಮೂರ್ತಿಯ ಶಿಲ್ಪಿಗೂ ರಾಜ್ಯೋತ್ಸವ ಪ್ರಶಸ್ತಿ!

ಬಾಬರಿ ಮಸೀದಿ ಒಡೆದು ಕಟ್ಟಿರುವ ರಾಮ ಮಂದಿರದ ಮೂರ್ತಿಯ ಶಿಲ್ಪಿಗೂ ರಾಜ್ಯೋತ್ಸವ ಪ್ರಶಸ್ತಿ!

- Advertisement -
- Advertisement -

ಬಾಬರಿ ಮಸೀದಿ ಒಡೆದು ಕಟ್ಟಲಾಗಿರುವ ರಾಮ ಮಂದಿರದ ಕಟ್ಟಡದಲ್ಲಿ ಇಡಲಾಗಿರುವ ರಾಮನ ಮೂರ್ತಿಯನ್ನು ಕೆತ್ತಿದ ವಾಸ್ತುಶಿಲ್ಪಿ ಅರುಣ್ ಯೋಗಿರಾಜ್‌ ಅವರ ಹೆಸರು ಕೂಡಾ 2024ರ ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿಯಲ್ಲಿ ಕಾಣಿಸಿಕೊಂಡಿದೆ. ಬುಧವಾರ ರಾಜ್ಯೋತ್ಸವ ಪ್ರಶಸ್ತಿಯನ್ನು ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಪ್ರಕಟಿಸಿತ್ತು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
ಇಲ್ಲಿಕ್ಲಿಕ್ ಮಾಡಿ

69ನೇ ಕರ್ನಾಟಕ ರಾಜ್ಯೋತ್ಸವ ಪ್ರಯುಕ್ತ ಒಟ್ಟು 69 ಸಾಧಕರಿಗೆ ಸರ್ಕಾರ ಪ್ರಶಸ್ತಿ ಘೋಷಣೆ ಮಾಡಿದೆ. ಖ್ಯಾತ ಪತ್ರಕರ್ತೆ ಗೌರಿ ಲಂಕೇಶ್ ಅವರ ಹತ್ಯೆಯ ವಿಚಾರಣೆಯಲ್ಲಿ ಸರ್ಕಾರದಿಂದ ನೇಮಿಸಲ್ಪಟ್ಟ ಪಬ್ಲಿಕ್‌ ಪ್ರಾಸಿಕ್ಯೂಟರ್, ಜನಪರ ವಕೀಲ ಎಸ್‌ ಬಾಲನ್, ಜಾನಪದ ಗಾಯಕರಾದ ಪಿಚ್ಚಳ್ಳಿ ಶ್ರೀನಿವಾಸ್ ಜನಾರ್ಧನ್ ಜನ್ನಿ, ಹಿರಿಯ ಪತ್ರಕರ್ತರಾದ ಸನತ್‌ಕುಮಾರ್ ಬೆಳಗಲಿ, ಎನ್‌ಎಸ್‌ ಶಂಕರ್ ಸೇರಿದಂತೆ 69 ಸಾಧಕರ ಪಟ್ಟಿಯಲ್ಲಿ ಅರುಣ್ ಯೋಗಿರಾಜ್ ಅವರಿಗೂ ಸರ್ಕಾರ ಸ್ಥಾನ ಕಲ್ಪಿಸಿದೆ. ಬಾಬರಿ ಮಸೀದಿ

