Homeಕರ್ನಾಟಕಶಾಲಾ ಮಕ್ಕಳ ಬ್ಯಾಗ್ ತೂಕ 1.5 ಕೆ.ಜಿ.ಯಿಂದ 5ಕೆ.ಜಿ.ವರೆಗೆ ನಿಗದಿ: ಸರ್ಕಾರದ ಸುತ್ತೋಲೆ

ಶಾಲಾ ಮಕ್ಕಳ ಬ್ಯಾಗ್ ತೂಕ 1.5 ಕೆ.ಜಿ.ಯಿಂದ 5ಕೆ.ಜಿ.ವರೆಗೆ ನಿಗದಿ: ಸರ್ಕಾರದ ಸುತ್ತೋಲೆ

- Advertisement -
- Advertisement -

ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯು, ಶಾಲಾ ಮಕ್ಕಳ ಬ್ಯಾಗ್ ಹೊರೆ ತಗ್ಗಿಸಲು ಮುಂದಾಗಿದ್ದು, 1ರಿಂದ 10ನೇ ತರಗತಿಯ ಮಕ್ಕಳ ಬ್ಯಾಗ್ ತೂಕದ ಹೊರೆಯನ್ನು 1.5 ಕೆ.ಜಿ.ಯಿಂದ 5ಕೆ.ಜಿ.ವರೆಗೆ ನಿಗದಿ ಮಾಡಿ ಸುತ್ತೋಲೆ ಹೊರಡಿಸಿದೆ.

1993ರಲ್ಲಿ ನೇಮಿಸಿದ್ದ ಯಶಪಾಲ ವರ್ಮ ಸಮಿತಿಯ ‘ಹೊರೆ ಇಲ್ಲದ ಕಲಿಕೆ’ ವರದಿ, ಕೇಂದ್ರ ಸರ್ಕಾರದ ‘ಶಾಲಾ ಬ್ಯಾಗ್ ನೀತಿ-2020’ ಹಾಗೂ ಮೂಳೆ ತಜ್ಞರ ಶಿಫಾರಸಿನಂತೆ ಮಕ್ಕಳು ಅವರ ದೇಹದ ತೂಕದ ಶೇ 10ರಿಂದ 15ರಷ್ಟು ಭಾರ ಹೊರಬಹುದು ಎಂಬ ಅಂಶಗಳ ಆಧಾರದಲ್ಲಿ ಈ ಸುತ್ತೋಲೆ ಹೊರಡಿಸಲಾಗಿದೆ.

ತರಗತಿಗನುಸಾರ ಬ್ಯಾಗ್ ತೂಕ

  • 1ರಿಂದ 2ನೇ ತರಗತಿಯ ಮಕ್ಕಳಿಗೆ-1.5ರಿಂದ 2 ಕೆ.ಜಿ,
  • 3ರಿಂದ 5ನೇ ತರಗತಿ ಮಕ್ಕಳಿಗೆ- 2ರಿಂದ 3 ಕೆ.ಜಿ,
  • 6ರಿಂದ 8 ತರಗತಿ 3ರಿಂದ 4 ಕೆ.ಜಿ,
  • 9ರಿಂದ 10ನೇ ತರಗತಿ ಮಕ್ಕಳಿಗೆ 4ರಿಂದ 5 ಕೆ.ಜಿ.ವರೆಗೆ ನಿಗದಿ ಮಾಡಲಾಗಿದೆ.

ನಿಯಮಗಳು: ಶಾಲಾ ಶಿಕ್ಷಕರು ಅಗತ್ಯಕ್ಕೆ ತಕ್ಕಂತೆ ಅಂದಿನ ಪಠ್ಯಪುಸ್ತಕ ಹಾಗೂ ಇತರೆ ಕಲಿಕಾ ಸಾಮಗ್ರಿಗಳನ್ನು ಮಾತ್ರ ತರುವಂತೆ ನೋಡಿಕೊಳ್ಳಬೇಕು. 200 ಪುಟ ಮೀರದ ನೊಟ್‌ಬುಕ್ ಬಳಸಲು ಸೂಚಿಸಬೇಕು. ಶಾಲೆಗಳಲ್ಲೇ ಕುಡಿಯುವ ನೀರಿನ ವ್ಯವಸ್ಥೆ ಕಲ್ಪಿಸಬೇಕು. ಶಾಲಾ ಬ್ಯಾಗ್ ಹೊರೆಯಿಂದ ಆಗುವ ದುಷ್ಪರಿಣಾಮಗಳನ್ನು ಪೋಷಕರಿಗೆ ಮನವರಿಕೆ ಮಾಡಿಕೊಡಬೇಕು. ನಿಯಮ ಉಲ್ಲಂಘಿಸುವ ಶಿಕ್ಷಕರು, ಶಾಲೆಗಳ ವಿರುದ್ಧ ಕ್ರಮ ಕೈಗೊಳ್ಳಲಾಗುವುದು ಎಂದು ಎಚ್ಚರಿಸಲಾಗಿದೆ.

ಮಕ್ಕಳ ಬ್ಯಾಗ್ ತೂಕ ಇಳಿಕೆಗೆ ನಿರ್ದೇಶನ ಕೋರಿ ಅರ್ಜಿ: ಅರೆಬೆಂದ ಅರ್ಜಿ ಎಂದು ಹೈಕೋರ್ಟ್‌ ಗರಂ

ಪ್ರಾಥಮಿಕ ಶಾಲಾ ಮಕ್ಕಳ ಬ್ಯಾಗ್ ತೂಕ ಇಳಿಕೆ ಮಾಡಲು ಸರ್ಕಾರಕ್ಕೆ ನಿರ್ದೇಶನ ನೀಡಬೇಕು ಎಂದು ಕೋರಿ ಅರ್ಜಿ ಕೋರಲಾಗಿತ್ತು. ಇದಕ್ಕೆ ಹೈಕೋರ್ಟ್, ಇದಕ್ಕೆ ಯಾವುದೇ ಪುರಾವೆಗಳಿಲ್ಲ, ಇದೊಂದು ಅರೆಬೆಂದ ಅರ್ಜಿ ಎಂದು ವಜಾಗೊಳಿಸಿದೆ.

