Homeಮುಖಪುಟ16 ವರ್ಷದ ಬಾಲಕಿಯ ಮೇಲೆ ಅತ್ಯಾಚಾರ ಆರೋಪ; ಬೆಂಗಳೂರಿನಲ್ಲಿ ಬ್ಯಾಡ್ಮಿಂಟನ್ ತರಬೇತುದಾರನ ಬಂಧನ

16 ವರ್ಷದ ಬಾಲಕಿಯ ಮೇಲೆ ಅತ್ಯಾಚಾರ ಆರೋಪ; ಬೆಂಗಳೂರಿನಲ್ಲಿ ಬ್ಯಾಡ್ಮಿಂಟನ್ ತರಬೇತುದಾರನ ಬಂಧನ

- Advertisement -
- Advertisement -

ತನ್ನ ಬಳಿ ತರಬೇತಿ ಪಡೆಯುತ್ತಿದ್ದ 16 ವರ್ಷದ ಬಾಲಕಿಯ ಮೇಲೆ ಅತ್ಯಾಚಾರ ಎಸಗಿದ ಆರೋಪದ ಮೇಲೆ ಬ್ಯಾಡ್ಮಿಂಟನ್ ತರಬೇತುದಾರನನ್ನು ಬಂಧಿಸಲಾಗಿದೆ ಎಂದು ಬೆಂಗಳೂರು ಪೊಲೀಸರು ಸೋಮವಾರ ತಿಳಿಸಿದ್ದಾರೆ.

ಬಾಲಕಿಯ ಅಜ್ಜಿ, ಆಕೆಯ (ಅಜ್ಜಿಯ) ಫೋನ್‌ನಿಂದ ಕೆಲವು ನಗ್ನ ಚಿತ್ರಗಳನ್ನು ಅಪರಿಚಿತ ಸಂಖ್ಯೆಗೆ ಕಳುಹಿಸಿರುವುದನ್ನು ನೋಡಿದ ನಂತರ ಈ ವಿಷಯ ಬೆಳಕಿಗೆ ಬಂದಿದೆ. ಅವರು ತಕ್ಷಣ ತನ್ನ ಪೋಷಕರಿಗೆ ತಿಳಿಸಿದ್ದಾರೆ ಎಂದು ಪೊಲೀಸರು ಹೇಳಿದರು.

ಈ ಬಗ್ಗೆ ತಾಯಿ ಪ್ರಶ್ನಿಸಿದಾಗ, ಹೆಚ್ಚುವರಿ ತರಬೇತಿ ಅವಧಿಗಳನ್ನು ನೀಡುವ ನೆಪದಲ್ಲಿ ತರಬೇತುದಾರ ತನ್ನ ಮೇಲೆ ಹಲವು ಬಾರಿ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ ಎಂದು ಬಾಲಕಿ ಬಹಿರಂಗಪಡಿಸಿದ್ದಾಳೆ. ಅದರ ಬಗ್ಗೆ ಯಾರಿಗೂ ಬಹಿರಂಗಪಡಿಸದಂತೆ ಬೆದರಿಕೆ ಹಾಕಿದ್ದ ಎಂದು ಪೊಲೀಸರು ತಿಳಿಸಿದ್ದಾರೆ.

ಪೊಲೀಸರ ಪ್ರಕಾರ, ಸಂತ್ರಸ್ತೆಯ ತಾಯಿ ದೂರಿನಲ್ಲಿ ತಮ್ಮ ಮಗಳು ಎರಡು ವರ್ಷಗಳ ಹಿಂದೆ ಇಲ್ಲಿನ ಕ್ರೀಡಾ ಕೇಂದ್ರವೊಂದರಲ್ಲಿ ಬ್ಯಾಡ್ಮಿಂಟನ್ ತರಬೇತಿಗೆ ದಾಖಲಾಗಿದ್ದಳು ಎಂದು ಹೇಳಿದ್ದಾರೆ. ತರಬೇತುದಾರ ಆಕೆಯನ್ನು ಹಲವು ಬಾರಿ ಲೈಂಗಿಕ ದೌರ್ಜನ್ಯ ಎಸಗಿದ್ದು, ಕಿರುಕುಳ ನೀಡಿದ್ದಾನೆ ಎಂದು ಆರೋಪಿಸಲಾಗಿದೆ. ಅವನು ಆಕೆಯನ್ನು ತನ್ನ ಮನೆಗೆ ಕರೆದೊಯ್ದು ಅಲ್ಲಿ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ ಎಂದು ಆರೋಪಿಸಿದ್ದಾರೆ.