ನವೆಂಬರ್‌ 1ರಂದು ನಡೆಯಲಿರುವ 69ನೇ ಕರ್ನಾಟಕ ರಾಜ್ಯೋತ್ಸವ ಸಮಾರಂಭದಲ್ಲಿ 69 ಸಾಧಕರಿಗೆ ಪ್ರಶಸ್ತಿ ಪ್ರದಾನ ಮಾಡಲಾಗುತ್ತದೆ. ಈ ಕುರಿತು ಮಾಹಿತಿ ನೀಡಿದ್ದ ಸಂಸ್ಕೃತಿ ಸಚಿವರಾದ ಶಿವರಾಜ್ ಎಸ್. ತಂಗಡಗಿ, ಈ ಬಾರಿ ರಾಜ್ಯೋತ್ಸವ ಪ್ರಶಸ್ತಿಗಾಗಿ ಒಟ್ಟು 1,575 ಭೌತಿಕ ಅರ್ಜಿಗಳು ಬಂದಿದ್ದವು. ಇದಲ್ಲದೇ ಸೇವಾ ಸಿಂಧೂ ಮೂಲಕ 1309 ಜನರಿಗಾಗಿ 7,438 ನಾಮನಿರ್ದೇಶನಗಳು ಸಲ್ಲಿಕೆಯಾಗಿದ್ದವು. ಇವುಗಳನ್ನೆಲ್ಲಾ ಕೂಲಂಕುಷವಾಗಿ ಪರಿಶೀಲನೆ ಮಾಡಿ ಅರ್ಹರ ಆಯ್ಕೆ ಮಾಡಲಾಗಿದೆ. ಪ್ರತಿ ಜಿಲ್ಲೆಗೂ ಪ್ರಾತಿನಿದ್ಯ ನೀಡಲಾಗಿದೆ ಎಂದು ಹೇಳಿದ್ದರು.

ಈ ವರ್ಷ ಕರ್ನಾಟಕ ನಾಮಕರಣದ ಸುವರ್ಣ ಮಹೋತ್ಸವ ವರ್ಷ ಆಗಿರುವುದರಿಂದ ಇದನ್ನು ವಿಶೇಷ ಸಂದರ್ಭ ಎಂದು ಪರಿಗಣಿಸಿ ಸುವರ್ಣ ಸಂಭ್ರಮ-50ರ ಸುವರ್ಣ ಮಹೋತ್ಸವ ಎಂಬ ವಿಶೇಷ ಪ್ರಶಸ್ತಿಯನ್ನು 50 ಸಾಧಕ ಮಹಿಳೆಯರಿಗೆ ಮತ್ತು 50 ಪುರುಷರಿಗೆ ನೀಡಲಾಗುತ್ತಿದೆ. ಇದರಿಂದ 69+ 100 ಒಟ್ಟು 169 ಪ್ರಶಸ್ತಿಗಳನ್ನು ನೀಡಲಾಗುತ್ತಿದೆ ಎಂದು ವಿವರಿಸಿದ್ದಾರೆ.

ಅರ್ಜಿ ಹಾಕದೆ, ಎಲೆಮರೆಯ ಕಾಯಿಯಂತೆ ಸೇವೆ ಸಲ್ಲಿಸಿರುವ 20ಕ್ಕೂ ಹೆಚ್ಚು ಮಂದಿಯನ್ನು ಸಹ ಗುರುತಿಸಿ ಪ್ರಶಸ್ತಿ ನೀಡಲಾಗುತ್ತಿದೆ. ಬಯಲಾಟ ಕ್ಷೇತ್ರದಲ್ಲಿ 92 ವರ್ಷದ ನಾರಾಯಣಪ್ಪ ಶಿಳ್ಳೇಕ್ಯಾತ, ವಿಜಯನಗರ ಜಿಲ್ಲೆ ಇವರ ಹೆಸರು, ಜಾನಪದ ಕ್ಷೇತ್ರದಲ್ಲಿ ಅಂದಕಲಾವಿದರಾದ ನರಸಿಂಹಲು, ಬೀದ‌ರ್ ಜಿಲ್ಲೆ ಇವರನ್ನು ಸಹ ಸೇರಿದಂತೆ ಈ ಪೈಕಿ 13 ಮಹಿಳೆಯರನ್ನು ಪ್ರಶಸ್ತಿಗೆ ಪರಿಗಣಿಸಲಾಗಿದೆ ಎಂದು ಸಚಿವರು ಮಾಹಿತಿ ನೀಡಿದ್ದಾರೆ.

