PC: Pxfuel (CC0)

ಬಾಗಲಕೋಟೆಯ ಇಳಕಲ್ ಪಟ್ಟಣದಲ್ಲಿ 15 ವರ್ಷದ 9 ನೇ ತರಗತಿಯಲ್ಲಿ ವ್ಯಾಸಂಗ ಮಾಡುತ್ತಿದ್ದ ಬಾಲಕ, ತಲೆಗೆ ಟೋಪಿ ಧರಿಸಿ ಖಾಸಗಿ ಟ್ಯೂಷನ್‌ಗೆ ಬಂದಿದ್ದ ಬಾಲಕನನ್ನು ಚುಡಾಯಿಸಿದ್ದ. ಇದು ಎರಡು ಧಾರ್ಮಿಕ ಸಂಘಟನೆಗಳ ಸದಸ್ಯರ ನಡುವೆ ಘರ್ಷಣೆಗೆ ಕಾರಣವಾಗಿತ್ತು, ಪ್ರಕರಣದಲ್ಲಿ 8 ಮಂದಿಯನ್ನು ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

“ಬಾಲಕನೊಬ್ಬ ತಲೆಗೆ ಟೋಪಿ ಧರಿಸಿ ಖಾಸಗಿ ಟ್ಯುಟೋರಿಯಲ್‌ಗೆ ಬಂದಿದ್ದಾಗ ಗೇಲಿ ಮಾಡಿದ್ದಾನೆ. ಬೇಸರಗೊಂಡ ಬಾಲಕ ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ (ಪಿಎಫ್‌ಐ) ಸದಸ್ಯರಾದ ತನ್ನ ಸ್ನೇಹಿತರಿಗೆ ಹೇಳಿದ್ದಾರೆ. ನಂತರ ಅವರು ಗೇಲಿ ಮಾಡಿದ ಬಾಲಕನಿಗೆ ಕಪಾಳಮೋಕ್ಷ ಮಾಡಿದ್ದಾರೆ” ಎಂದು ಪೊಲೀಸ್ ಅಧಿಕಾರಿ ತಿಳಿಸಿದ್ದಾರೆ.

“ಹೊಡೆತ ತಿಂದ ಹುಡುಗ ಇದನ್ನು ಹಿಂದೂ ಸಂಘಟನೆಯ ಸದಸ್ಯರಾದ ತನ್ನ ಸ್ನೇಹಿತರಿಗೆ ವಿವರಿಸಿದ್ದಾನೆ. ಅವರು ಬಂದು ಮುಸ್ಲಿಂ ಬಾಲಕ ಮತ್ತು ಆತನ ಸ್ನೇಹಿತರನ್ನು ಥಳಿಸಿದ್ದಾರೆ. ಪಿಎಫ್‌ಐ ಸದಸ್ಯರು ಮತ್ತೊಮ್ಮೆ 15 ವರ್ಷದ ಹಿಂದೂ ಹುಡುಗನ ಮೇಲೆ ಹಲ್ಲೆ ನಡೆಸಿದ್ದಾರೆ. ಇದರಿಂದ ಎರಡೂ ಧಾರ್ಮಿಕ ಸಂಘಟನೆಗಳ ಸದಸ್ಯರ ನಡುವೆ ಗಲಾಟೆ ನಡೆದಿದೆ” ಎಂದು ಹೇಳಿದ್ದಾರೆ.

ಇದನ್ನೂ ಓದಿ: ಮಂಗಳೂರು: ಮತ್ತೊಂದು ಅನೈತಿಕ ಪೊಲೀಸ್‌ಗಿರಿ; ಇಬ್ಬರು ಬಜರಂಗದಳ ಕಾರ್ಯಕರ್ತರ ಬಂಧನ

 

ಎರಡೂ ಧಾರ್ಮಿಕ ಸಂಘಟನೆಯ ಸುಮಾರು ಎಂಟು ಜನರನ್ನು ಪೊಲೀಸರು ಬಂಧಿಸಿದ್ದಾರೆ. ಇಳಕಲ್ ಟೌನ್ ಪೊಲೀಸ್ ಠಾಣೆಯಲ್ಲಿ ಎರಡು ಪ್ರತ್ಯೇಕ ದೂರುಗಳು ದಾಖಲಾಗಿವೆ.

