ಹಿಂದುಳಿದ ವರ್ಗಗಳಿಗೆ ಮೀಸಲಾತಿಯನ್ನು ನಿರ್ಧರಿಸಲು ‘ಸ್ವತಂತ್ರ ಆಯೋಗ’ವನ್ನು ರಚಿಸುವಂತೆ ರಾಜ್ಯ ಸರ್ಕಾರಕ್ಕೆ ತೆಲಂಗಾಣ ಹೈಕೋರ್ಟ್ ಬುಧವಾರ ನಿರ್ದೇಶನ ನೀಡಿದೆ. ರಾಜ್ಯ ಸರ್ಕಾರವು ಸರ್ಕಾರಿ ಮತ್ತು ಖಾಸಗಿ ವಲಯದಾದ್ಯಂತ ಸಾಮಾಜಿಕ ಆರ್ಥಿಕ ಮತ್ತು ರಾಜಕೀಯ ಪ್ರಾತಿನಿಧ್ಯವನ್ನು ನಿರ್ಣಯಿಸಲು ಹಿಂದುಳಿದ ವರ್ಗಗಳ ಕಲ್ಯಾಣ ಆಯೋಗಕ್ಕೆ ಇತ್ತೀಚೆಗೆ ನಿರ್ದೇಶನ ನೀಡಿತ್ತು. ಈ ಆಯೋಗವು ಮಂಗಳವಾರ ರಾಜ್ಯಾದ್ಯಂತ ಸಾರ್ವಜನಿಕ ವಿಚಾರಣೆಯನ್ನು ಪ್ರಾರಂಭಿಸಿತ್ತು. ಹಿಂದುಳಿದ ವರ್ಗಗಳ ಮೀಸಲಾತಿಗಾಗಿ
ರಾಜ್ಯ ಸರ್ಕಾರವು ಸೆಪ್ಟೆಂಬರ್ 2024 ರಲ್ಲಿ ಆಯೋಗವನ್ನು ರಚಿಸಿ, ಹಿರಿಯ ಕಾಂಗ್ರೆಸ್ ನಾಯಕ ಜಿ ನಿರಂಜನ್ ಅವರನ್ನು ಅಧ್ಯಕ್ಷರನ್ನಾಗಿ ನೇಮಿಸಿತ್ತು. ಹಿಂದುಳಿದ ವರ್ಗ ಸಮುದಾಯಗಳ ಜನಸಂಖ್ಯೆಯ ಶೇಕಡಾವಾರು ಲೆಕ್ಕಾಚಾರ ಮಾಡಿ ನಂತರ ಸ್ಥಳೀಯ ಸಂಸ್ಥೆಗಳಲ್ಲಿ ಹಿಂದುಳಿದ ವರ್ಗಗಳ ಸಮುದಾಯಗಳಿಗೆ ಮೀಸಲಾತಿಯನ್ನು ನಿರ್ಧರಿಸುವಂತೆ ರಾಜ್ಯ ಸರ್ಕಾರ ಆಯೋಗಕ್ಕೆ ಆದೇಶ ನೀಡಿತ್ತು.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
ಇಲ್ಲಿಕ್ಲಿಕ್ ಮಾಡಿ
ರಾಜ್ಯ ಸರ್ಕಾರದ ಈ ಆದೇಶದಂತೆ ಹಿಂದುಳಿದ ವರ್ಗಗಳ ಕಲ್ಯಾಣ ಆಯೋಗವು ಒಂದು ತಿಂಗಳ ಕಾಲ ಸಾಮಾಜಿಕ ಆರ್ಥಿಕ ಮತ್ತು ರಾಜಕೀಯ ಪ್ರಾತಿನಿಧ್ಯವನ್ನು ಮೌಲ್ಯಮಾಪನ ಮಾಡಿ, ಅದರ ವರದಿಯನ್ನು ಸಲ್ಲಿಸಬೇಕಾಗಿತ್ತು.