ಪ್ರಶಸ್ತಿ ಪುರಸ್ಕೃತರ ಪಟ್ಟಿ ಇಲ್ಲಿದೆ:

ಇದನ್ನೂ ಓದಿ: ಗಣರಾಜ್ಯೋತ್ಸವ ದಿನ ‘ದಲಿತ’ ಎಂಬ ಕಾರಣಕ್ಕೆ ಸರಪಂಚ್‌ಗೆ ಧ್ವಜಾರೋಹಣಕ್ಕೆ ಅವಕಾಶ ನಿರಾಕರಣೆ

ಗಣರಾಜ್ಯೋತ್ಸವ ದಿನ ‘ದಲಿತ’ ಎಂಬ ಕಾರಣಕ್ಕೆ ಸರಪಂಚ್‌ಗೆ ಧ್ವಜಾರೋಹಣಕ್ಕೆ ಅವಕಾಶ ನಿರಾಕರಣೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ನನ್ನ ಮನೆ ಮೇಲೆ ದಾಳಿ ಮಾಡಿ… ಹೇಗೆ ಎದುರಿಸಬೇಕೆಂದು ಗೊತ್ತಿದೆ..’; ಬಿಜೆಪಿಗೆ ಮಮತಾ ಬ್ಯಾನರ್ಜಿ ಸವಾಲು

"ತಮ್ಮ ನಿವಾಸ ಮತ್ತು ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ನಾಯಕರ ನಿವಾಸವನ್ನು ಗುರಿಯಾಗಿಸಿಕೊಳ್ಳುವಂತೆ" ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಸೋಮವಾರ ಬಿಜೆಪಿಗೆ ಸವಾಲು ಹಾಕಿದರು. ರಾಜ್ಯದಲ್ಲಿ, ಟಿಎಂಸಿ ನಾಯಕರ ಮೇಲಿನ ದಾಳಿಗೆ...

ಬೆಂಗಳೂರು: ವಿಶೇಷ ಪೂಜೆ ಹೆಸರಿನಲ್ಲಿ ಐಟಿ ಅಧಿಕಾರಿಗೆ 35 ಲಕ್ಷ ವಂಚನೆ: 59 ವರ್ಷದ ‘ಗಿಳಿ ಶಾಸ್ತ್ರ’ ಹೇಳುವ ವ್ಯಕ್ತಿ ಬಂಧನ

ಬೆಂಗಳೂರು: ವಿಶೇಷ ಪೂಜೆ ಮಾಡುವುದಾಗಿ ಹೇಳಿಕೊಂಡು ಆದಾಯ ತೆರಿಗೆ ಅಧಿಕಾರಿಗೆ 35 ಲಕ್ಷ ರೂಪಾಯಿ ವಂಚಿಸಿದ ಆರೋಪದ ಮೇಲೆ ತಮಿಳುನಾಡು ಮೂಲದ 59 ವರ್ಷದ ವ್ಯಕ್ತಿಯನ್ನು ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಥೇಣಿಯ ಶೇಖರ್...

ಬಿಹಾರ| ರಾಜ್ಯಸಭಾ ಚುನಾವಣೆ ಮತದಾನದಿಂದ ಹೊರಗುಳಿದ ನಾಲ್ವರು ಶಾಸಕರು; ಮಹಾಘಟಬಂಧನ್‌ಗೆ ಹಿನ್ನಡೆ

ಸೋಮವಾರ ಸಂಜೆ 4 ಗಂಟೆಗೆ ಮುಕ್ತಾಯಗೊಂಡ ರಾಜ್ಯಸಭಾ ಚುನಾವಣೆಯಲ್ಲಿ ನಾಲ್ವರು ಶಾಸಕರು ಮತದಾನದಿಂದ ಹೊರಗುಳಿಯುವ ಮೂಲಕ ಬಿಹಾರದ ಮಹಾಘಟಬಂಧನ್‌ಗೆ ಭಾರಿ ಹಿನ್ನಡೆಯಾಗಿದೆ. ಐದನೇ ಸ್ಥಾನಕ್ಕಾಗಿ ನಡೆಯುವ ಸ್ಪರ್ಧೆಯಲ್ಲಿ ವಿರೋಧ ಮೈತ್ರಿಕೂಟದ ನಿರೀಕ್ಷೆಗೆ ಭಾರಿ...

ರಾಜ್ಯಸಭೆಯಲ್ಲಿ LPG ಕೊರತೆ ಪ್ರಸ್ತಾಪಿಸಿದ ಮಲ್ಲಿಕಾರ್ಜುನ ಖರ್ಗೆ; ಪ್ರತಿಪಕ್ಷ ಅರಾಜಕತೆ ಸೃಷ್ಟಿಸಲು ಯತ್ನಿಸುತ್ತಿದೆ ಎಂದ ಸರ್ಕಾರ !