10ನೇ ತರಗತಿ ಪರೀಕ್ಷೆಯ ನಂತರ, ಬಾಲಕಿ ತನ್ನ ಅಜ್ಜಿಯ ಮನೆಗೆ ಹೋಗಿದ್ದಳು. ಮಾರ್ಚ್ 30 ರಂದು ತನ್ನ ಅಜ್ಜಿಯ ಮೊಬೈಲ್ ಫೋನ್‌ನಿಂದ ತನ್ನ ನಗ್ನ ಫೋಟೋಗಳನ್ನು ತರಬೇತುದಾರನಿಗೆ ಅವನ ಒತ್ತಾಯದ ಮೇರೆಗೆ ಕಳುಹಿಸಿದ್ದಾಳೆ ಎಂದು ದೂರುದಾರರು ಆರೋಪಿಸಿದ್ದಾರೆ.

ದೂರಿನ ಆಧಾರದ ಮೇಲೆ, ತಮಿಳುನಾಡು ಮೂಲದ ತರಬೇತುದಾರನ ವಿರುದ್ಧ ಲೈಂಗಿಕ ಅಪರಾಧಗಳಿಂದ ಮಕ್ಕಳ ರಕ್ಷಣೆ (ಪೋಕ್ಸೊ) ಕಾಯ್ದೆಯಡಿಯಲ್ಲಿ ಪ್ರಕರಣ ದಾಖಲಿಸಲಾಗಿದ್ದು, ಗುರುವಾರ ಪ್ರಕರಣದಲ್ಲಿ ಆತನನ್ನು ಬಂಧಿಸಲಾಗಿದೆ ಎಂದು ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ವಿಚಾರಣೆಯ ಸಮಯದಲ್ಲಿ, ಆರೋಪಿಯು ಬಾಲಕಿಯ ಮೇಲೆ ಹಲವು ಬಾರಿ ಲೈಂಗಿಕ ದೌರ್ಜನ್ಯ ಎಸಗಿರುವುದಾಗಿ, ಆಕೆಯ ನಗ್ನ ಫೋಟೋಗಳನ್ನು ತೆಗೆದುಕೊಂಡಿರುವುದಾಗಿ ಒಪ್ಪಿಕೊಂಡಿದ್ದಾನೆ. ಅದು ಅವನ ಫೋನ್‌ನಲ್ಲಿಯೂ ಕಂಡುಬಂದಿದೆ. ಅವನ ಫೋನ್‌ನಲ್ಲಿ ಇತರ ಹುಡುಗಿಯರ ನಗ್ನ ಫೋಟೋಗಳು ಸಹ ಕಂಡುಬಂದಿವೆ ಎಂದು ಅಧಿಕಾರಿ ಮಾಹಿತಿ ನೀಡಿದ್ದಾರೆ.

ಬಿಟಿಎಂ ಲೇಔಟ್‌ ಲೈಂಗಿಕ ದೌರ್ಜನ್ಯ ಪ್ರಕರಣ; ‘ದೊಡ್ಡ ನಗರಗಳಲ್ಲಿ ಅಲ್ಲೊಂದು ಇಲ್ಲೊಂದು ನಡೆಯುತ್ತವೆ’ ಎಂದ ಪರಮೇಶ್ವರ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೊಡಗಿನ ಆದಿವಾಸಿ ಹಾಡಿಗಳಲ್ಲಿ ಎಸ್‌ಐಆರ್ ಅವ್ಯವಸ್ಥೆ : ಬಿಎಲ್‌ಒಗಳಿಗೆ ತರಬೇತಿಯ ಕೊರತೆ, ಇನ್ನೂ ತಲುಪದ ಗಣತಿ ಫಾರಂ

