Homeಮುಖಪುಟ77 ಜಾತಿಗಳನ್ನು ಒಬಿಸಿ ಪಟ್ಟಿಗೆ ಸೇರಿಸುವ ಬಂಗಾಳ ನಿರ್ಧಾರಕ್ಕೆ ಹಿನ್ನಡೆ; ಹೈಕೋರ್ಟ್ ಆದೇಶಕ್ಕೆ ತಡೆ ನೀಡಲು...

77 ಜಾತಿಗಳನ್ನು ಒಬಿಸಿ ಪಟ್ಟಿಗೆ ಸೇರಿಸುವ ಬಂಗಾಳ ನಿರ್ಧಾರಕ್ಕೆ ಹಿನ್ನಡೆ; ಹೈಕೋರ್ಟ್ ಆದೇಶಕ್ಕೆ ತಡೆ ನೀಡಲು ನಿರಾಕರಿಸಿದ ಸುಪ್ರೀಂ

- Advertisement -
- Advertisement -

ಪಶ್ಚಿಮ ಬಂಗಾಳ ಸರ್ಕಾರವು 77 ಜಾತಿಗಳನ್ನು ಇತರೆ ಹಿಂದುಳಿದ ವರ್ಗಗಳ (ಒಬಿಸಿ) ವರ್ಗಕ್ಕೆ ಸೇರಿಸುವುದನ್ನು ರದ್ದುಗೊಳಿಸಿದ ಕಲ್ಕತ್ತಾ ಹೈಕೋರ್ಟ್ ಆದೇಶಕ್ಕೆ ತಡೆ ನೀಡಲು ಸುಪ್ರೀಂ ಕೋರ್ಟ್ ನಿರಾಕರಿಸಿದೆ.

2010-12ರ ಅವಧಿಯಲ್ಲಿ 77 ಜಾತಿಗಳನ್ನು ಒಬಿಸಿ ವರ್ಗಕ್ಕೆ ಸೇರಿಸುವ ರಾಜ್ಯ ಆದೇಶಗಳ ಸರಣಿಯನ್ನು ಮೇ 22 ರಂದು ಹೈಕೋರ್ಟ್ ರದ್ದುಗೊಳಿಸಿತ್ತು. 2010ರ ನಂತರ ಬಂಗಾಳದಲ್ಲಿ ನೀಡಲಾದ ಎಲ್ಲಾ ಒಬಿಸಿ ಪ್ರಮಾಣಪತ್ರಗಳನ್ನು ರದ್ದುಗೊಳಿಸಿತ್ತು.

ಭಾರತದ ಮುಖ್ಯ ನ್ಯಾಯಮೂರ್ತಿ ಡಿವೈ ಚಂದ್ರಚೂಡ್ ನೇತೃತ್ವದ ಪೀಠವು ಇಂದು ಹೈಕೋರ್ಟ್ ಆದೇಶದ ವಿರುದ್ಧ ಬಂಗಾಳ ಸರ್ಕಾರ ಸಲ್ಲಿಸಿದ ಅರ್ಜಿಯ ಮೇಲೆ ನೋಟಿಸ್ ಜಾರಿ ಮಾಡಿದೆ. ಒಬಿಸಿ ಪಟ್ಟಿಗೆ ಸೇರಿಸುವ ಮೊದಲು 77 ಸಮುದಾಯಗಳ ಸಾಮಾಜಿಕ ಮತ್ತು ಶೈಕ್ಷಣಿಕ ಹಿಂದುಳಿದಿರುವಿಕೆಯನ್ನು ನಿರ್ಧರಿಸಲು ನಡೆಸಿದ ಸಮೀಕ್ಷೆಯ ವಿವರಗಳನ್ನು ಒದಗಿಸುವಂತೆ ರಾಜ್ಯವನ್ನು ಕೇಳಿದೆ.

ಈ ನಿಟ್ಟಿನಲ್ಲಿ ರಾಜ್ಯ ಹಿಂದುಳಿದ ಆಯೋಗದೊಂದಿಗೆ ಸಮಾಲೋಚನೆ ನಡೆಸಿದ್ದರೆ ರಾಜ್ಯ ಸರ್ಕಾರವೂ ವಿವರ ನೀಡಬೇಕು.