ನವದೆಹಲಿ: ರಾಜ್ಯಸಭೆಯಲ್ಲಿ ಸೋಮವಾರ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಎಲ್‌ಪಿಜಿ ಕೊರತೆಯ ವಿಷಯವನ್ನು ಪ್ರಸ್ತಾಪಿಸಿದರು ಮತ್ತು ಅಡುಗೆ ಅನಿಲದ ಬಿಕ್ಕಟ್ಟು ಮತ್ತು ಕಾಳಸಂತೆಕೋರತನವನ್ನು ತಡೆಯಲು ಸರ್ಕಾರ ಮುನ್ನೆಚ್ಚರಿಕೆ ಕ್ರಮಗಳನ್ನು ತೆಗೆದುಕೊಂಡಿಲ್ಲ ಎಂದು...

ಬೆಂಗಳೂರು| ಹಣ ನೀಡಲು ನಿರಾಕರಿಸಿದ ವ್ಯಕ್ತಿಯನ್ನು ಮಕ್ಕಳ ಮುಂದೆಯೇ ಥಳಿಸಿ ಕೊಂದ ಗುಂಪು

ಹಣ ನೀಡಲು ನಿರಾಕರಿಸಿದ ತಂದೆಯನ್ನು ಮಕ್ಕಳ ಮುಂದೆಯೇ ಗುಂಪೊಂದು ಥಳಿಸಿ ಕೊಂದಿರುವ ಘಟನೆ ಬೆಂಗಳೂರಿನ ವಿಲ್ಸನ್ ಗಾರ್ಡನ್‌ನಲ್ಲಿ ಭಾನುವಾರ ರಾತ್ರಿ ನಡೆದಿದೆ. ವಿಲ್ಸನ್ ಗಾರ್ಡನ್‌ನ ಬಡಾ ಮಕನ್ ರಸ್ತೆ ಬಳಿ ರಶೀದ್ ಪಾಷಾ ಎಂದು...

ಅಬಕಾರಿ ನೀತಿ ಪ್ರಕರಣದಲ್ಲಿ ಖುಲಾಸೆ ಪ್ರಶ್ನಿಸಿ ಸಿಬಿಐ ಅರ್ಜಿ; ಪ್ರತಿಕ್ರಿಯಿಸಲು ಕೇಜ್ರಿವಾಲ್-ಸಿಸೋಡಿಯಾಗೆ ಸಮಯ ನೀಡಿದ ದೆಹಲಿ ಹೈಕೋರ್ಟ್

ದೆಹಲಿ ಅಬಕಾರಿ ನೀತಿ ಪ್ರಕರಣದಲ್ಲಿ ಮಾಜಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್, ಮಾಜಿ ಉಪಮುಖ್ಯಮಂತ್ರಿ ಮನೀಶ್ ಸಿಸೋಡಿಯಾ ಮತ್ತು ಇತರ 21 ಜನರ ತಮ್ಮ ಬಿಡುಗಡೆಯನ್ನು ಪ್ರಶ್ನಿಸಿ ಸಿಬಿಐ ಅರ್ಜಿಗೆ ಪ್ರತಿಕ್ರಿಯೆಗಳನ್ನು ಸಲ್ಲಿಸಲು ದೆಹಲಿ...

ಪ್ರಶ್ನೆಗಳಿಗೆ ಉತ್ತರಿಸದ ಸಚಿವರು: ಸದನ ಮುಂದೂಡಿದ ಸ್ಪೀಕರ್ ಯು.ಟಿ ಖಾದರ್

ಶಾಸಕರು ಕೇಳುವ ಪ್ರಶ್ನೆಗಳಿಗೆ ಉತ್ತರ ಒದಗಿಸದ ಸಚಿವರು ಮತ್ತು ಅಧಿಕಾರಿಗಳ ವಿರುದ್ದ ಸೋಮವಾರ (ಮಾ.16) ತೀವ್ರ ಅಸಮಾಧಾನ ವ್ಯಕ್ತಪಡಿಸಿದ ವಿಧಾನಸಭೆಯ ಸ್ಪೀಕರ್ ಯು.ಟಿ ಖಾದರ್, ಸದನವನ್ನು ಮುಂದೂಡಿಕೆ ಮಾಡಿ ಸರ್ಕಾರಕ್ಕೆ ಬಿಸಿ ಮುಟ್ಟಿಸಿದರು. ವಿಧಾನಸಭೆಯಲ್ಲಿ...