ಎಲ್. ರಮೇಶ್ ನಾಯಕ್ ಸಲ್ಲಿಸಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ಮುಖ್ಯ ನ್ಯಾಯಮೂರ್ತಿ ಪಿ.ಬಿ.ವರಾಳೆ ನೇತೃತ್ವದ ವಿಭಾಗೀಯ ನ್ಯಾಯಪೀಠ ಬುಧವಾರ ವಿಚಾರಣೆ ನಡೆಸಿತು.

ಅರ್ಜಿ ವಿಚಾರಣೆ ಆಲಿಸಿದ ನ್ಯಾಯಪೀಠ, ”ವಿಷಯವೇನೊ ಗಂಭೀರವಾಗಿದೆ. ಆದರೆ, ಅರ್ಜಿದಾರರು ಅಧಿಕಾರಿಗಳಿಗೆ ಇ- ಮೇಲ್ ಮೂಲಕ ಮನವಿ ಸಲ್ಲಿಸಿರುವುದನ್ನು ಬಿಟ್ಟರೆ ಬೇರಾವುದೇ ಪ್ರಯತ್ನ ಮಾಡಿಲ್ಲ. ಶಾಲೆಗಳಿಗೆ ಖುದ್ದು ಭೇಟಿ ಕೊಟ್ಟು ಸಮಸ್ಯೆ ಅರಿತಿದ್ದೇನೆ ಎಂಬ ಅವರ ವಾದಕ್ಕೆ ಪೂರಕವಾದ ಯಾವುದೇ ಪುರಾವೆಗಳು ಕಾಣಿಸುತ್ತಿಲ್ಲ. ಅಗತ್ಯ ಮಾಹಿತಿ ಕಲೆ ಹಾಕಿದ ನಂತರ ಕೋರ್ಟ್‌ ಗೆ ಬರಬಹುದಿತ್ತು” ಎಂಬ ಅಭಿಪ್ರಾಯ ವ್ಯಕ್ತಪಡಿಸಿತು.

ಮೊದಲು ಅರ್ಜಿ ವಜಾಗೊಳಿಸಿದ ನ್ಯಾಯಪೀಠ, ಬಳಿಕ ಅರ್ಜಿದಾರರ ಮನವಿಯಂತೆ ಹೊಸದಾಗಿ ಅರ್ಜಿ ಸಲ್ಲಿಸಲು ಅನುಮತಿ ನೀಡಿ ವಿಲೇವಾರಿ ಮಾಡಿತು.

”ಮಕ್ಕಳ ಬ್ಯಾಗ್ ತೂಕದ ಮಿತಿ ಇಷ್ಟೇ ಇರಬೇಕೆಂದು 2020ರಲ್ಲಿ ಕೇಂದ್ರ ಸರ್ಕಾರ ರೂಪಿಸಿರುವ ನಿಯಮ ಪಾಲನೆಯಾಗುತ್ತಿಲ್ಲ. ಆರೋಗ್ಯ ತಜ್ಞರ ಪ್ರಕಾರ ಭಾರಿ ತೂಕದ ಶಾಲಾ ಬ್ಯಾಗ್ ಮಕ್ಕಳ ಆರೋಗ್ಯದ ಮೇಲೆ ಗಂಭೀರ ಪರಿಣಾಮ ಬೀರುತ್ತದೆ. ಆದ್ದರಿಂದ, ಸಂವಿಧಾನದ 21ನೇ ವಿಧಿಯಡಿ ಸರ್ಕಾರಕ್ಕೆ ಸ್ಪಷ್ಟ ನಿರ್ದೇಶನ ನೀಡಬೇಕು” ಎಂದು ಅರ್ಜಿಯಲ್ಲಿ ಕೋರಲಾಗಿತ್ತು.

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ಕೆನಡಾದ ಸಾರ್ವತ್ರಿಕ ಚುನಾವಣೆಗೆ ಭಾರತದಿಂದ ‘ಆಯ್ಧ ಅಭ್ಯರ್ಥಿಗಳಿಗೆ’ ರಹಸ್ಯವಾಗಿ ಹಣಕಾಸಿನ ನೆರವು: ವರದಿ

0
2021ರ ಸಾರ್ವತ್ರಿಕ ಚುನಾವಣೆಯ ಸಮಯದಲ್ಲಿ ಆಯ್ದ ಅಭ್ಯರ್ಥಿಗಳಿಗೆ ರಹಸ್ಯವಾಗಿ ಹಣಕಾಸಿನ ನೆರವು ನೀಡಲು ಭಾರತ ಸರ್ಕಾರವು ತನ್ನ ಪ್ರಾಕ್ಸಿ ಏಜೆಂಟ್‌ಗಳ ಮೂಲಕ ಪ್ರಯತ್ನಿಸಿರಬಹುದು ಎಂದು ಕೆನಡಾದಲ್ಲಿ ವಿದೇಶಿ ಹಸ್ತಕ್ಷೇಪದ ಕುರಿತು ತನಿಖೆ ನಡೆಸುತ್ತಿರುವ ಕೆನಡಾದ...