ನ್ಯಾಯಮೂರ್ತಿಗಳಾದ ಜೆಬಿ ಪರ್ದಿವಾಲಾ ಮತ್ತು ಮನೋಜ್ ಮಿಶ್ರಾ ಅವರನ್ನೊಳಗೊಂಡ ಪೀಠವು, ರಾಜ್ಯ ಸರ್ಕಾರಿ ಸೇವೆಗಳಲ್ಲಿ ಸಮುದಾಯಗಳಿಗೆ ಕಡಿಮೆ ಪ್ರಾತಿನಿಧ್ಯದ ಬಗ್ಗೆ ಡೇಟಾ ಕೇಳಿದೆ. ಅಫಿಡವಿಟ್ ಸಲ್ಲಿಸಲು ರಾಜ್ಯಕ್ಕೆ ಒಂದು ವಾರ ಕಾಲಾವಕಾಶವಿದೆ.

ಇದನ್ನೂ ಓದಿ; ಕೋಚಿಂಗ್ ಸೆಂಟರ್‌ನಲ್ಲಿ ಯುಪಿಎಸ್‌ಸಿ ಆಕಾಂಕ್ಷಿಗಳ ಸಾವು; ಸ್ವಯಂ ಪ್ರೇರಿತ ವಿಚಾರಣೆ ಕೈಗೆತ್ತಿಕೊಂಡ ಸುಪ್ರೀಂ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ನಾಲ್ವರು ಬಾಲಕರಿಂದ ಬಾಲಕಿಗೆ ಕಿರುಕುಳ ಆರೋಪ : ‘ಉತ್ತಮ ಸಂಸ್ಕಾರ ಕಲಿಸಿಲ್ಲ’ ಎಂದು ತಾಯಂದಿರನ್ನು ಬಂಧಿಸಿದ ಪೊಲೀಸರು!

ಉತ್ತರ ಪ್ರದೇಶದ ಬದೌನ್ ಜಿಲ್ಲೆಯಲ್ಲಿ ನಾಲ್ವರು ಬಾಲಕರ ವಿರುದ್ಧ ಬಾಲಕಿಗೆ ಕಿರುಕುಳ ನೀಡಿದ ಆರೋಪ ಕೇಳಿ ಬಂದಿದ್ದು, ಪೊಲೀಸರು ಬಾಲಕರ ತಾಯಂದಿರನ್ನು 'ಪ್ರಿವೆಂಟಿವ್ ಅರೆಸ್ಟ್' ಮಾಡಿದ್ದಾರೆ ಎಂದು indianexpress.com ಶನಿವಾರ (ಡಿ.20) ವರದಿ...

ಎಸ್‌ಐಆರ್‌: ಸ್ಟಾಲಿನ್ ಅವರ ಕೊಳತ್ತೂರು ಕ್ಷೇತ್ರದಲ್ಲಿ 1 ಲಕ್ಷ ಮತದಾರ ಹೆಸರು ಕರಡು ಮತದಾರರ ಪಟ್ಟಿಯಲ್ಲಿ ಡಿಲೀಟ್

ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರ ಕೊಳತ್ತೂರು ಕ್ಷೇತ್ರದಿಂದ 1,03,812 ಕ್ಕೂ ಹೆಚ್ಚು ಮತದಾರರ ಹೆಸರು ತೆಗೆದುಹಾಕಲಾಗಿದೆ. ಇದು ತಮಿಳುನಾಡಿನಲ್ಲಿ ರಾಜ್ಯಾದ್ಯಂತ ನಡೆದ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಮತದಾರರ ಪಟ್ಟಿಯಲ್ಲಿನ ಅತಿದೊಡ್ಡ ಮತದಾರರ...

ಅಸ್ಸಾಂ : 15 ಮಂದಿಗೆ 24 ಗಂಟೆಯೊಳಗೆ ದೇಶ ತೊರೆಯಲು ಆದೇಶ : ಮಾಧ್ಯಮಗಳ ಮೂಲಕ ವಿಷಯ ತಿಳಿದುಕೊಂಡ ಕುಟುಂಬಸ್ಥರು

ಅಸ್ಸಾಂನ ನಾಗಾಂವ್ ಜಿಲ್ಲಾಡಳಿತವು 15 ಘೋಷಿತ ವಿದೇಶಿಯರಿಗೆ 24 ಗಂಟೆಗಳ ಒಳಗೆ ರಾಜ್ಯ ತೊರೆಯುವಂತೆ ಆದೇಶಿಸಿದ ಬಗ್ಗೆ ವರದಿಯಾಗಿದೆ. ಬುಧವಾರ (ಡಿ.17) ಜಿಲ್ಲಾಡಳಿತ ಈ ಆದೇಶ ನೀಡಿತ್ತು. ಆದರೆ, ಇದುವರೆಗೆ (ಡಿ.20) ಈ 15...

