Homeಮುಖಪುಟಬಾಬರಿ ಮಸೀದಿ ಧ್ವಂಸ ದಿನ: ರಾಮ್‌ ಕೆ ನಾಮ್ | ರಾಮನ ಹೆಸರಿನಲ್ಲಿ | In...

ಬಾಬರಿ ಮಸೀದಿ ಧ್ವಂಸ ದಿನ: ರಾಮ್‌ ಕೆ ನಾಮ್ | ರಾಮನ ಹೆಸರಿನಲ್ಲಿ | In the name of God | ಸಾಕ್ಷ್ಯಚಿತ್ರ ನೋಡಿ

ದೇಶದ ಕೋಮು ಸೌಹಾರ್ದವನ್ನು ಒಡೆಯಲು ಬಿಜೆಪಿ ಬೆಂಬಲಿತ ಸಂಘಟನೆಗಳು ಏನೆಲ್ಲಾ ಮಾಡಿತ್ತು ಎಂಬುವುದನ್ನು ಈ ಸಾಕ್ಷ್ಯಚಿತ್ರ ಶೋಧಿಸುತ್ತದೆ ಮತ್ತು ಅದನ್ನು ಹಿಂದಿ, ಬಂಗಾಳಿ ಮತ್ತು ಮಲಯಾಳಂ ಭಾಷೆಯಲ್ಲಿ ನೀವು ವೀಕ್ಷಿಸಬಹುದಾಗಿದೆ.

- Advertisement -
- Advertisement -

ಬಾಬರಿ ಮಸೀದಿ ಒಡೆದು ಇಂದಿಗೆ 29 ವರ್ಷಗಳಾಯಿತು. ಐತಿಹಾಸಿಕ ಮಸೀದಿ ಒಡೆಯುವುದರೊಂದಿಗೆ ದೇಶದ ಕೋಮು ಸೌಹಾರ್ದತೆಯನ್ನು ಕೂಡಾ ಒಡೆಯಲಾಯಿತು. ಮಸೀದಿ ಒಡೆದ ನಂತರ ದೇಶದಾದ್ಯಂತ ನಡೆದ ಕೋಮು ಗಲಭೆಯಲ್ಲಿ ಸುಮಾರು 2000 ಜನರು ಮೃತರಾದರು. ಇದೀಗ ಮಸೀದಿ ಒಡೆದ ಸ್ಥಳದಲ್ಲಿ ಬೇರೆಯೆ ಕಟ್ಟಡವನ್ನು ನಿರ್ಮಿಸಲಾಗುತ್ತಿದೆ.

ಬಾಬರಿ ಮಸೀದಿ ಒಡೆಯಲು ಬೇಕಾಗಿ ಬಿಜೆಪಿ ಬೆಂಬಲಿತ ದುಷ್ಕರ್ಮಿಗಳ ಗುಂಪು ಏನೆಲ್ಲಾ ನಡೆಸಿತು ಎಂದು ಹಿರಿಯ ಚಲನಚಿತ್ರ ನಿರ್ಮಾಪಕ ಆನಂದ್ ಪಟವರ್ಧನ್‌ 1992 ರಲ್ಲಿ ‘ರಾಮ್‌ ಕೆ ನಾಮ್’(ರಾಮನ ಹೆಸರಿನಲ್ಲಿ) ಎಂಬ ಸಾಕ್ಷ್ಯಚಿತ್ರವನ್ನು ನಿರ್ಮಿಸಿದ್ದಾರೆ.

ಅಯೋಧ್ಯೆಯ ಬಾಬರಿ ಮಸೀದಿಯ ಸ್ಥಳದಲ್ಲಿ ರಾಮ ಮಂದಿರವನ್ನು ನಿರ್ಮಿಸಲು ಬಲಪಂಥೀಯ ಬಿಜೆಪಿ ಬೆಂಬಲಿತ ಸಂಘಟನೆಯಾದ ವಿಎಚ್‌ಪಿ ನಡೆಸಿದ ಅಭಿಯಾನ ಮತ್ತು ಅದು ಪ್ರಚೋದಿಸಿದ ಕೋಮು ಹಿಂಸಾಚಾರವನ್ನು ಈ ಚಲನಚಿತ್ರವು ಪರಿಶೋಧಿಸುತ್ತದೆ. ರಾಮ್ ಕೆ ನಾಮ್ (ಇಂಗ್ಲಿಷ್: ಇನ್ ದಿ ನೇಮ್ ಆಫ್ ಗಾಡ್) ಭಾರತೀಯ ಚಲನಚಿತ್ರದಲ್ಲಿ ಒಂದು ಪ್ರಮುಖ ಮೈಲಿಗಲ್ಲಿನ ಚಿತ್ರವಾಗಿದೆ. ರಾಮ್ ಕೆ ನಾಮ್ ಬಿಡುಗಡೆಯಾದ ಒಂದೆರಡು ತಿಂಗಳ ನಂತರ, ವಿಎಚ್‌ಪಿ ಮತ್ತು ಇತರ ಆರೆಸ್ಸೆಸ್‌ ಮತ್ತು ಬಿಜೆಪಿ ಬೆಂಬಲಿತ ಗುಂಪುಗಳ ಕಾರ್ಯಕರ್ತರು 1992 ರಲ್ಲಿ ಬಾಬರಿ ಮಸೀದಿಯನ್ನು ಕೆಡವಿದರು.

