Homeಮುಖಪುಟಬಾಬರಿ ಮಸೀದಿ ಪ್ರಕರಣದಲ್ಲಿ ಗಲ್ಲಿಗೇರಿಸಲಿ, ಜಾಮೀನು ಪಡೆಯುವುದಿಲ್ಲ- ಉಮಾ ಭಾರತಿ

ಬಾಬರಿ ಮಸೀದಿ ಪ್ರಕರಣದಲ್ಲಿ ಗಲ್ಲಿಗೇರಿಸಲಿ, ಜಾಮೀನು ಪಡೆಯುವುದಿಲ್ಲ- ಉಮಾ ಭಾರತಿ

ಉಮಾ ಭಾರತಿ ಜೆ.ಪಿ.ನಡ್ಡಾಗೆ ಪತ್ರ ಬರೆದಿದ್ದು, ಯಾವುದೇ ಕಾರಣಕ್ಕೂ ನಾನು ಜಾಮೀನು ಕೋರುವುದಿಲ್ಲ. ತಪ್ಪಿತಸ್ಥರೆಂದು ಸಾಬೀತಾದರೇ ಗಲ್ಲಿಗೇರಿಸಲಿ ನಾನು ಸಿದ್ಧ ಎಂದಿದ್ದಾರೆ.

- Advertisement -
- Advertisement -

ಬಾಬರಿ ಮಸೀದಿ ಧ್ವಂಸ ಪ್ರಕರಣದಲ್ಲಿ ಲಖನೌದ ವಿಶೇಷ ಸಿಬಿಐ ನ್ಯಾಯಾಲಯ ನಾಳೆ (ಸೆ.30) ತೀರ್ಪು ಪ್ರಕಟಿಸಲಿದೆ. ನ್ಯಾಯಾಧೀಶ ಎಸ್.ಕೆ.ಯಾದವ್ ವಿಚಾರಣೆ ನಡೆಸಲಿದ್ದು, ತೀರ್ಪಿನ ವಿಚಾರಣೆಗಾಗಿ ಪ್ರಕರಣದ 32 ಆರೋಪಿಗಳನ್ನು ಆ ದಿನ ನ್ಯಾಯಾಲಯಕ್ಕೆ ಹಾಜರಾಗುವಂತೆ ನ್ಯಾಯಾಲಯ ನಿರ್ದೇಶಿಸಿತ್ತು.

ನಾಳೆ ತೀರ್ಪು ಬರುವ ಹಿನ್ನೆಲೆ ಬಿಜೆಪಿ ನಾಯಕಿ, ಪ್ರಕರಣದ ಪ್ರಮುಖ ಆರೋಪಿಯಾಗಿರುವ ಉಮಾ ಭಾರತಿ ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾಗೆ ಪತ್ರ ಬರೆದಿದ್ದಾರೆ. ಯಾವುದೇ ಕಾರಣಕ್ಕೂ ನಾನು ಜಾಮೀನು ಕೋರುವುದಿಲ್ಲ. ತಪ್ಪಿತಸ್ಥರೆಂದು ಸಾಬೀತಾದರೇ ಗಲ್ಲಿಗೇರಿಸಲಿ ನಾನು ಸಿದ್ಧ ಎಂದಿದ್ದಾರೆ.

ಸೆಪ್ಟೆಂಬರ್ 26 ರಂದು ಬರೆದಿರುವ ಪತ್ರದಲ್ಲಿ “ಸೆಪ್ಟೆಂಬರ್ 30 ರಂದು ಅಯೋಧ್ಯೆಯ ತೀರ್ಪು ಏನೆಂದು ನನಗೆ ತಿಳಿದಿಲ್ಲ. ಆದರೆ ನಾನು ಜಾಮೀನು ಪಡೆಯುವುದಿಲ್ಲ” ಎಂದು ಹೇಳಿದ್ದಾರೆ.