ಕರ್ನಾಟಕದಲ್ಲಿ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆ ಬಹಳ ಯಶಸ್ವಿಯಾಗಿ ನಡೆಯುತ್ತಿದೆ, ಮತದಾರರಿಗೆ ಎಲ್ಲಾ ರೀತಿಯ ಸಹಾಯಗಳನ್ನು ಒದಗಿಸಲಾಗುತ್ತಿದೆ ಎಂದು ರಾಜ್ಯ ಮುಖ್ಯ ಚುನಾವಣಾ ಆಯುಕ್ತ ಅನ್ಬುಕುಮಾರ್ ಅವರು ಪದೇ...

SIR: ಉಡುಪಿಯಲ್ಲಿ ಕರ್ತವ್ಯನಿರತ BLO ಮೇಲೆ ಹಲ್ಲೆಗೆತ್ನಿಸಿದ ಮಾಜಿ ಪಂಚಾಯತ್ ಅಧ್ಯಕ್ಷ, FIR ದಾಖಲು

ಚುನಾವಣಾ ಮತದಾರರ ಪಟ್ಟಿ ಪರಿಷ್ಕರಣೆ (SIR) ಕರ್ತವ್ಯದಲ್ಲಿದ್ದ ಅಂಗನವಾಡಿ ಕಾರ್ಯಕರ್ತೆ ಹಾಗೂ ಬಿಎಲ್‌ಒ (BLO) ಮಹಿಳೆ ಮೇಲೆ ಕರ್ತವ್ಯಕ್ಕೆ ಅಡ್ಡಿಪಡಿಸಿ, ಅವಾಚ್ಯ ಶಬ್ದಗಳಿಂದ ನಿಂದಿಸಿ, ಕೊಲೆ ಬೆದರಿಕೆ ಹಾಕಿದ ಗಂಭೀರ ಆರೋಪ ಉಡುಪಿ...

ಕೋಟ್ಯಾಂತರ ವಿದ್ಯಾರ್ಥಿಗಳ ಭವಿಷ್ಯದ ಜೊತೆ NTA ಚೆಲ್ಲಾಟ: RTI ನಲ್ಲಿ ಬಯಲಾಯ್ತು NTA ಕರ್ಮಕಾಂಡ

ನ್ಯಾಷನಲ್ ಟೆಸ್ಟಿಂಗ್ ಏಜೆನ್ಸಿ (NTA) ಎನ್ನುವ ಈ ಸರ್ಕಾರಿ ಸಂಸ್ಥೆಯ ಮೇಲೆ ಪ್ರತಿವರ್ಷ ಕೋಟ್ಯಂತರ ವಿದ್ಯಾರ್ಥಿಗಳು ತಮ್ಮ ಭವಿಷ್ಯದ ಕನಸುಗಳನ್ನು ಇಟ್ಟುಕೊಳ್ಳುತ್ತಾರೆ. 2018ರಲ್ಲಿ ಸ್ಥಾಪನೆಯಾದ ದಿನದಿಂದ ಇಲ್ಲಿಯವರೆಗೆ ಎನ್‌ಟಿಎ ಸುಮಾರು 270ಕ್ಕೂ ಹೆಚ್ಚು...

ಬಾಗಲಕೋಟೆ: ಪತಿಯಿಂದ 23 ವರ್ಷದ ಪತ್ನಿಯ ಕ್ರೂರ ಕೊಲೆ, ಪೋಷಕರಿಗೆ ವೀಡಿಯೊ ಕರೆ ಮಾಡಿ ಮಗಳ ಸಾವು-ಬದುಕಿನ ಹೋರಾಟ ತೋರಿಸಿದ ವಿಕೃತ ಪತಿ

ಬಾಗಲಕೋಟೆ: ಪತಿಯೋರ್ವ ತನ್ನ 23 ವರ್ಷದ ಪತ್ನಿಯ ಮೇಲೆ ವಿವಾಹೇತರ ಅನೈತಿಕ ಸಂಬಂಧದ ಶಂಕೆ ವ್ಯಕ್ತಪಡಿಸಿ, ಆಕೆಯ ಮೇಲೆ ಮರದ ದಿಮ್ಮಿಯಿಂದ ಕ್ರೂರವಾಗಿ ಹಲ್ಲೆ ನಡೆಸಿ, ತದನಂತರ ನೇಣಿಗೆ ಬಿಗಿದು ಅತ್ಯಂತ ಅಮಾನವೀಯವಾಗಿ...

