Homeಮುಖಪುಟಶೃಂಗಸಭೆ ಹಿನ್ನೆಲೆ: ಭಾರತಕ್ಕೆ ರಷ್ಯಾ ಅಧ್ಯಕ್ಷ ಪುಟಿನ್‌ ಆಗಮನ

ಶೃಂಗಸಭೆ ಹಿನ್ನೆಲೆ: ಭಾರತಕ್ಕೆ ರಷ್ಯಾ ಅಧ್ಯಕ್ಷ ಪುಟಿನ್‌ ಆಗಮನ

- Advertisement -
- Advertisement -

ರಷ್ಯಾ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ಅವರು ಸೋಮವಾರ ಡಿಸೆಂಬರ್ 6 ರಂದು ಭಾರತಕ್ಕೆ ಬಂದಿಳಿದರು ಮತ್ತು ದೆಹಲಿಯ ಹೈದರಾಬಾದ್ ಹೌಸ್‌ನಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಪುಟಿನ್ ಅವರನ್ನು ಬರಮಾಡಿಕೊಂಡರು.

ಪುಟಿನ್ ಆಗಮಿಸಿದ ಸ್ವಲ್ಪ ಸಮಯದ ನಂತರ, ವಿದೇಶಾಂಗ ವ್ಯವಹಾರಗಳ ಸಚಿವಾಲಯದ ವಕ್ತಾರ ಅರಿಂದಮ್ ಬಾಗ್ಚಿ ಟ್ವೀಟ್ ಮಾಡಿದ್ದಾರೆ:

“ಭಾರತದ ವಿಶ್ವಾಸಾರ್ಹ ಸ್ನೇಹಿತ ಮತ್ತು ದೀರ್ಘಕಾಲದ ಪಾಲುದಾರನನ್ನು ಸ್ವಾಗತಿಸುತ್ತಿದ್ದೇನೆ” ಎಂದು ಟ್ವೀಟ್ ಹೇಳಿದೆ.

ರಷ್ಯಾದ ಅಧ್ಯಕ್ಷರಾದ ಪುಟಿನ್‌ 21ನೇ ವಾರ್ಷಿಕ ಭಾರತ-ರಷ್ಯಾ ಶೃಂಗಸಭೆಯಲ್ಲಿ ತಮ್ಮ ಭಾರತೀಯ ಸಹವರ್ತಿ ಪ್ರಧಾನಿ ನರೇಂದ್ರ ಮೋದಿ ಅವರೊಂದಿಗೆ ಭಾಗವಹಿಸಲಿದ್ದಾರೆ ಎಂದು ಎಎನ್‌ಐ ವರದಿ ಮಾಡಿದೆ.

ಬ್ರೆಜಿಲ್‌ನ ಬ್ರೆಸಿಲಿಯಾದಲ್ಲಿ 2019ರಲ್ಲಿ ನಡೆದ ಬ್ರಿಕ್ಸ್ ಶೃಂಗಸಭೆಯ ಸಂದರ್ಭದಲ್ಲಿ ಪ್ರಧಾನಿ ಮೋದಿ ಮತ್ತು ಅಧ್ಯಕ್ಷ ಪುಟಿನ್ ಅವರು ಕೊನೆಯ ಬಾರಿ ಮುಖಾಮುಖಿ ಭೇಟಿಯಾಗಿದ್ದರು. ನಂತರ ಇದೇ ಮೊದಲ ಬಾರಿಗೆ ವೈಯಕ್ತಿಕವಾಗಿ ಭೇಟಿಯಾಗಿದ್ದಾರೆ. ಪ್ರಧಾನಿ ಮೋದಿ ಅವರು ಪುಟಿನ್‌ ಅವರಿಗೆ ಹೈದರಾಬಾದ್ ಹೌಸ್‌ನಲ್ಲಿ ಔತಣಕೂಟವನ್ನೂ ಏರ್ಪಡಿಸಲಿದ್ದಾರೆ.