ಇದನ್ನೂ ಓದಿ: ಅಯೋಧ್ಯೆ ಕಾರ್ಯಕ್ರಮದಲ್ಲಿ ಭಾಗವಹಿಸುವುದಿಲ್ಲ: ಉಮಾಭಾರತಿ

“ಅಯೋಧ್ಯೆ ಚಳವಳಿಯಲ್ಲಿ ಭಾಗವಹಿಸಿದ್ದಕ್ಕೆ ನನಗೆ ಹೆಮ್ಮೆ ಇದೆ. ಅಯೋಧ್ಯೆ ಚಳವಳಿಯ ಭಾಗವಾಗಿದ್ದಕ್ಕಾಗಿ  ಗಲ್ಲಿಗೇರುವ ಪರಿಸ್ಥಿತಿ ಬಂದರು, ಅದು ನನಗೆ ಸ್ವೀಕಾರಾರ್ಹ ಎಂದು ನಾನು ಯಾವಾಗಲೂ ಹೇಳಿದ್ದೇನೆ” ಎಂದು  ಬರೆದಿದ್ದಾರೆ. “ತೀರ್ಪು ಏನು ಎಂದು ನನಗೆ ತಿಳಿದಿಲ್ಲ, ಆದರೆ ನಾನು ಜಾಮೀನು ತೆಗೆದುಕೊಳ್ಳುವುದಿಲ್ಲ. ಜಾಮೀನು ತೆಗೆದುಕೊಳ್ಳುವುದರಿಂದ ನಾನು ಚಳವಳಿಯಲ್ಲಿ ಭಾಗವಹಿಸಿದ್ದ ಘನತೆಗೆ ಕಳಂಕ ತರುತ್ತದೆ ಎಂದಿದ್ದಾರೆ. ಇಂತಹ ಸಂದರ್ಭಗಳಲ್ಲಿ, ನೀವು ನನ್ನನ್ನು ಹೊಸ ತಂಡದಲ್ಲಿ ಇರಿಸಿಕೊಳ್ಳಲು ಬಯಸುತ್ತೀರೋ ಇಲ್ಲವೋ, ಅದನ್ನು ನೀವು ಪರಿಗಣಿಸಬೇಕು” ಎಂದಿದ್ದಾರೆ.

ಪತ್ರವನ್ನು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ ಹೊಸ ಬಿಜೆಪಿ ಪದಾಧಿಕಾರಿಗಳನ್ನು ಘೋಷಿಸಿದ ದಿನದಂದು ಬರೆಯಲಾಗಿದೆ. ಅಂದೇ ಉಮಾ ಭಾರತಿಯನ್ನು ಪಕ್ಷದ ಉಪಾಧ್ಯಕ್ಷ ಸ್ಥಾನದಿಂದ ಕೈಬಿಡಲಾಗಿತ್ತು. ಆದರೆ ಪಕ್ಷದ ಸಾಂಸ್ಥಿಕ ಪುರ್ನರಚನೆ ಮುಂಚಿತವಾಗಿಯೇ ಈ ಪತ್ರವನ್ನು ಬರೆಯಲಾಗಿದೆ ಎಂದು ಉಮಾ ಭಾರತಿಯವರ ಖಾಸಗಿ ಕಾರ್ಯದರ್ಶಿ ವಿಷ್ಣುಗುಪ್ತ ವೈದ್ಯ ಹೇಳಿದ್ದಾರೆ.

ಉಮಾಭಾರತಿ ಪ್ರಧಾನಿ ನರೇಂದ್ರ ಮೋದಿಯವರ ಮೊದಲ ಸಂಪುಟ ಸಭೆಯಲ್ಲಿ ಕೇಂದ್ರ ಮಂತ್ರಿಯಾಗಿದ್ದರು. ಆದರೆ 2019ರ ಲೋಕಸಭಾ ಚುನಾವಣೆಯಿಂದ ದೂರ ಉಳಿದಿದ್ದರು.

