Homeಮುಖಪುಟಬಾಗಲಕೋಟೆ: ಶಿಕ್ಷಕಿಯಿಂದ ಹಣ ಕಳ್ಳತನ ಆರೋಪ, 8ನೇ ತರಗತಿ ವಿದ್ಯಾರ್ಥಿನಿ ಆತ್ಮಹತ್ಯೆ

ಬಾಗಲಕೋಟೆ: ಶಿಕ್ಷಕಿಯಿಂದ ಹಣ ಕಳ್ಳತನ ಆರೋಪ, 8ನೇ ತರಗತಿ ವಿದ್ಯಾರ್ಥಿನಿ ಆತ್ಮಹತ್ಯೆ

- Advertisement -
- Advertisement -

14 ವರ್ಷದ ಶಾಲಾ ಬಾಲಕಿಯೊಬ್ಬಳು ₹2,000 ಹಣ ಕದ್ದಿದ್ದಾಳೆ ಎಂದು ಶಂಕಿಸಿದ ಶಿಕ್ಷಕಿಯಿಬ್ಬರು ಅವಮಾನ ಮಾಡಿದ್ದಾರೆ ಎನ್ನಲಾಗಿದ್ದು, ಮನನೊಂದ ವಿದ್ಯಾರ್ಥಿನಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬಾಗಲಕೋಟೆಯಲ್ಲಿ ನಡೆದಿದೆ. ತನ್ನ ಶಾಲೆಯಲ್ಲಿ ನಡೆದ ಘಟನೆಗಳಿಂದ ಉಂಟಾದ ಅವಮಾನದಿಂದ ಬೇಸರಗೊಂಡಿದ್ದ ಬಾಲಕಿ ಈ ನಿರ್ಧಾರ ಮಾಡಿದ್ದಾಳೆ ಎಂದು ಆಕೆಯ ಕುಟುಂಬದವರು ಪೊಲೀಸ್ ದೂರು ದಾಖಲಿಸಿದ್ದಾರೆ.

ಬಾಗಲಕೋಟೆಯ ಸರ್ಕಾರಿ ಪ್ರೌಢಶಾಲೆಯಲ್ಲಿ ಶಿಕ್ಷಕಿ ಜಯಶ್ರೀ ಮಿಶ್ರಿಕೋಟಿ ಹಾಗೂ ಮುಖ್ಯಶಿಕ್ಷಕ ಕೆ.ಎಚ್.ಮುಜಾವರ ಬಾಲಕಿಗೆ ಕಿರುಕುಳ ನೀಡಿದ ಆರೋಪ ಕೇಳಿಬಂದಿದೆ. ಮಗು ತನ್ನ ಕೈಚೀಲದಿಂದ ₹2000 ಕದ್ದಿರಬಹುದು ಎಂದು ಶಂಕಿಸಿದ ಜಯಶ್ರೀ ಅವರು ಅನುಮಾನ ವ್ಯಕ್ತಪಡಿಸಿದ್ದರು.

ತಪ್ಪಿತಸ್ಥರೆಂದು ಕಂಡುಬಂದರೆ ತನ್ನನ್ನು ಹೊರಹಾಕುವುದಾಗಿ 8ನೇ ತರಗತಿಯ ವಿದ್ಯಾರ್ಥಿನಿಗೆ ಹೇಳಿದ್ದಾಳೆ. ಹಣಕ್ಕಾಗಿ ಬಾಲಕಿಯ ಬಟ್ಟೆಯೊಳಗೆ ಹುಡುಕಲಾಗಿದೆ ಎನ್ನಲಾಗಿದ್ದು, ಅದಕ್ಕೆ ಇನ್ನೂ ಪುರಾವೆಗಳು ಸಿಕ್ಕಿಲ್ಲ ಎಂದು ಪೊಲೀಸರು ಹೇಳಿದ್ದಾರೆ.

ಅಂತ್ಯಕ್ರಿಯೆಯ ನಂತರ ಸಂತ್ರಸ್ತೆಯ ಸಹೋದರಿ ತನ್ನ ಪೋಷಕರೊಂದಿಗೆ ದುಃಖದ ಘಟನೆಯನ್ನು ಹಂಚಿಕೊಂಡ ನಂತರವೇ ಘಟನೆಗಳು ಬೆಳಕಿಗೆ ಬಂದಿವೆ. ಮಾರ್ಚ್ 16 ರಂದು ಬಾಲಕಿಯ ಶವ ಪತ್ತೆಯಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಮಾರ್ಚ್ 15 ರಂದು ಪೋಷಕರು ಮನೆಯಲ್ಲಿ ಇಲ್ಲದಿದ್ದಾಗ ಬಾಲಕಿ ನೇಣು ಬಿಗಿದುಕೊಂಡು ಸಾವನ್ನಪ್ಪಿದ್ದಾಳೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ; ಪ್ರಕರಣದ ತನಿಖೆ ಇನ್ನೂ ನಡೆಯುತ್ತಿದೆ.

ಇದನ್ನೂ ಓದಿ; ಶಾಸಕ ಕೆ. ಪೊನ್ಮುಡಿ ಅವರನ್ನು ಸಚಿವರನ್ನಾಗಿ ನೇಮಿಸಲು ನಿರಾಕರಿಸಿದ ತಮಿಳುನಾಡು ರಾಜ್ಯಪಾಲ

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ಜಾತಿ, ಧರ್ಮದ ನೆಲೆಯಲ್ಲಿ ಚುನಾವಣಾ ಪ್ರಚಾರ ಮಾಡಬೇಡಿ: ಬಿಜೆಪಿ, ಕಾಂಗ್ರೆಸ್‌ಗೆ ಚು.ಆಯೋಗ ಸೂಚನೆ

0
ಜಾತಿ, ಸಮುದಾಯ ಧರ್ಮದ ನೆಲೆಯಲ್ಲಿ ಚುನಾವಣಾ ಪ್ರಚಾರವನ್ನು ಮಾಡಬೇಡಿ, ರಕ್ಷಣಾ ಪಡೆಗಳನ್ನು ರಾಜಕೀಯಗೊಳಿಸಬೇಡಿ ಎಂದು ಚು.ಆಯೋಗ ಬಿಜೆಪಿ ಮತ್ತು ಕಾಂಗ್ರೆಸ್‌ಗೆ ಖಡಕ್‌ ಸೂಚನೆಯನ್ನು ನೀಡಿದೆ. ಭಾರತೀಯ ಜನತಾ ಪಕ್ಷದ ಅಧ್ಯಕ್ಷ ಜೆಪಿ ನಡ್ಡಾ ಮತ್ತು...