ಉಭಯ ರಾಷ್ಟ್ರಗಳ ನಡುವಿನ ದ್ವಿಪಕ್ಷೀಯ ಸಂಬಂಧಗಳ ಕುರಿತು ಚರ್ಚೆ ನಡೆಯಲಿದೆ. ಚೀನಾ ಕೂಡ ಪ್ರಮುಖ ಚರ್ಚೆಯ ವಿಷಯವಾಗಿದೆ ಎಂದು ನಿರೀಕ್ಷಿಸಲಾಗಿದೆ. ತಾಲಿಬಾನ್ ಹಿಡಿತದಲ್ಲಿರುವ ಅಫ್ಘಾನಿಸ್ತಾನದ ಭದ್ರತಾ ಪರಿಸ್ಥಿತಿಯ ಬಗ್ಗೆಯೂ ಮೋದಿ ಮತ್ತು ಪುಟಿನ್ ಚರ್ಚಿಸಲಿದ್ದಾರೆ.

ಯುನೈಟೆಡ್ ಸ್ಟೇಟ್ಸ್ ಬೆಂಬಲಿತ ಅಶ್ರಫ್ ಘನಿ ಸರ್ಕಾರವನ್ನು ತಾಲಿಬಾನ್ ಹೊರಹಾಕಿದ ನಂತರ, ಪುಟಿನ್ ಮತ್ತು ಮೋದಿ ತಾಲಿಬಾನ್ ಬಗ್ಗೆ ಚರ್ಚೆಗಳನ್ನು ಪ್ರಾರಂಭಿಸಿದರು. ಚರ್ಚೆಯನ್ನು ಮುಂದುವರೆಸಲು ರಷ್ಯಾದ ರಾಷ್ಟ್ರೀಯ ಭದ್ರತಾ ಸಲಹೆಗಾರ ನಿಕೊ ಲಾಯ್ ಪಟ್ರುಶೇವ್ ಅವರನ್ನು ನವದೆಹಲಿಗೆ ಕಳುಹಿಸಲಾಯಿತು.

ಭಾರತ ಮತ್ತು ರಷ್ಯಾ ಮುಂದಿನ 10 ವರ್ಷಗಳವರೆಗೆ ಮಿಲಿಟರಿ-ತಾಂತ್ರಿಕ ಸಹಕಾರಕ್ಕಾಗಿ ಚೌಕಟ್ಟುಗಳನ್ನು ನಿಗದಿಪಡಿಸಿಕೊಳ್ಳಲಿದೆ. ತಂತ್ರಜ್ಞಾನ ಮತ್ತು ವಿಜ್ಞಾನದ ಜಂಟಿ ಆಯೋಗವನ್ನು ಘೋಷಿಸುವ ನಿರೀಕ್ಷೆಯಿದೆ ಎಂದು ದಿ ಇಂಡಿಯನ್ ಎಕ್ಸ್‌ಪ್ರೆಸ್ ವರದಿ ಮಾಡಿದೆ.

ಮೋದಿ ಮತ್ತು ಪುಟಿನ್‌ ಹಲವಾರು ರಕ್ಷಣಾ ಖರೀದಿ ಪ್ರಸ್ತಾವನೆಗಳನ್ನು ಅಂತಿಮಗೊಳಿಸಲಿದ್ದಾರೆ. ಭಾರತೀಯ ಸೇನೆಗಾಗಿ ಅವಳಿ-ಎಂಜಿನ್ Kamov-226T ಲಘು ಹೆಲಿಕಾಪ್ಟರ್‌ಗಳ ಜಂಟಿ ಉತ್ಪಾದನೆ ಕುರಿತು ಚರ್ಚಿಸಲಿದ್ದಾರೆ ಎನ್ನಲಾಗಿದೆ.

“ಸಂವಾದದ ಕಾರ್ಯಸೂಚಿಯು ಪರಸ್ಪರ ಹಿತಾಸಕ್ತಿಯ ರಾಜಕೀಯ ಮತ್ತು ರಕ್ಷಣಾ ವಿಷಯಗಳನ್ನು ಒಳಗೊಂಡಿರುತ್ತದೆ. ಉಭಯ ದೇಶಗಳ ನಡುವಿನ ಕಾರ್ಯತಂತ್ರದ ಪಾಲುದಾರಿಕೆಯನ್ನು ಮತ್ತಷ್ಟು ಬಲಪಡಿಸುವ ನಿರೀಕ್ಷೆಯಿದೆ” ಎಂದು ವಿದೇಶಾಂಗ ವ್ಯವಹಾರಗಳ ಸಚಿವಾಲಯದ ವಕ್ತಾರ ಅರಿಂದಮ್ ಬಾಗ್ಚಿ ಹೇಳಿದ್ದಾರೆ.