ಕಾನೂನು-ಸುವ್ಯವಸ್ಥೆಗೆ ವಿದ್ಯಾರ್ಥಿಗಳು ಸಮಸ್ಯೆಯಾಗುತ್ತಾರೆ ಎಂದು ಪರಿಗಣಿಸಿದ್ದು ಏಕೆ: ಅಭಿಷೇಕ್ ಬ್ಯಾನರ್ಜಿ

ರಾಷ್ಟ್ರ ರಾಜಧಾನಿ ದೆಹಲಿ ಮತ್ತು ದೆಶದಾದ್ಯಂತ ಕಾಕ್ರೋಚ್ ಜನತಾ ಪಕ್ಷದ (ಸಿಜೆಪಿ) ನೇತೃತ್ವದಲ್ಲಿ ನಡೆದ ಪ್ರತಿಭಟನೆಗಳ ಸಂದರ್ಭದಲ್ಲಿ ವಿದ್ಯಾರ್ಥಿಗಳ ಮೇಲೆ ನಡೆದ ಭಾರೀ ಪೊಲೀಸ್ ಬಲಪ್ರಯೋವನ್ನು ವಿಪಕ್ಷಗಳು ಇಂದು ಲೋಕಸಭೆಯಲ್ಲಿ ಖಂಡಿಸಿವೆ. ವಿದ್ಯಾರ್ಥಿಗಳ...

ಪಬ್ಲಿಕ್ ಟಿವಿ ನಿರೂಪಕ ಅರುಣ್ ಬಡಿಗೇರ್ ವಿರುದ್ದ ಮೈಸೂರಿನಲ್ಲಿ ದೂರು ದಾಖಲು

ಸಂವಿಧಾನಬದ್ಧ ಮೀಸಲಾತಿಯ ಕುರಿತು ಅತ್ಯಂತ ನಿಂದನಾತ್ಮಕ, ಅವಹೇಳನಕಾರಿ ಹಾಗೂ ಸಮಾಜದಲ್ಲಿ ದ್ವೇಷ ಪ್ರಚೋದಿಸುವ ರೀತಿಯ ಹೇಳಿಕೆ ನೀಡಿರುವ 'ಪಬ್ಲಿಕ್ ಟಿವಿ' ನಿರೂಪಕ ಅರುಣ್ ಬಡಿಗೇರ್ ವಿರುದ್ಧ ಮೈಸೂರಿನಲ್ಲಿ ಕಾನೂನು ಕ್ರಮಕ್ಕೆ ಆಗ್ರಹಿಸಿ ಪೊಲೀಸ್‌...

ಕೇರಳ: ತಪ್ಪು ಪ್ರಕರಣದಲ್ಲಿ ಪೊಲೀಸರಿಂದ ಚಿತ್ರಹಿಂಸೆ: 29 ವರ್ಷದ ಮುಸ್ಲಿಂ ಯುವಕ ಸಾವು: ಕುಟುಂಬಕ್ಕಿದ್ದ ಒಂದೇ ಆಧಾರ ಕಳೆದುಕೊಂಡ ಪೋಷಕರು

ತಪ್ಪು ಗ್ರಹಿಕೆಯಿಂದ ಪೊಲೀಸ್ ಕಸ್ಟಡಿಗೆ ಪಡೆದ 29 ವರ್ಷದ ಮುಸ್ಲಿಂ ಯುವಕನೋರ್ವ, ಪೊಲೀಸರ ಕಠೋರ ಕಸ್ಟಡಿ ಚಿತ್ರಹಿಂಸೆಯಿಂದಾಗಿ ಪಕ್ಕೆಲುಬು ಮುರಿತಕ್ಕೊಳಗಾಗಿ, ಶ್ವಾಸಕೋಶದ ಸೋಂಕು ತೀವ್ರಗೊಂಡು ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿರುವ ಅಮಾನವೀಯ ಹಾಗೂ ಆಘಾತಕಾರಿ...