ಈ ಚಿತ್ರವು ಆನಂದ್‌ ಪಟವರ್ಧನ್‌ಗೆ ವ್ಯಾಪಕ ಮನ್ನಣೆಯನ್ನು ತಂದುಕೊಟ್ಟಿತು ಮತ್ತು ಹಲವಾರು ರಾಷ್ಟ್ರೀಯ ಮತ್ತು ಅಂತರರಾಷ್ಟ್ರೀಯ ಪ್ರಶಸ್ತಿಗಳನ್ನು ಪಡೆಯಿತು. ಈ ಪ್ರಸಿದ್ದ ಸಾಕ್ಷ್ಯಚಿತ್ರವನ್ನು ನಾನುಗೌರಿ.ಕಾಂ ಓದುಗರಿಗಾಗಿ ಇಲ್ಲಿ ನೀಡುತ್ತಿದ್ದೇವೆ. ಹಿಂದಿ, ಬಂಗಾಳಿ ಮತ್ತು ಮಲಯಾಳಂ ಭಾಷೆಯಲ್ಲಿ ನೀವು ಅದನ್ನು ವೀಕ್ಷಿಸಬಹುದಾಗಿದೆ.

ಹಿಂದಿ ಭಾಷೆಯಲ್ಲಿ ‘ರಾಮ್‌ ಕೆ ನಾಮ್‌’ ಚಿತ್ರ, ಇಂಗ್ಲಿಷ್‌ ಸಬ್‌ಟೈಟಲ್‌ನೊಂದಿಗೆ.

ಮಲಯಾಳಂ ಭಾಷೆಯಲ್ಲಿ ‘ರಾಮ್‌ ಕೆ ನಾಮ್‌’ ಚಿತ್ರ, ಮಳಯಾಳಂ ಸಬ್‌ಟೈಟಲ್‌ನೊಂದಿಗೆ. (ಈ ಮಲಯಾಳಂ ಆವೃತ್ತಿಯನ್ನು 2010 ರಲ್ಲಿ ದುರಂತ ಅಪಘಾತದಲ್ಲಿ ನಿಧನರಾದ ಖ್ಯಾತ ಚಲನಚಿತ್ರ ನಿರ್ಮಾಪಕ ಮತ್ತು ಹೋರಾಟಗಾರ ಸಿ.ಶರತ್ಚಂದ್ರನ್ ಅವರು ಮಾಡಿದ್ದಾರೆ)

ಬಂಗಾಳಿ ಭಾಷೆಯಲ್ಲಿ ‘ರಾಮ್‌ ಕೆ ನಾಮ್‌’ ಚಿತ್ರ, ಬಂಗಾಳಿ ಸಬ್‌ಟೈಟಲ್‌ನೊಂದಿಗೆ. (ಈ ಆವೃತ್ತಿಯನ್ನು ಕೊಂಕಣ್‌ ಸೇನ್‌ ಅವರು ಮಾಡಿದ್ದಾರೆ. ಸಬ್‌ಟೈಟಲ್‌ಗಳು ಕೆಲವು ದೋಷಗಳನ್ನು ಹೊಂದಿವೆ.)

ಹಿಂದಿ ಭಾಷೆಯಲ್ಲಿ ಇಂಗ್ಲಿಷ್‌ ಸಬ್‌ಟೈಟಲ್‌ನೊಂದಿಗೆ(ಸ್ಟಾಂಡ್‌ ಅಪ್‌ ಹಾಸ್ಯನಟ ಕುನಾಲ್‌ ಕಮ್ರಾ ಅವರ ಯೂಟ್ಯೂಬ್ ಚಾನೆಲ್‌ನಿಂದ)

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...