ಇದನ್ನೂ ಓದಿ: ರಾಮ ಮಂದಿರದ ’ಭೂಮಿ ಪೂಜೆ’ಗೆ ಬಾಬರಿ ಮಸೀದಿ ಧ್ವಂಸಗೊಳಿಸಿದವರನ್ನು ಆಹ್ವಾನಿಸಿ: ದುಬೆ

ನಾಳೆ ಪ್ರಕರಣದ ತೀರ್ಪು ಹೊರಬೀಳಲಿದ್ದು, ಆರೋಪಿಗಳಾದ ಬಿಜೆಪಿಯ ಹಿರಿಯ ಮುಖಂಡ ಎಲ್.ಕೆ.ಅಡ್ವಾಣಿ, ಮತ್ತು ರಾಜಸ್ಥಾನದ ಮಾಜಿ ಗವರ್ನರ್ ಕಲ್ಯಾಣ್ ಸಿಂಗ್, ಬಿಜೆಪಿ ಮುಖಂಡ ಎಂ.ಎಂ.ಜೋಶಿ, ಉಮಾ ಭಾರತಿ ಮತ್ತು ವಿನಯ್ ಕಟಿಯಾರ್ ಸೇರಿದಂತೆ 32 ಆರೋಪಿಗಳು ವಿಚಾರಣೆಯಂದು ನ್ಯಾಯಾಲಯದಲ್ಲಿರುವಂತೆ ತಿಳಿಸಲಾಗಿತ್ತು.

ಆದರೆ ಕೆಲವು ಹಿರಿಯ ರಾಜಕೀಯ ಮುಖಂಡರು, ಕೆಲವರ ವೈಯಕ್ತಿಕ ಕಾರಣದಿಂದ ಖುದ್ದು ಹಾಜರಾತಿಯಿಂದ ವಿನಾಯಿತಿ ಪಡೆಯಬಹುದು ಎಂದು ತಿಳಿದು ಬಂದಿದೆ.

ಭಾರತೀಯ ಜನತಾ ಪಾರ್ಟಿಯ ಹಿರಿಯ ನಾಯಕರಾದ ಎಲ್.ಕೆ. ಆಡ್ವಾಣಿ ಮತ್ತು ಮುರಳಿ ಮನೋಹರ ಜೋಶಿ ಸೇರಿದಂತೆ 32 ಆರೋಪಿಗಳಲ್ಲಿ ಕೆಲವರು, ತಮ್ಮ ವಯಸ್ಸು ಮತ್ತು ಕೊರೊನಾ ರೋಗವನ್ನು ಮುಂದಿಟ್ಟು ವಿಡಿಯೊ ಕಾನ್ಫರೆನ್ಸ್ ಮೂಲಕ ಹಾಜರಾಗಲು ನ್ಯಾಯಾಲಯವನ್ನು ಕೋರಬಹುದು ಎಂದು ಆರೋಪಿಗಳ ಪರ ವಕೀಲ ಕೆ.ಕೆ. ಮಿಶ್ರಾ ತಿಳಿಸಿದ್ದಾರೆ.

ಕೇಂದ್ರದ ಮಾಜಿ ಸಚಿವೆ ಉಮಾ ಭಾರತಿ ಅವರಿಗೆ ಸೋಮವಾರ ಕೊರೊನಾ ಸೋಂಕು ತಗುಲಿರುವುದಾಗಿ ಟ್ವೀಟ್ ಮಾಡಿದ್ದಾರೆ. ಏಮ್ಸ್ ವೈದ್ಯರು ಅನುಮತಿ ನೀಡಿದರೆ ಮಾತ್ರ ನಾಡಿದ್ದು ನಾನು ಲಖನೌದ ಸಿಬಿಐ ವಿಶೇಷ ನ್ಯಾಯಾಲಯದಲ್ಲಿ ಹಾಜರಾಗುತ್ತೇನೆ ಎಂದಿದ್ದರು.

ಮಾಜಿ ಮುಖ್ಯಮಂತ್ರಿ ಕಲ್ಯಾಣ್ ಸಿಂಗ್ ಕೂಡ ಘಾಜಿಯಾಬಾದ್‌ನ ಖಾಸಗಿ ಆಸ್ಪತ್ರೆಯಲ್ಲಿ ಕೊರೊನಾ ಸೋಂಕಿನ ಚಿಕಿತ್ಸೆ ಪಡೆಯುತ್ತಿದ್ದಾರೆ.