ಇದನ್ನೂ ಓದಿರಿ: ನೊಬೆಲ್‌ ಪ್ರಶಸ್ತಿ ಪುರಸ್ಕೃತ ಆಂಗ್‌ ಸಾನ್‌ ಸೂಕಿಗೆ ನಾಲ್ಕು ವರ್ಷ ಜೈಲು ಶಿಕ್ಷೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಮುಂಬೈ ಮಹಾರಾಷ್ಟ್ರ ನಗರವಲ್ಲ’: ಅಣ್ಣಾಮಲೈ ಹೇಳಿಕೆಗೆ ಶಿವಸೇನೆಯಿಂದ ತೀವ್ರ ಆಕ್ರೋಶ

ಮುಂಬೈ: ಐಪಿಎಸ್ ಅಧಿಕಾರಿಯಿಂದ ರಾಜಕಾರಣಿಯಾಗಿ ಬದಲಾದ ಕೆ.ಅಣ್ಣಾಮಲೈ ಅವರು "ಬಾಂಬೆ ಮಹಾರಾಷ್ಟ್ರ ನಗರವಲ್ಲ, ಅಂತರರಾಷ್ಟ್ರೀಯ ನಗರ" ಎಂದು ಹೇಳಿದ್ದು, ಇದು ಮುಂಬೈನಲ್ಲಿ ವಿವಾದ ಸೃಷ್ಟಿಸಿದೆ.  ಇದಕ್ಕೆ ಉದ್ಧವ್ ಠಾಕ್ರೆ ನೇತೃತ್ವದ ಶಿವಸೇನೆ (ಯುಬಿಟಿ)...

ಮೂರನೇ ಅತ್ಯಾಚಾರ ಪ್ರಕರಣ ದಾಖಲು : ಉಚ್ಛಾಟಿತ ಕಾಂಗ್ರೆಸ್ ಶಾಸಕ ರಾಹುಲ್ ಮಾಂಕೂಟತ್ತಿಲ್ ಬಂಧನ

ಅತ್ಯಾಚಾರ ಆರೋಪ ಕೇಳಿ ಬಂದ ಬಳಿಕ ಕಾಂಗ್ರೆಸ್‌ನಿಂದ ಉಚ್ಛಾಟನೆಗೊಂಡಿರುವ ಕೇರಳದ ಪಾಲಕ್ಕಾಡ್‌ನ ಶಾಸಕ ರಾಹುಲ್ ಮಾಂಕೂಟತ್ತಿಲ್ ಅವರನ್ನು ಭಾನುವಾರ (ಜ.11) ಬಂಧಿಸಲಾಗಿದೆ. ಪಾಲಕ್ಕಾಡ್‌ನ ಕೆಪಿಎಂ ರೀಜೆನ್ಸಿ ಹೋಟೆಲ್‌ನಿಂದ ಬೆಳಗಿನ ಜಾವ 12.30ರ ಸುಮಾರಿಗೆ ಮಾಂಕೂಟತ್ತಿಲ್...

ಇರಾನ್‌ ಹಿಂಸಾಚಾರ : ಸಾವಿನ ಸಂಖ್ಯೆ 116ಕ್ಕೆ ಏರಿಕೆ

ಕಳೆದ ಎರಡು ವಾರಗಳಿಂದ ಇರಾನ್‌ನಲ್ಲಿ ನಡೆಯುತ್ತಿರುವ ಸರ್ಕಾರಿ ವಿರೋಧಿ ಪ್ರತಿಭಟನೆಗಳಲ್ಲಿ ಕನಿಷ್ಠ 116 ಜನರು ಸಾವನ್ನಪ್ಪಿದ್ದಾರೆ. ಅಧಿಕಾರಿಗಳು ಪ್ರತಿಭಟನಾ ನಿರತರ ಮೇಲೆ ಕಠಿಣ ಕ್ರಮದ ಎಚ್ಚರಿಕೆ ನೀಡಿದ್ದಾರೆ ಎಂದು ವರದಿಯಾಗಿದೆ. ಡಿಸೆಂಬರ್ 28ರಂದು ಪ್ರಾರಂಭವಾದ...