ಸಿರಿಯಾದ ಐಸಿಸ್ ಅಡಗುತಾಣಗಳ ಮೇಲೆ ಅಮೆರಿಕ ವಾಯುದಾಳಿ

ಕಳೆದ ವಾರ ಅಮೆರಿಕದ ಸಿಬ್ಬಂದಿ ಮೇಲೆ ನಡೆದ ಮಾರಕ ದಾಳಿಗೆ ಪ್ರತೀಕಾರವಾಗಿ ಅಮೆರಿಕವು ಮಧ್ಯ ಸಿರಿಯಾದಾದ್ಯಂತ ಡಜನ್‌ಗಟ್ಟಲೆ ಇಸ್ಲಾಮಿಕ್ ಸ್ಟೇಟ್ (ಐಎಸ್) ನೆಲೆಗಳ ಮೇಲೆ ವಾಯುದಾಳಿ ನಡೆಸಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. 'ಆಪರೇಷನ್ ಹಾಕೈ...

16 ಲಕ್ಷಕ್ಕೂ ಹೆಚ್ಚು ಕಾರ್ಮಿಕರನ್ನು ‘ಮನರೇಗಾ’ ಪಟ್ಟಿಯಿಂದ ಕೈಬಿಟ್ಟ ಕೇಂದ್ರ ಸರ್ಕಾರ: ವರದಿ

ಯುಪಿಎ ಸರ್ಕಾರದ ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆ (ಮನರೇಗಾ) ಹೆಸರನ್ನು ಬದಲಿಸಲು ಪ್ರಯತ್ನಿಸುವ 'ವಿಕ್ಷಿತ್ ಭಾರತ್ - ಗ್ಯಾರಂಟಿ ಫಾರ್ ರೋಜ್‌ಗಾರ್ ಮತ್ತು ಅಜೀವಿಕಾ ಮಿಷನ್ (ಗ್ರಾಮೀಣ) (ವಿಬಿ–ಜಿ...

ಅಮೆರಿಕದ ಬಹು ನಿರೀಕ್ಷಿತ ‘ಎಪ್‌ಸ್ಟೀನ್ ಫೈಲ್ಸ್’ ಬಿಡುಗಡೆ : ಬಿಲ್ ಕ್ಲಿಂಟನ್, ಮೈಕಲ್ ಜಾಕ್ಸನ್ ಸೇರಿದಂತೆ ಪ್ರಮುಖರ ಫೋಟೋಗಳು ಬಹಿರಂಗ

ಅಮೆರಿಕದ ಸಂಸತ್ತು ಅಂಗೀಕರಿಸಿದ ಎಪ್‌ಸ್ಟೀನ್ ಫೈಲ್ಸ್ ಟ್ರಾನ್ಸ್‌ಪೆರೆನ್ಸಿ ಆಕ್ಟ್ (Epstein Files Transparency Act) ನಿಯಮದಂತೆ ಅಮೆರಿಕದ ನ್ಯಾಯ ಇಲಾಖೆ(ಡಿಒಜಿ) ಲೈಂಗಿಕ ದೌರ್ಜನ್ಯ ಪ್ರಕರಣದ ಅಪರಾಧಿ ಜೆಫ್ರಿ ಎಪ್‌ಸ್ಟೀನ್‌ಗೆ ಸಂಬಂಧಿಸಿದ ಕೆಲ ದಾಖಲೆಗಳನ್ನು...