ಇದನ್ನೂ ಓದಿ: ಬಾಬರಿ ಮಸೀದಿ ಧ್ವಂಸ ಪ್ರಕರಣ: ಸೆ.30ಕ್ಕೆ ಸಿಬಿಐ ವಿಶೇಷ ಕೋರ್ಟ್ ವಿಚಾರಣೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕರಾವಳಿ ಸಮಸ್ಯೆಗೆ ಶಾಶ್ವತ ಪರಿಹಾರದ ಭರವಸೆ: ಸಚಿವ ಕೆ.ಎಸ್.ಬಸವಂತಪ್ಪ

ರಾಜ್ಯದ ಕರಾವಳಿ ಭಾಗದಲ್ಲಿ ಮೀನುಗಾರಿಕೆ ಕ್ಷೇತ್ರದ ಅಭಿವೃದ್ಧಿ ಕುಂಠಿತವಾಗುತ್ತಿರುವ ಕುರಿತು ಕಳವಳ ವ್ಯಕ್ತವಾಗುತ್ತಿರುವ ಬೆನ್ನಲ್ಲೇ, ಸ್ಥಳೀಯ ಸಮಸ್ಯೆಗಳಿಗೆ ಸ್ಪಂದಿಸಲು ಸರ್ಕಾರ ಮುಂದಾಗಿದೆ. ಕರಾವಳಿ ವ್ಯಾಪ್ತಿಯ ಬಂದರುಗಳು, ಮೀನು ಮಾರುಕಟ್ಟೆಗಳು, ಬ್ರೇಕ್‌ವಾಟರ್‌ಗಳು ಹಾಗೂ ಜೆಟ್ಟಿಗಳಿಗೆ...

SIR ಪ್ರಕ್ರಿಯೆಯಲ್ಲಿ ಯಾರ ಹೆಸರು ಬಿಟ್ಟುಹೋಗಬಾರದು: PRC ನೀಡಲು ವಿಳಂಬ ಬೇಡ ಡಾ. ಜಿ. ಪರಮೇಶ್ವರ್

ಉದ್ಯೋಗ ಅಥವಾ ವಿವಿಧ ಕಾರಣಗಳಿಂದಾಗಿ ತಮ್ಮ ಸ್ವಂತ ಊರು ತೊರೆದು ಬೇರೆಡೆಗೆ ಸ್ಥಳಾಂತರಗೊಂಡು ನೆಲೆಸಿರುವ ರಾಜ್ಯದ ಯಾವುದೇ ನಾಗರಿಕರು ಯಾವುದೇ ಕಾರಣಕ್ಕೂ ಮತದಾರರ ಪಟ್ಟಿಯಿಂದ ಹೊರಗುಳಿಯಬಾರದು ಎಂದು ಉಪಮುಖ್ಯಮಂತ್ರಿ ಹಾಗೂ ಕಂದಾಯ ಸಚಿವರಾದ...

ಬಿಹಾರ ಪ್ರವಾಹದ ನಡುವೆ ಮೋದಿ ಹುಟ್ಟುಹಬ್ಬದ ಪ್ರಯುಕ್ತ ದೀಪೋತ್ಸವ; ‘ಆಶೀರ್ವಾದ್ ಕಾ ದಿಯಾ’ ಕಾರ್ಯಕ್ರಮಕ್ಕೆ ತೇಜಸ್ವಿ ಯಾದವ್ ಆಕ್ಷೇಪ

ಬಿಹಾರದಲ್ಲಿ ಪ್ರವಾಹ ಪರಿಸ್ಥಿತಿ ಮುಂದುವರಿದಿರುವ ನಡುವೆಯೇ ಪ್ರಧಾನಿ ನರೇಂದ್ರ ಮೋದಿ ಅವರ ಹುಟ್ಟುಹಬ್ಬದ ಅಂಗವಾಗಿ ಸೆಪ್ಟೆಂಬರ್ 17ರಂದು ‘ಆಶೀರ್ವಾದ್ ಕಾ ದಿಯಾ’ ಕಾರ್ಯಕ್ರಮ ಆಯೋಜಿಸಿರುವುದು ರಾಜಕೀಯ ಚರ್ಚೆಗೆ ಕಾರಣವಾಗಿದೆ. ರಾಜ್ಯದ 15 ಜಿಲ್ಲೆಗಳಲ್ಲಿ...