ಹಿಂದುಳಿದ ವರ್ಗಗಳ ಮುಖಂಡ ಹಾಗೂ ಮಾಜಿ ಸಂಸದ ಆರ್.ಕೃಷ್ಣಯ್ಯ ಅವರು ಸರ್ಕಾರದ ಈ ಆದೇಶವನ್ನು ಹೈಕೋರ್ಟ್‌ನಲ್ಲಿ ಪ್ರಶ್ನಿಸಿದ್ದರು. ಈ ಕಾರ್ಯವನ್ನು ಹಿಂದುಳಿದ ವರ್ಗಗಳ ಕಲ್ಯಾಣ ಆಯೋಗಕ್ಕೆ ವಹಿಸಿರುವುದು ಸುಪ್ರೀಂ ಕೋರ್ಟ್ ಆದೇಶದ ಉಲ್ಲಂಘನೆಯಾಗಿದೆ ಎಂದು ಅವರು ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದರು. ಹಿಂದುಳಿದ ವರ್ಗಗಳ ಮೀಸಲಾತಿಗಾಗಿ
ಮಹಾರಾಷ್ಟ್ರದಲ್ಲಿ ಇದೇ ರೀತಿಯ ಆದೇಶವನ್ನು ಬಾಂಬೆ ಹೈಕೋರ್ಟ್ ರದ್ದುಗೊಳಿಸಿದೆ ಎಂದು ನ್ಯಾಯಾಲಯಕ್ಕೆ ಹೇಳಿದ್ದಾರೆ. ಆಯೋಗವು ತನ್ನ ವರದಿಯನ್ನು ಸಲ್ಲಿಸಿದ ನಂತರ ತೆಲಂಗಾಣದಲ್ಲಿ ಇದೇ ರೀತಿಯ ಪರಿಸ್ಥಿತಿ ಉದ್ಭವಿಸಿದರೆ, ಸಮಯ ವ್ಯರ್ಥವಾಗುತ್ತದೆ ಎಂದು ಕೃಷ್ಣಯ್ಯ ಪರ ವಕೀಲರು ಹೈಕೋರ್ಟ್‌ನಲ್ಲಿ ಹೇಳಿದ್ದಾರೆ. ಹೀಗಾಗಿ ವಿಶೇಷ ಆಯೋಗ ರಚನೆ ಮಾಡುವಂತೆ ಸರ್ಕಾರಕ್ಕೆ ಆದೇಶ ನೀಡುವಂತೆ ಕೋರಿದ್ದಾರೆ.
ಪಂಚಾಯತ್ ರಾಜ್ ಚುನಾವಣೆಯಲ್ಲಿ ಹಿಂದುಳಿದ ವರ್ಗಗಳಿಗೆ ಶೇ.42 ಮೀಸಲಾತಿ ಜಾರಿಗೊಳಿಸುವುದಾಗಿ ಕಾಂಗ್ರೆಸ್ ಈ ಹಿಂದೆ ಭರವಸೆ ನೀಡಿತ್ತು. ಕೃಷ್ಣಯ್ಯ ಅವರು ಇತ್ತೀಚೆಗೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರಿಗೆ ಚುನಾವಣಾ ಭರವಸೆಯನ್ನು ಜಾರಿಗೊಳಿಸುವಂತೆ ಪತ್ರ ಬರೆದಿದ್ದರು.
ಪತ್ರದಲ್ಲಿ ಅವರು ಕಾನೂನಾತ್ಮಕ ಸಮಸ್ಯೆಗಳು ಅಥವಾ 50% ಮೀಸಲಾತಿಯ ಮೇಲಿನ ಸುಪ್ರೀಂ ಕೋರ್ಟ್ ಮಿತಿಯನ್ನು ಉಲ್ಲೇಖಿಸಿ ಸರ್ಕಾರವು ಹಿಂದುಳಿದ ವರ್ಗಗಳಿಗೆ ಮೀಸಲಾತಿ ಹೆಚ್ಚಳದಿಂದ ತಪ್ಪಿಸಿಕೊಳ್ಳಲು ಸಾಧ್ಯವಿಲ್ಲ ಎಂದು ಅವರು ಹೇಳಿದ್ದಾರೆ. ಕಾಂಗ್ರೆಸ್ ಪಕ್ಷದ ಭರವಸೆಯಾಗಿರುವ ಸ್ಥಳೀಯ ಸಂಸ್ಥೆ ಚುನಾವಣೆಯಲ್ಲಿ ಶೇ.42ರಷ್ಟು ಮೀಸಲಾತಿಯನ್ನು ವಿಧಾನಸಭೆಯಲ್ಲಿ ನಿರ್ಣಯ ಅಂಗೀಕರಿಸಿ ಜಾರಿಗೊಳಿಸಬಹುದು ಎಂದು ಅವರು ಹೇಳಿದ್ದರು.
ಇದನ್ನೂ ಓದಿ: ಬಾಬರಿ ಮಸೀದಿ ಒಡೆದು ಕಟ್ಟಿರುವ ರಾಮ ಮಂದಿರದ ಮೂರ್ತಿಯ ಶಿಲ್ಪಿಗೂ ರಾಜ್ಯೋತ್ಸವ ಪ್ರಶಸ್ತಿ!
ಬಾಬರಿ ಮಸೀದಿ ಒಡೆದು ಕಟ್ಟಿರುವ ರಾಮ ಮಂದಿರದ ಮೂರ್ತಿಯ ಶಿಲ್ಪಿಗೂ ರಾಜ್ಯೋತ್ಸವ ಪ್ರಶಸ್ತಿ!