ಪಾಕಿಸ್ತಾನದ ಸಿಂಧ್‌ನಲ್ಲಿ 23 ವರ್ಷದ ಹಿಂದೂ ರೈತನನ್ನು ಗುಂಡಿಕ್ಕಿ ಕೊಂದ ಭೂಮಾಲೀಕರು 

ಕರಾಚಿ: ಪಾಕಿಸ್ತಾನದ ಸಿಂಧ್ ಪ್ರಾಂತ್ಯದಲ್ಲಿ 23 ವರ್ಷದ ಹಿಂದೂ ರೈತನೊಬ್ಬ ತನ್ನ ಜಮೀನಿನಲ್ಲಿ ಆಶ್ರಯ ಮನೆ ನಿರ್ಮಿಸಿದ್ದಕ್ಕಾಗಿ ಆತನ ಮನೆ ಮಾಲೀಕರು ಗುಂಡಿಕ್ಕಿ ಕೊಂದಿದ್ದಾರೆ, ಇದು ಹಿಂದೂ ಸಮುದಾಯದಿಂದ ವ್ಯಾಪಕ ಪ್ರತಿಭಟನೆಗೆ ಎಂದು...

ದ್ವೇಷ ಭಾಷಣ ಮಸೂದೆ ರಾಜ್ಯಪಾಲರಿಂದ ತಿರಸ್ಕೃತವಾಗಿಲ್ಲ: ಸಿಎಂ ಸಿದ್ದರಾಮಯ್ಯ

ದ್ವೇಷ ಭಾಷಣ ಮಸೂದೆ ಸರ್ವಾನುಮತದಿಂದ ಅಂಗೀಕಾರವಾಗಿದ್ದು, ರಾಜ್ಯಪಾಲರು ಅದನ್ನು ವಾಪಸ್ ಕಳಿಸಿಲ್ಲ, ತಿರಸ್ಕರಿಸಿಲ್ಲ, ಅಂಕಿತವನ್ನೂ ಹಾಕಿಲ್ಲ. ಅವರು ಕರೆದಾಗ ಈ ಬಗ್ಗೆ ವಿವರಣೆ ನೀಡಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಭಾನುವಾರ (ಜ.11) ಮಂಗಳೂರಿನಲ್ಲಿ...

ಐಸಿಸ್ ಗುರಿ ಮಾಡಿ ಸಿರಿಯಾ ಮೇಲೆ ವೈಮಾನಿಕ ದಾಳಿ ನಡೆಸಿದ ಅಮೆರಿಕ

ಸಿರಿಯಾದ ಇಸ್ಲಾಮಿಕ್ ಸ್ಟೇಟ್ (ಐಎಸ್) ಗುಂಪಿನ ತಾಣಗಳ ಮೇಲೆ ಅಮೆರಿಕ ಮತ್ತು ಅದರ ಪಾಲುದಾರ ಪಡೆಗಳು ದೊಡ್ಡ ಪ್ರಮಾಣದ ದಾಳಿಗಳನ್ನು ನಡೆಸಿವೆ ಎಂದು ಅಮೆರಿಕದ ಸೆಂಟ್ರಲ್ ಕಮಾಂಡ್ (ಸೆಂಟ್‌ಕಾಮ್) ಘೋಷಿಸಿದೆ. ಡಿಸೆಂಬರ್ 13ರಂದು ಸಿರಿಯಾದಲ್ಲಿ...