ಮಾಧ್ಯಮ ತನಿಖಾ ವರದಿಗೆ ಹೆದರಿ ₹ 99 ಲಕ್ಷ ಸಬ್ಸಿಡಿ ವಾಪಸ್ ಮಾಡಿದ ಕೇಂದ್ರ BJP ಸಚಿವ

ತಮ್ಮದೇ ಸಚಿವಾಲಯದ ಯೋಜನೆಯಡಿ ಬರೋಬ್ಬರಿ 99 ಲಕ್ಷ ರೂಪಾಯಿ ಸರ್ಕಾರಿ ಸಬ್ಸಿಡಿ ಪಡೆದು ಸಾರ್ವಜನಿಕರ ಆಕ್ರೋಶಕ್ಕೆ ಗುರಿಯಾಗಿದ್ದ ಕೇಂದ್ರ ಕೃಷಿ ಮತ್ತು ರೈತರ ಕಲ್ಯಾಣ ರಾಜ್ಯ ಸಚಿವ ಭಾಗೀರಥ್ ಚೌಧರಿ, ಕೊನೆಗೂ ಆ...

ಕಾಮನ್‌ವೆಲ್ತ್ ಕ್ರೀಡಾಕೂಟ: ಚಿನ್ನದ ಪದಕ ಗೆದ್ದ ಭಾರತದ ಮೊದಲ ಪ್ಯಾರಾ-ಅಥ್ಲೀಟ್ ಶರ್ಮಿಳಾ ಧನ್ಖರ್

ಎರಡು ವರ್ಷವಿದ್ದಾಗ ಪೋಲಿಯೊದಿಂದ ಅಂಗವಿಕಲಳಾಗಿ, ಬಾಲ್ಯದಲ್ಲಿ ದೌರ್ಜನ್ಯಕ್ಕೊಳಗಾದ, ವಿವಾಹದ ಆಘಾತದಿಂದ ಬದುಕುಳಿದ ಮಹಿಳೆ ಶರ್ಮಿಳಾ ಧನ್ಖರ್, ಕಾಮನ್‌ವೆಲ್ತ್ ಕ್ರೀಡಾಕೂಟದಲ್ಲಿ ಚಿನ್ನದ ಪದಕ ಗೆದ್ದ ಭಾರತದ ಮೊದಲ ಪ್ಯಾರಾ-ಅಥ್ಲೀಟ್ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ. ಗ್ಲ್ಯಾಸ್ಗೋದಲ್ಲಿ...

ಬಿಹಾರ: ವಿದ್ಯಾರ್ಥಿಗಳ ವಿರುದ್ಧ ಎಕೆ-47 ರೈಫಲ್ ಬಳಕೆ: ಗುಂಡು ಹಾರಿಸಲು ಆದೇಶಿಸಿದವರ ವಿರುದ್ಧ ತನಿಖೆಗೆ ಮನೋಜ್ ಝಾ ಆಗ್ರಹ; ಸುಪ್ರೀಂ ಮೆಟ್ಟಿಲೇರಿದ ಪ್ರಕರಣ

ನೀಟ್ (NEET) ಪ್ರಶ್ನೆ ಪತ್ರಿಕೆ ಸೋರಿಕೆ ಆರೋಪವನ್ನು ಖಂಡಿಸಿ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ, ಬಿಹಾರದ ಸಿವಾನ್ ಜಿಲ್ಲೆಯಲ್ಲಿ ಪೊಲೀಸ್ ಸಿಬ್ಬಂದಿಯೊಬ್ಬರು ಎಕೆ-47 ರೈಫಲ್‌ನಿಂದ ಗಾಳಿಯಲ್ಲಿ ಗುಂಡು ಹಾರಿಸುತ್ತಿದ್ದ ವೀಡಿಯೊ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್...