“ಸಣ್ಣ ಕಾರಣಕ್ಕಾಗಿ ಇಬ್ಬರು ಅಪ್ರಾಪ್ತರ ನಡುವೆ ನಡೆದ ಜಗಳವನ್ನು ಎರಡೂ ಧಾರ್ಮಿಕ ಸಂಘಟನೆಗಳು ದುರ್ಬಳಕೆ ಮಾಡಿಕೊಂಡಿವೆ. ನಾವು ಎರಡೂ ಕಡೆಯಿಂದ ಎರಡು ಪ್ರಕರಣಗಳನ್ನು ದಾಖಲಿಸಿದ್ದೇವೆ. ಪ್ರಕರಣಕ್ಕೆ ಸಂಬಂಧಿಸಿದ ಸುಮಾರು ಎಂಟು ಜನರನ್ನು ವಿಚಾರಣೆಗೆ ಒಳಪಡಿಸಲಾಗಿದೆ” ಎಂದು ಎಸ್‌ಪಿ ಜಗಳಸರ್  ಹೇಳಿಕೆಯನ್ನು ದಿ ನ್ಯೂ ಇಂಡಿಯನ್ ಎಕ್ಸ್‌ಪ್ರೆಸ್‌ ಉಲ್ಲೇಖಿಸಿದೆ.

“ವೈರಲ್ ಆಗಿರುವ ವಿಡಿಯೋದಲ್ಲಿ ಕಾಣಿಸಿಕೊಂಡಿರುವ ಆಸ್ಪತ್ರೆಯಲ್ಲಿ ಕೆಲವರಿಗೆ ಬೆದರಿಕೆ ಹಾಕುತ್ತಿರುವ ವ್ಯಕ್ತಿಯನ್ನು ನಾವು ಬಂಧಿಸುತ್ತೇವೆ. ಆತನ ವಿರುದ್ಧ ಕಠಿಣ ಕ್ರಮ ಕೈಗೊಳ್ಳುತ್ತೇವೆ. ಈ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿದ್ದೇವೆ ಮತ್ತು ಅದರ ಬಗ್ಗೆ ವಿವರವಾದ ತನಿಖೆ ನಡೆಸುತ್ತೇವೆ” ಎಂದು ಎಸ್‌ಪಿ ಹೇಳಿದ್ದಾರೆ.


ಇದನ್ನೂ ಓದಿ: ರಾಜಸ್ಥಾನ: ದಲಿತ ಯುವಕನ ಬರ್ಬರ ಗುಂಪು ಹತ್ಯೆ, ಕಾಂಗ್ರೆಸ್ ವಿರುದ್ಧ ಭುಗಿಲೆದ್ದ ಆಕ್ರೋಶ

Donate

ನ್ಯಾಯದ ಜೊತೆಗಿರಿ

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ

ಜನಪರ ಸ್ವತಂತ್ರ ಪತ್ರಿಕೋದ್ಯಮವೇ ನಮ್ಮ ಆಶಯ. ನಿಮ್ಮಗಳ ಬೆಂಬಲವೇ ನಮಗೆ ಬಲ. ನ್ಯಾಯದ ಜೊತೆಗಿರಲು ಬಯಸುವ, ಸತ್ಯಪಥವನ್ನು ತುಳಿಯಲು ಪ್ರೋತ್ಸಾಹಿಸುವವರು ಬೆಂಬಲಿಸಿ. ಈ ಕೆಳಗಿನ ಲಿಂಕ್‌ ಕ್ಲಿಕ್‌ ಮಾಡಿ ಪಾವತಿಸಬಹುದು.
ಧನ್ಯವಾದಗಳು

Independent journalism can’t be independent without your support, contribute by clicking below.

ಪ್ರತಿವಾರದ ವಿದ್ಯಮಾನಗಳ ವಿಶ್ಲೇಷಣೆಗಳು, ಅಂಕಣಗಳು ಹಾಗೂ ವಿಶೇಷ ಬರಹಗಳನ್ನು ಓದಲು ನ್ಯಾಯಪಥ ಪತ್ರಿಕೆಗೆ ಚಂದಾದಾರರಾಗಿ. ಚಂದಾ ಹಣವನ್ನು ಪಾವತಿಸಲು ಈ ಕೆಳಗಿನ ಲಿಂಕ್‌ ಕ್ಲಿಕ್‌ ಮಾಡಿ.
Avatar
ನಾನು ಗೌರಿ ಡೆಸ್ಕ್
+ posts

LEAVE A REPLY

Please enter your comment!
Please enter your name here