ವೆನೆಜುವೆಲಾದ ತೈಲ ಖರೀದಿಗೆ ಅಮೆರಿಕದ ಅನುಮತಿ ಪಡೆಯಲು ರಿಲಯನ್ಸ್ ಮಾತುಕತೆ : ವರದಿ

ಭಾರತದ ರಿಲಯನ್ಸ್ ಇಂಡಸ್ಟ್ರೀಸ್ ವೆನೆಜುವೆಲಾದ ಕಚ್ಚಾ ತೈಲ ಖರೀದಿಯನ್ನು ಪುನರಾರಂಭಿಸಲು ಅಮೆರಿಕದ ಅನುಮೋದನೆಯನ್ನು ಕೋರುತ್ತಿದೆ ಎಂದು ಈ ವಿಷಯದ ಬಗ್ಗೆ ಗೊತ್ತಿರುವ ಎರಡು ಮೂಲಗಳು ಶುಕ್ರವಾರ ತಿಳಿಸಿವೆ ಎಂದು ಸುದ್ದಿ ಸಂಸ್ಥೆ ರಾಯಿಟರ್ಸ್...

ಐ-ಪ್ಯಾಕ್‌ ಮೇಲೆ ದಾಳಿ | ಇಡಿ ಅಧಿಕಾರಿಗಳ ವಿರುದ್ಧ ತನಿಖೆ ಪ್ರಾರಂಭಿಸಿದ ಕೋಲ್ಕತ್ತಾ ಪೊಲೀಸರು : ಸುಪ್ರೀಂ ಕೋರ್ಟ್‌ನಲ್ಲಿ ಕೇವಿಯಟ್ ಸಲ್ಲಿಸಿದ ಪ. ಬಂಗಾಳ ಸರ್ಕಾರ

ಐ-ಪ್ಯಾಕ್ ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ದಾಳಿ ನಡೆಸಿದ ಸಂದರ್ಭದಲ್ಲಿ ದಾಖಲೆಗಳ ಕಳ್ಳತನದ ಆರೋಪದ ಮೇಲೆ ಕೋಲ್ಕತ್ತಾ ಪೊಲೀಸರು ಶನಿವಾರ (ಜ.10)...

ಟ್ರಂಪ್ ಸಂಚಿಗೆ ತಿರುಗೇಟು : ನಾವು ಯಾರ ಅಡಿಯಾಳಾಗಲು ಸಿದ್ದರಿಲ್ಲ ಎಂದ ಗ್ರೀನ್‌ಲ್ಯಾಂಡ್‌ನ ರಾಜಕೀಯ ಪಕ್ಷಗಳು

ವೆನೆಜುವೆಲಾ ಬಳಿಕ ಖನಿಜ-ಸಮೃದ್ಧ ಡ್ಯಾನಿಶ್ (ಡೆನ್ಮಾರ್ಕ್‌) ಸ್ವಾಯತ್ತ ಪ್ರದೇಶವಾದ ಗ್ರೀನ್‌ ಲ್ಯಾಂಡ್‌ ಮೇಲೆ ಬಲಪ್ರಯೋಗ ಮಾಡಲು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಯೋಜಿಸುತ್ತಿದ್ದಾರೆ. ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಗ್ರೀನ್‌ಲ್ಯಾಂಡ್‌ನ ರಾಜಕೀಯ ಪಕ್ಷಗಳು...

ಮತ್ತೆ ಒಂದಾದ ಎನ್‌ಸಿಪಿ ಬಣಗಳು : ಸುಪ್ರಿಯಾ ಸುಳೆ ಜೊತೆ ವೇದಿಕೆ ಹಂಚಿಕೊಂಡ ಅಜಿತ್ ಪವಾರ್, ಜಂಟಿ ಪ್ರಣಾಳಿಕೆ ಬಿಡುಗಡೆ

ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಅಜಿತ್ ಪವಾರ್ ನೇತೃತ್ವದ ಎನ್‌ಸಿಪಿ ಮತ್ತು ಅವರ ಚಿಕ್ಕಪ್ಪ ಶರದ್ ಪವಾರ್ ನೇತೃತ್ವದ ಎನ್‌ಸಿಪಿ (ಎಸ್‌ಪಿ) ಶನಿವಾರ (ಜ.10) ಪುಣೆ ಮಹಾನಗರ ಪಾಲಿಕೆಗೆ ನಡೆಯಲಿರುವ ಚುನಾವಣೆಗೆ ಜಂಟಿ ಪ್ರಣಾಳಿಕೆಯನ್ನು ಬಿಡುಗಡೆ...