ಕೋಮು ಸಾಮರಸ್ಯಕ್ಕಾಗಿ ಭಾರತದ ಮುಸ್ಲಿಮರು ಸಾಮೂಹಿಕ ಪ್ರಯತ್ನಗಳೊಂದಿಗೆ ಮುಂದೆ ಬರಬೇಕು: ಜಮಾಅತ್ ಅಧ್ಯಕ್ಷ

'ಭಾರತದ ಮುಸ್ಲಿಮರು, ದೇಶದಲ್ಲಿ ಕೋಮು ಸಾಮರಸ್ಯಕ್ಕಾಗಿ ವೈಯಕ್ತಿಕ ಮತ್ತು ಸಾಮೂಹಿಕ ಪ್ರಯತ್ನಗಳೊಂದಿಗೆ ಮುಂದೆ ಬರಬೇಕು' ಎಂದು ಜಮಾಅತೆ-ಇ-ಇಸ್ಲಾಮಿ ಹಿಂದ್ ಅಧ್ಯಕ್ಷ ಸೈಯದ್ ಸಾದತುಲ್ಲಾ ಹುಸೈನಿ ಅವರು ಒತ್ತಾಯಿಸಿದರು. ಕೋಮು ಸಾಮರಸ್ಯ ಇಲಾಖೆಯು ಆಯೋಜಿಸಿದ್ದ 'ಅಖಿಲ...

3 ವರ್ಷಗಳಲ್ಲಿ ರಷ್ಯಾ ಸೇನೆ ಸೇರಿದ 200 ಕ್ಕೂ ಹೆಚ್ಚು ಭಾರತೀಯರು; 26 ಮಂದಿ ಸಾವು: ವಿದೇಶಾಂಗ ಸಚಿವಾಲಯ

2022 ರಿಂದ ಕನಿಷ್ಠ 202 ಭಾರತೀಯ ಪ್ರಜೆಗಳು ರಷ್ಯಾದ ಸಶಸ್ತ್ರ ಪಡೆಗಳಿಗೆ ಸೇರಿದ್ದಾರೆ ಎಂದು ವರದಿಯಾಗಿದೆ. ಇದರಲ್ಲಿ 26 ಮಂದಿ ಸಾವನ್ನಪ್ಪಿದ್ದು, ಇಬ್ಬರನ್ನು ರಷ್ಯಾದಲ್ಲಿ ಅಂತ್ಯಕ್ರಿಯೆ ಮಾಡಲಾಗಿದೆ ಎಂದು ವಿದೇಶಾಂಗ ಸಚಿವಾಲಯ (ಎಂಇಎ)...

ಎಸ್‌ಐಆರ್‌ ಬಳಿಕ ಕರಡು ಮತದಾರರ ಪಟ್ಟಿ ಪ್ರಕಟ : ತಮಿಳುನಾಡಿನಲ್ಲಿ 97 ಲಕ್ಷ, ಗುಜರಾತ್‌ನಲ್ಲಿ 73 ಲಕ್ಷ ಹೆಸರು ಡಿಲೀಟ್

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಬಳಿಕ ತಮಿಳುನಾಡು ಮತ್ತು ಗುಜರಾತ್‌ನ ಕರಡು ಮತದಾರರ ಪಟ್ಟಿಯನ್ನು ಭಾರತೀಯ ಚುನಾವಣಾ ಆಯೋಗ (ಇಸಿಐ) ಪ್ರಕಟಿಸಿದ್ದು, ಕ್ರಮವಾಗಿ 97.3 ಮತ್ತು 73.7 ಲಕ್ಷ ಮತದಾರರ...

ಅಸ್ಸಾಂ | ರಾಜಧಾನಿ ಎಕ್ಸ್ ಪ್ರೆಸ್ ರೈಲು ಢಿಕ್ಕಿ : 8 ಆನೆಗಳು ಸಾವು

ಶನಿವಾರ (ಡಿಸೆಂಬರ್ 20, 2025) ಬೆಳಗಿನ ಜಾವ ಅಸ್ಸಾಂನ ಹೊಜೈ ಜಿಲ್ಲೆಯಲ್ಲಿ ಸಾಯಿರಂಗ್-ನವದೆಹಲಿ ರಾಜಧಾನಿ ಎಕ್ಸ್‌ಪ್ರೆಸ್‌ ರೈಲು ಡಿಕ್ಕಿ ಹೊಡೆದ ಪರಿಣಾಮ ಎಂಟು ಆನೆಗಳು ಸಾವನ್ನಪ್ಪಿದ್ದು, ಒಂದು ಗಾಯಗೊಂಡಿದೆ ಎಂದು ವರದಿಯಾಗಿದೆ. ಘಟನೆಯಲ್ಲಿ ಐದು...