ಉಮರ್ ಖಾಲಿದ್ ಅವರನ್ನು ‘ದೇಶಪ್ರೇಮಿ’ ಎಂದ ಬಿ.ಕೆ. ಹರಿಪ್ರಸಾದ್; ವಿಧಾನಸೌಧ ಪೊಲೀಸ್ ಠಾಣೆಯಲ್ಲಿ ದೂರು ದಾಖಲು

ಬೆಂಗಳೂರಿನ ರಾಷ್ಟ್ರೀಯ ಕಾನೂನು ಶಾಲೆ (ಎನ್‌ಎಲ್‌ಎಸ್‌ಐಯು) ಯೂನಿವರ್ಸಿಟಿಯಲ್ಲಿ ಜೈಲಿನಲ್ಲಿರುವ ಹೋರಾಟಗಾರ ಉಮರ್ ಖಾಲಿದ್ ಕುರಿತಾದ ಸಾಕ್ಷ್ಯಚಿತ್ರಕ್ಕೆ ಸಂಬಂಧಿಸಿದಂತೆ ನಡೆಯುತ್ತಿರುವ ವಿವಾದದ ನಡುವೆ, ಅವರನ್ನು "ರಾಷ್ಟ್ರಪ್ರೇಮಿ" ಎಂದು ಕರೆದಿರುವ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ...

ಇಂದಿರಾ ಗಾಂಧಿಯಂತೆ ನೇರವಾಗಿ ನಿಲ್ಲಿ, ಟ್ರಂಪ್ ಮುಂದೆ ಮಂಡಿಯೂರುತ್ತಿದ್ದೀರಿ: ‘UPI ಟ್ಯಾಕ್ಸ್’ ಬಗ್ಗೆ ಮೋದಿ ವಿರುದ್ಧ ರಾಹುಲ್ ವಾಗ್ದಾಳಿ!

ಯುಪಿಐ (UPI) ವಹಿವಾಟುಗಳಿಗೆ ಸಂಬಂಧಿಸಿದಂತೆ ಜಾರಿಯಾಗುತ್ತಿರುವ ಹೊಸ 'ಮರ್ಚೆಂಟ್ ಡಿಸ್ಕೌಂಟ್ ರೇಟ್' (MDR) ವ್ಯವಸ್ಥೆ ಇದೀಗ ತೀವ್ರ ರಾಜಕೀಯ ಸಂಘರ್ಷಕ್ಕೆ ಕಾರಣವಾಗಿದೆ. ಇದನ್ನು "ಬ್ಯಾಂಕ್‌ಗಳು ವಿಧಿಸುವ ಸೇವಾ ಶುಲ್ಕ" ಎಂದು ಸರ್ಕಾರ ಸಮರ್ಥಿಸಿಕೊಳ್ಳುತ್ತಿದ್ದರೂ,...

ಲಿಯೋನೆಲ್ ಮೆಸ್ಸಿ ಕೇರಳ ಭೇಟಿ ಪ್ರಕರಣ: ಕೊಚ್ಚಿಯ ‘ರಿಪೋರ್ಟರ್ ಟಿವಿ’ ಕಚೇರಿಯಲ್ಲಿ ಪೊಲೀಸರಿಂದ ಶೋಧ

ಮಲಯಾಳಂ ಸುದ್ದಿ ವಾಹಿನಿ 'ರಿಪೋರ್ಟರ್ ಟಿವಿ'ಯ ಕೊಚ್ಚಿ ಪ್ರಧಾನ ಕಚೇರಿಯಲ್ಲಿ ಬುಧವಾರ (ಸೆ.16) ಮುಂಜಾನೆ ಪೊಲೀಸ್ ತಂಡವೊಂದು ಶೋಧ ಕಾರ್ಯ ನಡೆಸಿದ್ದು, ಇದರಿಂದಾಗಿ ತನ್ನ ಸುದ್ದಿ ಪ್ರಸಾರ ಕಾರ್ಯಾಚರಣೆಗೆ ಅಡಚಣೆಯಾಗಿದೆ ಎಂದು ವಾಹಿನಿ...