‘ಆಪರೇಷನ್ ಸಿಂಧೂರ್’ ಕುರಿತ ಪೋಸ್ಟ್: ಪ್ರೊಫೆಸರ್ ಅಲಿ ಖಾನ್ ಮಹ್ಮದಾಬಾದ್ ವಿರುದ್ಧದ ಪ್ರಕರಣಗಳನ್ನು ಕೈಬಿಟ್ಟ ಹರಿಯಾಣ ಸರ್ಕಾರ

'ಆಪರೇಷನ್ ಸಿಂಧೂರ್' ಕುರಿತು ಸಾಮಾಜಿಕ ಮಾಧ್ಯಮದಲ್ಲಿ ಪೋಸ್ಟ್ ಮಾಡಿದ್ದಕ್ಕಾಗಿ ಅಶೋಕ ವಿಶ್ವವಿದ್ಯಾಲಯದ ಪ್ರಾಧ್ಯಾಪಕ ಅಲಿ ಖಾನ್ ಮಹ್ಮದಾಬಾದ್ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಪ್ರಕರಣ ದಾಖಲಾಗಿತ್ತು. ಅವರ ವಿರುದ್ಧದ ಈ ಪ್ರಕರಣಗಳನ್ನು ಕೈಬಿಟ್ಟಿರುವುದಾಗಿ ಹರಿಯಾಣ...

ಎಲ್‌ಪಿಜಿ ಬಿಕ್ಕಟ್ಟಿನ ನಡುವೆ ಆಧಾರ್ ಮೂಲಕ ‘ಇ-ಕೆವೈಸಿ’ ಮಾಡಿಸಿಕೊಳ್ಳುವಂತೆ ಸರ್ಕಾರದ ಸೂಚನೆ

ದ್ರವೀಕೃತ ಪೆಟ್ರೋಲಿಯಂ ಅನಿಲ (ಎಲ್‌ಪಿಜಿ) ಬಳಸುವ 330 ಮಿಲಿಯನ್‌ಗಿಂತಲೂ ಹೆಚ್ಚು ಗ್ರಾಹಕರು ತಮ್ಮ ಎಲೆಕ್ಟ್ರಾನಿಕ್ ನೋ ಯುವರ್ ಕಸ್ಟಮರ್ (ಇ-ಕೆವೈಸಿ) ಅನ್ನು ಬಯೋಮೆಟ್ರಿಕ್ ಆಧಾರ್ ದೃಢೀಕರಣ ವ್ಯವಸ್ಥೆಯ ಮೂಲಕ ಮಾಡಿಸಿಕೊಳ್ಳಬೇಕು ಎಂದು ಸರ್ಕಾರ...

ಚುನಾವಣೆ ಘೋಷಣೆಯಾದ ಬೆನ್ನಲ್ಲೇ ಪಶ್ಚಿಮ ಬಂಗಾಳದ ಮುಖ್ಯ ಕಾರ್ಯದರ್ಶಿ, ಗೃಹ ಕಾರ್ಯದರ್ಶಿ, ಉನ್ನತ ಪೊಲೀಸ್ ಅಧಿಕಾರಿಗಳನ್ನು ಬದಲಾಯಿಸಿದ ಚು. ಆಯೋಗ

ನಿರೀಕ್ಷೆಯಂತೆ ಚುನಾವಣೆ ಘೋಷಣೆಯಾದ ಬೆನ್ನಲ್ಲೇ ಚುನಾವಣಾ ಆಯೋಗ ಪಶ್ಚಿಮ ಬಂಗಾಳದಲ್ಲಿ ತನ್ನ ಆಟ ಶುರು ಮಾಡಿದೆ. ರಾಜ್ಯದ ಸರ್ಕಾದ ಮುಖ್ಯ ಕಾರ್ಯದರ್ಶಿ, ಗೃಹ ಕಾರ್ಯದರ್ಶಿ ಮತ್ತು ಉನ್ನತ ಪೊಲೀಸ್ ಅಧಿಕಾರಿಗಳನ್ನು ಬದಲಾಯಿಸಿದೆ. ಪಶ್ಚಿಮ ಬಂಗಾಳ...