‘ಏಕರೂಪತೆ ಸಮಾನತೆಯಲ್ಲ’: 2029ಕ್ಕೂ ಮುನ್ನ 21 ರಾಜ್ಯಗಳಲ್ಲಿ ಯುಸಿಸಿ ಜಾರಿ ಘೋಷಿಸಿದ ಅಮಿತ್ ಶಾಗೆ ಪ್ರತಿಪಕ್ಷಗಳ ತೀವ್ರ ತಿರುಗೇಟು

ನವದೆಹಲಿ/ಮುಂಬೈ: 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಸರ್ಕಾರಗಳಿರುವ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಜಾರಿಗೆ ತರಲಾಗುವುದು ಎಂಬ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ...

KPSC ಅಧ್ಯಕ್ಷರ ಪುತ್ರಿಯ ನಕಲಿ ಪ್ರಮಾಣಪತ್ರ ಹಗರಣ: ಅಕ್ರಮಕ್ಕೆ ಸಾಥ್ ನೀಡಿದ್ದ ಅಧಿಕಾರಿಯ ಜಾಮೀನು ಅರ್ಜಿ ವಜಾ

ಕೆಪಿಎಸ್‌ಸಿ (KPSC) ಅಧ್ಯಕ್ಷರ ಪುತ್ರಿಗೆ ಅಕ್ರಮವಾಗಿ ನಕಲಿ ಆದಾಯ ಪ್ರಮಾಣಪತ್ರ ನೀಡಿದ ಆರೋಪ ಎದುರಿಸುತ್ತಿರುವ ಕಂದಾಯ ಅಧಿಕಾರಿಯ ನಿರೀಕ್ಷಣಾ ಜಾಮೀನು ಅರ್ಜಿಯನ್ನು ಬೆಂಗಳೂರಿನ ನಗರ ಸಿವಿಲ್ ಮತ್ತು ಸೆಷನ್ಸ್ ನ್ಯಾಯಾಲಯ ಮಂಗಳವಾರ ವಜಾಗೊಳಿಸಿದೆ....

ಬಂಗಾಳದಲ್ಲಿ ಬಿಜೆಪಿ ಸರ್ಕಾರದ ನಿರ್ಬಂಧ; ನೆಲಕಚ್ಚಿದ ದನದ ಮಾಂಸ ವ್ಯಾಪಾರ

ಪಶು ಹತ್ಯೆಯ ಕುರಿತು ಮುಖ್ಯಮಂತ್ರಿ ಸುವೇಂಧು ಅಧಿಕಾರಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಸೂಚನೆ ಹೊರಡಿಸಿದ ನಂತರ, ಮಾಂಸದ ವ್ಯಾಪಾರಿ ಮುಷ್ತಾಕ್ ಕಳೆದ ಮೂರು ತಿಂಗಳಿನಿಂದ ಒಂದು ಪೈಸೆಯನ್ನೂ ಗಳಿಸಿಲ್ಲ. "ಚುನಾವಣೆಯ ಕಾರಣದಿಂದ...

ತೀವ್ರಗೊಂಡ ಸೌದಿ-ಹೌತಿ ಸಂಘರ್ಷ : ಮಕ್ಕಾ ಗುರಿಯಾಗಿಸಿದ್ದ ಡ್ರೋನ್ ಹೊಡೆದುರುಳಿಸಿದ್ದೇವೆ ಎಂದ ಸೌದಿ; ತಳ್ಳಿಹಾಕಿದ ಹೌತಿ

ಯೆಮನ್‌ನ ರೆಬೆಲ್ ಗ್ರೂಪ್ ಹೌತಿ ಮತ್ತು ಸೌದಿ ಬೆಂಬಲಿತ ಪಡೆಗಳ ಸಂಘರ್ಷ ತೀವ್ರಗೊಂಡಿದ್ದು, ಇತಿಹಾಸದಲ್ಲೇ ಮೊದಲ ಬಾರಿಗೆ ಮುಸ್ಲಿಮರ ಪವಿತ್ರ ನಗರ ಮಕ್ಕಾದಲ್ಲಿ ಸೌದಿ ಅರೇಬಿಯಾದ ನಾಗರಿಕ ರಕ್ಷಣಾ (ಸಿವಿಲ್ ಡಿಫೆನ್ಸ್) ಇಲಾಖೆಯು...